Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ತುಲಾ ರಾಶಿಯಲ್ಲಿ ಶುಕ್ರ ಸಂಚಾರ: ಈ 3 ರಾಶಿಯಲ್ಲಿ ಉಂಟಾಗಲಿದೆ ಮಾಲವ್ಯ ಯೋಗ
ಜ್ಯೋತಿಷ್ಯದಲ್ಲಿ ಮಾಲವ್ಯ ಯೋಗವನ್ನು ಅದೃಷ್ಟದ ಯೋಗವೆಂದು ಪರಿಗಣಿಸಲಾಗಿದೆ. ಈ ಸೆಪ್ಟೆಂಬರ್ 18ಕ್ಕೆ ಶುಕ್ರನು ತುಲಾ ರಾಶಿಗೆ ಸಂಚರಿಸಲಿದೆ. ಶುಕ್ರನು ತುಲಾ ರಾಶಿಗೆ ಸಂಚರಿಸಿದಾಗ ಮಾಲವ್ಯ ಯೋಗ ಉಂಟಾಗುವುದು. ಈ ಯೋಗವೂ ಕೆಲ ರಾಶಿಗಳಿಗೆ ತುಂಬಾನೇ ಪ್ರಯೋಜನ ಬೀರಲಿದೆ. ಈ ರಾಶಿಗಳು ಮಾವ್ಯ ಯೋಗದಿಂದಾಗಿ ಹ ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ:

ಮೇಷ ರಾಶಿ
ಮೇಷ ರಾಶಿಯಲ್ಲಿ ಶುಕ್ರನು 7ನೇ ಮನೆಯಲ್ಲಿ ಇರಲಿದೆ, ಇದರಿಂದ ಮಾಲವ್ಯ ಯೋಗ ಉಂಟಾಗಿದೆ, ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು, ಕೆಲಸದಲ್ಲಿನ ಸವಲುಗಳು ದೂರಾಗುವುದು. ವ್ಯಾಪಾರಸ್ಥರಿಗೂ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಉದ್ಯೋಗಿಗಳಿಗೆ ಈ ಅವಧಿಯಲ್ಲಿ ಬಡ್ತಿ ಸಿಗಲಿದೆ. ಇನ್ನು ಹೊಸ ಉದ್ಯೋಗಕ್ಕೆ ಪ್ರಯತ್ನಿಸಲು ಅಥವಾ ಹೊಸ ವ್ಯಾಪಾರ ಪ್ರಾರಂಭಿಸಲು ಈ ಅವಧಿ ಅನುಕೂಲಕರವಾಗಿದೆ.
ಈ ಅವಧಿಯಲ್ಲಿ ನೀವು ವಾಹನ ಅಥವಾ ಆಸ್ತಿ ಖರೀದಿಸಲು ಬಯಸುವುದಾದರೆ ಅದು ಸಾಧ್ಯವಾಗುವುದು, ಆರ್ಥಿಕವಾಗಿ ಈ ಅವಧಿ ನಿಮಗೆತುಂಬಾನೇ ಅನುಕೂಲಕರವಾಗಿರಲಿದೆ. ವೈವಾಹಿಕ ಜೀವನದಲ್ಲೂ ಸಂತೋಷ, ಶಾಂತಿ ಮತ್ತು ಪ್ರೀತಿ ಇರುತ್ತದೆ. ನಿಮ್ಮ ಹಾಗೂ ಸಂಗಾತಿ ನಡುವೆ ಹೊಂದಾಣಿಕೆ ಚೆನ್ನಾಗಿರಲಿದೆ. ಕುಟುಂಬದಲ್ಲಿ ಸಂತೋಷ, ನೆಮ್ಮದಿ ಇರಲಿದೆ, ಆರೋಗ್ಯ ಉತ್ತಮವಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಗೆ ಶುಕ್ರ ಸಂಚಾರವಾದಾಗ ಶುಕ್ರನು ನಿಮ್ಮ ರಾಶಿಯ ಲಗ್ನ ಮನೆಯಲ್ಲಿ ಇರಲಿದೆ. ಇದರಿಂದ ಮಾಲವ್ಯ ಯೋಗ ಉಂಟಾಗಿದೆ. ಈ ಅವಧಿಯಲ್ಲಿ ನೀವು ಅಪಾರ ಲಾಭ ಗಳಿಸುತ್ತೀರಿ. ಆರ್ಥಿಕವಾಗಿ ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ಈ ಸಮಯದಲ್ಲಿ ಅಪೂರ್ಣವಾಗಿದ್ದ ಕೆಲಸ ಪೂರ್ಣಗೊಳ್ಳಲಿದೆ. ಇನ್ನು ಈ ಸಮಯದಲ್ಲಿ ಆರ್ಥಿಕ ಸಮಸ್ಯೆ ದೂರಾಗುವುದು. ನಿಮ್ಮ ಕೆಲಸ ಕಾರ್ಯಗಳು ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ.
ಉದ್ಯೋಗಿಗಳಿಗೆ ಬಡ್ತಿ ಸಿಗಲಿದದೆ, ವ್ಯಾಪಾರಿಗಳ ವ್ಯಾಪಾರ ವಹಿವಾಟು ಚೆನ್ನಾಗಿ ನಡೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಈ ಅವಧಿಯಲ್ಲಿ ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಧನು ರಾಶಿ
ಧನು ರಾಶಿಯ 11ನೇ ಮನೆಯಲ್ಲಿ ಮಾಲ್ವಯ ಯೋಗ ಉಂಟಾಗಿದೆ. ಈ ಅವಧಿಯಲ್ಲಿ ತುಂಬಾನೇ ಉತ್ತಮ ಪ್ರಯೋಜನ ಪಡೆಯುತ್ತೀರಿ, ಈ ಅವಧಿಯಲ್ಲಿ ಆರ್ಥಿಕ ಪ್ರಗತಿ ಉಂಟಾಗಲಿದೆ. ವ್ಯಾಪಾರಿಗಳಿಗೂ ಈ ಅವದಿ ಉತ್ತಮವಾಗಿದೆ. ನಿಮ್ಮೆಲ್ಲಾ ಕೆಲಸಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನೇ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಒಟ್ಟಿನಲ್ಲಿ ಈ ಅವಧಿ ಅನುಕೂಲಕರವಾಗಿದೆ.
ಮಾಲವ್ಯ ಯೋಗ ಯಾವಾಗ ರೂಪುಗೊಳ್ಳುತ್ತದೆ?
ಜ್ಯೋತಿಷ್ಯದ ಪ್ರಕಾರ ಶುಕ್ರನು ಲಗ್ನ, ನಾಲ್ಕನೇ, ಏಳನೇ ಅಥವಾ ಹತ್ತನೇ ಮನೆಯಲ್ಲಿ ಪ್ರಬಲವಾದ ಸ್ಥಾನದಲ್ಲಿದ್ದಾಗ ಅತಿ ಅದೃಷ್ಟದ ಮಾಲವ್ಯ ಯೋಗ ಉಂಟಾಗಲಿದೆ, ಈ ಮಾಲವ್ಯ ಉಂಟಾದಾಗ ತುಂಬಾನೇ ಅದ್ಭುತ ಪ್ರಯೋಜನ ಪಡೆಯುತ್ತಾರೆ. ಈ ಸಮಯದಲ್ಲಿ ವೃತ್ತಿ ಬದುಕಿನಲ್ಲಿ ಏನಾದರು ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ, ಆರ್ಥಿಕವಾಗಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಕೆಲಸ ಸಿಗಲಿದೆ. ನಿಮ್ಮೆಲ್ಲಾ ಕೆಲಸವು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ವೈಯಕ್ತಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿಯ ನಡುವೆ ಬಾಂಧವ್ಯ ಉತ್ತಮವಾಗಿರಲಿದೆ.
ಮಾಲ್ವಯ ಯೋಗದ ಸಮಯದಲ್ಲಿ ಅಪೂರ್ಣವಾಗಿದ್ದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ, ಹಾಗಾಗಿ ಈ ಮಾಲವ್ಯ ಯೋಗವನ್ನು ಅದೃಷ್ಟದ ಸಮಯವೆಂದು ಪರಿಗಣಿಸಲಾಗುವುದು, ತುಲಾ ರಾಶಿಯಲ್ಲಿ ಮಾಲವ್ಯ ಯೋಗದಿಂದ ಈ ಬಾರಿ ಮೇಷ, ತುಲಾ, ಧನು ರಾಶಿಯವರು ಉತ್ತಮ ಪ್ರಯೋಜನ ಪಡೆಯುತ್ತೀರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications