Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕೇತು ಕನ್ಯಾ ರಾಶಿಯಲ್ಲಿರುವ ಇನ್ನು 285 ದಿನ 12 ರಾಶಿಗಳ ಮೇಲೆ ಅದರ ಪ್ರಭಾವ ಹೀಗಿರಲಿದೆ
ಕೇತುವಿನ ನೆರಳಿನ ಗ್ರಹವೆಂದು ಕರೆಯಲಾಗುವುದು, ಅಲ್ಲದೆ ಇದು ತುಂಬಾ ನಿದಾನವಾಗಿ ಚಲಿಸುವ ಗ್ರಹವಾಗಿದೆ. ಕೇತು ಒಂದು ರಾಶಿಯಲ್ಲಿ 18 ತಿಂಗಳು ಇರುತ್ತದೆ. ಕೇತು 2023ರಲ್ಲಿ ಕನ್ಯಾ ರಾಶಿಯಲ್ಲಿ ಇರಲಿದೆ. ಇನ್ನು 285 ದಿನ ಕೇತು ಕನ್ಯಾ ರಾಶಿಯಲ್ಲಿಯೇ ಇರಲಿದೆ.
ಕೇತು ಹಿಮ್ಮುಖ ಚಲನೆ ಮಾಡುವ ಗ್ರಹವಾಗಿದೆ. ಕೇತು 2025ರಲ್ಲಿ ಸಿಂಹ ರಾಶಿಗೆ ಸಂಚರಿಸಲಿದೆ, ಈ ವರ್ಷ ಪೂರ್ತಿ ಕೇತು ಕನ್ಯಾ ರಾಶಿಯಲ್ಲಿ ಇರಲಿದೆ. ಕೇತುವಿನ ಪ್ರಭಾವ ಈ ರಾಶಿಗಳಿಗೆ ತುಂಬಾ ಅನುಕೂಲಕರವಾಗಿದೆ.

ಮೇಷ ರಾಶಿ
ಮೇಷ ರಾಶಿಯವರಿಗೆ ಕೇತುವಿನ ಕೃಪೆ ತುಂಬಾ ಚೆನ್ನಾಗಿರಲಿದೆ. ಕೇತುವಿನ ಕೃಪೆಯಿಂದ 285 ದಿನ ನಿಮಗೆ ತುಂಬಾ ಒಳ್ಳೆಯದಿದೆ. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ವ್ಯವಹಾರದಲ್ಲಿ ಕೇತುವಿನ ಕೃಪೆಯಿಂದ ಉತ್ತಮ ಪ್ರಯೋಜನ ಸಿಗಲಿದೆ. ನೀವು ನಿಮ್ಮ ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುತ್ತೀರಿ.
ವೃಷಭ ರಾಶಿ
ಕೇತು ನಿಮಗೆ ಶುಭ ಫಲ ನೀಡುತ್ತಿದೆ. ಕೆಲಸದಲ್ಲಿ ಬಡ್ತಿ ಅಥವಾ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ವ್ಯವಹಾರಗಳನ್ನು ಮಾಡಲು ಯೋ ವ್ಯಾಪಾರಸ್ಥರಿಗೆ ಈ ಅವಧಿ ತುಂಬಾನೇ ಅನುಕೂಲರವಾಗಿರಲಿದೆ, ಈ ವರ್ಷ ನಿಮ್ಮ ಹಣಕಾಸಿನ ಸ್ಥಿತಿಯಲ್ಲಿ ಸುಧಾರಣೆ ಕಾಣುತ್ತೀರಿ. ಕೇತು ನಿಮಗೆ ಶುಭ ಫಲ ನೀಡಲಿದೆ.
ಕರ್ಕ ರಾಶಿ
ಕೇತುವಿನ ಪ್ರಭಾವ ರಾಶಿಯಿಂದ ಕರ್ಕ ರಾಶಿಯವರಿಗೆ ತುಂಬಾ ಒಳ್ಳೆಯದು. ಇನ್ನು ನೀವು ಏನಾದರೂ ಹೊಸ ಕೆಲಸ ಪ್ರಾರಂಭಿಸಿದ್ದರೆ ಉತ್ತಮ ಯಶಸ್ಸು ಪಡೆಯುತ್ತೀರಿ. ನಿಮ್ಮ ಒಡಹುಟ್ಟಿದವರೊಂದಿಗಿನ ಸಂಬಂಧ ತುಂಬಾ ಚೆನ್ನಾಗಿರಲಿದೆ. ಅಲ್ಲದೆ ಈ ಅವಧಿಯಲ್ಲಿ ನಿಮ್ಮ ಆರ್ಥಿಕ ತೊಂದರೆಗಳು ಕಡಿಮೆಯಾಗಲಿದೆ. ನೀವು ನಿಮ್ಮ ಆರೋಗ್ಯದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ಕೇತುವಿನ ಪ್ರಭಾವ ವೃಶ್ಚಿಕ ರಾಶಿಯವರಿಗೆ ತುಂಬಾ ಅನುಕೂಲಕರವಾಗಿರಲಿದೆ. ನಿಮ್ಮ ಸಂಪತ್ತು ವೃದ್ಧಿಯಾಗಲಿದೆ, ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಈ ಅವಧಿಯಲ್ಲಿ ಹೂಡಿಕೆ ಮಾಡಲು ಉತ್ತಮವಾಗಿರಲಿದೆ. ನಿಮ್ಮ ಖರ್ಚುಗಳು ಕಡಿಮೆಯಾಗಲಿದೆ, ಈ ಅವಧಿಯಲ್ಲಿ ತಾಯಿಯ ಆರೋಗ್ಯದ ಕಡೆಗೆ ಗಮನಹರಿಸಬೇಕು.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಕೇತು ಸಂಚಾರ ಒಳ್ಳೆಯದಲ್ಲ ಕೇತು ನಿಮ್ಮ ಆತ್ಮವಿಶ್ವಾಸ ಕಡಿಮೆ ಮಾಡಲಿದೆ. ಆರ್ಥಿಕ ಪರಿಸ್ಥಿತಿ ಅಷ್ಟೊಂದು ಉತ್ತಮವಾಗಿರುವುದಿಲ್ಲ, ಕೆಲಸದಲ್ಲಿಯೂ ಸವಾಲುಗಳನ್ನು ಎದುರಿಸಬೇಕಾಗುವುದು.
ಸಿಂಹ ರಾಶಿ
2024 ಕೇತು ನಿಮಗೆ ಶುಭ ಫಲವನ್ನೇ ನೀಡಲಿದೆ. ಇನ್ನು ದೀರ್ಘ ಸಮಯದಿಂದ ಬರಬೇಕಾಗಿರುವ ಹಣ ನಿಮ್ಮ ಕೈ ಸೇರಲಿದೆ. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಯಶಸ್ಸು ಕಾಣಬಹುದು.
ಕನ್ಯಾ ರಾಶಿ
ಕೇತುವಿನ ಸ್ಥಾನ ಕೇತು ರಾಶಿಯವರಿಗೆ ಒಳ್ಳೆಯ ಫಲ ನೀಡಲಿದೆ. 2024ರಲ್ಲಿ ನಿಮಗೆ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ ಮಾತ್ರವಲ್ಲ ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಯಶಸ್ಸ ಸಾಧಿಸಲು ಸಾಧ್ಯವಾಗುವುದು.
ತುಲಾ ರಾಶಿ
ತುಲಾ ರಾಶಿಯವರಿಗೆ ವೃತ್ತಿ ಬದುಕಿನಲ್ಲಿ ಯಶಸ್ಸನ್ನು ಗಳಿಸುವಿರಿ. ಈ ವರ್ಷದಲ್ಲಿ ಭೂಮಿ, ವಾಹನ ಖರೀದಿ ಯೋಗ ಇರಲಿದೆ. ಈ ಅವಧಿಯಲ್ಲಿ ಕೆಲವರು ಹೊಸ ಮನೆಕಟ್ಟುವುದು ಅಥವಾ ಖರೀದಿಸುವುದು ಮಾಡಬಹುದು.
ಧನು ರಾಶಿ
ಧನು ರಾಶಿಯವರಿಗೆ ಕೇತುವಿನ ಸ್ಥಾನ ಅನುಕೂಲಕರವಾಗಿದೆ. ಕೇತುವಿನ ಪರಿಣಾಮದಿಂದ ಉದ್ಯೋಗದಲ್ಲಿ ಕೆಲ ಸಮಸ್ಯೆಗಳನ್ನು ಎದುರಿಸಬಹುದು.
ಮಕರರಾಶಿ
ಮಕರ ರಾಶಿಯವರು ತುಂಬಾನೇ ಜಾಗ್ರತೆವಹಿಸಬೇಕು. ಕುಟುಂಬ ಜೀವನದ ಮೇಲೂ ಪರಿಣಾಮ ಬೀರುವುದು.
ಕುಂಭ ರಾಶಿ
ಕುಂಭ ರಾಶಿಯವರಿಗೆ ಕೇತುವಿನ ಸ್ಥಾನ ಅನುಕೂಲರಕರವಾಗಿರಲಿದೆ, ಈ ಸಮಯದಲ್ಲಿ ಆದಾಯ ಹೆಚ್ಚಾಗಲಿದೆ. ಆದರೆ ಅಷ್ಟೇ ಖರ್ಚು ಇರಲಿದೆ. ಈ ಅವಧಿಯಲ್ಲಿ ನೀವು ಕೋಪವನ್ನು ನಿಯಂತ್ರಿಸಿದರೆ ಒಳ್ಳೆಯದು.
ಮೀನ ರಾಶಿ
ಕೇತುವಿನ ಪ್ರಭಾವದಿಂದ ಮೀನ ರಾಶಿಯವರಿಗೆ ಆತ್ಮವಿಶ್ವಾಸ ಹೆಚ್ಚಾಗಲಿ, ಆದರೆ ಸಂಗಾತಿಗೆ ಆರೋಗ್ಯ ಸಮಸ್ಯೆಗಳಿರಬಹುದು, ಅವರ ಆರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











