Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜೂನ್ ಭವಿಷ್ಯ 2024: ಈ ಮಾಸ ಉದ್ಯೋಗಿಗಳಿಗೆ ಹೇಗಿರಲಿದೆ? ಬಡ್ತಿ ಸಿಗಲಿದೆಯೇ?
ಜೂನ್ ತಿಂಗಳ ರಾಶಿಫಲ ಪ್ರಕಾರ ಉದ್ಯೋಗಿಗಳಿಗೆ ಈ ಮಾಸ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಮೇಷ ರಾಶಿ
ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿದೆ. ಉದ್ಯೋಗಿಗಳು ತಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಪಡೆಯುತ್ತೀರಿ. ಸಂಬಳ ಹೆಚ್ಚಾಗುವ ಸೂಚನೆಯಿದೆ. ನಿಮ್ಮ ಕೆಲಸವನ್ನು ಮೇಲಾಧಿಕಾರಿಗಳು ಮೆಚ್ಚಿಕೊಳ್ಳುತ್ತಾರೆ. ಅವರು ನಿಮಗೆ ಪ್ರಮುಖ ಕೆಲಸದ ಜವಾಬ್ದಾರಿ ನೀಡಬಹುದು. ಬಯಸಿದ ವರ್ಗಾವಣೆ ನೀಡಬಹುದು, ಇನ್ನು ಉದ್ಯೋಗ ಬದಲಾವಣೆ ಬಗ್ಗೆ ಯೋಚಿಸುತ್ತಿದ್ದರೆ ಈ ಅವಧಿಯಲ್ಲಿ ನಿಮ್ಮ ಪ್ರಯತ್ನಕ್ಕೆ ಫಲ ಸಿಗಲಿದೆ.

ವೃಷಭ ರಾಶಿ
ವೃಷಭ ರಾಶಿಯ ಉದ್ಯೋಗಿಗಳಿಗೆ ಈ ತಿಂಗಳು ಮಿಶ್ರಫಲ. ಕೆಲವೊಂದು ಸವಾಲುಗಳು ಬರಬಹುದು. ನೀವು ಕೆಲಸವನ್ನು ಪೂರ್ಣ ಶ್ರದ್ಧೆಯಿಂದ ಮಾಡಬೇಕು. ಕೆಲಸದ ಸಂಬಂಧಿತ ಪ್ರಯಾಣ ಕೂಡ ಮಾಡಬೇಕಾಗುವುದು. ಮೇಲಾಧಿಕಾರಿಗಳ ವರ್ತನೆ ನಿಮಗೆ ಸಮಸ್ಯೆ ಉಂಟು ಮಾಡಬಹುದು. ನಿಮ್ಮ ರಹಸ್ಯ ಶತ್ರುಗಳ ಬಗ್ಗೆ ನೀವು ಜಾಗರೂಕರಾಗಿರಬೇಕು.
ಮಿಥುನ ರಾಶಿ
ಉದ್ಯೋಗಿಗಳಿಗೆ ಜೂನ್ ಮಾಸ ಸವಾಲಿನಿಂದ ಕೂಡಿರಲಿದೆ. ಈ ಸಮಯದಲ್ಲಿ, ನೀವು ಅನಗತ್ಯ ಚಿಂತೆಗಳಿಂದ ದೂರವಿರುವುದು ಒಳ್ಳೆಯದು. ಇಲ್ಲದಿದ್ದರೆ ನಿಮ್ಮ ಪ್ರಮುಖ ಕಾರ್ಯಗಳ ಮೇಲೆ ಸರಿಯಾಗಿ ಗಮನಹರಿಸಲು ಸಾಧ್ಯವಾಗುವುದಿಲ್ಲ. ಕೆಲಸದಲ್ಲಿ ನಿರ್ಲಕ್ಷ್ಯ ನಿಮ್ಮ ಪ್ರಗತಿಗೆ ಅಡ್ಡಿಯಾಗಬಹುದು. ಈ ಸಮಯದಲ್ಲಿ, ನೀವು ಆರೋಗ್ಯ ಮತ್ತು ಹಣದ ಬಗ್ಗೆ ಬಹಳ ಜಾಗರೂಕರಾಗಿರಬೇಕು.
ಕರ್ಕ ರಾಶಿ
ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಕೆಲಸಕ್ಕೆ ಉತ್ತಮ ಮನ್ನಣೆ ದೊರೆಯಲಿದೆ. ನೀವು ನಿಮ್ಮ ವೃತ್ತಿ ಬದುಕಿನಲ್ಲಿ ಯಶಸ್ಸು ದೊರೆಯಲಿದೆ. ಇನ್ನು ಕೆಲಸಕ್ಕಾಗಿ ಹುಡುಕುತ್ತಿರುವವರು ಕೂಡ ಈ ಅವಧಿಯಲ್ಲಿ ಕೆಲಸವನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ.
ಸಿಂಹ ರಾಶಿ
ಉದ್ಯೋಗಿಗಳಿಗೆ ಈ ಅವಧಿಯಲ್ಲಿ ಕೆಲಸದ ಒತ್ತಡ ಅಧಿಕವಿರಲಿದೆ, ಕೆಲಸದ ಒತ್ತಡ ಮಾನಸಿಕ ಒತ್ತಡ ಹೆಚ್ಚಿಸಬಹುದು. ನೀವು ಉದ್ಯೋಗದಲ್ಲಿದ್ದರೆ ತಿಂಗಳ ಆರಂಭದಲ್ಲಿ ನಿಮ್ಮ ಕೆಲಸದ ಹೊರೆ ಹೆಚ್ಚಾಗಿರುತ್ತದೆ. ಆದರೆ ನಿಮ್ಮ ಕಠಿಣ ಶ್ರಮಕ್ಕೆ ಉತ್ತಮ ಫಲ ಪಡೆಯುತ್ತೀರಿ. ಉದ್ಯೋಗಿಗಳು ಈ ಅವಧಿಯಲ್ಲಿ ಸಂತೋಷದ ಸುದ್ದಿ ಪಡೆಯುತ್ತೀರಿ.
ಕನ್ಯಾ ರಾಶಿ
ಉದ್ಯೋಗಿಗಳಿಗೆ ಈ ತಿಂಗಳು ಬಹಳ ಮಹತ್ವದ್ದಾಗಿದೆ. ಈ ಸಮಯದಲ್ಲಿ ನೀವು ಕೆಲವು ಉತ್ತಮ ಅವಕಾಶಗಳನ್ನು ಪಡೆಯಬಹುದು. ನಿಮ್ಮ ವೃತ್ತಿಜೀವನದಲ್ಲಿ ಹೊಸ ತಿರುವು ಇರುತ್ತದೆ. ನೀವು ಕೆಲಸವನ್ನು ಬದಲಾಯಿಸಲು ಬಯಸಿದರೆ ಒಳ್ಳೆಯ ಅವಕಾಶ ಸಿಗಲಿದೆ. ವೃತ್ತಿ ಬದುಕಿನಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯವಾಗುವುದು.
ತುಲಾ ರಾಶಿ
ಉದ್ಯೋಗಿಗಳು ಈ ಅವಧಿಯಲ್ಲಿ ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗಬಹುದು. ನಿಮ್ಮ ಪ್ರಸ್ತುತ ಕೆಲಸದಲ್ಲಿ ನೀವು ತೃಪ್ತರಾಗದಿದ್ದರೆ ಮತ್ತು ನಿಮ್ಮ ಕೆಲಸವನ್ನು ಬದಲಾಯಿಸಲು ಯೋಜಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ, ನೀವು ಪ್ರಯತ್ನಪಟ್ಟರೆ ನಿಮಗೆ ಒಳ್ಳೆಯ ಅವಕಾಶ ಸಿಗಬಹುದು. ತಿಂಗಳ ಮಧ್ಯದಲ್ಲಿ ನಿಮಗೆ ಹೊಸ ಕೆಲಸ ಸಿಗುವ ಸಾಧ್ಯತೆ ಇದೆ. ಆದರೆಕೆಲಸದ ಜಾಗದಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಯಾರನ್ನೂ ನಂಬಬೇಡಿ .
ವೃಶ್ಚಿಕ ರಾಶಿ
ಉದ್ಯೋಗಿಗಳಿಗೆ ಪ್ರಗತಿಯ ಹಾದಿ ತೆರೆದುಕೊಳ್ಳಲಿದೆ. ಈ ಅವಧಿಯಲ್ಲಿ, ನೀವು ಬಡ್ತಿ ಪಡೆಯಬಹುದು ಮತ್ತು ನಿಮ್ಮ ಸಂಬಳವೂ ಹೆಚ್ಚಾಗುತ್ತದೆ ಆದರೆ ನಿಮ್ಮ ಮೇಲೆ ಕೆಲಸದ ಜವಾಬ್ದಾರಿಗಳ ಹೊರೆ ಹೆಚ್ಚಾಗುವ ಸಾಧ್ಯತೆಯಿದೆ, ನೀವು ಯೋಜನೆಯ ಪ್ರಕಾರ ಕೆಲಸ ಮಾಡಿದರೆ ಒಳ್ಳೆಯದು.
ಧನು ರಾಶಿ
ಉದ್ಯೋಗಿಗಳು ಈ ಅವಧಿಯಲ್ಲಿ ತುಂಬಾ ತಾಳ್ಮೆಯಿಂದಿರಬೇಕು. ನೀವು ಅನಗತ್ಯ ಚಿಂತೆಗಳನ್ನು ತಪ್ಪಿಸಬೇಕು, ನಿಮ್ಮ ಕೆಲಸದ ಮೇಲೆ ಸಂಪೂರ್ಣವಾಗಿ ಗಮನಹರಿಸಬೇಕು. ಈ ಅವಧಿಯಲ್ಲಿ ನಿಮ್ಮ ಕೆಲಸದ ಮೇಲೆ ಸರಿಯಾಗಿ ಗಮನಹರಿಸಲು ಸಾಧ್ಯವಾಗದಿರುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸ ಕುಸಿಯಬಹುದು. ನೀವು ನಿರುದ್ಯೋಗಿಗಳಾಗಿದ್ದರೆ, ನೀವು ಸರಿಯಾದ ದಿಕ್ಕಿನಲ್ಲಿ ಪ್ರಯತ್ನಿಸಿದರೆ ನೀವು ಕೆಲಸವನ್ನು ನೀವು ಪಡೆಯುವ ಸಾಧ್ಯತೆಯಿದೆ.
ಮಕರ ರಾಶಿ
ಉದ್ಯೋಗಿಗಳಿಗೆ ಜೂನ್ ತಿಂಗಳ ಆರಂಭವು ತುಂಬಾ ಒಳ್ಳೆಯದು. ನಿಮ್ಮ ಕೆಲಸದಲ್ಲಿ ದೊಡ್ಡ ಬದಲಾವಣೆ ಉಂಟಾಗಲಿದೆ. ನೀವು ಬಯಸಿದ ವರ್ಗಾವಣೆಯನ್ನು ಪಡೆಯುವ ಸಾಧ್ಯತೆಯಿದೆ, ನೀವು ಬಡ್ತಿ ಪಡೆಯಬಹುದು. ನೀವು ಹೊಸ ಉದ್ಯೋಗಕ್ಕಾಗಿ ದೊಡ್ಡ ಕಂಪನಿಯಲ್ಲಿ ಸಂದರ್ಶನವನ್ನು ನೀಡಿದ್ದರೆ, ನೀವು ಸಕಾರಾತ್ಮಕ ಉತ್ತರವನ್ನು ಪಡೆಯುವ ಸಾಧ್ಯತೆಯಿದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ ಇದೆ.
ಕುಂಭ ರಾಶಿ
ಕಚೇರಿಯಲ್ಲಿ ದೊಡ್ಡ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡುತ್ತಿದ್ದರೆ ಕೆಲಸದ ಕಡೆಗೆ ತುಂಬಾನೇ ಗಮನಹರಿಸಿ. ಟೀಮ್ ವರ್ಕ್ ಮೂಲಕ ನಿಮ್ಮ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುತ್ತದೆ. ನೀವು ಉನ್ನತ ಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರೆ, ನೀವು ಸಹೋದ್ಯೋಗಿಗಳ ಜೊತೆಗೆ ತುಂಬಾ ಸಮತೋಲಿತ ರೀತಿಯಲ್ಲಿ ವರ್ತಿಸಲು ಸಲಹೆ ನೀಡಲಾಗುತ್ತದೆ.
ಮೀನ ರಾಶಿ
ವೃತ್ತಿಜೀವನದ ದೃಷ್ಟಿಯಿಂದ ಈ ತಿಂಗಳು ನಿಮಗೆ ಉತ್ತಮವಾಗಿರುತ್ತದೆ. ನಿಮ್ಮ ಶ್ರಮಕ್ಕೆ ಉತ್ತಮ ಫಲ ದೊರೆಯಲಿದೆ. ನಿಮಗೆ ವಹಿಸಿರುವ ಕೆಲಸವನ್ನು ನೀವೇ ಪೂರ್ಣಗೊಳಿಸಲು ಪ್ರಯತ್ನಿಸಿದರೆ ಅದು ಉತ್ತಮವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications