Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಮಾಘ ಪೂರ್ಣಿಮಾದಂದು ಉಂಟಾಗಲಿದೆ ಅತ್ಯಂತ ಶುಭಯೋಗ: ಈ ಮೂರು ರಾಶಿಯವರ ಆರ್ಥಿಕ ಸ್ಥಿತಿ ಉತ್ತಮವಾಗಲಿದೆ
ಹಿಂದೂ ಧರ್ಮದಲ್ಲಿ ಮಾಘ ಪೂರ್ಣಿಮಾಗೆ ತುಂಬಾನೇ ಮಹತ್ವವಿದೆ, ಅದರಲ್ಲಿಯೂ ಈ ವರ್ಷ ಈ ದಿನ ಇನ್ನಷ್ಟು ವಿಶೇಷವಾಗಿರಲಿದೆ, ಏಕೆಂದರೆ 144 ವರ್ಷಕ್ಕೊಮ್ಮೆ ನಡೆಯುವ ಕುಂಭಮೇಳ ಈ ವರ್ಷ ನಡೆಯುತ್ತಿರುವುದರಿಂದ ಇದನ್ನು ನೋಡುವ ಅದೃಷ್ಟ ಸಿಕ್ಕಿರುವುದು ನಮ್ಮ ಪುಣ್ಯ ಎಂದು ಕೋಟ್ಯಾಂತರ ಹಿಂದೂಗಳು ಸಂಭ್ರಮ ಪಡುತ್ತಿದ್ದಾರೆ. ಮಾಘ ಪೂರ್ಣಿಮೆಯಂದು ಪುಣ್ಯ ಸ್ನಾನ ಮಾಡಿದರೆ ಪಾಪಗಳೆಲ್ಲಾ ಕಳೆದು ಹೋಗುತ್ತದೆ ಎಂಬ ನಂಬಿಕೆ, ಹೀಗಾಗಿ ಈ ದಿನದಂದು ಪ್ರಯಾಗ್‌ರಾಜ್‌ಗೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಪುಣ್ಯ ಸ್ನಾನಕ್ಕೆ ಹೋಗುವವರು ತಮ್ಮ ಸುರಕ್ಷತೆ ಕಡೆ ಕೂಡ ಗಮನಹರಿಸಬೇಕು
ಮಹಾಕುಂಭ ಅಮೃತ ಸ್ನಾನಕ್ಕೆ ಹೋಗುವವರು ತಮ್ಮ ಸುರಕ್ಷತೆ ಕಡೆಗೆ ತುಂಬಾನೇ ಗಮನಹರಿಸಬೇಕು. ನೂಕು ನುಗ್ಗಲು ನಿಯಂತ್ರಿಸಲು ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಮಾಘ ಸ್ನಾನ ಯಾವಾಗ?
ಈ ಫೆಬ್ರವರಿ 12ಕ್ಕೆ ಮಾಘ ಪೂರ್ಣಿಮಾ ಸ್ನಾನವಿದೆ. ಮಾಘ ಪೂರ್ಣಿಮಾ ತಿಥಿ ಫೆಬ್ರವರಿ 11 ಸಂಜೆ 06:56ಕ್ಕೆ ಪ್ರಾರಂಭವಾಗಿ ಫೆಬ್ರವರಿ 12 ಸಂಜೆ 7:22ಕ್ಕೆ ಮಾಘ ಪೂರ್ಣಿಮಾ ತಿಥಿ ಮುಕ್ತಾಯವಾಗಲಿದೆ.
ಮಾಘ ಪೂರ್ಣಿಮೆಗೆ ತುಂಬಾ ಪ್ರಮುಖ ಯೋಗಗಳು ಕೂಡ ರೂಪುಗೊಂಡಿದೆ
ಮಾಘ ಪೂರ್ಣಿಮೆ ಬೆಳಗ್ಗೆ 08:06ಕ್ಕೆ ಶೋಭನ ಯೋಗವಿದೆ, ಇದು ಫೆಬ್ರವರಿ 12 ಬೆಳಗ್ಗೆ 08:06ಕ್ಕೆ ಶುರುವಾಗುವುದು. ಅದರ ಬಳಿಕ ಶಿವವಾಸ ಯೋಗ ರೂಪುಗೊಳ್ಳುತ್ತದೆ, ಈ ಯೋಗದ ಫಲದಿಂದಾಗಿ ಈ ರಾಶಿಯವರು ಆರ್ಥಿಕವಾಗಿ ಹೆಚ್ಚಿನ ಪ್ರಯೋಜನ ಪಡೆಯುತ್ತೀರಿ:
ಮೇಷ ರಾಶಿ
ಮೇಷ ರಾಶಿಯವರು ಮಘ ಪೂರ್ಣಿಮೆಯ ಬಳಿಕ ತಮ್ಮ ಬದುಕಿನಲ್ಲಿ ಧನಾತ್ಮಕ ಬೆಳವಣಿಗೆ ಕಾಣುತ್ತೀರಿ. ಈ ಸಮಯದಲ್ಲಿ ಆರ್ತಿಕವಾಗಿ ಪ್ರಯೋಜನ ಪಡೆಯುತ್ತೀರಿ, ವೃತ್ತಿ ಜೀವನಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿದೆ. ಇನ್ನು ಬೇರೆ ಕಡೆ ಉದ್ಯೋಗಕ್ಕೆ ಪ್ರಯತ್ನ ಮಾಡಿದ್ದರೆ ಅದರಲ್ಲಿ ಉತ್ತಮ ಪ್ರಯೋಜನ ಪಡೆಯಲು ಸಾಧ್ಯವಾಗಲಿದೆ. ವ್ಯಾಪಾರಸ್ಥರು ಈ ಅವಧಿಯಲ್ಲಿ ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಬಡ್ತಿ ನಿರೀಕ್ಷೆಯಲ್ಲಿರುವವರು ಉತ್ತಮ ಪ್ರಯೋಜನ ಪಡೆಯುತ್ತೀರಿ.
ಕರ್ಕ ರಾಶಿ
ಕರ್ಕ ರಾಶಿಯ ಬಳಿಕ ನಿಮ್ಮ ಆರ್ಥಿಕ ಸಮಸ್ಯೆ ಬಗೆಹರಿಯಲಿದೆ, ನಿಮ್ಮ ಕೆಲಸ ಕಾರ್ಯದಲ್ಲಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ನಿಮ್ಮ ಕೆಲಸ ಕಾರ್ಯಗಳಿಗೆ ಉತ್ತಮ ಪ್ರಯೋಜನ ದೊರೆಯಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ಮನೆಯಲ್ಲಿ ಶುಭ ಕಾರ್ಯ ನಡೆಯಲಿದೆ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ಇನ್ನು ಆರ್ಥಿಕ ವಿಷಯಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಯಶಸ್ಸು ದೊರೆಯಲಿದೆ.
ಕನ್ಯಾ ರಾಶಿ
ಮಾಘ ಪೂರ್ಣಿಮೆಯ ನಂತರ ನಿಮ್ಮ ಬದುಕಿನಲ್ಲಿ ಬಹಳ ಧನಾತ್ಮಕ ಪ್ರಯೋಜನ ಪಡೆಯುತ್ತೀರಿ.ಸ್ವಂತ ವ್ಯವಹಾರ ಮಾಡುವವರು ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ಸಂಪತ್ತಿನ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ವ್ಯಾಪಾರಿಗಳು ಉತ್ತಮ ಪ್ರಯೋಜನ ಪಡೆಯುತ್ತೀರಿ. ಹೂಡಿಕೆ ವಿಷಯದಲ್ಲಿ ಈ ಅವಧಿ ಉತ್ತಮವಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications