Latest Updates
-
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ
ಸಿಂಹ ರಾಶಿಯಲ್ಲಿ ಬುಧ-ಶುಕ್ರ ಯುತಿ: ಈ 5 ರಾಶಿಯವರಿಗೆ ಲಕ್ಷ್ಮಿ ನಾರಾಯಣ ಯೋಗ
ಯಾವುದೇ ರಾಶಿಯಲ್ಲಿ ಶುಕ್ರ ಮತ್ತು ಬುಧನ ಸಂಯೋಗವಾದಾಗ ಲಕ್ಷ್ಮಿ ನಾರಾಯಣ ಯೋಗ ಉಂಟಾಗುತ್ತದೆ, ಈ ಯೋಗ ಅತ್ಯಂತ ಶುಭ ಯೋಗವಾಗಿದೆ.
ಲಕ್ಷ್ಮಿ ನಾರಾಯಣ ಯೋಗದಿಂದಾಗಿ 1, 11, 9, 2,4 ಮನೆಯ ಸ್ಥಾನದಲ್ಲಿರುವವರು ತುಂಬಾನೇ ಒಳ್ಳೆಯ ಪ್ರಯೋಜನ ಪಡೆಯುತ್ತಾರೆ. ಈ ಬಾರಿ ಸಿಂಹ ರಾಶಿಗೆ ಬುಧ ಸಂಚರಿಸಿದೆ, ಶುಕ್ರನು ಕೂಡ ಜುಲೈ 31ಕ್ಕೆ ಸಂಚರಿಸಿದೆ, ಹೀಗಾಗಿ ಲಕ್ಷ್ಮಿ ನಾರಾಯಣ ಉಂಟಾಗಿ ಈ ರಾಶಿಯವರು ಅತ್ಯುತ್ತಮವಾದ ಪ್ರಯೋಜನ ಪಡೆಯಲಿದ್ದೀರಿ:

ಮೇಷ ರಾಶಿ
ಸಿಂಹ ರಾಶಿಯಲ್ಲಿ ಬುಧ-ಶುಕ್ರ ಸಂಯೋಗದಿಂದಾಗಿ ಮೇಷ ರಾಶಿಯಲ್ಲಿ ಲಕ್ಷ್ಮಿ ನಾರಾಯಣ ಯೋಗ ಉಂಟಾಗಿದೆ. ಈ ಲಕ್ಷ್ಮಿ ನಾರಾಯಣ ಯೋಗದಿಂದಾಗಿ ನೀವು ಧನ ಲಾಭ ಪಡೆಯುತ್ತೀರಿ, ಈ ಅವಧಿಯಲ್ಲಿ ನೀವು ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಈ ಯೋಗದಿಂದಾಗಿ ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ಸಿಗಲಿದೆ. ನಿಮ್ಮ ಕೆಲಸ ಕಾರ್ಯಗಳು ಚೆನ್ನಾಗಿ ನಡೆಯಲಿದೆ.
ಈ ಸಮಯದಲ್ಲಿ ನಿಮಗೆ ಉಳಿತಾಯ ಮಾಡಲು ಸಾಧ್ಯವಾಗುವುದು, ಈ ಅವಧಿಯಲ್ಲಿ ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಈ ಅವಧಿಯಲ್ಲಿ ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿಯ ಬೆಂಬಲ ದೊರೆಯಲಿದೆ.
ಕರ್ಕ ರಾಶಿ
ಕರ್ಕ ರಾಶಿಯಲ್ಲಿ ಲಕ್ಷ್ಮಿ ನಾರಾಯಣ ಯೋಗ ಉಂಟಾಗಿದೆ, ಈ ಲಕ್ಷ್ಮಿ ನಾರಾಯಣ ಯೋಗದಿಂದಾಗಿ ನೀವು ಉತ್ತಮ ಪ್ರಯೊಜನ ಪಡೆಯುತ್ತೀರಿ, ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯದಲ್ಲಿ ಅತ್ಯುತ್ತಮವಾದ ಪ್ರಯೋಜನ ಪಡೆಯುತ್ತೀರಿ, ಅಪೂರ್ನವಾಗಿದ್ದ ಕೆಲಸ ಈ ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ಇನ್ನು ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯದಲ್ಲಿ ನೀವು ಬಯಸಿದ ಕೆಲಸ ದೊರೆಯಲಿದೆ. ಆರ್ಥಿಕವಾಗಿಯೂ ಈ ಸಮಯ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಸಮಯದಲ್ಲಿ ಧನಲಾಭವಾಗಲಿದೆ. ಇನ್ನು ಆರ್ಥಿಕ ಸ್ಥಿತಿ ಚೆನ್ನಾಗಿರುವುದರಿಂದ ನೀವು ತುಂಬಾ ಸಮಯದಿಂದ ಬಯಸುತ್ತಿದ್ದ ವಸ್ತು ಖರೀದಿಸಲು ಸಾಧ್ಯವಾಗುವುದು.
ಸಿಂಹ ರಾಶಿ
ಸಿಂಹ ರಾಶಿಯಲ್ಲಿ ಲಕ್ಷ್ಮಿ ನಾರಾಯಣ ಯೋಗ ಉಂಟಾಗಿದೆ, ಈ ಯೋಗ ನಿಮ್ಮ ಲಗ್ನ ಮನೆಯಲ್ಲಿ ಉಂಟಾಗಿರುವುದರಿಂದ ಈ ಅವಧಿಯಲ್ಲಿ ನಿವು ಅತ್ಯುತ್ತಮ ಪ್ರಯೋಜನ ಪಡೆಯುತ್ತೀರಿ. ಲಕ್ಷ್ಮಿ ನಾರಾಯಣ ಯೋಗದಿಂದಾಗಿ ನಿಮ್ಮ ಕೆಲಸಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಕೆಲಸದಲ್ಲಿ ಯಾವುದೇ ಅಡೆತಡೆ ಇರಲ್ಲ, ಕುಟುಂಬ ಜೀವನ ಚೆನ್ನಾಗಿರಲಿದೆ. ಕೆಲಸದಲ್ಲಿ ಬಡ್ತಿ ಸಿಗಲಿದೆ. ನಿಮ್ಮ ಸಂಬಳ ಹೆಚ್ಚಾಗಲಿದೆ.
ತುಲಾ ರಾಶಿ
ತುಲಾ ರಾಶಿಯಲ್ಲಿ ಲಕ್ಷ್ಮಿ ನಾರಾಯಣ ಯೋಗ ಉಂಟಾಗಿದೆ, ಈ ಯೋಗವನ್ನು ಅತ್ಯಂತ ಶುಭ ಯೋಗವೆಂದು ಪರಿಗಣಿಸಲಾಗಿದೆ, ಕೆಲಸ ಹುಡುಕುತ್ತಿದ್ದರೆ ಈ ಅವಧಿಯಲ್ಲಿ ನೀವು ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಈ ಶುಕ್ರ ಸಂಚಾರ, ಬುಧನ ಸ್ಥಾನ ನಿಮ್ಮ ಕುಟುಂಬ ಜೀವನದಲ್ಲಿ ಸಮತೋಷ ಹೆಚ್ಚಿಸಲಿದೆ, ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೂ ಈ ಸಮಯ ತುಂಬಾ ಉತ್ತಮವಾಗಿದೆ. ವಿವಾಹಿತರ ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ಸಮಯ ಚೆನ್ನಾಗಿದೆ.
ಧನು ರಾಶಿ
ಲಕ್ಷ್ಮಿ ನಾರಾಯಣ ಯೋಗದಿಂದಾಗಿ ಧನು ರಾಶಿಯವರು ಕೂಡ ಅತ್ಯುತ್ತಮವಾದ ಪ್ರಯೋಜನ ಪಡೆಯುತ್ತೀರಿ. ಈ ಸಮಯದಲ್ಲಿ ನಿಮ್ಮ ವೃತ್ತಿ ಬದುಕಿನಲ್ಲಿ ಧನಾತ್ಮಕ ಬದಲಾವಣೆಗಳನ್ನು ತರಬಹುದು, ನೀವು ಬಯಸಿದ ಕೆಲಸ ಸಿಗಲಿದೆ. ಕೆಲವರಿಗೆ ವೃತ್ತಿ ಬದುಕಿನಲ್ಲ ಬಡ್ತಿ ಸಿಗಬಹುದು, ಆರ್ಥಿಕವಾಗಿ ಉತ್ತಮವಾಗಿದೆ ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಈ ಸಮಯ ಉತ್ತಮವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
