Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜನವರಿ ಮಾಸದ ಆರ್ಥಿಕ ಭವಿಷ್ಯ: ಯಾವೆಲ್ಲಾ ರಾಶಿಗಳ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ?
ಜನವರಿ ಮಾಸ ಭವಿಷ್ಯ ಪ್ರಕಾರ ದ್ವಾದಶ ರಾಶಿಗಳ ಆರ್ಥಿಕ ಭವಿಷ್ಯನೀಡಲಾಗಿದೆ, ಆರ್ಥಿಕವಾಗಿ ಹೊಸ ವರ್ಷದ ಆರಂಭ ಹೇಗಿರಲಿದೆ ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಆರ್ಥಿಕವಾಗಿ ತುಂಬಾ ಚೆನ್ನಾಗಿದೆ. ವ್ಯಾಪಾರಿಗಳು ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಇನ್ನು ಹಣ ಉಳಿತಾಯ ಮಾಡಲು ಸಾಧ್ಯವಾಗುವುದು. ಆರ್ಥಿಕ ದೃಷ್ಟಿಯಿಂದ ಈ ಮಾಸ ನಿಮಗೆ ಉತ್ತಮವಾಗಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೂ ಜನವರಿ ಮಾಸ ಆರ್ಥಿಕ ದೃಷ್ಟಿಯಿಂದ ತುಂಬಾನೇ ಪ್ರಯೋಜನಕಾರಿಯಾಗಿದೆ. ಆದರೆ ಆರ್ಥಿಕ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಮಾತ್ರ ಜಾಗ್ರತೆವಹಿಸಿ.
ಮಿಥುನ ರಾಶಿ
ವ್ಯಾಪಾರಿಗಳು ಒಳ್ಳೆಯ ಲಾಭ ಪಡೆಯಲು ಸಾಧ್ಯವಾಗುವುದು, ಹಣದ ವಿಷಯಕ್ಕೆ ಕೆಲಸದಲ್ಲಿ ಯಾವುದೇ ಅಡೆತಡೆ ಉಂಟಾಗುವುದಿಲ್ಲ. ನೀವು ಹೂಡಿಕೆ ಬಗ್ಗೆ ಹೆಚ್ಚು ಜಾಗ್ರತೆವಹಿಸಿ. ತಿಂಗಳ ಮಧ್ಯದ ಬಳಿಕ ಖರ್ಚು ಹೆಚ್ಚು ಬರಬಹುದು, ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ.
ಕರ್ಕ ರಾಶಿ
ಕರ್ಕ ರಾಶಿಯವರು ಈ ಮಾಸ ಹಣಕಾಸಿನ ವಿಷಯದಲ್ಲಿ ಹೆಚ್ಚು ಜಾಗ್ರತೆವಹಿಸಬೇಕು. ಹೆಚ್ಚು ಖರ್ಚು ಮಾಡಬೇಡಿ, ಯಾವುದೇ ದೊಡ್ಡ ಹೂಡಿಕೆ ಮಾಡಲುಹೋಗಬೇಡಿ. ಇನ್ನು ಬೆಟ್ಟಿಂಗ್, ಗೇಮಿಂಗ್ ಇವುಗಳಿಂದ ದೂರವಿರಬೇಕು.
ಸಿಂಹ ರಾಶಿ
ಸಿಂಹ ರಾಶಿಯವರು ಹಣದ ಬಗ್ಗೆ ಹೆಚ್ಚು ಜಾಗ್ರತೆವಹಿಸಬೇಕು, ಬಜೆಟ್ ಮೀರಿ ಖರ್ಚು ಮಾಡಬೇಡಿ, ಯಾವುದೇ ಹಣದ ಹೂಡಿಕೆಯಾದರೂ ಜಾಗ್ರತೆಯಿಂದ ಮಾಡಿ. ಬೇಗನೆ ಹಣ ಗಳಿಸಲು ಶಾರ್ಟ್‌ಕಟ್ ಮಾರ್ಗ ಅನುಸರಿಸಬಾರದು, ಇದರಿಂದ ತೀವ್ರ ನಷ್ಟ ಅನುಭವಿಸುವಂತಾಗುವುದು.
ಕನ್ಯಾ ರಾಶಿ
ಕನ್ಯಾ ರಾಶಿಯವರು ಹಣದ ಬಗ್ಗೆ ಹೆಚ್ಚು ಜಾಗ್ರತೆವಹಿಸಬೇಕು, ಹೆಚ್ಚು ಖರ್ಚು ಮಾಡಲು ಹೋಗಬೇಡಿ, ಸಾಲ ಮಾಡಬೇಕಾಗಿ ಬಂದರೆ ಅಗ್ಯತಕ್ಕಿಂತ ಹೆಚ್ಚು ಸಾಲ ಮಾಡಬೇಡಿ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ಅವಧಿ ಅನಕೂಲಕರವಾಗಿದೆ. ವ್ಯಾಪಾರಸ್ಥರು ಲಾಭ ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ. ಈ ಸಮಯದಲ್ಲಿ ಹಣ ಉಳಿತಾಯ ಮಾಡಲಾಗುವುದು, ಹೂಡಿಕೆ ಮಾಡಿದ್ದರೆ ಲಾಭ ಗಳಿಸಬಹುದು.
ವೃಶ್ಚಿಕ ರಾಶಿ
ಹಣಕಾಸಿನ ನಿರ್ಧಾರದ ಬಗ್ಗೆ ಜಾಗ್ರತೆವಹಿಸಿ, ತಿಂಗಳ ಆರಂಭದಲ್ಲಿ ಹಣಕಾಸಿನ ಸಮಸ್ಯೆ ಬರಬಹುದು, ಆದರೆ ನಂತರ ಪರಿಸ್ಥಿತಿ ಸುಧಾರಿಸಲಿದೆ ವ್ಯಾಪಾರಿಗಳು ತಿಂಗಳ ಆರಂಭದಲ್ಲಿ ಸ್ವಲ್ಪ ನಷ್ಟ ಅನುಭವಿಸಿದರೂ ನಂತರ ಸರಿಯಾಗಲಿದೆ.
ಧನು ರಾಶಿ
ಜನವರಿ ಮಾಸ ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಲಾಭ ದೊರೆಯಲಿದೆ. ಹೂಡಿಕೆಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಖರ್ಚು ಕಡೆ ಸ್ವಲ್ಪ ಗಮನಹರಿಸಿದರೆ ಒಳ್ಳೆಯದು.
ಮಕರ ರಾಶಿ
ಹಣದ ಬಗ್ಗೆ ಜಾಗ್ರತೆವಹಿಸಬೇಕು, ವ್ಯಾಪಾರಿಗಳು ಏರಳಿತವನ್ನು ಕಾಣಬೇಕು, ಹಣದ ವ್ಯವಹಾರದಲ್ಲಿ ಹೆಚ್ಚು ಜಾಗ್ರತೆವಹಿಸಬೇಕು. ಸಾಲದ ವ್ಯವಹಾರ ಮಾಡುವಾಗ ತುಂಬಾ ಜಾಗ್ರತೆವಹಿಸಬೇಕು.
ಕುಂಭ ರಾಶಿ
ವ್ಯಾಪಾರಿಗಳು ಹಣದ ವಿಷಯದಲ್ಲಿ ಏರಳಿತವಿರಬಹುದು, ಹಣದ ವ್ಯವಹಾರದ ಬಗ್ಗೆ ತುಂಬಾನೇ ಜಾಗ್ರತೆವಹಿಸಬೇಕು. ಹಣಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಈ ಅವಧಿ ಅನುಕೂಲಕರವಲ್ಲ.
ಮೀನ ರಾಶಿ
ನೀವು ಹೂಡಿಕೆ ಮಾಡುವುದಾದರೆ ಜಾಗ್ರತೆವಹಿಸಬೇಕು, ಮೋಸ ಹೋಗುವ ಸಾಧ್ಯತೆ ಇದೆ. ಇನ್ನು ಬೆಟ್ಟಿಂಗ್, ಆನ್‌ಲೈನ್ ಗೇಮ್ ಇವುಗಳಿಂದ ದೂರವಿರಬೇಕು. ಖರ್ಚು ಮಿತಿಯಲ್ಲಿ ಮಾಡಿದರೆ ಒಳ್ಳೆಯದು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications