Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜನವರಿ 21ರ ದಿನಭವಿಷ್ಯ: ತುಲಾ ರಾಶಿಯವರೇ ಜಾಗ್ರತೆವಹಿಸಿ, ಈ ದಿನ ಯಾವ ರಾಶಿಗೆ ಹೇಗಿದೆ?
ಜ್ಯೋತಿಷ್ಯದ ಪ್ರಕಾರ ಜನವರಿ 21 ಹೇಗಿರಲಿದೆ ನೋಡೋಣ:
ಮೇಷ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ, ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ತುಂಬಾನೇ ಗಮನಹರಿಸಬೇಕು. ಮನೆಯಲ್ಲಿ ಏನಾದರೂ ಭಿನ್ನಾಭಿಪ್ರಾ ಉಂಟಾದರೆ ನೀವಾಡುವ ಮಾತಿನ ಕಡೆಗೆ ಗಮನಹರಿಸಿ, ಕುಟುಂಬ ಜೀವನ ಚೆನ್ನಾಗಿರಲಿದೆ.

ವೃಷಭ ರಾಶಿ
ನೀವು ಕೆಲಸ ಕಾರ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು, ಯಾವುದೇ ಕೆಲಸ ಅಪೂರ್ಣವಾಗಿ ಬಿಡಬೇಡಿ, ಕಾನೂನು ವಿಷಯದಲ್ಲಿ ಜಾಗ್ರತೆವಹಿಸಿ. ಏನಾದರು ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಮಿಥುನ ರಾಶಿ
ವೃತ್ತಿ ಹಾಗೂ ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಪಾಡಲು ಸಲಹೆ ನೀಡಲಾಗುವುದು. ಈ ದಿನ ಇಷ್ಟದ ಕಾರ್ಯಕ್ಕೆ ಅಥವಾ ವಸ್ತುಗಳನ್ನು ಖರೀದಿಸಲು ಹಣ ಖರ್ಚಾಗಬಹುದು, ಆದರೆ ಆ ಹಣ ಒಳ್ಳೆಯದಕ್ಕೆ ಖರ್ಚಾಯ್ತು ಎಂಬ ಸಮಧಾನವಿರಲಿದೆ.
ಕರ್ಕ ರಾಶಿ
ನೀವು ಕುಟುಂಬದ ಕಡೆಗೆ ಹೆಚ್ಚಿನ ಗಮನಹರಿಸಿ, ಅನಗ್ಯತ ಚರ್ಚೆಯಿಂದ ದೂರವಿರಿ, ಇನ್ನು ಏನಾದರು ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಇನ್ನು ಏನಾದರು ಸಮಸ್ಯೆ ಬಂದರೆ ಅದನ್ನು ಹಾಗೇ ಬಿಡದೆ ಬಗೆಹರಿಸಲು ಪ್ರಯತ್ನಿಸಿ. ಆಸ್ತಿ ಸಂಬಂಧಿತ ವ್ಯವಹಾರಕ್ಕೆ ಈ ದಿನ ಉತ್ತಮವಾಗಿದೆ.
ಸಿಂಹ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ನೀವು ಜಾಗ್ರತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ, ಅನಗ್ಯತ ವಿಷಯಗಳ ಬಗ್ಗೆ ಗಾಸಿಪ್ ಮಾಡಬೇಡಿ. ಕುಟುಂಬದ ವಿಷಯದಲ್ಲಿ ಅವಶ್ಯಕತೆಗಿಂತ ಹೆಚ್ಚು ಮೂಗುತೂರಿಸಬೇಡಿ, ಇತರರ ಅಭಿಪ್ರಾಯವನ್ನೂ ಗೌರವಿಸಿ.
ಕನ್ಯಾ ರಾಶಿ
ನಿಮ್ಮ ಕೆಲಸದ ಕಡೆಗೆ ಗಮನಹರಿಸಿ, ಈ ದಿನ ಖರ್ಚು ವೆಚ್ಚಗಳ ನಡುವೆ ನಿಯಂತ್ರಣ ಇರಲಿ, ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ.ಇನ್ನು ವಿದೇಶಕ್ಕೆ ಹೋಗಲು ಪ್ರಯತ್ನ ಮಾಡುತ್ತಿದ್ದರೆ ಈ ದಿನ ಶುಭ ಸುದ್ದಿ ಸಿಗಲಿದೆ.
ತುಲಾ ರಾಶಿ
ಈ ದಿನ ಕೆಲಸದ ಜಾಗದಲ್ಲಿ ಜಾಗ್ರತೆವಹಿಸಿ, ಅನಗ್ಯತ ಗಾಸಿಪ್ ಬೇಡ. ಈ ದಿನ ಮನೆಯ ವಾತಾವರಣ ಅಷ್ಟು ಚೆನ್ನಾಗಿರಲ್ಲ, ಕೆಲವೊಂದು ಅಸಮಧಾನಗಳಿರಬಹುದು. ಆರ್ಥಿಕವಾಗಿ ಈ ದಿನ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಈ ದಿನ ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ, ನಿಮ್ಮ ಆರೋಗ್ಯದ ಕಡೆಗೆ ಗಮನಹರಿಸಿ. ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ. ಇನ್ನು ಈ ದಿನ ಪ್ರಯಾಣ ಮಾಡುವಾಗ ಜಾಗ್ರತೆವಹಿಸಿ.
ಧನು ರಾಶಿ
ಧನು ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ, ಮನೆಯ ವಾತಾವರಣ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಉತ್ತಮವಾಗಿರಲಿದೆ. ಈ ದಿನ ನಿಮ್ಮ ಶ್ರಮಕ್ಕೆ ಪ್ರತಿಫಲ ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ.
ಮಕರ ರಾಶಿ
ಈ ದಿನ ಕೆಲಸದ ಜಾಗದಲ್ಲಿ ಜಾಗ್ರತೆವಹಿಸಿ, ಕುಟುಂಬ ಜೀವನ ತುಂಬಾನೇ ಚೆನ್ನಾಗಿರಲಿದೆ, ಅನಗ್ಯತ ಮಾನಸಿಕ ಒತ್ತಡಗಳಿಂದ ದೂರವಿರಿ, ಇನ್ನು ಅನಗ್ಯತವಾದ ಜಗಳ ತಪ್ಪಿಸಿ, ಬೇರೆಯವರ ವಿಷಯದಲ್ಲಿ ತಲೆಹಾಕಲು ಹೋಗಬೇಡಿ.
ಕುಂಭ ರಾಶಿ
ಈ ದಿನ ನಿಮಗೆ ತುಂಬಾನೇ ಚೆನ್ನಾಗಿರಲಿದೆ, ಈ ದಿನ ಯಾರ ಬಳಿಯೂ ಹಣ ಸಾಲ ಪಡೆಯಬೇಡಿ, ನಿಮ್ಮ ಖರ್ಚು ವೆಚ್ಚಗಳ ಕಡೆಗೆ ಗಮನಹರಿಸಿ. ವ್ಯಾಪಾರದಲ್ಲಿ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಿ, ರಿಸ್ಕಿ ಹೂಡಿಕೆ ಬೇಡ.
ಮೀನ ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಅಂದುಕೊಂಡಂತೆಯೇ ನಡೆಯಲಿದೆ, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ, ಆಹಾರಕ್ರಮದ ಕಡೆಗೆ ಗಮನಹರಿಸಿ. ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications