Latest Updates
-
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ -
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ -
ಗಣೇಶ ಹಬ್ಬ 2026: ಬೆಂಗಳೂರಿನಲ್ಲಿ PoP ಮೂರ್ತಿಗಳ ಮೇಲೆ ಕಠಿಣ ನಿಷೇಧ, ಪರಿಸರ ಸ್ನೇಹಿ ಗಣಪತಿಯನ್ನು ಪತ್ತೆ ಹಚ್ಚುವುದು ಹೇಗೆ? -
ವೈ-ವೈ ನೂಡಲ್ಸ್ ಕಂಪನಿಗೆ FSSAI ಬಿಗ್ ಶಾಕ್: ಉತ್ಪಾದನೆ ಸ್ಥಗಿತ, ಅಸಲಿ ಕಾರಣವೇನು? -
ಭಾರತ-ಪಾಕಿಸ್ತಾನ ಹೈ-ವೋಲ್ಟೇಜ್ ಕದನ: ನಾಳೆ ದುಬೈನಲ್ಲಿ ಗೆಲ್ಲೋರು ಯಾರು? -
ಜನ್ಮಾಷ್ಟಮಿ ಉಪವಾಸ: ಸುಸ್ತಾಗದೆ, ಆರೋಗ್ಯಕರವಾಗಿ ವ್ರತ ಆಚರಿಸಲು ಇಲ್ಲಿವೆ ಸರಳ ಟಿಪ್ಸ್!
ಈ ಕರ್ಕ ಸಂಕ್ರಾಂತಿ ಬಳಿಕ ಈ ಎರಡು ರಾಶಿಯವರಿಗೆ ತುಂಬಾನೇ ಅದೃಷ್ಟದ ಸಮಯ
ಸೂರ್ಯನು ಪ್ರತಿ ಮಾಸ ತನ್ನ ರಾಶಿ ಪಥ ಬದಲಾಯಿಸುತ್ತಲೇ ಇರುತ್ತದೆ. ಸೂರ್ಯ ದೇವ ಪ್ರತಿ ಬಾರಿ ರಾಶಿ ಬದಲಾವಣೆ ಬೀರುವಾಗ ಅದು ಬೀರುವ ಪ್ರಭಾವ ಭಿನ್ನವಾಗಿರುತ್ತದೆ. ಸೂರ್ಯನ ರಾಶಿ ಬದಲಾವಣೆಯನ್ನು ಸಂಕ್ರಾಂತಿ ಎಂದು ಪರಿಗಣಿಸಲಾಗುವುದು. ಇದೀಗ ಜುಲೈ 16ಕ್ಕೆ ಸೂರ್ಯನು ಕರ್ಕ ರಾಶಿಗೆ ಸಂಚರಿಸಿದಾಗ ಕರ್ಕ ಸಂಕ್ರಾಂತಿ ಉಂಟಾಗಲಿದೆ:

ಕರ್ಕ ಸಂಕ್ರಾಂತಿ
ಕರ್ಕ ಸಂಕ್ರಾಂತಿ ಪುಣ್ಯ ಕಾಲ ಬೆಳಗ್ಗೆ 05:34ರಿಂದ 11:29ರವರೆಗೆ
ಕರ್ಕ ಸಂಕ್ರಾಂತಿ ಮಹಾ ಪುಣ್ಯ ಕಾಲ: ಬೆಳಗ್ಗೆ 9:11ರಿಂದ 11:29ರವರೆಗೆ
ಕರ್ಕ ಸಂಕ್ರಾಂತಿ ಫಲ
ಪ್ರಾಣಿಗಳಿಗೆ ಒಳ್ಳೆಯದು
ವಸ್ತುಗಳ ಬೆಲೆ ಸಹಜವಾಗಿರಲಿದೆ
ಆರ್ಥಿಕವಾಗಿ ಉತ್ತಮ
ಆದರೆ ಜನರಿಗೆ ಕೆಮ್ಮು, ಶೀತ ಈ ಬಗೆಯ ಸಮಸ್ಯೆಗಳಿರಬಹುದು, ಮಳೆ ಕಡಿಮೆ ಇರಲಿದೆ
ಕರ್ಕ ಸಂಕ್ರಾಂತಿಯ ಮಹತ್ವ
ಕರ್ಕ ಸಂಕ್ರಾಂತಿಯ ಮಹತ್ವವೆಂದರೆ ದಕ್ಷಿಣಾಯಾನ ಶುರು, ಈ ನಾಲ್ಕು ಮಾಸದಲ್ಲಿ ಶ್ರೀ ವಿಷ್ಣುವನ್ನು ಆರಾಧಿಸಲಾಗುವುದು. ಕರ್ಕ ಸಂಕ್ರಾಂತಿಯಂದು ಪಿತೃತರ್ಪಣ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಇದರಿಂದ ಪಿತೃದೋಷದಿಂದ ಮುಕ್ತಿ ಪಡೆಯಬಹುದು. ಬದುಕಿನಲ್ಲಿ ನೆಮ್ಮದಿ, ಸಂತೋಷ ದೊರೆಯಲಿದೆ.
ಕರ್ಕ ಸಂಕ್ರಾಂತಿಯ ಪೂಜಾ ವಿಧಿ:
ಬೆಳಗ್ಗೆ ಸೂರ್ಯೋದಯಕ್ಕೆ ಮುನ್ನ ಎದ್ದು ಪುಣ್ಯ ನದಿಯಲ್ಲಿ ಸ್ನಾನ ಮಾಡಬೇಕು.
ನಂತರ ಸೂರ್ಯನಿಗೆ ಆರ್ಘ್ಯ ಅರ್ಪಿಸಿ, ಸೂರ್ಯ ಮಂತ್ರ ಪಠಣೆ ಮಾಡಿ
ನಂತರ ವಿಷ್ಣುವನ್ನು ಆರಾಧಿಸಲಾಗುವುದು, ಈ ದಿನ ವಿಷ್ಣು ಸಹಸ್ರನಾಮ ಪಠಣೆ ಮಾಡಿದರೆ ಒಳ್ಳೆಯದು
ಈ ದಿನ ಯಾವುದೇ ಶುಭ ಕಾರ್ಯ ಮಾಡಬಾರದು ಎಂದು ಹೇಳಲಾಗುವುದು.
ಆದರೆ ಪೂಜಾ ಕಾರ್ಯಗಳಿಗೆ ತುಂಬಾನೇ ಶುಭವಾಗಿದೆ.
ಸೂರ್ಯ ಮಂತ್ರ
ಓಂ ಮಿತ್ರಾಯ ನಮಃ
ಓಂ ರವಾಯ್ರೇ ನಮಃ
ಓಂ ಸೂರ್ಯಾಯ ನಮಃ
ಓಂ ಭಾನವೇ ನಮಃ
ಓಂ ಖಗಾಯ ನಮಃ
ಓಂ ಪುಷ್ನೇ ನಮಃ
ಓಂ ಹಿರಣ್ಯಗರ್ಭಾಯ ನಮಃ
ಓಂ ಮರೀಚಯೇ ನಮಃ
ಓಂ ಆದಿತ್ಯಾಯ ನಮಃ
ಓಂ ಸವಿತ್ರೇ ನಮಃ
ಓಂ ಅರ್ಕಾಯ ನಮಃ
ಓಂ ಭಾಸ್ಕರಾಯ ನಮಃ
ಮೇಷ ರಾಶಿ
ಕರ್ಕ ಸಂಕ್ರಾಂತಿ ನಿಮಗೆ ಅನುಕೂಲಕರವಾಗಿದೆ, ಈ ಅವಧಿ ಬದುಕಿನಲ್ಲಿ ಪ್ರಗತಿ ಸಾಧಿಸುವುದರಿಂದ ನೆಮ್ಮದಿ ಇರಲಿದೆ. ವ್ಯಾಪಾರಿಗಳು ಕೂಡ ಈ ಸಮಯದಲ್ಲಿ ಉತ್ತಮ ಲಾಭ ಪಡೆಯುತ್ತೀರಿ, ಹಾಗಾಗಿ ನಿಮ್ಮ ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ. ಇನ್ನು ಕುಟುಂಬ ಜೀವನ, ವೈವಾಹಿಕ ಜೀವನದ ಬಗ್ಗೆ ನೋಡುವುದಾದರೂ ಈ ಅವಧಿ ನಿಮಗೆ ತುಂಬಾನೇ ಉತ್ತಮವಾಗಿದೆ. ವೈವಾಹಿಕ ಬದುಕಿನಲ್ಲಿ ಹೊಂದಾಣಿಕೆ ತುಂಬಾನೇ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಕೂಡ 30 ದಿನಗಳು ನಿಮಗೆ ಉತ್ತಮವಾಗಿರಲಿದೆ.
ಮಿಥುನ ರಾಶಿ
ಕರ್ಕ ರಾಶಿಯಲ್ಲಿ ಸೂರ್ಯ ಸಂಚಾರವು ವೃತ್ತಿ ಬದುಕಿನಲ್ಲಿ ಉತ್ತಮ ಬೆಳವಣಿಗೆ ನೀಡಲಿದೆ, ನಿಮಗೆ ಅದೃಷ್ಟದ ಬೆಂಬಲ ದೊರೆಯುವುದರಿಂದ ನಿಮ್ಮ ಕೆಲಸ ಕಾರ್ಯದಲ್ಲಿ ಯಾಸ್ಸು ದೊರೆಯುತ್ತದೆ. ವ್ಯಾಪಾರಿಗಳು ಈ ಸಮಯದಲ್ಲಿ ಉತ್ತಮ ಲಾಭ ಗಳಿಸುತ್ತೀರಿ. ಆರ್ಥಿಕವಾಗಿ ನೋಡುವುದಾದರೆ ಈ ಅವಧಿ ನಿಮಗೆ ಪ್ರಯೋಜನಕಾರಿಯಾಗಲಿದೆ. ವೈವಾಹಿಕ ಬದುಕಿನಲ್ಲಿ ಪ್ರೀತಿ, ಹೊಂದಾಣಿಕೆಯನ್ನು ಕಾಣಬಹುದು, ನೀವಿಬ್ಬರು ಟ್ರಿಪ್ ಕೂಡ ಪ್ಲ್ಯಾನ್ ಮಾಡುತ್ತೀರಿ, ಅಲ್ಲದೆ ಆರೋಗ್ಯದ ಕಡೆಗೆ ಗಮನಹರಿಸಿ.
ಈ ರಾಶಿಗೆ ಅನುಕೂಲವೂ ಇದೆ, ಜಾಗ್ರತೆ ಕೂಡ ವಹಿಸಬೇಕು
ಸಿಂಹ ರಾಶಿ
ಕರ್ಕ ರಾಶಿಯಲ್ಲಿ ಸೂರ್ಯ ಸಂಚಾರ ಸಿಂಹ ರಾಶಿಯವರಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ವ್ಯಾಪಾರಿಗಳು ಜಾಗ್ರತೆವಹಿಸಬೇಕು, ಪ್ರತಿಸ್ಪರ್ಧಿಗಳಿಂದ ಕಠಿಣ ಸ್ಪರ್ಧೆ ಎದುರಿಸಬಹುದು. ಹಾಗಾಗಿ ಜಾಗ್ರತೆವಹಿಸಿ. ಆರ್ಥಿಕ ಜೀವನ ತುಂಬಾನೇ ಚೆನ್ನಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರುವುದರಿಂದ ಸಾಲ ತೀರಿಸಲು ಸಾಧ್ಯವಾಗುವುದು. ವೈವಾಹಿಕ ಜೀವನದಲ್ಲಿ ಸಾಮರಸ್ಯ ಅಷ್ಟು ಚೆನ್ನಾಗಿರಲ್ಲ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣಿನ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications