Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಮಹಾಶಿವರಾತ್ರಿ ಬಳಿಕ ಈ 4 ರಾಶಿಗಳ ಬದುಕಿನಲ್ಲಿ ಕಾಣುವಿರಿ ಧನಾತ್ಮಕ ಬದಲಾವಣೆ
ಹಿಂದೂಗಳ ಬಹುದೊಡ್ಡ ಹಬ್ಬ ಮಹಾಶಿವರಾತ್ರಿ. ಪ್ರತಿ ತಿಂಗಳು ಶಿವರಾತ್ರಿ ಹಬ್ಬ ಬರುತ್ತದೆ, ಆದರೆ ಮಹಾಶಿವರಾತ್ರಿ ಹಬ್ಬವನ್ನು ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶಿಯಂದು ಆಚರಿಸಲಾಗುವುದು. ಪರಶಿವನು ಪಾರ್ವತಿಯನ್ನು ವಿವಾಹವಾದ ದಿನ, ಈ ದಿನ ವೈದಿಕ ದೃಷ್ಟಿಯಿಂದಲೂ ತುಂಬಾನೇ ಮಹತ್ವವಾದ ದಿನ, ಈ ದಿನ ಶಿವ ಭಕ್ತರು ಶಿವನಿಗೆ ವಿಶೇಷ ಪೂಜೆಯನ್ನು ಸಲ್ಲಿಸುತ್ತಾರೆ. ಶಿವನ ಕೃಪೆ ದ್ವಾದಶ ರಾಶಿಗಳ ಮೇಲೆ ಇರಲಿದೆ, ಆದರೆ ಕೆಲವೊಂದು ರಾಶಿಗಳ ಮೇಲೆ ವಿಶೇಷ ಕೃಪೆ ಇರಲಿದೆ.

ಮೇಷ ರಾಶಿ
ಮೇಷ ರಾಶಿಯವರು ಈ ಶಿವರಾತ್ರಿಯ ಬಳಿಕ ತಮ್ಮ ಬದುಕಿನಲ್ಲಿ ಉತ್ತಮ ಧನ ಲಾಭ ಪಡೆಯುತ್ತೀರಿ. ಈ ಶಿವರಾತ್ರಿ ನಿಮ್ಮ ಬದುಕಿನಲ್ಲಿ ವಿಶೇಷವಾಗಿರಲಿದೆ, ವೃತ್ತಿ ಬದುಕಿನಲ್ಲಿ ನೀವು ಉತ್ತಮ ಬೆಳವಣಿಗೆ ಪಡೆಯುತ್ತೀರಿ, ನಿಮ್ಮ ಬದುಕಿನಲ್ಲಿರುವ ಕೆಲ ಸವಾಲುಗಳು, ಅಡೆತಡೆಗಳು ದೂರಾಗಲಿದೆ, ವೈಯಕ್ತಿಕ ಬದುಕಿನಲ್ಲಿರುವ ಸಮಸ್ಯೆ ಕೂಡ ಕೊನೆಯಾಗುವುದು, ಆರೋಗ್ಯ ಸಂಬಂಧಿ ಸಮಸ್ಯೆಯಲ್ಲಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ, ಒಟ್ಟಿನಲ್ಲಿ ಈ ಅವಧಿ ನಿಮಗೆ ತುಂಬಾನೇ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ, ಈ ದಿನ ನೀವು ಶಿವನಿಗೆ ರುದ್ರಾಭಿಷೇಕ ಮಾಡಿಸಿ, ನಿಮ್ಮ ಬದುಕಿನಲ್ಲಿರುವ ಸವಾಲುಗಳು ದೂರಾಗಲಿದೆ, ನಿಮ್ಮ ಸಂಪತ್ತು ಹೆಚ್ಚಾಗಲಿದೆ, ಆರ್ಥಿಕ ಸ್ಥಿತಿಯಲ್ಲಿ ಉತ್ತಮ ಪ್ರಗತಿ ಕಾಣುವಿರಿ. ಶಿವನ ಕೃಪೆಯಿಂದ ನಿಮ್ಮ ಬದುಕಿನಲ್ಲಿ ಸಂಪತ್ತು, ಸಮೃದ್ದಿ ಹೆಚ್ಚಾಗಲಿದೆ.
ಮಕರ ರಾಶಿ
ಮಕರ ರಾಶಿಯವರು ಕೂಡ ಶಿವರಾತ್ರಿಯ ಬಳಿಕ ತಮ್ಮ ಬದುಕಿನಲ್ಲಿಅತ್ಯುತ್ತಮವಾದ ಪ್ರಯೋಜನ ಪಡೆಯುತ್ತೀರಿ, ವೃತ್ತಿ ಬದುಕಿನಲ್ಲಿ ಈಗ ಏನಾದರು ಸಮಸ್ಯೆ ಎದುರಿಸುತ್ತಿದ್ದರೆ ಶಿವರಾತ್ರಿಯ ಬಳಿಕ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ, ಕುಟುಂಬ ಬದುಕು ತುಂಬಾನೇ ಚೆನ್ನಾಗಿರಲಿದೆ, ಶಿವರಾತ್ರಿ ಶಿವನಿಗೆ ರುದ್ರಾಭಿಷೇಕ ಮಾಡಿಸಿ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ಶಿವರಾತ್ರಿ ತುಂಬಾ ವಿಶೇಷವಾಗಿರಲಿದೆ, ಈ ದಿನದಂದು ನೀವು ಉಪವಾಸವಿದ್ದು ಶಿವನ ಆರಾಧನೆ ಮಾಡಿ, ಹೀಗೆ ಮಾಡುವುದರಿಂದ ನೀವು ಕೆಲಸದಲ್ಲಿ ಉತ್ತಮ ಪ್ರಗತಿ ಕಾಣುತ್ತೀರಿ. ಈ ದಿನದಂದು ನೀವು ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ದಾನ ಧರ್ಮ ಮಾಡಿ ಇದರಿಂದ ಕೂಡ ಉತ್ತಮವಾಗುವುದು.
ಶಿವರಾತ್ರಿಯಂದು ಈ ಪರಿಹಾರ ಮಾಡುವುದು 12 ರಾಶಿಗಳಿಗೂ ಒಳ್ಳೆಯದು
* ಶಿವ ದೇವಾಲಯಕ್ಕೆ ಹೋಗಿ ದೀಪ ಹಚ್ಚಿ
* ಶಿವ ಲಿಂಗಕ್ಕೆ ಜಲಾಭಿಷೇಕ, ಜೇನು ತುಪ್ಪ, ಹಾಲು, ಮೊಸರು, ತುಪ್ಪ ಇವುಗಳಿಂದ ಅಭಿಷೇಕ ಮಾಡಿಸಿ
* ಈ ದಿನ ಹನುಮಾನ್ ಚಾಲೀಸಾ ಪಠಿಸಿ
* ಈ ದಿನ ನಿಮ್ಮ ಶಕ್ತಿಗೆ ಅನುಸಾರ ದಾನ ಧರ್ಮ ಮಾಡಿ.
* ಮಹಿಳೆಯರಿಗೆ ಹಸಿರು ಬಳೆ, ಸೌಂದರ್ಯವರ್ಧಕ ವಸ್ತುಗಳನ್ನು ದಾನ ಮಾಡಿ
* ಶಿವ ಮಂತ್ರಗಳನ್ನು ಪಠಿಸಿ
ಪಂಚಾಕ್ಷರಿ ಶಿವ ಮಂತ್ರ
ಓಂ ನಮಃ ಶಿವಾಯ
ಮಹಾಮೃತ್ಯುಂಜಯ ಮಂತ್ರ
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಠಿವರ್ಧನಂ| ಊರ್ವಾರುಕಂವಾ ಬಂಧನಾ ಮೃತ್ಯೋರ್-ಮುಕ್ಷೀಯ ಮಾಮೃತಾತ್||
ರುದ್ರ ಮಂತ್ರ
ಓಂ ನಮೋ ಭಗವತೇ ರುದ್ರಾಯ
ಶಿವ ಗಾಯತ್ರಿ ಮಂತ್ರ
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರ ಪ್ರಚೋದಯಾತ್
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
