Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಶ್ರೀಕೃಷ್ಣ ಜನ್ಮಾಷ್ಟಮಿ: ನಿಮ್ಮ ರಾಶಿ ಪ್ರಕಾರ ಶ್ರೀಕೃಷ್ಣನ ಆರಾಧನೆಯ ವಿಧಾನ
ಆಗಸ್ಟ್ 26ಕ್ಕೆ ಶ್ರೀಕರಷ್ಣ ಜನ್ಮಾಷ್ಟಮಿ. ಈ ಸಡಗರದ ಹಬ್ಬದಲ್ಲಿ ಶ್ರೀ ಕೃಷ್ಣನ ಆರಾಧನೆ ನಿಮ್ಮ ರಾಶಿ ಪ್ರಕಾರ ಮಾಡಿದರೆ ಇನ್ನೂ ಒಳ್ಳೆಯದು. ಪ್ರತಿಯೊಂದು ರಾಶಿಯನ್ನು ಒಂದೊಂದು ಗ್ರಹ ಆಡಳಿತ ಮಾಡುತ್ತದೆ, ಹಾಗಾಗಿ ಅ ಗ್ರಹಕ್ಕೆ ಅನುಸಾರ ಪೂಜೆ ಸಲ್ಲಿಸಿದರೆ ನಿಮಗೆ ಇನ್ನೂ ವಿಶೇಷ ಫಲ ಸಿಗುವುದು:

ಮೇಷ ರಾಶಿ
ಮೇಷ ರಾಶಿಯವರ ಆಡಳಿತ ಗ್ರಹ ಮಂಗಳ, ಈ ದಿನ ಬಿಳಿ ಅಥವಾ ಸಿಲ್ವರ್ ಬಣ್ಣದ ವಸತ್ರ ಧರಿಸಿ, ಶ್ರೀ ಕೃಷ್ಣನಿಗೆ ಕುಂಕುಮವನ್ನು ಅರ್ಪಿಸಿದರೆ ಒಳ್ಳೆಯದು ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ.
ವೃಷಭ ರಾಶಿ
ಶ್ರೀ ಕೃಷ್ಣನ ವಿಗ್ರಹಕ್ಕೆ ಹಾಲು, ಜೇನಿ ಅಭಿಷೇಕ ಮಾಡಿ, ನಂತರ ಶ್ರೀ ವಿಷ್ಣುವಿನ ಮೂರ್ತಿಯನ್ನು ಅಲಂಕರಿಸಿ ಹಣೆಗೆ ಹಳದಿ ಚಂದನ ಬೊಟ್ಟು ಇಟ್ಟುಕೊಳ್ಳಬೇಕು.
ಮಿಥುನ ರಾಶಿ
ಮಿಥುನ ರಾಶಿಯವರು ವೈವಾಹಿಕ ಬದುಕಿನ ಸಮಸ್ಯೆ ದೂರಾಗಲು ಅವಾಹಿತರು ಮದುವೆ ಸಂಬಂಧ ಕೂಡಿ ಬರಲಿ ಬಾಲ ಗೋಪಾಲನಿಗೆ ಲಾಲ್ ಚುನರಿ ಅರ್ಪಿಸಿದರೆ ಒಳ್ಳೆಯದು ಎಂದು ಹೇಳಲಾಗುವುದು.
ಕರ್ಕ ರಾಶಿ
ಕರ್ಕ ರಾಶಿಯವರು ಈ ದಿನ ಶ್ರೀಕೃಷ್ಣ ಮೂರ್ತಿಗೆ ಶಂಖದ ನೀರಿನಿಂದ ಅಭಿಷೇಕ ಮಾಡಿದರೆ ಇಷ್ಟಾರ್ಥಗಳು ನೆರವೇರುವುದು.
ಸಿಂಹ ರಾಶಿ
ಸಿಂಹ ರಾಶಿಯವರು ಕೇಸರಿ ಬಣ್ಣದ ವಸ್ತ್ರ ಧರಿಸಿ ಶ್ರೀ ಕೃಷ್ಣನ ಆರಾಧನೆ ಮಾಡಿದರೆ ಒಳ್ಳೆಯದು. ಏಕೆಂದರೆ ಸಿಂಹ ರಾಶಿಯವರ ಆಡಳಿತ ಗ್ರಹ ಸೂರ್ಯ.
ಕನ್ಯಾರಾಶಿ
ಕೃಷ್ಣ ಜನ್ಮಾಷ್ಟಮಿಯಂದು ನಿಮ್ಮ ಸ್ನಾನದ ನೀರಿಗೆ ಸ್ವಲ್ಪ ಹಾಲು ಹಾಗು ಗಂಗಾಜಲ ಹಾಕಿ ಸ್ನಾನ ಮಾಡಿ ಹಸಿರು ಬಟ್ಟೆಯನ್ನು ಧರಿಸಿ ಶ್ರೀ ಕೃಷ್ಣನ ಆರಾಧನೆ ಮಾಡಿ.
ತುಲಾ ರಾಶಿ
ಕೃಷ್ಣ ಜನ್ಮಾಷ್ಟಮಿಯಂದು ಶ್ರೀ ಕೃಷ್ಣನಿಗೆ ಹಳದಿ ಬಣ್ಣದ ವಸ್ತ್ರ ತೊಡಿಸಿ ಅಲಂಕರಿಸಿ ಶ್ರೀ ಕೃಷ್ಣನನ್ನು ಪೂಜಿಸಿ. ಖೀರ್ ಮಾಡಿ ನೈವೇದ್ಯವಾಗಿ ಅರ್ಪಿಸಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಬಾಲ ಗೋಪಾಲವನ್ನು ಆಚರಿಸಬೇಕು, ತೆಂಗಿನಕಾಯಿ ಬರ್ಫಿಯನ್ನು ನೈವೇದ್ಯವಾಗಿ ಅರ್ಪಿಸಬೇಕು.
ಧನು ರಾಶಿ
ಧನು ರಾಶಿಯವರು ಕೃಷ್ಣ ಜನ್ಮಾಷ್ಟಮಿಯಂದು ಕನ್ಹನಿಗೆ ಮೊಸರು ಮತ್ತು ಜೇನುತುಪ್ಪದಿಂದ ಸ್ನಾನ ಮಾಡಿ ಕೆಂಪು ಬಟ್ಟೆಗಳನ್ನು ಧರಿಸಿ ಪೂಜಿಸಬೇಕು.
ಮಕರ ರಾಶಿ
ಮಕರ ರಾಶಿಯವರು ಈ ದಿನ ಬಾಲ ಗೋಪಾಲನ್ನು ಆರಾಧನೆ ಮಾಡುವುದರಿಂದ ಇಷ್ಟಾರ್ಥಗಳು ನೆರವೇರುವುದು.
ಕುಂಭ ರಾಶಿ
ಕುಂಭ ರಾಶಿಯವರು ಕೃಷ್ಣ ಜನ್ಮಾಷ್ಟಮಿಯಂದು ಬಾಲಗೋಪಾಲನ ಮೂರ್ತಿಗೆ ಹಾಲಿನ ಅಭಿಷೇಕ ಮಾಡಿ ಪೂಜೆಯನ್ನು ಮಾಡಿ.
ಮೀನ ರಾಶಿ
ಮೀನ ರಾಶಿಯವರಿಗೆ ಜನ್ಮದಿನದಂದು ಮೀನ ರಾಶಿಯವರು ಶ್ರೀಕೃಷ್ಣನನ್ನು ವಿಧಿ ವಿಧಾನಗಳೊಂದಿಗೆ ಪೂಜಿಸಿ ಶ್ರಿ ಕೃಷ್ಣನಿಗೆ ನೈವೇದ್ಯ ಅರ್ಪಿಸಿ ಪೂಜಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
