Latest Updates
-
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: 999 ರೂ. ಒಳಗಿನ ಬೆಸ್ಟ್ ಡೀಲ್ಗಳು ಮತ್ತು ಶಾಪಿಂಗ್ ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ!
ಶಿವರಾತ್ರಿಯ ಮಾರನೇಯ ದಿನದಿಂದಲೇ ಈ 3 ರಾಶಿಗಳಿಗೆ ಲಕ್ಷ್ಮಿ ನಾರಾಯಣ ಭಾಗ
ಫೆಬ್ರವರಿ 27ಕ್ಕೆ ಬುಧ ಸಂಚಾರವಿದೆ, ಬುಧನು ಮೀನ ರಾಶಿಗೆ ಸಂಚರಿಸಲಿದೆ, ಶುಕ್ರನು ಕೂಡ ಅದೇ ರಾಶಿಯಲ್ಲಿ ಇರುವುದರಿಂದ ಬುಧ- ಶುಕ್ರ ಗ್ರಹಗಳ ಸಂಯೋಗಆಗಲಿದೆ,ಇದರಿಂದಾಗಿ ಲಕ್ಷ್ಮಿ ನಾರಾಯಣ ಯೋಗ ಉಂಟಾಗುವುದು. ಲಕ್ಷ್ಮಿ ನಾರಾಯಣ ಯೋಗ ಎಂಬುವುದು ಸಂಪತ್ತು ತರುವ ಯೋಗವಾಗಿದೆ, ಬುಧ-ಶುಕ್ರನ ಸಂಯೋಗದಿಂದ ಕೆಲ ರಾಶಿಯಲ್ಲಿ ಈ ಯೋಗ ಉಂಟಾಗಿದೆ.
ಈ ಯೋಗದ ಬಲದಿಂದಾಗಿ ಆರ್ಥಿಕ ಕಾರ್ಯದಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗಲಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ, ಹೂಡಿಕೆ ಮಾಡಿದ್ದರೆ ನೀವು ಉತ್ತಮ ಲಾಭ ಪಡೆಯುತ್ತಾರೆ. ಈ ಲಕ್ಷ್ಮಿ ನಾರಾಯಣ ಯೋಗ ಯಾವೆಲ್ಲಾ ರಾಶಿಗಳಲ್ಲಿ ಉಂಟಾಗಿದೆ ಎಂದು ನೋಡೋಣ ಬನ್ನಿ:

ಮಿಥುನ ರಾಶಿ
ಮಿಥುನ ರಾಶಿಯಲ್ಲಿ ಲಕ್ಷ್ಮಿ ನಾರಾಯಣ ರಾಜಯೋಗ ಉಂಟಾಗುವುದು. ಈ ಯೋಗದ ಬಲದಿಂದಾಗಿ ಮಿಥುನ ರಾಶಿಯ ವ್ಯಾಪಾರಸ್ಥರು ತಮ್ಮ ವ್ಯವಹಾರದಲ್ಲಿ ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು, ಯಾವುದಾದರು ಕೆಲಸಕ್ಕೆ ಪ್ರಯತ್ನ ಮಾಡಿದ್ದರೆ ಈ ಅವಧಿಯಲ್ಲಿ ಕೆಲಸ ಪಡೆಯಲು ಸಾಧ್ಯವಾಗಲಿದೆ. ಬಡ್ತಿಯ ನಿರೀಕ್ಷೆಯಲ್ಲಿದ್ದರೆ ಬಡ್ತಿ ಸಿಗಲಿದೆ, ಉಳಿತಾಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ. ವೈವಾಹಿಕ ಬದುಕಿನಲ್ಲಿ ಪ್ರೀತಿ, ಹೊಂದಾಣಿಕೆ ಇರಲಿದೆ.
ಧನು ರಾಶಿ
ಲಕ್ಷ್ಮಿ ನಾರಾಯಣ ಯೋಗದಿಂದಾಗ ನಿಮ್ಮ ಸಂಪತ್ತು ವೃದ್ದಿಸಲಿದೆ, ಹಣಕ್ಕೆ ಸಂಬಂಧಿಸಿದ ಪ್ರಯತ್ನಕ್ಕೆ ನೀವು ಉತ್ತಮ ಫಲ ಪಡೆಯುತ್ತೀರಿ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ, ಪಾಲುದಾರಿಕೆಯ ವ್ಯವಹಾರ ಮಾಡುವುದಾದರೆ ಈ ಅವಧಿಯಲ್ಲಿ ನೀವು ಹೆಚ್ಚಿನ ಲಾಭ ಪಡೆಯುತ್ತೀರಿ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಏನಾದರು ಹೂಡಿಕೆ ಮಾಡುವುದಾದರೆ ಈ ಅವಧಿ ಉತ್ತಮವಾಗಿದೆ, ಹೂಡಿಕೆ ಮಾಡಿದ್ದವರು ಅದರಿಂದ ಲಾಭ ಪಡೆಯಲು ಸಾಧ್ಯವಾಗುವುದು.
ಮೀನ ರಾಶಿ
ಮೀನ ರಾಶಿಯವರು ಕೂಡ ಲಕ್ಷ್ಮಿ ನಾರಾಯಣ ಯೋಗದಿಂದ ಅತ್ಯುತ್ತಮ ಪ್ರಯೋಜನ ಪಡೆಯುತ್ತೀರಿ, ಸಂಪತ್ತು ಹೆಚ್ಚಾಗಲಿದೆ, ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ತುಂಬಾನೇ ಉತ್ತಮ ಪ್ರಯೋಜನ ಪಡೆಯುತ್ತೀರಿ, ಆಸ್ತಿ ಖರೀದಿಗೆ, ವಾಹನ ಖರೀದಿಗೆ ಈ ಅವಧಿ ತುಂಬಾ ಉತ್ತಮವಾಗಿರಲಿದೆ. ಇನ್ನು ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಈ ಅವಧಿಯಲ್ಲಿ ಮದುವೆ ಯೋಗ ಕೂಡಿ ಬರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications