Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ಮಾರ್ಚ್ 10ರ ದಿನ ಭವಿಷ್ಯ:ವೃಷಭ ರಾಶಿಯವರಿಗೆ ಶುಭ, ಉಳಿದ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಮಾರ್ಚ್ 10ರ ಈ ದಿನ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಮಗೆ ಶುಭವಾಗಿದೆ, ಆರ್ಥಿಕವಾಗಿ ತುಂಬಾನೇ ಚೆನ್ನಾಗಿರಲಿದೆ, ಈ ದಿನ ನಿಮ್ಮ ಆರ್ಥಿಕ ಪ್ರಯತ್ನಕ್ಕೆ ಉತ್ತಮ ಪ್ರತಿಫಲ ದೊಎಯಲಿದೆ. ಅಲ್ಲದೆ ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ. ನಿಮ್ಮ ಕೆಲಸ-ಕಾರ್ಯಗಳನ್ನು ಸಮಯಕ್ಕೆ ಪೂರ್ಣಗೊಳ:ಿಸಲು ಸಾಧ್ಯವಾಗಲಿದೆ. ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ. ಇನ್ನು ಕುಟುಂಬ ಜೀವನದ ಕಡೆಗೆ ಗಮನ ಹರಿಸಬೇಕು, ನೀವು ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿದರೆ ನಿಮಮ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ದಿನ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿ ಇರಲಿದೆ, ವ್ಯಾಪಾರಿಗಳು ಈ ದಿನ ನೀವು ಜಾಗ್ರತೆವಹಿಸಬೇಕು. ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ, ಆರ್ಥಿಕವಾಗಿ ಪ್ರಯೋಜನಕಾರಿಯಾಗಿದೆ.ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಆಯಾಸ ಅನಿಸಿದಾಗ ನೀವು ವಿಶ್ರಾಂತಿ ಕಡೆಗೂ ಗಮನಹರಿಸಬೇಕು.
ಮಿಥುನ ರಾಶಿ
ಈ ದಿನ ನಿಮಗೆ ಶುಭ ದಿನವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಬಾಂಧವ್ಯ ಚೆನ್ನಾಗಿರಲಿದೆ, ಪ್ರತಿಕೂಲ ಸಂದರ್ಭದಲ್ಲಿ ನಿಮ್ಮ ಸಂಗಾತಿಯ ಬೆಂಬಲ ದೊರೆಯಲಿದೆ. ರಾಜಕಾರಣಿಗಳು ಈ ಬಗ್ಗೆ ಜಾಗ್ರತೆವಹಿಸಿ. ಈ ದಿನ ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಈ ದಿನ ಆರ್ಥಿಕವಾಗಿ ಅಷ್ಟೊಂದು ಅನುಕೂಲಕರವಲಲ್, ಸಾಲ ಪಡೆಯಬೇಕಾಗಿ ಬರಬಹುದು. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಕರ್ಕ ರಾಶಿ
ಕರ್ಕ ರಾಶಿಯವರು ಈ ದಿನ ಭಾವನಾತ್ಮಕವಾಗಿ ಸ್ವಲ್ಪ ದುರ್ಬಲವಾಗಿರಬಹುದು, ನೀವು ಮನಸ್ಸು ಶಾಂತವಾಗಿಸಲು ಧ್ಯಾನದ ಕಡೆಗೆ ಗಮನಹರಿಸಿ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿದೆ. ಈ ದಿನ ಆರ್ಥಿಕವಾಗಿ ಪ್ರಯೋಜನಕಾರಿಯಾಗಿದೆ. ಇನ್ನು ಕೆಲಸದ ಹುಡುಕಾಟದಲ್ಲಿ ಇರುವವರು ತಮ್ಮ ಪ್ರಯತ್ನವನ್ನು ಮತ್ತಷ್ಟು ವೇಗದಿಂದ ಮಾಡಿ. ಆರೋಗ್ಯದ ದೃಷ್ಟಿಯಿಂದ ಈ ದಿನ ಅನುಕೂಲರವಾಗಿದೆ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆದರೆ ಕೆಲ ರಹಸ್ಯ ಶತ್ರುಗಳು ನಿಮಗೆ ತೊಂದರೆ ನೀಡಲು ಪ್ರಯತ್ನಿಸಬಹುದು, ನೀವು ಜಾಗ್ರತೆ ಮಾಡಬೇಕು. ಆರ್ಥಿಕ ಪರಿಸ್ಥಿತಿ ನಿಮಗೆ ಅನುಕೂಲಕರವಾಗು ಬದಲಾಗಲಿದೆ. ಈ ದಿನ ನೀವು ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬಾರದು, ವಾಹನವನ್ನು ನೋಡಿಕೊಂಡು ಚಲಾಯಿಸಿ. ಕುಟುಂಬ ಬದುಕು ತುಂಬಾ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಸಾಧಾರಣವಾಗಿರಲಿದೆ. ಮಾನಸಿಕ ಒತ್ತಡಗಳು ಹೆಚ್ಚಿರಬಹುದು. ವ್ಯಾಪಾರಸ್ಥರು ಈ ದಿನ ನಿರೀಕ್ಷೆ ಮಾಡಿದ ಲಾಭ ಪಡೆಯಲು ಕಷ್ಟವಾಗಬಹುದು, ಆದರೆ ನಿರಾಸೆ ಬೇಡ, ಶೀಘ್ರದಲ್ಲಿಯೇ ನಿಮ್ಮ ಪ್ರಯತ್ನಕ್ಕೆ ಉತ್ತಮ ಪ್ರತಿಫಲ ದೊರೆಯಲಿದೆ. ವೃತ್ತಿ ಬದುಕಿನಲ್ಲಿ ನೀವು ಕೆಲ ಅಡೆತಡೆಗಳನ್ನು ಎದುರಿಸಬಹುದು. ಅತಿಯಾದ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವುದು.
ತುಲಾ ರಾಶಿ
ಈ ದಿನ ನಿಮಗೆ ಶುಭವಾಗಿದೆ, ನಿಮ್ಮ ಕೆಲಸ ಕಾರ್ಯಗಳು ಯೋಜನೆಯಂತೆಯೇ ನಡೆಯಲಿದೆ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ವಿದ್ಯಾರ್ಥಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಕುಟುಂಬದಲ್ಲಿ ಏನಾದರು ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ವಿದ್ಯರ್ಥಿಗಳಿಗೆ ಈ ದಿನ ಅನುಕೂಲಕರವಾಗಿದೆ. ನಿಮ್ಮ ವಿಷಯದಲ್ಲಿ ಮೂರನೇಯವರು ಮೂಗು ತೂರಿಸಲು ಅವಕಾಶ ನೀಡಬೇಡಿ, ಕೆಲಸದಲ್ಲಿ ನೀವು ಹೆಚ್ಚು ಗಮನಹರಿಸಬೇಕು.
ವೃಶ್ಚಿಕ ರಾಶಿ
ಈ ದಿನ ನಿಮ್ಮ ಕೆಲಸ ಕಾರ್ಯಗಳು ಸಮಯಕ್ಕೆ ಪೂರ್ಣವಾಗಲಿದೆ, ವೃತ್ತಿ ಜೀವನದಲ್ಲಿ ನೀವು ಉತ್ತಮ ಅವಕಾಶ ಪಡೆಯುತ್ತೀರಿ, ಈ ದಿನ ನೀವು ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ವ್ಯಾಪಾರಸ್ಥರಿಗೆ ಈ ದಿನ ಅನುಕಲಕರವಾಗಿದೆ. ಅಲ್ಲದೆ ಅಪೂರ್ಣವಾಗಿದ್ದ ಕೆಲಸವು ಪೂರ್ಣವಾಗಲಿದೆ. ಹಾಗಾಗಿ ಈ ದಿನ ನೀವು ಸ್ವಲ್ಪ ನಿರಾಳವಾಗುತ್ತೀರಿ.
ಧನು ರಾಶಿ
ಈ ದಿನ ಹಣಕಾಸಿನ ವಿಷಯದಲ್ಲಿ ಅಷ್ಟೊಂದು ಅನುಕೂಲಕರವಲ್ಲ, ಕೆಲಸದ ಕಡೆಗೆ ಹೆಚ್ಚು ಗಮನಹರಿಸಬೇಕು. ಹಣಕಾಸಿನ ವ್ಯವಹಾರದ ಬಗ್ಗೆ ಜಾಗ್ರತೆ ಮೂಡಿಸಬೇಕು. ಈ ದಿನ ನೀವು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರೆ ಚೆನ್ನಾಗಿ ಆಲೋಚಿಸಿ ಮಾಡಬೇಕು. ಅಲ್ಲದೆ ಯಾರನ್ನೇ ಆಗಲಿ ಕುರುಡಾಗಿ ನಂಬಬೇಡಿ. ಸಂಬಂಧದಲ್ಲಿ ಭಿನ್ನಾಭಿಪ್ರಾಯ ಉಂಟಾಗದಂತೆ ಜಾಗ್ರತೆವಹಿಸಿ, ಏನೇ ಅಸಮಧಾನವಿದ್ದರೂ ಮಾತುಕತೆ ಮೂಲಕ ಬಗೆಹರಿಸಿ.
ಮಕರ ರಾಶಿ
ಈ ದಿನ ಉತ್ತಮವಾಗಿರಲಿದೆ, ವ್ಯಾಪಾರಸ್ಥರಿಗೆ ಈ ದಿನ ತುಂಬಾ ಉತ್ತಮವಾಗಿರಲಿದೆ, ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ಈ ದಿನ ಕೆಲಸ ಕಾರ್ಯಗಳು ನೀವು ಅಂದು ಕೊಂಡಂತೆಯೇ ನಡೆಯುವುದರಿಂದ ಖುಷಿಯಾಗಿರುತ್ತೀರಿ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ಕುಂಭ ರಾಶಿ
ಈ ದಿನ ಸಕರಾತ್ಮಕವಾಗಿ ಈ ದಿನ ಉತ್ತಮವಾಗಿರಲಿದೆ, ಆಸ್ತಿಗೆ ಸಂಬಂಧಿಸಿದ ವ್ಯವಹಾರ ಮಾಡಿದರೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ನೀವು ಪ್ರಮುಖ ಕೆಲಸದತ್ತ ಗಮನಹರಿಸಿದರೆ ಒಳ್ಳೆಯದು. ಆರೋಗ್ಯ ಸಂಬಂಧಿತ ಮಸ್ಯೆವಿದ್ದರೆ ಜಾಗ್ರತೆಯಿಂದ ಓಡಿಸಿ.
ಮೀನ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆ ಮೂಡಿಸಬೇಕು, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಆರೋಗ್ಯ ಚೆನ್ನಾಗಿರಲಿದೆ. ಕೆಲಸದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಅನುಕೂಲಕರವಾಗಿದೆ, ಅಪೂರ್ಣವಾಗಿರುವ ಕೆಲಸವು ಈ ಅವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಲಿದೆ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ ಎಂದು ಸಲಹೆ ನೀಡಲಾಗುವುದು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
