Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜನವರಿ 24 ದಿನ ಭವಿಷ್ಯ: ಈ ದಿನ ಯಾವೆಲ್ಲಾ ರಾಶಿಗೆ ಶುಭವಾಗಿದೆ? ಯಾರು ಜಾಗ್ರತೆವಹಿಸಬೇಕು?
ಜ್ಯೋತಿಷ್ಯದ ಪ್ರಕಾರ ಈ ದಿನ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನೀವು ಈ ದಿನ ಕ್ರಿಯೇಟಿವ್ ಆಗಿ ಕೆಲಸ ಕಾರ್ಯವನ್ನು ಮಾಡಿ ಮುಗಿಸುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ,ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ.

ವೃಷಭ ರಾಶಿ
ಹೂಡಿಕೆ ಮಾಡಿದ್ದರೆ ಅದರಿಂದ ಈ ದಿನ ಲಾಭ ಸಿಗಲಿದೆ, ಕೆಲಸ ಕಾರ್ಯದ ಕಡೆಗೆ ಗಮನಹರಿಸಬೇಕು, ಈ ದಿನ ಆರೋಗ್ಯದ ಕಡೆಗೆ ಕೂಡ ಹೆಚ್ಚು ಗಮನಹರಿಸಬೇಕು, ಏನಾದರು ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಮಿಥುನ ರಾಶಿ
ಈ ದಿನ ಆರ್ಥಿಕ ದೃಷ್ಟಿಯಿಂದ ಅನುಕೂಲಕರವಾಗಿದೆ, ಆರ್ಥಿಕ ಲಾಭ ಪಡೆಯಲು ಸಾಧ್ಯವಾಗಲಿದೆ, ಅನಗ್ಯತ ವಿವಾದಗಳಿಂದ ದೂರವಿರಬೇಕು, ವೈವಾಹಿಕ ಬದುಕಿನಲ್ಲಿ ಮೂರನೇಯ ವ್ಯಕ್ತಿಯ ಅಭಿಪ್ರಾಯ ಕೇಳದಿರುವುದು ಒಳ್ಳೆಯದು.
ಕರ್ಕ ರಾಶಿ
ಈ ದಿನ ನಿಮಗೆ ಕೆಲಸದ ಒತ್ತಡ ಅಧಿಕವಿರಲಿದೆ, ಆರ್ಥಿಕ ನಿರ್ಧಾರಗಳನ್ನು ಜಾಗ್ರತೆಯಿಂದ ತೆಗೆದುಕೊಳ್ಳಿ ಎಂದು ಸಲಹೆ ನೀಡಲಾಗುವುದು. ಕುಟುಂಬ ಬದುಕಿನಲ್ಲಿ ಕೆಲ ಭಿನ್ನಾಬಿಪ್ರಾಯ ಉಂಟಾಗಬಹುದು, ಕೋಪವನ್ನು ನಿಯಂತ್ರಿಸಿದರೆ ಒಳ್ಳೆಯದು.
ಸಿಂಹ ರಾಶಿ
ಆರ್ಥಿಕವಾಗಿ ಈ ದಿನ ಅನುಕೂಲಕರವಾಗಿದೆ, ಈ ದಿನ ನಿಮಗೆ ವಿಶೇಷವಾಗಿರಲಿದೆ, ನೀವು ಅಂದುಕೊಂಡಂತೆಯೇ ಕೆಲಸ ಕಾರ್ಯಗಳು ನಡೆಯಲಿದೆ, ನಿಮ್ಮ ಪ್ರಯತ್ನಕ್ಕೆ ತ್ಕ ಫಲ ಸಿಗುವುದರಿಂದ ಖುಷಿಯಾಗಿರುತ್ತೀರಿ. ಕುಟುಂಬ ಬದುಕಿನಲ್ಲಿ ಸಂತೋಷ ಇರಲಿದೆ.
ಕನ್ಯಾ ರಾಶಿ
ಆರ್ಥಿಕ ಸಮಸ್ಯೆಗೆ ಪರಿಹಾರ ಸಿಗಲಿದೆ, ಇದರಿಂದ ನೀವು ನಿರಾಳವಾಗುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ಪ್ರೀತಿ ಪಾತ್ರರ ಜೊತೆಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುವುದು. ವೃತ್ತಿ ಜೀವನ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿದೆ.
ತುಲಾ ರಾಶಿ
ಈ ದಿನ ನಿಮಗೆ ಅದೃಷ್ಟಕರವಾಗಿದೆ, ನಿಮಗೆ ಅನಿರೀಕ್ಷಿತ ಖುಷಿಯ ಸುದ್ದಿ ಸಿಗಲಿದೆ, ವ್ಯಾಪಾರಸ್ಥರಿಗೆ ಈ ದಿನ ತುಂಬಾನೇ ಶುಭವಾಗಿದೆ, ಈ ದಿನ ಪ್ರಯಾಣ ಮಾಡುವವರಿಗೆ ಕೂಡ ಒಳ್ಳೆಯದಿದೆ. ಕೆಲಸ ಕಾರ್ಯಗಳು ತುಂಬಾ ಚೆನ್ನಾಗಿ ನಡೆಯಲಿದೆ, ಆರ್ಥಿಕವಾಗಿಯೂ ಉತ್ತಮವಾಗಿದೆ.
ವೃಶ್ಚಿಕ ರಾಶಿ
ಈ ದಿನ ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಒತ್ತಡ ಮಾಡಿಕೊಳ್ಳಬೇಡಿ, ವಿಶ್ರಾಂತಿ ಕಡೆಗೆ ಗಮನಹರಿಸಿ. ಅನಗ್ಯತ ವಿವಾದಗಳ ಬಗ್ಗೆ ಚರ್ಚೆ ಮಾಡದಿದ್ದರೆ ಒಳ್ಳೆಯದು. ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ. ಸಂಗಾತಿಯ ಜೊತೆಗೆ ಮನಸ್ತಾಪ ಉಂಟಾಗಿದ್ದರೆ ಅದು ಬಗೆಹರಿಯಲಿದೆ.
ಧನು ರಾಶಿ
ವೃತ್ತಿ ಬದುಕಿನ ಜೊತೆಗೆ ವೈಯಕ್ತಿಕ ಬದುಕಿನ ಕಡೆಗೂಗಮನ ಹರಿಸಬೇಕು, ನಿಮ್ಮ ಸಂಗಾತಿಗೆ ಹೆಚ್ಚಿನ ಸಮಯ ಕೊಡಲು ಪ್ರಯತ್ನಿಸಿ, ಇಲ್ಲದಿದ್ದರೆ ನಿಮ್ಮ ನಡುವೆ ಸಮಸ್ಯೆ ಉಂಟಾಗಿ ಮಾನಸಿಕ ಒತ್ತಡ ಅನುಭವಿಸುವಂತಾಗುವುದು, ಹಾಗಾದಂತೆ ನೋಡಿಕೊಳ್ಳುವುದು ನಿಮ್ಮ ಕೈಯಲ್ಲಿದೆ.ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ.
ಮಕರ ರಾಶಿ
ಈ ದಿನ ನೀವು ಪ್ರತಿಕೂಲ ಸಂದರ್ಭದಲ್ಲಿಯೂ ತಾಳ್ಮೆ ಕಳೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗುವುದು, ಅನಗ್ಯತ ಚಿಂತೆಗಳನ್ನು ಬಿಟ್ಟು ಕೆಲಸದ ಕಡೆಗೆ ಗಮನಹರಿಸಿ,ಕುಟುಂಬದ ಜೊತೆ ಸಮಯ ಕಳೆಯಿರಿ, ಇದರಿಂದ ಮನಸ್ಸಿಗೆ ಖುಷಿಯಾಗಲಿದೆ.
ಕುಂಭ ರಾಶಿ
ಈ ದಿನ ಅನುಕೂಲಕರವಾಗಿದೆ,ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲು ನೀವು ಅವರನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ.
ಮೀನ ರಾಶಿ
ಈ ದಿನ ಆರೋಗ್ಯದ ಕಡೆಗೆ ಗಮನಹರಿಸಿ, ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ ಮಾಡಿ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications