Latest Updates
-
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ! -
ಪುರಿ ರಥಯಾತ್ರೆ 2026: ಭಕ್ತರೇ ಎಚ್ಚರ! ಸುಗಮ ದರ್ಶನಕ್ಕೆ ಇಲ್ಲಿವೆ ಪ್ರಮುಖ ಟಿಪ್ಸ್ -
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ!
ನೇರ ಚಲನೆಗೆ ಗುರು ಸಿದ್ದ; ಈ ರಾಶಿಯವರಿಗಿದೆ ಅನುಕೂಲಕರ ವರ್ಷ, ಯಾರಿಗೆ ಲಾಭಕರ
ಜ್ಯೋತಿಷ್ಯದಲ್ಲಿ ಎಲ್ಲಾ ಗ್ರಹಗಳ ಸಂಚಾರವನ್ನು ಸಹ ಬಹಳ ಮುಖ್ಯ ವಿದ್ಯಮಾನ ಎಂದು ಪರಿಗಣಿಸಲಾಗುತ್ತದೆ. ಹಾಗೆ ಎಲ್ಲಾ ಗ್ರಹಗಳ ಸಂಚಾರವು 12 ರಾಶಿಗಳ ಮೇಲೆ ಪ್ರಭಾವ ಉಂಟು ಮಾಡುವುದು ಸಹ ನಾವು ಗಮನಿಸಬಹುದು. ಅದ್ರಲ್ಲೂ ಮುಖ್ಯವಾಗಿ ಗುರು ಗ್ರಹದ ಚಲನೆಯನ್ನು ಪ್ರಮುಖ ವಿದ್ಯಮಾನ ಎಂದು ಸಹ ಪರಿಗಣಿಸಲಾಗಿದೆ.
ಗುರುವು ವ್ಯಕ್ತಿಯ ಜಾತಕದಲ್ಲಿ ಸರಿಯಾದ ಸ್ಥಾನದಲ್ಲಿದ್ದರೆ ಅವರ ಜೀವನದಲ್ಲಿ ಬಹುದೊಡ್ಡ ಬದಲಾವಣೆಗಳು ಸಂಭವಿಸುತ್ತದೆ. ಅದಕ್ಕಾಗಿಯೇ ಜ್ಯೋತಿಷ್ಯದಲ್ಲಿ ಗುರುವಿನ ಸಂಚಾರವನ್ನು ಮುಖ್ಯವೆಂದು ಪರಿಗಣಿಸಲಾಗುತ್ತದೆ. ಗುರುವು ಬಹುತೇಕ ಪ್ರತಿ 13 ತಿಂಗಳಿಗೊಮ್ಮೆ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಗುರುವಿನ ಸಂಚಾರವು ಎಲ್ಲಾ ರಾಶಿ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ.

ಪ್ರಸ್ತುತ ಗುರು ಹಿಮ್ಮುಖ ಚಲನೆಯಲ್ಲಿದ್ದು, ಮಾರ್ಚ್ 13 ರ ನಂತರ ನೇರ ಚಲನೆಗೆ ಒಳಗಾಗುತ್ತಾನೆ. ಜ್ಯೋತಿಷ್ಯದಲ್ಲಿ ಗುರುವಿನ ನೇರ ಚಲನೆ ಬಹಳ ಮುಖ್ಯ. ಇದು ಎಲ್ಲಾ ರಾಶಿ ಜನರಿಗೆ ಪ್ರಯೋಜನಗಳನ್ನು ನೀಡುತ್ತದೆಯಾದರೂ, ಇದು ಕೆಲವು ರಾಶಿ ಜನರಿಗೆ ಅದೃಷ್ಟವನ್ನು ತರಲಿದೆ. ಗುರುವಿನ ಆಶೀರ್ವಾದ ಪಡೆದ ಮಂದಿ ತಮ್ಮ ಜೀವನದ ಪ್ರಮುಖ ಬಯಕೆಗಳನ್ನು ಈಡೇರಿಸಿಕೊಳ್ಳಲಿದ್ದಾರೆ. ಹಾಗಾದ್ರೆ ಯಾವೆಲ್ಲಾ ರಾಶಿಯವರಿಗೆ ಗುರುವಿನಿಂದ ಲಾಭದಾಯಕ ಅನ್ನೋದನ್ನು ನಾವಿಂದು ತಿಳಿದುಕೊಳ್ಳೋಣ.
ತುಲಾ ರಾಶಿ
ತುಲಾ ರಾಶಿಯವರಿಗೆ 9 ನೇ ಮನೆಯಲ್ಲಿ ಗುರುವಿನ ನೇರ ಚಲನೆಯು ಅವರಿಗೆ ಅದೃಷ್ಟ ಮತ್ತು ಸ್ಫೂರ್ತಿಯನ್ನು ತರುತ್ತದೆ. ಇದು ಅವರ ವೃತ್ತಿಜೀವನದಲ್ಲಿ ದೊಡ್ಡ ಲಾಭವನ್ನು ನೀಡುತ್ತದೆ. ಈ ಗ್ರಹ ಚಲನೆಯು ಹೊಸ ಉದ್ಯಮ ಅಥವಾ ಹೊಸ ಆದಾಯ ಪಡೆಯುವ ನಿಮ್ಮ ಬಯಕೆಯನ್ನು ಈಡೇರಿಸಲಿದೆ. ನಿಮ್ಮ ಹೂಡಿಕೆ ಮತ್ತು ಉಳಿತಾಯದಲ್ಲಿ ಶುಭವಿದೆ. ಕುಟುಂಬದ ಸಮಸ್ಯೆಗಳು ನಿವಾರಣೆಯಾಗುವುದು ನೋಡಬಹುದು. ಸಮಾಜದಲ್ಲಿ ನಿಮ್ಮ ಘನತೆ ಗೌರವ ಹೆಚ್ಚಾಗಲಿದೆ. ವೈವಾಹಿಕ ಜೀವನವು ಶಾಂತಿಯುತ ಮತ್ತು ಸಂತೋಷದಿಂದ ಕೂಡಿರಲಿದೆ. ನಿಮ್ಮ ಹಲವು ವಿಚಾರದಲ್ಲಿ ಧನಾತ್ಮಕ ಬದಲಾವಣೆಗಳ ನೋಡಬಹುದು.
ಕುಂಭ ರಾಶಿ
ಗುರುವು ಕುಂಭ ರಾಶಿಯ 5 ನೇ ಮನೆಯಲ್ಲಿ ನೇರ ಚಲನೆಗೆ ಒಳಗಾಗುತ್ತಾನೆ. ಇದು ನಿಮ್ಮ ವೈಯಕ್ತಿಕ ಖುಷಿಯನ್ನು ಹೆಚ್ಚಿಸಲಿದೆ. ಗುರುವಿನ ಈ ಸಂಚಾರವು ನಿಮ್ಮ ಜೀವನದಲ್ಲಿ ಅನಿರೀಕ್ಷಿತ ಬದಲಾವಣೆಗಳನ್ನು ತರಲಿದೆ. ಉದ್ಯಮಿಗಳು ದೊಡ್ಡ ಲಾಭವನ್ನು ನಿರೀಕ್ಷಿಸಬಹುದು, ಹಾಗೆ ಕೆಲಸದಲ್ಲಿರುವವರು ಬಡ್ತಿ ಅಥವಾ ಸಂಬಳ ಹೆಚ್ಚಳದ ಬಗ್ಗೆ ಸಕಾರಾತ್ಮಕ ಸುದ್ದಿಗಳನ್ನು ಪಡೆಯಬಹುದು. ಕುಟುಂಬ ಜೀವನವು ಸಂತೋಷ ಮತ್ತು ಸಾಮರಸ್ಯದಿಂದ ತುಂಬಿರುತ್ತದೆ. ವಾಹನ ಖರೀದಿ, ಮನೆ ನಿರ್ಮಾಣ ಸಂಬಂಧಿತ ವಿಚಾರವಾಗಿ ನಿಮ್ಮಲ್ಲಿ ಹೊಸ ರೀತಿಯ ವಿಚಾರಗಳು ನಡೆಯಲಿದೆ.
ಮೀನ ರಾಶಿ
ಗುರುವು ಮೀನ ರಾಶಿಯ 4ನೇ ಮನೆಯಲ್ಲಿ ನೇರ ಸಂಚಾರವನ್ನು ಪ್ರಾರಂಭಿಸುವುದರಿಂದ ಅವರು ಅನೇಕ ಕೆಲಸಗಳನ್ನು ಯಶಸ್ವಿಯಾಗಿ ಪೂರೈಸುತ್ತೀರಿ. ನೀವು ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿಯಲ್ಲಿದ್ದರೆ ಈ ಸಮಯವು ನಿಮಗೆ ಅದೃಷ್ಟಕರ ಫಲಿತಾಂಶಗಳಿಂದ ತುಂಬಿರಲಿದೆ. ಆರ್ಥಿಕ ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರಗಳು ಸಿಗಲಿದೆ. ನಿಮ್ಮ ಹೂಡಿಕೆಯಿಂದ ಒಂದಿಷ್ಟು ಲಾಭ ಮಾಡಬಹುದು. ಬಹುಕಾಲದ ಅನಾರೋಗ್ಯದಿಂದ ಸುಧಾರಣೆ ನೋಡುವಿರಿ. ಅವಿವಾಹಿತರು ಹಾಗೆ ನಿರುದ್ಯೋಗಿಗಳಿಗೆ ಈ ಸಮಯವು ಅದೃಷ್ಟಕರವಾಗಲಿದೆ.
(ಹಕ್ಕುತ್ಯಾಗ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಊಹೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ ಮತ್ತು ವಿಶ್ವಾಸಾರ್ಹವಾಗಿದೆ ಎಂದು ಖಾತರಿಪಡಿಸುವುದಿಲ್ಲ. ಕನ್ನಡ ಬೋಲ್ಡ್ ಸ್ಕೈ ಲೇಖನಕ್ಕೆ ಸಂಬಂಧಿಸಿದ ಮಾಹಿತಿಯನ್ನು ದೃಢೀಕರಿಸುವುದಿಲ್ಲ. ಮತ್ತು ಮಾಹಿತಿಯನ್ನು ಒದಗಿಸುವುದು ನಮ್ಮ ಏಕೈಕ ಉದ್ದೇಶವಾಗಿದೆ. ಈ ಸಮಸ್ಯೆಗೆ ಪರಿಹಾರ ಮಾಡುವ ಮುನ್ನ ತಜ್ಞರ ಸಲಹೆ ಪಡೆಯಲು ಸಲಹೆ ನೀಡಲಾಗುತ್ತದೆ)



Click it and Unblock the Notifications