Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ವೃಷಭ ರಾಶಿಗೆ ಗುರು ಸಂಚಾರ: 11ನೇ ಮನೆಯಲ್ಲಿ ಗುರು ಕರ್ಕ ರಾಶಿಯವರಿಗೆ ಅದೃಷ್ಟವೋ ಅದೃಷ್ಟ
ದೇವಗುರು ಮೇ1ಕ್ಕೆ ತನ್ನ ರಾಶಿ ಬದಲಾವಣೆ ಮಾಡಲಿದೆ. ಮೇಷದಿಂದ ವೃಷಭ ರಾಶಿಗೆ ಗುರು ಸಂಚರಿಸಿದಾಗ ಕರ್ಕ ರಾಶಿಯವರಲ್ಲಿ 11ನೇ ಮನೆಯಲ್ಲಿ ಇರಲಿದೆ. ಗುರು 12 ತಿಂಗಳು ನಿಮ್ಮ 11ನೇ ಮನೆಯಲ್ಲಿ ಇರಲಿದೆ, ಈ ಅವಧಿಯಲ್ಲಿ ಹೇಗೆ ಪ್ರಬಾವ ಬೀರಲಿದೆ ಎಂದು ನೋಡೋಣ ಬನ್ನಿ:

ಅದೃಷ್ಟದ ಬೆಂಬಲ ಸಿಗಲಿದೆ
ಗುರು ನಿಮ್ಮಮ 11ನೇ ಮನೆಯಲ್ಲಿ ಇದ್ದಾಗ ನಿಮಗೆ ಅದೃಷ್ಟದ ಬೆಂಬಲ ಸಿಗಲಿದೆ. ಈ ಗುರು ಸಂಕ್ರಮಣದ ಫಲವಾಗಿ ನಿಮ್ಮ ಮಹತ್ವಾಕಾಂಕ್ಷೆಗಳಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುವುದು. ಉನ್ನತ ಶಿಕ್ಷಣ ಮಾಡಬಯಸುವವರಿಗೆ ಒಳ್ಳೆಯ ಅವಕಾಶ ಸಿಗಲಿದೆ. ದೇವ ಗುರು ಬೃಹಸ್ಪತಿ ನಿಮ್ಮ ಜೀವನದ ವಿವಿಧ ಕ್ಷೇತ್ರಗಳಲ್ಲಿ ನಿಮಗೆ ಉತ್ತಮ ಫಲನೇ ನೀಡಲಿದೆ. ಆದ್ದರಿಂದ ಈ ಗುರು ಸಂಚಾರ ನಿಮಗೆ ತುಂಬಾ ಒಳ್ಳೆಯದಿದೆ.
ಆರ್ಥಿಕ ಸ್ಥಿತಿಯಲ್ಲಿ ಪ್ರಗತಿಯಾಗಲಿದೆ
ನಿಮ್ಮ ಆದಾಯ ಹೆಚ್ಚಾಗಲಿದೆ. ಉದ್ಯೋಗಿಗಳ ಸಂಬಳ ಹೆಚ್ಚಾಗಲಿದೆ. ಉದ್ಯೋಗಿಗಳು ಬೇರೆ ಕಡೆ ಕೆಲಸಕ್ಕೆ ಶ್ರಮಿಸುತ್ತಿದ್ದರೆ ಈ ಸಮಯದಲ್ಲಿ ನೀವು ಬಯಸಿದ ಕೆಲಸ ಸಿಗಲಿದೆ. ಈ ಸಮಯದಲ್ಲಿ ಒಳ್ಳೆಯ ಅವಕಾಶ ಸಿಗುವುದು. ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭ ಗಳಿಸಬಹುದು ವ್ಯಾಪಾರದಲ್ಲಿ ಬೆಳವಣಿಗೆಯ ಬಲವಾದ ಅವಕಾಶಗಳು ದೊರೆಯಲಿದೆ. , ನೀವು ವ್ಯವಹಾರದಲ್ಲಿ ಪ್ರಗತಿ ಹೊಂದುವಿರಿ. ಮಾಡುತ್ತಿರುವ ಕೆಲಸದಲ್ಲಿ ಯಶಸ್ಸು ಸಿಗಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಪ್ರಾಬಲ್ಯವು ಹೆಚ್ಚಾಗುತ್ತದೆ. ವ್ಯಾಪಾರಿಗಳು ಈ ಸಮಯದಲ್ಲಿ ಮಾಡುವ ಪ್ರಯಾಣವು ನಿಮಗೆ ಹೆಚ್ಚು ಲಾಭದಾಯಕವಾಗಿರಲಿದೆ.
ಕುಟುಂಬ ಜೀವನ
ಒಡಹುಟ್ಟಿದವರೊಂದಿಗೆ ಏನಾದರೂ ಸಮಸ್ಯೆಯಾಗಿದ್ದರೆ ಎಲ್ಲವೂ ಬಗೆಹರಿಯಲಿದೆ. ಈ ಗುರು ಸಂಚಾರ ಪ್ರೇಮಿಗಳಿಗೆ ಅನುಕೂಲಕರವಾಗಿದೆ, ನೀವು ಕುಟುಂಬದವರನ್ನು ಒಪ್ಪಿಸಿ ಮದುವೆಯಾಗಬಹುದು. ವಿವಾಹಿತರಿಗೆ ವೈವಾಹಿಕ ಜೀವನ ಚೆನ್ನಾಗಿರಲಿದೆ. ಸಂಗಾತಿಯೊಂದಿಗಿನ ಬಾಂಧವ್ಯ ಹೆಚ್ಚಲಿದೆ.
ವಿದ್ಯಾರ್ಥಿ ಜೀವನ
ಈ ಸಂಚಾರವು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರುತ್ತದೆ , ನೀವು ಉತ್ತಮ ಫಲಿತಾಂಶ ಪಡೆಯುತ್ತೀರಿ. ವೈವಾಹಿಕ ಜೀವನದಲ್ಲಿ ಪ್ರೀತಿ ಚೆನ್ನಾಗಿರಲಿದೆ. ನಿಮ್ಮ ಮತ್ತು ನಿಮ್ಮ ಸಂಗಾತಿಯ ನಡುವೆ ಉತ್ತಮ ಸಾಮರಸ್ಯ ಇರಲಿದೆ. ವ್ಯಾಪಾರಿಗಳು ಉತ್ತಮ ಯಶಸ್ಸನ್ನು ಪಡೆಯುತ್ತೀರಿ.
ಈ ಅವಧಿಯಲ್ಲಿ ಸ್ವಲ್ಪ ಜಾಗ್ರತೆ
ಮೇ 3 ಮತ್ತು ಜೂನ್ 3 ರ ನಡುವಿನ ಅವಧಿನಾ ಅನುಕೂಲಕರವಾಗಿರಲಿದೆ. ಈ ಅವಧಿಯಲ್ಲಿ, ಪ್ರಯತ್ನಗಳನ್ನು ಹೆಚ್ಚಿಸಬೇಕಾಗುತ್ತದೆ. ಅಕ್ಟೋಬರ್ 9 ರಂದು, ದೇವ ಗುರು ಗುರುವು ಹಿಮ್ಮುಖ ಸ್ಥಿತಿಗೆ ಪ್ರವೇಶಿಸಿದಾಗ, ನೀವು ಧಾರ್ಮಿಕ ಚಟುವಟಿಕೆಗಳಿಗಿಂತ ಹಣದ ಕಡೆಗೆ ಹೆಚ್ಚು ಒಲವು ತೋರುತ್ತೀರಿ. ನೀವು ಉತ್ತಮ ಆರ್ಥಿಕ ಲಾಭಗಳನ್ನು ಪಡೆಯುತ್ತೀರಿ.
11ನೇ ಮನೆಯಲ್ಲಿ ಗುರುವಿನ ಪ್ರಭಾವ
- ಗುರುವನ್ನು ಆಧ್ಯಾತ್ಮಿಕತೆ, ಶಿಕ್ಷಕ ಹಾಗೂ ಗುರುವಿನ ಪಾತ್ರವನ್ನು ವಹಿಸುತ್ತಾನೆ. ಇದು ಉನ್ನತ ಜ್ಞಾನ, ಕಲಿಕೆ, ಆಧ್ಯಾತ್ಮಿಕ, ಬೌದ್ಧಿಕ ಇತ್ಯಾದಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಫಲಿತಾಂಶ ನೀಡುವ ಗ್ರಹವಾಗಿದೆ.
- ಗುರುವಿನ 11ನೇ ಹನ್ನೊಂದನೇ ಮನೆ ವ್ಯಕ್ತಿಯ 'ಆದಾಯ' ಮತ್ತು 'ಲಾಭ'ಕ್ಕೆ ಸಂಬಂಧಿಸಿದೆ. ಆದ್ದರಿಂದ ಈ ಅವಧಿಯಲ್ಲಿ ಉತ್ತಮ ಆದಾಯ ಗಳಿಸಲು ಸಾಧ್ಯವಾಗುವುದು.
- ನಿಮ್ಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಬಹುದು, ಇದರಿಂದ ನೀವು ಲಾಭ ಗಳಿಸಲು ಸಾಧ್ಯವಾಗುವುದು.
- ಕೆಲಸದಲ್ಲಿ ನಿಮ್ಮ ಸ್ಥಾನ ಮಾನ ಹೆಚ್ಚಾಗುವುದು, ನೀವು ಬಯಸಿದ ವರ್ಗಾವಣೆ ಮಾಡಲು ಸಾಧ್ಯವಾಗುವುದು.
- ವ್ಯಾಪಾರಿಗಳು ಸ್ಪರ್ಧಿಗಳ ವಿರುದ್ಧ ಜಯಗಳಿಸಲು ಸಾಧ್ಯವಾಗುವುದು, ನಿಮ್ಮ ವ್ಯಾಪಾರದಲ್ಲಿ ನಿಮ್ಮ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು.
ಗುರುರ್ಬ್ರಹ್ಮಾ ಗುರುರ್ವಿಷ್ಣುಃ ಗುರುರ್ದೇವೋ ಮಹೇಶ್ವರಃ, ಗುರುಃ ಸಾಕ್ಷಾತ್ ಪರಂ ಬ್ರಹ್ಮ ತಸ್ಮೈ ಶ್ರೀಗುರವೇ ನಮಃ.
ಈ ಮಂತ್ರ ಪಠಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
