Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ದಿನ ಭವಿಷ್ಯ ಪ್ರಕಾರ ಮಾರ್ಚ್ ತಿಂಗಳ ಮೊದಲ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಮಾರ್ಚ್ 1 ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ನೀವು ಖರ್ಚಿನ ಕಡೆಗೆ ಗಮನಹರಿಸಬೇಕು, ಅನಗ್ಯತ ಖರ್ಚುಗಳನ್ನು ನಿಯಂತ್ರಿಸುವುದು ಒಳ್ಳೆಯದು. ನಿಮ್ಮ ಸಂಗಾತಿ ಜೊತೆ ಹೇಳದೆ ಇರುವ ವಿಷಯವನ್ನು ಇಂದು ಹೇಳುವಿರಿ.
ವೃಷಭ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ಬೇರೆಯವರ ಗಾಡಿ ಓಡಿಸಬೇಡಿ. ವೃತ್ತಿ ಬದುಕಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.

ಮಿಥುನ ರಾಶಿ
ಕೆಲಸ ಕಾರ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ನೀವು ನಿಮ್ಮ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಕೆಲಸದಲ್ಲಿ ಒತ್ತಡ ಅಧಿಕವಿರಲಿದೆ, ಹಣದ ವ್ಯವಹಾರ ಮಾಡುವಾಗ ಜಾಗ್ರತೆವಹಿಸಿ. ಆರ್ಥಿಕವಾಗಿ ಈ ದಿನ ಅನುಕೂಲಕರವಾಗಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ, ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ. ಕುಟುಂಬದ ವಿಷಯದಲ್ಲಿ ಹಿರಿಯರ ಸಲಹೆಯನ್ನು ನಿರ್ಲಕ್ಷ್ಯ ಮಾಡಲು ಹೋಗಬೇಡಿ.ಕುಟುಂಬ ಜೀವನ ಚೆನ್ನಾಗಿರಲಿದೆ.
ಸಿಂಹ ರಾಶಿ
ಹಣಕಾಸಿನ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ನೀವು ಅಂದುಕೊಂಡಂತೆಯೇ ನಡೆಯಲಿದೆ, ಮಕ್ಕಳ ಕಡೆಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ,ಕುಟುಂಬ ಬದುಕು ಚೆನ್ನಾಗಿರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ, ಸಾಲ ಮಾಡಿದ್ದರೆ ಅದನ್ನು ಮರಳಿಸಲು ಸಾಧ್ಯವಾಗುವುದು, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಕೆಲ ಹಠಾತ್ ಖರ್ಚುಗಳು ಬರಬಹುದು, ಆದರೆ ದೊಡ್ಡ ಸಮಸ್ಯೆ ಅಂತ ಏನೂ ಇರಲ್ಲ.
ತುಲಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆಸ್ತಿ ಸಂಬಂಧಿಸಿದ ವ್ಯವಹಾರ ಮಾಡುವುದಾದರೆ ನೀವು ಹೆಚ್ಚು ಜಾಗ್ರತೆವಹಿಸಬೇಕು. ಕೆಲಸದ ಕಡೆಗೆ ಹೆಚ್ಚು ಗಮನಹರಿಸಬೇಕು. ಚಿಕ್ಕ ನಿರ್ಲಕ್ಷ್ಯದಿಂದಾಗಿ ನಷ್ಟ ಅಧಿಕವಾಗಬಹುದು.
ವೃಶ್ಚಿಕ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಬೇಕು, ಹಣದ ವಿಷಯದಲ್ಲಿ ಈ ದಿನ ನಿಮಗೆ ಉತ್ತಮವಾಗಿರಲಿದೆ, ಹಣಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಉತ್ತಮ ಫಲ ಸಿಗಲಿದೆ, ಕೆಲಸದ ಕಡೆಗೆ ಗಮನಹರಿಸಬೇಕು. ಪಾಲುದಾರಿಕೆಯ ವ್ಯವಹಾರ ಮಾಡುವವರು ಜಾಗ್ರತೆವಹಿಸಬೇಕು.
ಧನು ರಾಶಿ
ಈ ದಿನ ಆರ್ಥಿಕವಾಗಿ ತುಂಬಾ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ತುಂಬಾ ಉತ್ತಮವಾಗಿ ನಡೆಯಲಿದೆ. ಕೆಲಸಕ್ಕೆ ಸಂಬಂಧಿಸಿದ ಅಡೆತಡೆ ದೂರಾಗಲಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ.
ಮಕರ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಹಣದ ವಿಷಯದಲ್ಲಿ ಉತ್ತಮವಾಗಿದೆ, ನಿಮ್ಮ ಸೌಕರ್ಯಕ್ಕಾಗಿ ಹಣ ಖರ್ಚು ಮಾಡುತ್ತೀರಿ.ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಕುಂಭ ರಾಶಿ
ಹಣದ ವಿಷಯದಲ್ಲಿ ಈ ದಿನ ಖರ್ಚು ಹೆಚ್ಚಿರಲಿದೆ, ಆಸ್ತಿ ವ್ಯವಹಾರ ಮಾಡುವವರು ಲಾಭ ಗಳಿಸುತ್ತೀರಿ. ತಾಯಿಯ ಆರೋಗ್ಯದ ಕಡೆಗೆ ಗಮನಹರಿಸಿ. ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿದೆ.
ಮೀನ ರಾಶಿ
ಈ ದಿನ ನಿಮ್ಮನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಗೆ ಪರಿಹಾರ ಸಿಗಲಿದೆ, ವೈವಾಹಿಕ ಜೀವನದಲ್ಲಿನ ಭಿನ್ನಾಭಿಪ್ರಾಯತೆ ದೂರಾಗಲಿದೆ. ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಬದುಕು ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
