Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕರ್ಕ ರಾಶಿಗೆ ಸಂಚರಿಸಿದ ಮಂಗಳ: 45 ದಿನಗಳವರೆಗೆ ಮಂಗಳನ ಪ್ರಭಾವ 5 ರಾಶಿಗಳಿಗೆ ಶುಭ 7 ರಾಶಿಯವರು ಜಾಗ್ರತೆ
ಮಂಗಳನು ಕರ್ಕ ರಾಶಿಗೆ ಅಕ್ಟೋಬರ್ 20ಕ್ಕೇ ಸಂಚರಿಸಿದೆ, ಡಿಸೆಂಬರ್ 6ರವರೆಗೆ ಕರ್ಕ ರಾಶಿಯಲ್ಲಿದ್ದು ನಂತರ ಸಿಂಹ ರಾಶಿಗೆ ಸಂಚರಿಸಲಿದೆ. 45 ದಿನಗಳ ಕಾಲ ಕರ್ಕ ರಾಶಿಯಲ್ಲಿರುವ ಮಂಗಳನ ಪ್ರಭಾವ ದ್ವಾದಶ ರಾಶಿಗಳ ಮೇಲೆ ಬೀರಲಿರುವ ಪ್ರಭಾವವೇನು ಎಂದು ನೋಡೋಣ:

ಮೇಷ ರಾಶಿ
ಮಂಗಳನ ಈ ಸಂಚಾರ ನಿಮಗೆ ಅನುಕೂಲಕರವಲ್ಲ, ಈ ಸಮಯದಲ್ಲಿ ವೃತ್ತಿ ಬದುಕಿನಲ್ಲಿ ತುಂಬಾನೇ ಸವಾಲುಗಳು ಎದುರಾಗಲಿದೆ. ವ್ಯಾಪಾರಿಗಳು ಉತ್ತಮ ಒಳ್ಳೆಯ ಧನ ಲಾಭ ಪಡೆಯುತ್ತೀರಿ, ಆದರೆ ಅತಿಯಾದ ಖರ್ಚು ಸಮಸ್ಯೆ ಹೆಚ್ಚಿಸಲಿದೆ. ನಿಮ್ಮ ಹಾಗೂ ಸಂಗಾತಿಯ ನಡುವೆ ಕೆಲ ಭಿನ್ನಾಭಿಪ್ರಾಯಗಳೂ ಉಂಟಾಗಬಹುದು, ಆರೋಗ್ಯದ ಕಡೆಗೆ ಗಮನಹರಿಸಿ.
ವೃಷಭ ರಾಶಿ
ವೃಷಭ ರಾಶಿಯಲ್ಲಿ 3ನೇ ಮನೆಯಲ್ಲಿ ಇರಲಿದೆ, ಈ ಸಂಚಾರ ನಿಮಗೆ ಮಂಗಳಕರ ಫಲಿತಾಂಶ ನೀಡಲಿದೆ, ವೃತ್ತಿ ಜೀವನ ತುಂಬಾ ಚೆನ್ನಾಗಿರಲಿದೆ. ಉದ್ಯೋಗ ಬದಲಾವಣೆಗೆ ಈ ಅವಧಿ ಅನುಕೂಲಕರವಾಗಿದೆ, ವ್ಯಾಪಾರಿಗಳಿಗೆ ಉತ್ತಮ ಪ್ರಯೋಜನ ಪಡೆಯಲಿದೆ. ಕುಟುಂಬ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯ ಚೆನ್ನಾಗಿರಲಿದೆ.
ಮಿಥುನ ರಾಶಿ
ಮಿಥುನ ರಾಶಿಯಲ್ಲಿ ಮಂಗಳ ಸಂಚಾರ ನಿಮಗೆ ಅನುಕೂಲಕರವಲ್ಲ, ಈ ಅವಧಿ ಆರ್ಥಿಕವಾಗಿ ಉತ್ತಮವಲ್ಲ, ನಿಮ್ಮ ಕೆಲಸದಲ್ಲಿ ತುಂಬಾ ಜಾಗ್ರತೆವಹಿಸಬೇಕು, ವ್ಯಾಪಾರಿಗಳಿಗೆ ನಷ್ಟ ಉಂಟಾಗಬಹುದು ಎಂದು ಜಾಗ್ರತೆವಹಿಸಬೇಕು. ಆರೋಗ್ಯದ ಕಡೆಗೆ ಗಮನಹರಿಸಬೇಕು.
ಕರ್ಕ ರಾಶಿ
ಮಂಗಳನು ಕರ್ಕ ರಾಶಿಗೆ ಸಂಚಾರ ಮಾಡಿರುವುದರಿಂದ ಮಂಗಳಕರ ಫಲಿತಾಂಶವನ್ನೇ ನೀಡಲಿದ್ದಾನೆ, ವೃತ್ತಿ ಜೀವನದಲ್ಲಿ ಒಳ್ಳೆಯ ವಾಕಾಶ ದೊರೆಯಲಿದೆ. ಕೆಲಸ ಬದಲಾವಣೆ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಈ ಅವಧಿಯಲ್ಲಿ ಸಾಧ್ಯವಾಗುವುದು. ವ್ಯಾಪಾರಿಗಳಿಗೆ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ,ಆರೋಗ್ಯ ಉತ್ತಮವಾಗಿರಲಿದೆ.
ಸಿಂಹ ರಾಶಿ
ಸಿಂಹ ರಾಶಿಯಲ್ಲಿ 12ನೇ ಮನೆಯಲ್ಲಿ ಮಂಗಳ ಇರುವ ಈ ಸಮಯ ನಿಮಗೆ ಅನೇಕ ಸವಾಲುಗಳನ್ನು ನೀಡಲಿದ್ದಾನೆ, ಅನೇಕ ಒಳ್ಳೆಯ ಅವಕಾಶ ಕೈ ತಪ್ಪಲಿದೆ. ವ್ಯಾಪಾರಿಗಳಿಗೆ ಖರ್ಚು ಹೆಚ್ಚಿರಲಿದೆ, ಕುಟುಂಬ ಜೀವನದಲ್ಲಿ ಸಮಸ್ಯೆಗಳಿರಬಹುದು. ಆರೋಗ್ಯ ಸಮಸ್ಯೆಗಳಿಂದಾಗಿ ಖರ್ಚು ಹೆಚ್ಚಿರಲಿದೆ.
ಕನ್ಯಾ ರಾಶಿ
ಕರ್ಕ ರಾಶಿಯಲ್ಲಿ 11ನೇ ಮನೆಯಲ್ಲಿರುವಾಗ ಉತ್ತಮ ಅವಕಾಶ ದೊರೆಯಲಿದೆ. ವೃತ್ತಿ ಜೀವನದ ದೃಷ್ಟಿಯಿಂದಲೂ ಈ ಸಮಯ ಅನುಕೂಲಕರವಾಗಿದೆ. ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳಿಗೆ ಉತ್ತಮವಾಗಿರಲಿದೆ. ಆರ್ಥಿಕವಾಗಿ ಉಳಿತಾಯ ಮಾಡಲು ಸಾಧ್ಯವಾಗುವುದು. ಆರೋಗ್ಯ ಕೂಡ ಚೆನ್ನಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯಲ್ಲಿಮಂಗಳ 10ನೇ ಮನೆಯಲ್ಲಿ ಇರುವುದರಿಂದ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ ಪಡೆಯುತ್ತೀರಿ, ನೀವು ಬೇರೆ ಕಡೆ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಸಮಯ ನಿಮಗೆ ಅನುಕೂಲಕರವಾಗಿದೆ. ಆರ್ಥಿಕವಾಗಿ ತುಂಬಾ ಪ್ರಯೋಜನಕಾರಿಯಾಗಿದೆ. ಕುಟುಂಬ ಬದುಕಿನ ದೃಷ್ಟಿಯಿಂದಲೂ ಈ ಸಮಯ ಉತ್ತಮವಾಗಿದೆ. ಆರೋಗ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಮಂಗಳನು ವೃಶ್ಚಿಕ ರಾಶಿಯಲ್ಲಿ 9ನೇ ಮನೆಯಲ್ಲಿ ಇರಲಿದೆ. ಮಂಗಳನ ಈ ಸಂಚಾರ ನಿಮಗೆ ತುಂಬಾನೇ ಧನಾತ್ಮಕ ಪ್ರಯೋಜನ ನೀಡಲಿದೆ. ವ್ಯಾಪಾರಿಗಳು ಈ ಸಮಯದಲ್ಲಿ ಉತ್ತಮ ಲಾಭ ಗಳಿಸುತ್ತೀರಿ. ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
8ನೇ ಮನೆಯಲ್ಲಿ ಮಂಗಳವಿದೆ, ಈ ಸಂಚಾರ ನಿಮಗೆ ಅಷ್ಟೊಂದು ಅನುಕೂಲಕರವಲ್ಲ, ಈ ಅವಧಿಯಲ್ಲಿ ನಿಮ್ಮ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು. ಇನ್ನು ಆರ್ಥಿಕವಾಗಿಯೂ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ. ಕುಟುಂಬದಲ್ಲಿಯೂ ಪರಿಸ್ಥಿತಿ ಮಾನಸಿಕ ಒತ್ತಡ ಹೆಚ್ಚಿಸಬಹುದು.
ಮಕರ ರಾಶಿ
ಮಕರ ರಾಶಿಯಲ್ಲಿ ಮಂಗಳ 7ನೇ ಮನೆಯಲ್ಲಿ ಇದೆ. ಮಂಗಳನ ಈ ಸ್ಥಾನ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶ ದೊರೆಯಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನದ ದೃಷ್ಟಿಯಿಂದ ಈ ಸಮಯ ಉತ್ತಮವಾಗಿರಲಿದೆ, ಆರೋಗ್ಯ ಚೆನ್ನಾಗಿರಲಿದೆ.
ಕುಂಭ ರಾಶಿ
ಕುಂಭ ರಾಶಿಯಲ್ಲಿ ಮಂಗಳ 6ನೇ ಮನೆಯಲ್ಲಿದೆ, ಇದರಿಂದಾಗಿ ಇದು ನೀಡುವ ಫಲಿತಾಂಶ ಕೂಡ ನಿಮಗೆ ಮಂಗಳಕರವಾಗಿರಲಿದೆ. ಮಂಗಳನ ಸಂಚಾರದಿಂದ ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ. ಆರ್ಥಿಕ ದೃಷ್ಟಿಯಿಂದಲೂ ಈ ಸಮಯ ಅನುಕೂಲಕರವಾಗಿದೆ. ಕುಟುಂಬ ಜೀವನದಲ್ಲಿ ಸಂತೋಷವಿರಲಿದೆ. ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಮೀನ ರಾಶಿ
ಮೀನ ರಾಶಿಯಲ್ಲಿ ಮಂಗಳ 5ನೇ ಮನೆಯಲ್ಲಿ ಇದೆ, ಮಂಗಳನ ಈ ಸ್ಥಾನ ಕೂಡ ನಿಮಗೆ ಅನುಕೂಲಕರ ಫಲಿತಾಂಶವನ್ನೇ ನೀಡಲಿದ್ದಾನೆ. ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳು ಈ ಸಮಯದಲ್ಲಿ ಸವಾಲು ಎದುರಿಸಬಹುದು. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು, ಆರೋಗ್ಯ ವೃದ್ದಿಸಲು ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications