Latest Updates
-
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ
ಈ ವಾರದ ರಾಶಿಫಲ ಪ್ರಕಾರ ಈ ವಾರ 12 ರಾಶಿಗಳ ಆರ್ಥಿಕ ಭವಿಷ್ಯ ಹೇಗಿದೆ?
ಈ ವಾರದ (ಜುಲೈ 19-26) ರಾಶಿಫಲ ಪ್ರಕಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡಿ:
ಮೇಷ ರಾಶಿ
ಆರ್ಥಿಕವಾಗಿ ಸಮಸ್ಯೆಯಿಲ್ಲ, ಅದರೆ ಹಣಕಾಸಿನ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ಬಜೆಟ್ ಮೀರಿ ಖರ್ಚು ಮಾಡಬೇಡಿ, ಹಣವನ್ನು ಮಿತಿಯಲ್ಲಿ ಖರ್ಚು ಮಾಡುವುದರಿಂದ ಯಾವುದೇ ಅರ್ಥಿಕ ಸಮಸ್ಯೆ ಉಂಟಾಗುವುದಿಲ್ಲ.

ವೃಷಭ ರಾಶಿ
ಈ ವಾರ ಖರ್ಚು ಹೆಚ್ಚಿರಲಿದೆ, ನೀವು ಬಜೆಟ್ ಪ್ಲ್ಯಾನ್ ಮಾಢೀಧೃಊ ಬಜೆಟ್‌ಗಿಂತ ಹೆಚ್ಚಿನ ಖರ್ಚು ಬರುವ ಸಾಧ್ಯತೆ ಇದೆ. ಆದರೆ ಹಣಕಾಸಿನ ಸಮಸ್ಯೆ ಇರುವುದಿಲ್ಲ, ಪ್ರತಿಕೂಲ ಸಂದರ್ಭದಲ್ಲಿ ನಿಮ್ಮ ಸಂಗಾತಿಯ ಬೆಂಬಲ ಸಿಗಲಿದೆ.
ಮಿಥುನ ರಾಶಿ
ನೀವು ಯಾವುದೇ ಆರ್ಥಿಕ ಹೂಡಿಕೆ ಮಾಡುವುದಾದರೆ ಅನುಭವಿ ವ್ಯಕ್ತಿಗಳು ನೀಡಿದ ಸಲಹೆ ತಳ್ಳಿ ಹಾಕಬೇಡಿ. ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿದೆ, ಹಣದ ವಿಷಯದಲ್ಲಿ ಸರಿಯಾದ ಯೋಜನೆ ಇದ್ದರೆ ಯಾವುದೇ ಸಮಸ್ಯೆ ಇರಲ್ಲ.
ಕರ್ಕ ರಾಶಿ
ಈ ಸಮಯದಲ್ಲಿ ಆರ್ಥಿಕವಾಗಿ ಉತ್ತಮವಾಗಿದೆ, ವ್ಯಾಪಾರಿಗಳು ಅಪೇಕ್ಷಿತ ಲಾಭವನ್ನು ಗಳಿಸಬಹುದು. ನಿಮ್ಮ ವ್ಯಾಪಾರ ಯೋಜನೆಗಳನ್ನು ರಹಸ್ಯವಾಗಿಡಲು ಪ್ರಯತ್ನಿಸಿದರೆ ನಿಮ್ಮ ವ್ಯವಹಾರದಲ್ಲಿ ಲಾಭ ಗಳಿಸುತ್ತೀರಿ.
ಸಿಂಹ ರಾಶಿ
ಆರ್ಥಿಕವಾಗಿ ಇ ವಾರ ಉತ್ತಮವಾಗಿದೆ, ಕಡಿಮೆ ಶ್ರಮದಿಂದ ಒಳ್ಳೆಯ ಹಣ ಗಳಿಸಬಹುದು. ಈ ಅವಧಿಯಲ್ಲಿ ಹೊಸ ಆದಾಯದ ಮೂಲಗಳೂ ಸೃಷ್ಟಿಯಾಗುತ್ತವೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ.
ಕನ್ಯಾ ರಾಶಿ
ಆರ್ಥಿಕವಾಗಿ ಈ ವಾರ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಆದಾಯವನ್ನು ಗಮನದಲ್ಲಿಟ್ಟುಕೊಂಡು ಮಾತ್ರ ಖರ್ಚು ಮಾಡಿ. ಆರ್ಥಿಕ ಸುಧಾರಣೆ ಕಂಡು ಬರುವುದು, ಉತ್ತಮ ಯೋಜನೆ ರೂಪಿಸಿದರೆ ಸಾಲವಿದ್ದರೆ ಅದು ತೀರಿಸಲು ಸಾಧ್ಯವಾಗುವುದು.
ತುಲಾ ರಾಶಿ
ಈ ವಾರ ಹಣವನ್ನು ನೋಡಿಕೊಂಡು ಖರ್ಚು ಮಾಡಿ. ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಿ. ಅಗ್ಯತಕ್ಕಿಂತ ಹೆಚ್ಚು ಖರ್ಚು ಮಾಡಲು ಹೋಗಬೇಡಿ.
ವೃಶ್ಚಿಕ ರಾಶಿ
ವ್ಯಾಪಾರಿಗಳು ದೊಡ್ಡ ಹೂಡಿಕೆಗಳನ್ನು ಆತುರ-ಆತುರವಾಗಿ ಮಾಡಲು ಹೋಗಬೇಡಿ, ಇಲ್ಲದಿದ್ದರೆ ಲಾಭದ ಬದಲು ನಷ್ಟವಾಗಬಹುದು. ಉಳಿದಂತೆ ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರುತ್ತದೆ.
ಧನು ರಾಶಿ
ವ್ಯಾಪಾರಸ್ಥರಿಗೆ ಈ ವಾರ ಬಹಳ ಉತ್ತಮವಾಗಿದೆ. ವ್ಯಾಪಾರ ವಿಸ್ತರಣೆಗೆ ಯೋಜಿಸುತ್ತಿದ್ದರೆ, ಈ ವಾರ ನೀವು ಯಶಸ್ಸನ್ನು ಪಡೆಯಬಹುದು. ವ್ಯಾಪಾರಿಗಳು ಮಾಡುವ ಪ್ರಯಾಣದಿಂದ ಉತ್ತಮ ಲಾಭ ಗಳಿಸಲಿದೆ. ನೀವು ಆಸ್ತಿಯಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ಈ ಅವಧಿ ಉತ್ತಮವಾಗಿದೆ.
ಮಕರ ರಾಶಿ
ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಶ್ರಮಿಸುತ್ತಿದ್ದರೆ ಈ ಅವಧಿಯಲ್ಲಿ ಅದಕ್ಕೆ ಸಂಬಂಧಿಸಿದ ಅವಕಾಶಗಳು ದೊರೆಯಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ.
ಕುಂಭ ರಾಶಿ
ಈ ವಾರ ಆರ್ಥಿಕವಾಗಿ ಒಳ್ಳೆಯದು, ಹಣಕ್ಕೆ ಸಂಬಂಧಿಸಿದ ಚಿಂತೆಗಳು ದೂರವಾಗುತ್ತವೆ. ಅಲ್ಲದೆ ತುಂಬಾ ಸಮಯದಿಂದ ಬರಬೇಕಾಗಿರುವ ಹಣ ನಿಮ್ಮ ಕೈ ಸೇರುವುದರಿಂದ ಖುಷಿಯಾಗಿರುತ್ತೀರಿ.
ಮೀನ ರಾಶಿ
ಈ ಅರ್ಥಿಕವಾಗಿ ನೋಡುವುದಾದರೆ ಹಣದ ಖರ್ಚು ಹೆಚ್ಚಿರಲಿದೆ, ಖರ್ಚಿಗೆ ಸಾಧ್ಯವಾಗುವ ಕಡೆಗೆ ಕಡಿವಾಣ ಹಾಕಿದರೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











