Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಜನವರಿ 2 ದಿನ ಭವಿಷ್ಯ: ಮೇಷ-ಮೀನ ರಾಶಿ ಭವಿಷ್ಯ, ಕುಂಭ ರಾಶಿಯವರೇ ಶುಭ ದಿನ
ಶುಭ ದಿನ, ಈ ದಿನ ನಿಮಗೆ ಎಲ್ಲಾ ರೀತಿಯಿಂದಲೂ ಅನುಕೂಲಕರವಾಗಿರಲಿ ಎಂದು ಹೇಳುತ್ತಾ ಈ ದಿನದ ರಾಶಿಫಲ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಸಾಧಾರಣವಾಗಿರಲಿದೆ, ಕೆಲಸದಲ್ಲಿ ಒತ್ತಡವಿರಲಿದೆ, ಹಣಕಾಸಿನ ವ್ಯವಹಾರದ ಕಡೆಗೆ ಗಮನಹರಿಸಬೇಕು. ವೈವಾಹಿಕ ಬದುಕು ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಕೆಲಸದ ಜಾಗದಲ್ಲಿ ಕೋಪಗೊಳ್ಳಬೇಡಿ.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ, ಕುಟುಂಬ ಬದುಕು ಚೆನ್ನಾಗಿರಲಿದೆ. ಆರ್ಥಿಕವಾಗಿ ನೋಡುವುದಾದರೆ ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ಈ ದಿನ ಯಾವುದೇ ದೊಡ್ಡ ಚಿಂತೆಯಿಲ್ಲದೆ ಖುಷಿಯಿಂದ ಕಳೆಯಬಹುದು.
ಮಿಥುನ ರಾಶಿ
ಈ ದಿನ ವ್ಯಾಪಾರಸ್ಥರಿಗೆ ತುಂಬಾ ಅನುಕೂಲಕರವಾಗಿದೆ, ಆರ್ಥಿಕ ಲಾಭ ಪಡೆಯಲು ಸಾಧ್ಯವಾಗುವುದು. ಅಪರಿಚಿತರ ಜೊತೆ ಯಾವುದೇ ಯಾವುದೇ ವ್ಯವಹಾರ ಮಾಡಬೇಡಿ. ಸ್ನೇಹಿತರ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ.
ಕರ್ಕ ರಾಶಿ
ಈ ದಿನ ಸ್ವಲ್ಪ ಜಾಗ್ರತೆವಹಿಸಬೇಕು, ಕೆಲಸದಲ್ಲಿ ಕೆಲ ಅಡೆತಡೆಗಳಿರಬಹುದು, ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರುವುದು, ಕೆಲಸದ ಸ್ಥಳದಲ್ಲಿ ಎಚ್ಚರದಿಂದಿರಬೇಕು. ಸಂಗಾತಿಯ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ.
ಸಿಂಹ ರಾಶಿ
ಈ ದಿನ ಸರಾಸರಿಯಾಗಿರಲಿದೆ, ಖರ್ಚುಗಳನ್ನು ನಿಯಂತ್ರಿಸಿದರೆ ಒಳ್ಳೆಯದು, ಈ ದಿನ ಯಾವುದೇ ನಿರ್ಧಾರವಾದರು ಆಲೋಚಿಸಿ ತೆಗೆದುಕೊಳ್ಳುವುದು ಒಳ್ಳೆಯದು, ಆಸ್ತಿಗೆ ಸಂಬಂಧಿಸಿದ ವಿವಾದವಿದ್ದರೆ ಅದನ್ನು ತಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ.
ಕನ್ಯಾ ರಾಶಿ
ಈ ದಿನ ನೀವು ಕೆಲಸ ಕಾರ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು. ಇನ್ನು ಈ ದಿನ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗುವುದು. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ತುಂಬಾ ಸಮಯದಿಂದ ಅಪೂರ್ಣವಾಗಿರುವ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು.
ತುಲಾ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ಇನ್ನು ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ಹಿರಿಯರ ಸಲಹೆ ಪಡೆಯಿರಿ. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಬರಬೇಕಾಗಿರುವ ಹಣ ದೊರೆಯಲಿದೆ. ನೀವು ಆರೋಗ್ಯದ ಕಡೆ ಗಮನಹರಿಸಿದರೆ ಒಳ್ಳೆಯದು ಎಂದು ಸಲಹೆ ನೀಡಲಾಗುವುದು.
ವೃಶ್ಚಿಕ ರಾಶಿ
ಈ ದಿನ ವೃತ್ತಿ ಬದುಕಿನಲ್ಲಿ ಹೆಚ್ಚು ಒತ್ತಡ ಇರಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿರುವವರು ತುಂಬಾನೇ ಜಾಗ್ರತೆವಹಿಸಿ, ನೀವು ನಿಮ್ಮ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಿ. ದೊಡ್ಡ ಹಣದ ವ್ಯವಹಾರ ಮಾಡುವುದಾದರೆ ಜಾಗ್ರತೆವಹಿಸಿ.
ಧನು ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯಗಳು ಚೆನ್ನಾಗಿ ನಡೆಯಲಿದೆ. ಹಣದ ಹೂಡಿಕೆಗೆ ಈ ದಿನ ನಿಮಗೆ ಉತ್ತಮವಾಗಿರಲಿದೆ. ಈ ದಿನ ಕುಟುಂಬದ ಜೊತೆಗೆ ಖುಷಿಯಿಂದ ಸಮಯ ಕಳೆಯಲು ಸಾಧ್ಯವಾಗುವುದು. ಗಾಡಿಯನ್ನು ಜಾಗ್ರತೆಯಿಂದ ಚಲಾಯಿಸಲು ಸಲಹೆ ನೀಡಲಾಗುವುದು.
ಮಕರ ರಾಶಿ
ಮಕರ ರಾಶಿಯವರು ಈ ದಿನ ಜಾಗ್ರತೆವಹಿಸಬೇಕು, ಕೆಲಸ ಕಾರ್ಯದಲ್ಲಿ ಕೆಲ ಅಡೆತಡೆ ಎದುರಾಗಬಹುದು, ನಿಮ್ಮ ಕುಟುಂಬದ ವಿಷಯದಲ್ಲಿ ಮೂರನೇಯ ವ್ಯಕ್ತಿ ಮೂಗು ತೂರಿಸಲು ಅನುಮತಿ ನೀಡಬೇಡಿ. ಚಿಕ್ಕ ಸಮಸ್ಯೆ ದೊಡ್ಡದಾಗಲು ಬಿಡಬೇಡಿ.
ಕುಂಭ ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ಈ ದಿನ ಶುಭ ಸುದ್ದಿ ಪಡೆಯುತ್ತೀರಿ.
ಮೀನ ರಾಶಿ
ಈ ದಿನ ಕೆಲಸದ ಕಡೆಗೆ ಗಮನಹರಿಸಲು ಕಷ್ಟವಾಗಬಹುದು, ಆರೋಗ್ಯ ಸಮಸ್ಯೆ ಕೆಲಸ ಕಾರ್ಯಗಳಿಗೆ ಅಡ್ಡಿಯಾಗಬಹುದು, ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ. ಕುಟುಂಬ ಸಮಸ್ಯೆಗಳ ಕಡೆಗೆ ಗಮನಹರಿಸಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
