Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜೂನ್ ಭವಿಷ್ಯ 2024: ಈ ಮಾಸ ಪ್ರೇಮಿಗಳಿಗೆ, ವಿವಾಹಿತರಿಗೆ ಹೇಗಿರಲಿದೆ?
ಜೂನ್ ತಿಂಗಳ ರಾಶಿಫಲ ಪ್ರಕಾರ ಪ್ರೇಮಿಗಳಿಗೆ, ವಿವಾಹಿತರಿಗೆ ಈ ಮಾಸ ಹೇಗಿರಲಿದೆ ಎಂದು ನೋಡೋಣ ಬನ್ನಿ:
ಮೇಷ ರಾಶಿ
ನಿಮ್ಮ ಪ್ರೀತಿಯ ಜೀವನದ ಬಗ್ಗೆ ನೋಡುವುದಾದರೆ ಜೂನ್ ಮಾಸ ನಿಮಗೆ ಅಷ್ಟೊಂದು ಅನುಕೂಲಕರವಲ್ಲ, ನಿಮ್ಮ ಹಾಗೂ ಸಂಗಾತಿ ನಡುವೆ ಅಭಿಪ್ರಾಯ ವ್ಯತ್ಯಾಸ ಅಧಿಕವಿರಬಹುದು. ಈ ಕಾರಣದಿಂದ ನಿಮ್ಮ ಮಾನಸಿಕ ಒತ್ತಡ ಹೆಚ್ಚಾಗಲಿದೆ, ನೀವು ತಾಳ್ಮೆಯಿಂದ ಪರಿಸ್ಥಿತಿ ಬಗೆಹರಿಸಲು ಪ್ರಯತ್ನಿಸಿ, ಅಹಂ ನಿಮ್ಮ ಸಂಬಂಧ ಹಾಳು ಮಾಡಲು ಬಿಡಬೇಡಿ. ನೀವಿಬ್ಬರು ಮುಕ್ತವಾಗಿ ಮಾತನಾಡಿ ಭಿನ್ನಾಭಿಪ್ರಾಯ ಬಗೆಹರಿಸಲು ಪ್ರಯತ್ನಿಸಬೇಕು.

ವೃಷಭ ರಾಶಿ
ಪ್ರೀತಿ ಜೀವನದ ಬಗ್ಗೆ ಹೇಳುವುದಾದರೆ ಈ ಮಾಸದಲ್ಲಿ ನಿಮ್ಮ ಸಂಬಂಧದಲ್ಲಿ ಏರಳಿತ ಕಂಡು ಬರಲಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯವಿರಲಿದೆ. ನೀವು ಒಬ್ಬರಿಗೊಬ್ಬರು ಸಮಯ ನೀಡಬೇಕು, ಸಂಗಾತಿಯನ್ನು ಅರ್ತ ಮಾಡಿಕೊಳ್ಳಲು ಪ್ರಯತ್ನಿಸಬೇಕು. ತಿಂಗಳ ಕೊನೆಯಲ್ಲಿ ಎಲ್ಲವೂ ಸರಿಯಾಗಲಿದೆ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ತಿಂಗಳು ಕೆಲಸದ ಒತ್ತಡದ ಕಾರಣ ನಿಮ್ಮ ಕುಟುಂಬಕ್ಕೆ ಸಾಕಷ್ಟು ಸಮಯವನ್ನು ನೀಡಲು ನಿಮಗೆ ಸಾಧ್ಯವಾಗದಿರಬಹುದು. ಚಿಕ್ಕ ವಿಷಯಕ್ಕೆ ಭಿನ್ನಾಭಿಪ್ರಾಯ ಉಂಟಾಗಬಹುದು. ನಿಮ್ಮ ಹಾಗೂ ಸಂಗಾತಿ ನಡುವಿನ ಸಂಬಂಧ ಹಾಳಾಗದಂತೆ ಜಾಗ್ರತೆವಹಿಸಿ. ಮೂರನೇಯವರು ನಿಮ್ಮ ಸಂಬಂಧದಲ್ಲಿ ಮೂಗು ತೂರಿಸಲು ಬಿಡಬೇಡಿ.
ಕರ್ಕ ರಾಶಿ
ಸಂಬಂಧದ ವಿಷಯದಲ್ಲಿ ಕರ್ಕ ರಾಶಿಯವರಿಗೆ ಉತ್ತಮವಾಗಿರಲಿದೆ, ಪ್ರೇಮಿಗಳಿಗೆ ಈ ಸಮಯ ಉತ್ತಮವಾಗಿರಲಿದೆ, ನೀವು ಮದುವೆಯಾಗಲು ಮನೆಯವರ ಅನುಮತಿ ಪಡೆಯಬಹುದು. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಸಂಬಂಧದದಲ್ಲಿ ಏರಳಿತಗಳಿಂದ ಕೂಡಿರಲಿದೆ. ಕೌಟುಂಬಿಕ ಜೀವನದಲ್ಲಿ ಸಮಸ್ಯೆಗಳು ಹೆಚ್ಚಾಗಬಹುದು. ನೀವು ನಿಮ್ಮ ಮಾತು ನಿಯಂತ್ರಿಸಬೇಕು, ನಿಮ್ಮ ಕೋಪದ ಸ್ವಭಾವವು ಸಮಸ್ಯೆ ಹೆಚ್ಚಿಸಬಹುದು. ಸಂಗಾತಿಯ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳಬೇಡಿ.
