Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಇಂದಿನಿಂದ ಈ ಮೂರು ರಾಶಿಗಳಲ್ಲಿ ಲಕ್ಷ್ಮಿ ನಾರಾಯಣ ಯೋಗ: ಹಣದ ಸಮಸ್ಯೆ ಇರಲ್ಲ
ಗ್ರಹಗಳ: ಸಂಚಾರದ ದೃಷ್ಟಿಯಿಂದ ಈ ದಿನ ಮುಖ್ಯವಾಗಿದೆ, ಏಕೆಂದರೆ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧನು ಫೆಬ್ರವರಿ 27ಕ್ಕೆ ಮೀನ ರಾಶಿಗೆ ಸಂಚಾರವಾಗಿದೆ, ಮೀನ ರಾಶಿಯಲ್ಲಿ ಶುಕ್ರ ಕೂಡ ಇದೆ, ಈ ಎರಡು ಗ್ರಹಗಳ ಸಂಯೋಗದಿಂದಾಗಿ ಬುಧ ಶುಕ್ರ ಯುತಿ ಅಂದರೆ ಲಕ್ಷ್ಮಿ ನಾರಾಯಣ ಯೋಗ ಉಂಟಾಗುವುದು. ಜ್ಯೋತಿಷ್ಯದಲ್ಲಿ ಈ ಯೋಗವನ್ನು ಶುಭ ಯೋಗವೆಂದು ಪರಿಗಣಿಸಲಾಗಿದೆ.
ಎರಡು ಗ್ರಹಗಳಲ್ಲಿ ಯಾವ ಗ್ರಹವು ಅಸ್ತವಾಗಬಾರದು, ಅಸ್ತವಾದರೆ ಶುಭಫಲ ದೊರೆಯಲ್ಲ, ಎರಡೂ ಗ್ರಹಗಳು ಉತ್ತುಂಗ ಸ್ಥಿತಿಯಲ್ಲಿ ಇದ್ದಾಗ ಮಾತ್ರ ಲಕ್ಷ್ಮಿ ನಾರಾಯಣ ಯೋಗ ಉಂಟಾಗಲಿದೆ. ಈ ಯೋಗದ ಸಮಯದಲ್ಲಿ ಆರ್ಥಿಕವಾಗಿ, ವೃತ್ತಿ ಬದುಕಿನಲ್ಲಿ, ಕುಟುಂಬ ಜೀವನದಲ್ಲಿ ತುಂಬಾ ಉತ್ತಮ ಪ್ರಯೋಜನ ಪಡೆಯಲು ಸಾಧ್ಯವಾಗುವುದು.

ಲಕ್ಷ್ಮಿ ನಾರಾಯಣ ಯೋಗ ಲಕ್ಷ್ಮಿಯನ್ನು ಆಕರ್ಷಿಸುತ್ತದೆ
ಲಕ್ಷ್ಮಿ ನಾರಾಯಣ ಯೋಗದ ಸಮಯದಲ್ಲಿ ಮುಟ್ಟಿದ್ದೆಲ್ಲಾ ಚಿನ್ನವಾಗುವುದು ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ. ವ್ಯಾಪಾರಸ್ಥರು ತುಂಬಾ ಉತ್ತಮ ಆರ್ಥಿಕ ಲಾಭ ಪಡೆಯುತ್ತಾರೆ, ಉದ್ಯೋಗಿಗಳಿಗೆ ಆರ್ಥಿಕವಾಗಿ ಬೆಳೆಯಲು ಮತ್ತಷ್ಟು ಉತ್ತಮ ಅವಕಾಶ ದೊರೆಯಲಿದೆ. ಸಂಪತ್ತು ಆಕರ್ಷಿಸುವುದರಿಂದ ಅನಿರೀಕ್ಷಿತ ಲಾಭ ಪಡೆಯಲು ಸಾಧ್ಯವಾಗಲಿದೆ. ಈ ಯೋಗದ ಸಮಯದಲ್ಲಿ ವ್ಯಕ್ತಿ ಕಡಿಮೆ ಶ್ರಮದಲ್ಲಿ ಹೆಚ್ಚಿನ ಯಶಸ್ಸು ಪಡೆಯಲು ಸಾಧ್ಯವಾಗಲಿದೆ.
ಮೀನ ರಾಶಿಗೆ ಬುಧನ ಸಂಚಾರದಿಂದ ಉಂಟಾದ ಲಕ್ಷ್ಮಿ ನಾರಾಯಣ ಯೋಗ ಈ 3 ರಾಶಿಗಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ:
ವೃಷಭ ರಾಶಿ
ವೃಷಭ ರಾಶಿಯಲ್ಲಿ 11ನೇ ಮನೆಯಲ್ಲಿ ಲಕ್ಷ್ಮಿ ನಾರಾಯಣ ಯೋಗ ಉಂಟಾಗಲಿದೆ. ಈ ಯೋಗದ ಬಲದಿಂದಾಗಿ ವೃಷಭ ರಾಶಿಯವರು ವೃತ್ತಿ ಜೀವನದಲ್ಲಿ ತುಂಬಾನೇ ಉತ್ತಮ ಅವಕಾಶ ಪಡೆಯುತ್ತೀರಿ. ಕೆಲಸದಲ್ಲಿ ಬದಲಾವಣೆ ಬಯಸಿದ್ದರೆ ಅಥವಾ ಹೊಸ ಕೆಲಸಕ್ಕೆ ಹುಡುಕಾಟ ನಡೆಸುತ್ತಿರುವವರೆಗೆ ಈ ಅವಧಿ ತುಂಬಾನೇ ಪ್ರಯೋಜನಕಾರಿಯಾಗಿದೆ. ಕುಟುಂಬ ಬದುಕು ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಸಂಬಂಧ ಕೂಡಿ ಬರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರು ಕೂಡ ಲಕ್ಷ್ಮಿ ನಾರಾಯಣ ಯೋಗದ ಬಲದಿಂದಾಗಿ ತುಂಬಾನೇ ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಆರ್ಥಿಕವಾಗಿ ಪ್ರಯೋಜನಕಾರಿಯಾಗಿದೆ. ಸಾಲ ಮಾಡಿದ್ದರೆ ಆ ಸಾಲ ತೀರಿಸಲು ಸಾಧ್ಯವಾಗಲಿದೆ. ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗಲಿದೆ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಿದೆ, ಈ ಅವಧಿಯಲ್ಲಿ ವ್ಯಾಪಾರಿಗಳು ತುಂಬಾ ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಕೂಡ ಲಕ್ಷ್ಮಿ ನಾರಾಯಣ ಯೋಗದಿಂದ ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ಅವಧಿಯಲ್ಲಿ ತುಂಬಾನೇ ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ, ಹಣದ ಪರಿಸ್ಥಿತಿಯಲ್ಲಿ ತುಂಬಾನೇ ಸುಧಾರಣೆ ಇರಲಿದೆ. ಹಣಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಯಶಸ್ಸು ದೊರೆಯಲಿದೆ. ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications