Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜುಲೈ 2024 ಮಾಸ ಭವಿಷ್ಯದ ಪ್ರಕಾರ ನಿಮಗೆ ಈ ತಿಂಗಳು ಆರ್ಥಿಕವಾಗಿ ಹೇಗಿರಲಿದೆ?
ಜುಲೈ ಮಾಸದ ಭವಿಷ್ಯ ಪ್ರಕಾರ 12 ರಾಶಿಗಳ ಆರ್ಥಿಕ ಭವಿಷ್ಯ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ, ಆದರೆ ಹಣಕ್ಕೆ ಸಂಬಂಧಿಸಿದ ನಿರ್ಧಾರವನ್ನು ಆಲೋಚಿಸಿ ತೆಗೆದುಕೊಳ್ಳಿ. ಯಾವುದೇ ಹೂಡಿಕೆ ಮಾಡುವುದಾದರೆ ಅದರ ಬಗ್ಗೆ ಅನುಭವಸ್ಥರಿಂದ ಕೇಳಿ ತಿಳಿದುಕೊಂಡು ಹೂಡಿಕೆ ಮಾಡಿ.

ವೃಷಭ ರಾಶಿ
ನಿಮಗೆ ಜುಲೈ ಮಾಸ ಅನುಕೂಲಕರವಾಗಿದೆ. ಉದ್ಯೋಗಿಗಳು ಈಗ ಇರುವ ಕೆಲಸದಲ್ಲಿ ಬಡ್ತಿ ಇರಲಿದೆ. ವ್ಯಾಪಾರಿಗಳಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ. ಈ ಅವಧಿಯಲ್ಲಿ ಬಾಕಿ ಇರುವ ಎಲ್ಲಾ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ನೀವು ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ.
ಮಿಥುನ ರಾಶಿ
ಜುಲೈ ಮಾಸ ಆರ್ಥಿಕವಾಗಿ ನಿಮಗೆ ತುಂಬಾ ಒಳ್ಳೆಯದಿದೆ. ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಹಣಕ್ಕೆ ಸಂಬಂಧಿಸಿದ ಚಿಂತೆಗಳಿಂದ ನೀವು ಪರಿಹಾರ ಪಡೆಯುತ್ತೀರಿ. ಹಣಕ್ಕೆ ಸಬಂಧಿಸಿದ ಪ್ರಯತ್ನದಲ್ಲಿ ಯಶಸ್ಸು ಪಡೆಯುತ್ತೀರಿ.
ಕರ್ಕ ರಾಶಿ
ನೀವು ನಿಮ್ಮ ವ್ಯವಹಾರದಲ್ಲಿ ಸಮಸ್ಯೆ ಎದುರಿಸುತ್ತಿದ್ದರೆ ಈ ಅವಧಿಯಲ್ಲಿ ನಿಮ್ಮ ಸಮಸ್ಯೆ ಬಗೆಹರಿಯಲಿದೆ. ನೀವು ಯಾರಿಗಾದರೂ ಸಾಲ ನೀಡಿದ್ದರೆ ಆ ಹಣ ಮರಳಿ ಸೇರಲಿದೆ, ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ, ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಸಿಂಹ ರಾಶಿ
ಸಿಂಹ ರಾಶಿಯವರು ಹಣದ ವಿಷಯದಲ್ಲಿ ಸ್ವಲ್ಪ ಜಾಗ್ರತೆವಹಿಸಬೇಕು, ಉದ್ಯಮಿಗಳು ದೊಡ್ಡ ಸವಾಲುಗಳನ್ನು ಎದುರಿಸಬೇಕಾಗಬಹುದು, ಹಣಕಾಸಿನ ವ್ಯವಹಾರವನ್ನು ಜಾಗ್ರತೆಯಿಂದ ಮಾಡಬೇಉ, ಅತಿಯಾಗಿ ಖರ್ಚು ಮಾಡದಿರಿ.
ಕನ್ಯಾ ರಾಶಿ
ನಿಮಗೆ ಜುಲೈ ಮಾಸ ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಅನುಕೂಲಕರವಾಗಿದೆ. ಉದ್ಯೋಗವನ್ನು ಹುಡುಕುತ್ತಿದ್ದರೆ ಒಳ್ಳೆಯ ಉದ್ಯೋಗ ಸಿಗಲಿದೆ. ವ್ಯಾಪಾರಿಗಳು ಲಾಭ ಗಳಿಸಲು ಸಾಧ್ಯವಾಗುವುದು ಆದರೆ ಈ ಸಜಯದಲ್ಲಿ ಹೂಡಿಕೆ ಬಗ್ಗೆ ಜಾಗ್ರತೆವಹಿಸಬೇಕು. ಅತಿಯಾದ ಖರ್ಚು ಮಾಡಬೇಡಿ. ಇರುತ್ತದೆ.
ತುಲಾ ರಾಶಿ
ನೀವು ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ, ನೀವು ಬಯಸಿದ ಕೆಲಸವನ್ನು ಉತ್ತಮ ಸ್ಥಾನದಲ್ಲಿ ಪಡೆಯಬಹುದು. ಈ ಅವಧಿಯಲ್ಲಿ ನೀವು ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು. ನೀವು ಉದ್ಯೋಗದಲ್ಲಿದ್ದರೆ ಮತ್ತು ನಿಮ್ಮ ಸಂಬಳವು ಕೆಲವು ಕಾರಣಗಳಿಂದ ಸ್ಥಗಿತಗೊಂಡಿದ್ದರೆ, ಈ ಸಮಯದಲ್ಲಿ ನಿಮ್ಮ ಸಮಸ್ಯೆಯನ್ನು ಪರಿಹರಿಸಬಹುದು.
ವೃಶ್ಚಿಕ ರಾಶಿ
ಆರ್ಥಿಕವಾಗಿ ನೋಡುವುದಾದರೆ ಈ ಮಾಸ ಈ ತಿಂಗಳು ನಿಮಗೆ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ. ಹೊಸ ಕೆಲಸ ಹುಡುಕುತ್ತಿದ್ದರೆ ತಿಂಗಳ ಕೊನೆಯಲ್ಲಿ ನೀವು ಶುಭ ಸುದ್ದಿ ಪಡೆಯುತ್ತೀರಿ, ಹಣಕಾಸಿನ ಯಾವುದೇ ದೊಡ್ಡ ವ್ಯವಹಾರ ಮಾಡುವ ಮುನ್ನ ಅನುಭವಿಗಳ ಹಾಗೂ ಮನೆಯವರ ಸಲಹೆ ಪಡೆಯಿರಿ.
ಧನು ರಾಶಿ
ಈ ಮಾಸ ನಿಮಗೆ ಹಣದ ವಿಷಯದಲ್ಲಿ ಅದೃಷ್ಟಕರ. ಮತ್ತು ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ಹೊಸ ಉದ್ಯೋಗ ಅಥವಾ ಹೊಸ ಆದಾಯ ಮೂಲವನ್ನು ಹುಡುಕುತ್ತಿದ್ದರೆ ತಿಂಗಳ ಕೊನೆಯಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಸೌಕರ್ಯ ಹೆಚ್ಚಾಗಲಿದೆ. ಈ ಸಮಯದಲ್ಲಿ, ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ಮಕರ ರಾಶಿ
ನೀವು ಕೆಲಸ ಬದಲಾವಣೆ ಬಗ್ಗೆ ಯೋಚಿಸುತ್ತಿದ್ದರೆ ಒಳ್ಳೆ ಕೆಲಸ ಸಿಗಲಿದೆ, ಆದರೆ ಹಣದ ವಿಷಯದಲ್ಲಿ ಸ್ವಲ್ಪ ಜಾಗ್ರತೆ ಇರಲಿ. ಉದ್ಯಮಿಗಳು ಹೊಸ ಪ್ರಾಜೆಕ್ಟ್ ಶುರು ಮಾಡುವಾಗ ನಿಮ್ಮ ಆಪ್ತರ ಬೆಂಬಲ ದೊರೆಯುತ್ತದೆ.
ಕುಂಭ ರಾಶಿ
ಹಣದ ವಿಷಯದಲ್ಲಿ ಜಾಗ್ರತೆವಹಿಸಿ. ಹಣಕಾಸಿನ ತೊಂದರೆ ದೂರಾಗುವುದು. ನೀವು ಮನೆಯಲ್ಲಿ ಹಿರಿಯರೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ಕೆಲಸದ ಕಡೆಗೆ ಗಮನಹರಿಸಬೇಕು. ಅಲ್ಲದೆ ಮನೆ ಖರ್ಚು ನಿಯಂತ್ರಿಸಬೇಕು,ಇಲ್ಲದಿದ್ದರೆ ಆರ್ಥಿಕ ಸಮಸ್ಯೆ ಹೆಚ್ಚಾಗುವುದು.
ಮೀನ ರಾಶಿ
ಆರ್ಥಿಕವಾಗಿ ಉತ್ತಮವಾಗಿದೆ, ವ್ಯಾಪಾರ ವೃದ್ಧಿಯಾಗಲಿದೆ. ಆದಾಯ ಚೆನ್ನಾಗಿರಲಿದೆ. ನೀವು ಆರೋಗ್ಯದ ಕಡೆಗೆ ಗಮನಹರಿಸಿ. ಈ ಮಾಸ ಹಣದ ಚಿಂತೆ ಕಾಡಲ್ಲ, ಅಲ್ಲದೆ ಹೊಸ ಆದಾಯದ ಮೂಲವನ್ನು ಪಡೆಯುವುದರಿಂದ ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications


