Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
January 31 Horoscope: ಈ ಶನಿವಾರ ನೀವು ಅಂದುಕೊಂಡ ಕೆಲಸದಲ್ಲಿ ಬಂಪರ್!
ವೈದಿಕ ಶಾಸ್ತ್ರದ ಪ್ರಕಾರ ಜನವರಿ 31 (January 31 Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿ ಜನರಿಗೆ ಕೆಲವು ಪ್ರಯಾಣಗಳು ನಿಮ್ಮಲ್ಲಿ ಲಾಭಕ್ಕೆ ಕಾರಣವಾಗಬಹುದು. ಅಪೂರ್ಣವಾಗಿರುವ ಕೆಲಸಗಳನ್ನು ಪೂರ್ಣ ಮಾಡುವಿರಿ. ಆರೋಗ್ಯದಲ್ಲಿ ಏರುಪೇರು ಸಂಭವ.
ವೃಷಭ ರಾಶಿ
ವೃಷಭ ರಾಶಿ ಜನರಿಗೆ ಸಮಸ್ಯೆಗಳು ಎದುರಾಗಬಹುದು. ದಿನದ ಆರಂಭದಲ್ಲಿ ಸಣ್ಣ ಪುಟ್ಟ ಕಲಹಗಳಿಗೆ ಎದುರಾಗಬಹುದು. ವಾಹನ ಸಂಬಂಧಿ ಸಮಸ್ಯೆ ಇರಬಹುದು. ಖರ್ಚುಗಳ ಮೇಲೆ ಹಿಡಿತ ಇಟ್ಟುಕೊಳ್ಳುವುದು ಉತ್ತಮ. ಹೊಸ ವಸ್ತುಗಳ ಖರೀದಿಸಬಹುದು. ಪ್ರಯಾಣ ಮಾಡುವಾಗ ಎಚ್ಚರದಿಂದ ಇರಿ.

ಮಿಥುನ ರಾಶಿ
ಮಿಥುನ ರಾಶಿ ಜನರಿಗೆ ಇಂದು ಬಹಳ ಅನುಕೂಲವಿದೆ. ನಿಮ್ಮ ಪ್ರಯಾಣಗಳು ನೀವು ಅಂದುಕೊಂಡ ಫಲಿತಾಂಶ ತರಲಿವೆ. ದಾಂಪತ್ಯ ವಿಚಾರದಲ್ಲಿ ನಿಮಗೆ ಸಂತೋಷ ತರುವ ದಿನ. ಯಾರಿಗೂ ಹಣ ನೀಡಲು ಮುಂದಾಗದೆ ಇರುವುದು ಉತ್ತಮ.
ಕರ್ಕ ರಾಶಿ
ಕರ್ಕ ರಾಶಿ ಜನರಿಗೆ ಇಂದು ಮಿಶ್ರಫಲ. ನಿಮ್ಮ ಖರ್ಚುಗಳ ಮೇಲೆ ಹಿಡಿತ ಸಾಧಿಸಿ. ಅನಗತ್ಯ ವಿಚಾರಗಳಿಗೆ ಮಾಡುವ ಖರ್ಚುಗಳನ್ನು ತಡೆಯುವುದು ಉತ್ತಮ. ಗೃಹಿಣಿಯರು ಇಂದು ಪ್ರಯಾಣಗಳ ಮಾಡಬಹುದು. ನಿಮ್ಮ ಮನೆಯಲ್ಲಿ ಕೆಲಸಗಳು ನಡೆಯಬಹುದು.
ಸಿಂಹ ರಾಶಿ
ಸಿಂಹ ರಾಶಿ ಜನರಿಗೆ ಹಣಕಾಸು ವಿಚಾರವಾಗಿ ಬಹು ಸಮಯದಿಂದ ನೀವು ಅನುಭವಿಸಿದ್ದ ಅಡ್ಡಿಯೊಂದು ದೂರಾಗಲಿದೆ. ಆಪ್ತರೊಂದಿಗೆ ಸಂತಸದ ಕ್ಷಣಗಳ ಕಳೆಯುವಿರಿ. ದಿನದ ಅಂತ್ಯದಲ್ಲಿ ಮಾಡುವ ಪ್ರಯಾಣ ನಿಮಗೆ ಆಯಾಸ ತರಬಹುದು.
ಕನ್ಯಾ ರಾಶಿ
ಕನ್ಯಾ ರಾಶಿಯ ಜನರು ಇಂದು ದೊಡ್ಡ ಲಾಭ ನೋಡುವ ಸಮಯ. ಯಾರಿಗಾದರು ಹಣ ನೀಡುವ ನಿಮ್ಮ ಆಲೋಚನೆಯನ್ನು ಮತ್ತೆ ಪರಿಶೀಲಿಸಿ. ದೊಡ್ಡ ಮಟ್ಟದ ಒಪ್ಪಂದಗಳ ಮಾಡಿಕೊಳ್ಳದೆ ಇರುವುದು ಉತ್ತಮ.
ತುಲಾ ರಾಶಿ
ಗೃಹಿಣಿಯರಲ್ಲಿ ಖರ್ಚುಗಳು ಬರುವ ದಿನ. ಮಕ್ಕಳ ಕುರಿತಾದ ಚಿಂತೆಯೊಂದು ನಿಮಗೆ ಕಾಡಬಹುದು. ಶಾಲೆಗೆ ತೆರಳುವ ಮಕ್ಕಳ ಕುರಿತಾಗಿ ಎಚ್ಚರಿಕೆ ಇಡಿ. ಮನೆಯ ಸದಸ್ಯರ ನಡುವೆ ಮನಸ್ತಾಪ ಬರಬಹುದು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿ ಜನರ ಉದ್ಯೋಗ ಸಂಬಂಧಿತ ವಿಚಾರದಲ್ಲಿ ಯಾರಿಂದಾದರು ಹಣ ಪಡೆಯುವ ಆಲೋಚನೆಯಲ್ಲಿ ಅಡ್ಡಿ ಇದೆ. ವಾಹನ ಸಂಬಂಧಿತ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕಿದೆ. ದಾಂಪತ್ಯ ಕುರಿತಾದ ವಿಚಾರದಲ್ಲಿ ಮಧುರ ದಿನ.
ಧನು ರಾಶಿ
ಧನು ರಾಶಿ ಜನರ ಹಲವು ಕೆಲಸಗಳಲ್ಲಿ ಲಾಭದಾಯಕ ವಿಚಾರಗಳನ್ನು ನೋಡಬಹುದು. ಪಾಲುದಾರಿಕೆ ವ್ಯವಹಾರದಲ್ಲಿ ನೀವು ತೊಡಗಿದ್ದರೆ ಇಂದು ಲಾಭಗಳ ನೋಡಬಹುದು. ನಿಮ್ಮಿಂದ ಆಪ್ತರಿಗೆ ಸಹಾಯವಿದೆ.
ಮಕರ ರಾಶಿ
ಮಕರ ರಾಶಿ ಜನರು ಯಾರಿಂದಾದರು ಹಣ ಪಡೆದಿದ್ದರೆ ಮರಳಿ ನೀಡಬೇಕಾಗುತ್ತದೆ. ಆಪ್ತರೊಂದಿಗೆ ನೀವು ಚರ್ಚೆಗಳು ಮಾತುಕಥೆಯಲ್ಲಿ ತೊಡಗಬಹುದು. ಆಸ್ಪತ್ರೆ ಕುರಿತಾದ ವಿಚಾರದಲ್ಲಿ ಶುಭವಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಇಂದು ಬಹಳ ಅನುಕೂಲಕರ ದಿನವಾಗಲಿದೆ. ಇಂದು ನಿಮ್ಮ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮಿಂದಾಗಿ ಹೊಸ ವಿಚಾರಗಳು ನಡೆಯಬಹುದು. ವ್ಯಾಪಾರದಲ್ಲಿ ಲಾಭವಿದೆ.
ಮೀನ ರಾಶಿ
ಮೀನ ರಾಶಿ ಜನರಲ್ಲಿ ಯಾರಿಂದಾದರು ದೊಡ್ಡ ಸಾಲ ನೀಡುವ ನಿಮ್ಮ ಆಲೋಚನೆಯನ್ನು ಬದಲಾಯಿಸುವುದು ಉತ್ತಮ. ದಿನದ ಅಂತ್ಯದಲ್ಲಿ ಖರ್ಚುಗಳು ಹೆಚ್ಚಾಗಬಹುದು. ಪ್ರೀತಿಯ ವಿಚಾರದಲ್ಲಿ ಇಂದು ಶುಭಕರ ದಿನ.



Click it and Unblock the Notifications
