Latest Updates
-
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ!
ವಾರ ಭವಿಷ್ಯ ಪ್ರಕಾರ ಈ ವಾರ ಪ್ರೇಮಿಗಳಿಗೆ, ವಿವಾಹಿತರಿಗೆ ಹೇಗಿರಲಿದೆ?
ಗ್ರಹಗತಿಗಳ ಸ್ಥಾನದ ಪ್ರಕಾರ ದ್ವಾದಶ ರಾಶಿಗಳ ವಿವಾಹಿತರಿಗೆ, ಪ್ರೇಮಿಗಳಿಗೆ, ಅವಾಹಿತರಿಗೆ ಹೇಗಿರಲಿದೆ?
ಮೇಷ ರಾಶಿ
ಮೇಷ ರಾಶಿಯ ವಿವಾಹಿತರಿಗೆ ಈ ವಾರ ಒತ್ತಡದಿಂದ ಕೂಡಿರಲಿದೆ. ವೈವಾಹಿಕ ಜೀವನದಲ್ಲಿ ಸಣ್ಣ ವಿಷಯಕ್ಕೆ ಭಿನ್ನಾಭಿಪ್ರಾಯ ಮೂಡಬಹುದು, ನಿಮ್ಮ ಸಂಗಾತಿಯನ್ನು ಅನಗತ್ಯವಾಗಿ ಅನುಮಾನಿಸುವುದನ್ನು ತಪ್ಪಿಸಿ, ಇಲ್ಲ. ನೀವು ಅವಿವಾಹಿತರಾಗಿದ್ದರೆ ನಿಮಗೆ ಪ್ರಸ್ತಾಪ ಬರಬಹುದು. ಆದರೆ ಅವರ ಬಗ್ಗೆ ಚೆನ್ನಾಗಿ ವಿಚಾರಿಸದೆ ನೀವು ಒಕೆ ಎಂದು ಹೇಳಬೇಡಿ.

ವೃಷಭ ರಾಶಿ
ವೃಷಭ ರಾಶಿಯವರ ಪ್ರೀತಿ ಜೀವನ ನೋಡುವುದಾದರೆ ನಿಮ್ಮ ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಮತ್ತಷ್ಟು ಹೆಚ್ಚಾಗಬಹುದು. ನೀವು ಪರಸ್ಪರ ವಾದ ಮಾಡಿಕೊಂಡು ಮುನಿಸು ಹೆಚ್ಚು ಮಾಡುವ ಬದಲಿಗೆ ಕೂತು ಮಾತನಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ. ಪ್ರೇಮಿಗಳಿಗೆ ಈ ವಾರ ರೊಮ್ಯಾಂಟಿಕ್ ಆಗಿರಲಿದೆ.
ಮಿಥುನ ರಾಶಿ
ಮಿಥುನ ರಾಶಿಯ ಪ್ರೇಮಿಗಳ ಪ್ರೇಮ ಸಂಬಂಧ ಗಾಢವಾಗುವುದು. ವಿವಾಹಿತರಿಗೆ ಈ ವಾರ ಆಹ್ಲಾದಕರವಾಗಿರುತ್ತದೆ. ನೀವು ಪರಸ್ಪರ ಸಾಕಷ್ಟು ಸಮಯವ ಕಳೆಯಲು ಸಾಧ್ಯವಾಗುವುದು, ಇಬ್ಬರು ಭವಿಷ್ಯದ ಯೋಜನೆಗಳ ಬಗ್ಗೆ ಮಾತನಾಡಬಹುದು. ಅಲ್ಲದೆ ನಿಮ್ಮ ಪ್ರಮುಖ ಸಮಸ್ಯೆ ಬಗೆಹರಿಸಲು ಸಂಗಾತಿಯ ಬೆಂಬಲ ಸಿಗಲಿದೆ.
ಕರ್ಕ ರಾಶಿ
ಈ ವಾರ ನಿಮ್ಮ ಪ್ರೀತಿ, ಕುಟುಂಬ ಬದುಕು ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಸುಖ ಶಾಂತಿ ಇರಲಿದೆ. ದಿನನಿತ್ಯ ಕಾರ್ಯ ಪೂರೈಸುವಲ್ಲಿ ನಿಮ್ಮ ಸಂಗಾತಿಯ ಬೆಂಬಲ ಸಿಗಲಿದೆ. ನೀವು ಅವಿವಾಹಿತರಾಗಿದ್ದರೆ ನಿಮಗೆ ಒಳ್ಳೆಯ ಮದುವೆಯ ಪ್ರಸ್ತಾಪ ಬರಬಹುದು.
ಸಿಂಹ ರಾಶಿ
ಕೆಲಸದಲ್ಲಿ ಬ್ಯುಸಿ ಇದ್ದರೂ ಕುಟುಂಬದ ಕಡೆಗೆ ಗಮನಹರಿಸುವುದರಿಂದ ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ನಡುವೆ ಪ್ರೀತಿ ಚೆನ್ನಾಗಿರಲಿದೆ. ನಿಮ್ಮ ನಡುವೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಬಗೆಹರಿಸಲು ಪ್ರಯತ್ನಿಸಿ.
ಕನ್ಯಾ ರಾಶಿ
ನಿಮ್ಮ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನೀವು ನಿಮ್ಮ ಸಂಗಾತಿಯ ಅಭಿಪ್ರಾಯ ಕೂಡ ಕೇಳಬೇಕು. ಯಾವುದೇ ಕಾರಣಕ್ಕೆ ಅವರಿಗೆ ನೀವು ಅವರನ್ನು ನಿರ್ಲಕ್ಷ್ಯ ಮಾಡುತ್ತಿದ್ದೀರಿ ಎಂಬ ಭಾವನೆ ಬರುವಂತೆ ನಡೆದುಕೊಳ್ಳಬಾರದು. ಬೇರೆ ಕಡೆ ಆಕರ್ಷಣೆಗೆ ಗುಡ್‌ಬೈ ಹೇಳಿ, ಪ್ರೇಮಿಗಳಿಗೆ ಈ ವಾರ ಸವಾಲಿನಿಂದ ಕೂಡಿರಲಿದೆ. ನಿಮ್ಮ ಸಂಬಂಧದ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಯಾವುದೇ ಸಂದಿಗ್ಧತೆ ಇದ್ದರೆ ಅದನ್ನು ನಿಮ್ಮ ಸಂಗಾತಿ ಜೊತೆ ಹೇಳಿಕೊಳ್ಳಿ ಅವರ ಪ್ರತಿಕ್ರಿಯೆ ನಿಮ್ಮ ಮನಸ್ಸಿಗೆ ನೆಮ್ಮದಿ ತರಬಹುದು.
ತುಲಾ ರಾಶಿ
ಈ ವಾರ ಸಂಬಂಧಗಳ ವಿಷಯದಲ್ಲಿ ನಿಮಗೆ ಏರಿಳಿತಗಳಿರಲಿದೆ. ನಿಮ್ಮ ನಡುವೆ ಹೊಂದಾಣಿಕೆಯ ಕೊರತೆ ಇರುತ್ತದೆ. ಇದರಿಂದಾಗಿ ಚಿಕ್ಕ ವಿಷಯವೂ ದೊಡ್ಡದಾಗುವುದು, ಆದರೆ ನೀವು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಬೇಕು. ಆವಾಗ ಸಮಸ್ಯೆ ಕಡಿಮೆಯಾಗುವುದು.
ವೃಶ್ಚಿಕ ರಾಶಿ
ಪ್ರೇಮಿಗಳಿಗೆ ಈ ವಾರ ತುಂಬಾ ವಿಶೇಷವಾಗಿರಲಿದೆ. ನಿಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ, ಮದುವೆಯ ಬಗ್ಗೆ ಆಲೋಚಿಸಬಹುದು. ವಿವಾಹಿತರಿಗೆ ಈ ವಾರವು ತುಂಬಾ ರೊಮ್ಯಾಂಟಿಕ್ ಆಗಿರುತ್ತದೆ. ಈ ಅವಧಿಯಲ್ಲಿ ಗಂಡ-ಹೆಂಡತಿ ತುಂಬಾನೇ ಖುಷಿಯಾಗಿರುತ್ತೀರಿ, ಪ್ರೀತಿ ಚೆನ್ನಾಗಿರಲಿದೆ.
ಧನು ರಾಶಿ
ಈ ಸಮಯದಲ್ಲಿ ನೀವು ನಿಮ್ಮ ಸಂಗತಿಗೆ ವಿಶೇಷ ಉಡುಗೊರೆ ನೀಡಬಹುದು, ಅದರ ಅವರಿಗೆ ಇಷ್ಟವಾದ ಕಾರ್ಯವನ್ನು ಮಾಡಬಹುದು, ಇದರಿಂದಾಗಿ ಅವರಿಗೆ ನಿಮ್ಮ ಮೇಲೆ ಪ್ರೀತಿ, ಗೌರವ ಹೆಚ್ಚಾಗಲಿದೆ. ಮದುವೆಗೆ ಸಂಬಂಧ ಹುಡುಕುತ್ತಿದ್ದರೆ, ಈ ಅವಧಿಯಲ್ಲಿ ಮದುವೆ ಪ್ರಸ್ತಾಪ ಬರಬಹುದು.
ಮಕರ ರಾಶಿ
ಈ ಸಮಯದಲ್ಲಿ ನೀವು ನಿಮ್ಮ ಕೈಲಾದಷ್ಟು ಪ್ರಯತ್ನಿಸುತ್ತೀರಿ. ನೀವು ಸರಿಯಾದ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಪ್ರೇಮ ಪ್ರಕರಣಗಳು ನಡೆಯುತ್ತಿದ್ದರೆ ನೀವು ಜಾಗರೂಕರಾಗಿರಬೇಕು. ನಿಮ್ಮ ವೈಯಕ್ತಿಕ ಜೀವನದಲ್ಲಿ ಮೂರನೇ ವ್ಯಕ್ತಿ ಹೆಚ್ಚು ಹಸ್ತಕ್ಷೇಪ ಮಾಡಲು ಬಿಡಬೇಡಿ.
ಕುಂಭ ರಾಶಿ
ಪ್ರೇಮಿಗಳಿಗೆ ಈ ಅವಧಿ ಪ್ರತಿಕೂಲವಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಭಾವನೆಗಳನ್ನು ನೀವು ನಿಯಂತ್ರಿಸಬೇಕು. ಈ ಅವಧಿಯಲ್ಲಿ ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಿ. ವಿವಾಹಿತರಿಗೆ ಈ ವಾರವು ತುಂಬಾ ಮಂಗಳಕರವಾಗಿರುತ್ತದೆ.
ಮೀನ ರಾಶಿ
ದಾಂಪತ್ಯ ಜೀವನ ಚೆನ್ನಾಗಿರಲಿದೆ. ನಿಮ್ಮ ಸಂಗಾತಿಯಿಂದ ನೀವು ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ಆದರೆ ಸರಿಯಾಗಿ ವಿಚಾರಿಸಬೇಕು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