ಕನ್ಯಾ ರಾಶಿ
ಈ ಸಮಯ ಗ್ರಹಗಳ ಸ್ಥಾನ ನಿಮ್ಮ ವೈವಾಹಿಕ ಜೀವನದಲ್ಲಿ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಕೋಪ ಮತ್ತು ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಿ. ಪ್ರೇಮಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ, ಪ್ರೇಮಿಗಳು ಮದುವೆಯ ಮೂಲಕ ತಮ್ಮ ಬಂಧವನ್ನು ಮತ್ತಷ್ಟು ಗಟ್ಟಿಯಾಗಿಸಲು ಯೋಚಿಸಬಹುದು.
ತುಲಾ ರಾಶಿ
ತುಲಾ ರಾಶಿಯವರು ವೃತ್ತಿ ಬದುಕಿನ ಜೊತೆಗೆ ಕುಟುಂಬದ ಕಡೆಗೂ ಗಮನಹರಿಸಬೇಕು. ಸಂಗಾತಿಯೊಂದಿಗೆ ಜಗಳ ಮಾಡಬೇಡಿ, ಎಲ್ಲಾ ಪರಿಸ್ಥಿತಿಯನ್ನು ತಾಳ್ಮೆಯಿಂದ ಬಗೆಹರಿಸಿ. ಇಲ್ಲದಿದ್ದರೆ ಮನೆಯ ವಾತಾವರಣ ಹಾಳಾಗುವುದು. ಕೋಪ ನಿಯಂತ್ರಿಸಿದರೆ ಸಾಕು ನಿಮ್ಮ ಸಮಸ್ಯೆ ಬಗೆಹರಿಯುವುದು, ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಿ, ನಿಮ್ಮ ಸಂಸಾರ ವಿಷಯಕ್ಕೆ ಮೂರನೇಯವರ ಸಲಹೆ ಪಡೆಯಲು ಹೋಗಬೇಡಿ.
ವೃಶ್ಚಿಕ ರಾಶಿ
ಪ್ರೇಮಿಗಳ ನಡುವೆ ನಂಬಿಕೆಯ ಕೊರತೆ ಇರಲಿದೆ. ಇದೇ ಕಾರಣಕ್ಕೆ ನಿಮ್ಮ ಸಂಗಾತಿಯೊಂದಿಗೆ ನೀವು ಭಿನ್ನಾಭಿಪ್ರಾಯವನ್ನು ಹೊಂದಿರಬಹುದು. ವಿವಾಹಿತರಿಗೆ ಈ ಅವಧಿ ಚೆನ್ನಾಗಿರಲಿದೆ. ಈ ಸಮಯದಲ್ಲಿ ನೀವು ಒಬ್ಬರಿಗೊಬ್ಬರು ಸಾಕಷ್ಟು ಸಮಯವನ್ನು ನೀಡುತ್ತೀರಿ. ನಿಮ್ಮ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ.
ಧನು ರಾಶಿ
ವೈವಾಹಿಕ ಜೀವನದಲ್ಲಿ ಸಂತಸ ಇರಲಿದೆ. ಪ್ರೇಮಿಗಳು ನಿಮ್ಮ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯಲು ನೀವು ಬಯಸಿದರೆ, ನಿಮ್ಮ ಕುಟುಂಬದ ಸದಸ್ಯರ ಒಪ್ಪಿಗೆ ಪಡೆಯಬಹುದು. ಉದ್ಯೋಗಿಗಳು ಈ ಅವಧಿಯಲ್ಲಿ ತುಂಬಾ ತಾಳ್ಮೆಯಿಂದಿರಬೇಕು. ನೀವು ಅನಗತ್ಯ ಚಿಂತೆಗಳನ್ನು ತಪ್ಪಿಸಬೇಕು
ಮಕರ ರಾಶಿ
ದಾಂಪತ್ಯ ಜೀವನ ಚೆನ್ನಾಗಿರಲಿದೆ. ನಿಮ್ಮ ನಡುವೆ ಪ್ರೀತಿ, ವಾತ್ಸಲ್ಯವು ಹೆಚ್ಚಾಗುತ್ತದೆ, ಆದರೆ ನಿಮ್ಮ ಸಂಗಾತಿಗೆ ಆರೋಗ್ಯ ಸಂಬಂಧಿತ ಸಮಸ್ಯೆವಿರಬಹುದು, ಅವರ ಆರೈಕೆ ಕಡೆಗೆ ಗಮನಹರಿಸಿ.
ಕುಂಭ ರಾಶಿ
ನೀವು ಪ್ರೇಮ ವಿವಾಹವನ್ನು ಹೊಂದಲು ಬಯಸಿದರೆ ಕುಟುಂಬದವರಿಗೆ ನಿಮ್ಮ ಪ್ರೀತಿಯ ಬಗ್ಗೆ ಹೇಳಬಹುದು, ಅವರು ನಿಮ್ಮ ಮದುವೆಗೆ ಒಪ್ಪಿಗೆ ಸೂಚಿಸಬಹುದು. ದಾಂಪತ್ಯ ಜೀವನ ಚೆನ್ನಾಗಿರಲಿದೆ. ವಿವಾಹಿತರ ವೈವಾಹಿಕ ಜೀವನ ಚೆನ್ನಾಗಿರಲಿದೆ.
ಮೀನ ರಾಶಿ
ವೈವಾಹಿಕ ಜೀವನದಲ್ಲಿ ಪರಿಸ್ಥಿತಿಗಳು ಪ್ರತಿಕೂಲವಾಗಿರಲಿದೆ. ನಿಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯವಿರಬಹುದು. ಪ್ರೇಮಿಗಳಿಗೆ ಈ ಅವಧಿ ಉತ್ತಮವಾಗಿರುವುದಿಲ್ಲ. ನೀವು ನಿಮ್ಮ ಸಂಬಂಧ ಗಟ್ಟಿಯಾಗಿಸಲು ಹೆಚ್ಚಿನ ಪ್ರಯತ್ನ ಹಾಕಬೇಕು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications