Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಈ ಮೂರು ರಾಶಿಗಳಿಗೆ ಮಂಗಳ ಪುಷ್ಯ ಯೋಗದಿಂದಾಗಿ ಏಪ್ರಿಲ್‌ನಿಂದ ಅದೃಷ್ಟೋ ಅದೃಷ್ಟ
ಮಂಗಳವನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಕ್ಷುದ್ರ ಗ್ರಹವೆಂದು ಕರೆಯಲಾಗುವುದು. ಮಂಗಳನು ಪ್ರತಿ ಬಾರಿ ರಾಶಿ ಬದಲಾವಣೆ ಮಾಡಿದಾಗ ಅಥವಾ
ನಕ್ಷತ್ರ ಬದಲಾವಣೆ ಮಾಡಿದಾಗ ಅದರ ಪ್ರಭಾವ ಪ್ರತಿಯೊಂದು ರಾಶಿಯ ಮೇಲೆ ಬೀರಲಿದೆ. ಈ ಏಪ್ರಿಲ್ 12ಕ್ಕೆ ಮಂಗಳನು ನಕ್ಷತ್ರ ಬದಲಾವಣೆ ಮಾಡಲಿದ್ದಾನೆ, ಈ ರೀತಿ ರಾಶಿ ಬದಲಾವಣೆ ಮಾಡಿದಾಗ ಕೆಲ ರಾಶಿಯವರು ಅತ್ಯಂತ ಮಂಗಳಕರ ಪರಿಣಾಮ ಬೀರುವುದು.
ಮಂಗಳನು ನಕ್ಷತ್ರಗಳಲ್ಲಿಯೇ ಅತ್ಯಂತ ಶುಭ ಎಂದು ಪರಿಗಣಿಸುವ ಪುಷ್ಯ ನಕ್ಷತ್ರಕ್ಕೆ ಪ್ರವೇಶ ಮಾಡಲಿದೆ, ಇದರಿಂದ ಮಂಗಳ ಪುಷ್ಯ ಯೋಗ ಉಂಟಾಗಲಿದೆ. ಈ ಮಂಗಳ ಪುಷ್ಯ ಯೋಗದಿಂದಾಗಿ ಈ ರಾಶಿಯವರು ಆರ್ಥಿಕ ಬೆಳವಣಿಗೆಯನ್ನು ಕಾಣುವಿರಿ:

ಕರ್ಕ ರಾಶಿ
ಮಂಗಳ ಏಪ್ರಿಲ್ 12ಕ್ಕೆ ಪುಷ್ಯ ನಕ್ಷತ್ರಕ್ಕೆ ಪ್ರವೇಶ ಮಾಡಿದಾಗ ಕರ್ಕ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ, ಈ ಯೋಗದ ಬಲದಿಂದಾಗಿ ಏಪ್ರಿಲ್ ತಿಂಗಳಿನಲ್ಲಿ ನಿಮ್ಮ ಬದುಕಿನಲ್ಲಿ ಅನೇಕ ಧನಾತ್ಮಕ ಬದಲಾವಣೆ ತರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಇನ್ನು ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಈ ಸಮಯದಲ್ಲಿ ಮದುವೆ ಮಾತುಕತೆ ನಡೆಯುವ ಸಾಧ್ಯತೆ ಬಲವಾಗಿದೆ. ಇನ್ನು ಆರ್ಥಿಕವಾಗಿ ನೋಡುವುದಾದರೂ ಈ ಅವಧಿ ಅನುಕೂಲಕರವಾಗಿದೆ. ಮನೆಯಲ್ಲಿ ಶುಭ ಕಾರ್ಯ ನಡೆಯಲಿದೆ. ನೀವು ಆಸ್ತಿ ಖರೀದಿ ಅಥವಾ ವಾಹನ ಖರೀದಿಗೆ ಸಿದ್ಧತೆ ಮಾಡುತ್ತಿದ್ದರೆ ಈ ಅವಧಿ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಕನ್ಯಾ ರಾಶಿ
ಈ ಮಂಗಳ ಪುಷ್ಯ ಯೋಗ ಈ ಸಂಚಾರ ನಿಮಗೆ ಪ್ರಯೊಜನಕಾರಿಯಾಗಿದೆ. ಆರ್ಥಿಕವಾಗಿ ಈ ಸಮಯದಲ್ಲಿ ತುಂಬಾನೇ ಉತ್ತಮ ಪ್ರಯೋಜನ ಪಡೆಯುತ್ತೀರಿ. ನಿಮ್ಮ ಕಠಿಣ ಶ್ರಮಕ್ಕೆ ಒಳ್ಳೆಯ ಪ್ರತಿಪಲ ಸಿಗಲಿದೆ, ಜೀವನದ ಪ್ರತಿಯೊಂದ ಹೆಜ್ಜೆಯಲ್ಲಿಯೂ ಈ ಯೋಗದ ಬಲದಿಂದಾಗಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ವೈವಾಹಿಕ ಬದುಕು ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರೂ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಆರೋಗ್ಯದ ದೃಷ್ಟಿಯಿಂದ ಈ ಸಮಯ ಉತ್ತಮವಾಗಿದೆ, ನೀವು ಫಿಟ್ನೆನೆಸ್ ಕಡೆಗೆ ಹೆಚ್ಚಿನ ಒತ್ತು ನೀಡುವುದು ಒಳ್ಳೆಯದು.
ಮೀನ ರಾಶಿ
ಈ ಮಂಗಳ ಪುಷ್ಯ ಯೋಗದಿಂದಾಗಿ ಮೀನ ರಾಶಿಯವರು ಕೂಡ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ. ಆರ್ಥಿಕವಾಗಿ ಈ ಸಮಯ ತುಂಬಾ ಉತ್ತಮವಾಗಿದೆ, ಕೆಲಸದ ಜಾಗದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ, ಬಹು ಸಮಯದಿಂದ ನಿರೀಕ್ಷೆ ಮಾಡುತ್ತಿದ್ದ ಬಡ್ತಿ ಸಿಗಲಿದೆ. ಹಣದ ದೃಷ್ಟಿಯಿಂದ ತುಂಬಾನೇ ಪ್ರಯೋಜನಕಾರಿಯಾಗಿದೆ, ವ್ಯಾಪಾರಿಗಳು ನಿರೀಕ್ಷೆ ಮಾಡಿರುವುದಕ್ಕಿಂತಲೂ ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು, ಮನೆಯ ವಾತಾವರಣ ಚೆನ್ನಾಗಿರಲಿದೆ, ಮನೆಯಲ್ಲಿ ಶುಭ ಕಾರ್ಯ ನಡೆಯಲಿದೆ. ಆಸ್ತಿ- ಮನೆ ಅಥವಾ ವಾಹನ ಖರೀದಿಸಲು ಬಯಸುವವರೆಗೆ ಈ ಅವಧಿ ಅನುಖುಲಕರವಾಗಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
