Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ
ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 13 (March 13 Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿ ಜನರಿಗೆ ಇಂದು ಪ್ರಯಾಣ ಮಾಡುವ ದಿನ. ನೀವು ಮನೆಯಿಂದ ಹೊರಗೆ ಉದ್ಯೋಗ ಮಾಡುವ ಮಂದಿಯಾಗಿದ್ದರೆ ಈ ದಿನ ಪ್ರಯಾಣಗಳಲ್ಲಿ ತೊಡಗುವಿರಿ. ಯಾರಿಂದಾದರು ನಿಮಗೆ ಹಣ ಬರುವುದು ಬಾಕಿ ಇದ್ದರೆ ಈ ದಿನದಂದು ಪೂರ್ಣ ಹಣ ಕೈ ಸೇರಬಹುದು.
ವೃಷಭ ರಾಶಿ
ವೃಷಭ ರಾಶಿ ಜನರಿಗೆ ಇಂದು ಅನುಕೂಲಕರ ದಿನ. ನೀವು ಮಾಡಬೇಕಿದ್ದ ಕೆಲಸಕ್ಕೆ ಹಣಕಾಸಿನ ವಿಚಾರವು ಅಡ್ಡಿಯಾಗಲಿದೆ. ಪ್ರಾಮಾಣಿಕ ಕೆಲಸದಲ್ಲಿ ನಿಮಗೆ ಸಮಸ್ಯೆಗಳು ಬರಬಹುದು. ಅನೇಕರಿಗೆ ಈ ದಿನವು ದೊಡ್ಡ ಕೆಲಸಗಳಲ್ಲಿ ಭಾಗಿಯಾಗಬಹುದು.

ಮಿಥುನ ರಾಶಿ
ಮಿಥುನ ರಾಶಿ ಜನರಿಗೆ ಈ ದಿನವು ಅನುಕೂಲಕರ ಸಮಯ ತರಲಿದೆ. ಆಪ್ತರೊಬ್ಬರಿಂದ ಬರಬೇಕಿದ್ದ ಹಣ ನಿಮ್ಮ ಕೈ ಸೇರಲಿದೆ. ದೇವಾಲಯ ಭೇಟಿಯಂತಹ ವಿಚಾರದಲ್ಲಿ ನಿಮಗೆ ಶುಭವಿದೆ. ನ್ಯಾಯಾಲಯ ಸಂಬಂಧಿತ ವಿಚಾರದಲ್ಲಿ ಶುಭವಿದೆ.
ಕರ್ಕ ರಾಶಿ
ಕರ್ಕ ರಾಶಿ ಜನರಿಗೆ ಈ ದಿನ ಶುಭವಿದೆ. ಅನೇಕರಲ್ಲಿ ಇಂದು ವ್ಯವಹಾರ ಲಾಭದ ದಿನ. ನಿಮ್ಮ ಹಣಕಾಸಿನ ವಿಚಾರದಲ್ಲಿ ಈ ದಿನ ಎಚ್ಚರಿಕೆಯ ವ್ಯವಹಾರಗಳ ಮಾಡುವುದು ಉತ್ತಮ. ಸಾಲ ಸಂಬಂಧಿತ ವಿಚಾರವಾಗಿ ನೀವು ಹಲವರಿಂದ ಸಲಹೆ ಪಡೆಯುವಿರಿ.
ಸಿಂಹ ರಾಶಿ
ಸಿಂಹ ರಾಶಿಯ ಜನರಿಗೆ ಇಂದು ಅನುಕೂಲಕರ ದಿನ. ನೀವು ಮಾಡಬೇಕಿದ್ದ ಹಲವು ಕೆಲಸಗಳನ್ನು ನಿಗದಿತ ಸಮಯದೊಳಗೆ ಮಾಡಿ ಮುಗಿಸಬಹುದು. ಪ್ರಯಾಣಗಳಲ್ಲಿ ಭಾಗಿಯಾಗುವುದು ನಿಮಗೆ ಶ್ರಮ ಮತ್ತು ದಣಿವು ತರುವ ಕೆಲಸ. ಹೊಸ ವ್ಯಾಪಾರದಲ್ಲಿ ಲಾಭವಿದೆ ವಾಹನ ಸಂಬಂಧಿತ ವಿಚಾರದಲ್ಲಿ ಶುಭವಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯ ಜನರಿಗೆ ಈ ದಿನವು ಬಹಳ ಅನುಕೂಲ ತರಲಿದೆ. ನಿಮ್ಮ ಉಳಿತಾಯದ ಹಣವನ್ನು ದೊಡ್ಡ ಹೂಡಿಕೆಗೆ ಬಳಸಬಹುದು. ಮನೆಯಲ್ಲಿ ಆರ್ಥಿಕ ವಿಚಾರ ಸಂಬಂಧಿತ ಚರ್ಚೆಗಳು ನಿಮಗೆ ಚಿಂತೆ ತರಬಹುದು. ದೈನಂದಿನ ಕೆಲಸಗಳಲ್ಲಿ ಹಿನ್ನಡೆ ಅನುಭವಿಸಬಹುದು.
ತುಲಾ ರಾಶಿ
ತುಲಾ ರಾಶಿಯ ಜನರಿಗೆ ಈ ದಿನವು ಅನುಕೂಲಕರ. ನೀವು ಬಯಸಿದಂತೆ ಈ ದಿನವು ಲಾಭದಾಯಕ. ಗೃಹಿಣಿಯರು ಇಂದು ಧನಲಾಭ ನೋಡಬಹುದು. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಇದೆ. ಬಹಳ ಸಮಯದ ನಿಮ್ಮ ವ್ಯವಹಾರವೊಂದು ಕೈಗೂಡಲಿದೆ. ಆಪ್ತರ ಭೇಟಿಯಿಂದ ನೆಮ್ಮದಿಯ ಸುದ್ದಿ ಇದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಇಂದು ಚಿಂತೆಯ ದಿನ. ಯಾವುದಾದರು ವಿಚಾರದಲ್ಲಿ ನಿಮಗೆ ಚಿಂತೆ ಕಾಡಬಹುದು. ಹಣಕಾಸು ಹಾಗೂ ಉದ್ಯೋಗ ಸಂಬಂಧಿತ ವಿಚಾರವಾಗಿ ಹೆಚ್ಚಿನ ಸಮಯ ಚಿಂತೆಯಲ್ಲಿ ಮುಳುಗುವಿರಿ. ನಿಮ್ಮ ಆರೋಗ್ಯದ ಕಡೆಗೂ ಗಮನವಿಡಬೇಕಿದೆ.
ಧನು ರಾಶಿ
ಧನು ರಾಶಿ ಜನರಿಗೆ ಈ ದಿನವು ಅನುಕೂಲಕರ ನಿಮ್ಮ ಹಣಕಾಸಿನ ವಿಚಾರದಲ್ಲಿ ಬಹಳ ಸಮಯದಿಂದ ಇದ್ದಂತಹ ಸಮಸ್ಯೆಗಳು ನಿವಾರಣೆಯಾಗುವ ಬದಲಾಗಿ ಮತ್ತೆ ಬಿಕ್ಕಟ್ಟು ಬರಬಹುದು. ಮನೆಯ ವಿಚಾರವೊಂದರಲ್ಲಿ ನಿಮಗೆ ಬೆಂಬಲ ವ್ಯಕ್ತವಾಗದೆ ಇರಬಹುದು.
ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ಪ್ರಯಾಣಗಳಲ್ಲಿ ಭಾಗಿಯಾಗುವ ದಿನ. ನಿಮ್ಮ ಹಣಕಾಸು ವಿಚಾರವಾಗಿ ಅಡ್ಡಿಗಳಿವೆ. ಬ್ಯಾಂಕ್, ನ್ಯಾಯಾಲಯ ಸಂಬಂಧಿತ ವಿಚಾರದಲ್ಲಿ ಓಡಾಟಗಳಿವೆ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಾಗುವ ದಿನ ಎನ್ನಬಹುದು.
ಕುಂಭ ರಾಶಿ
ಕುಂಭ ರಾಶಿ ಜನರಲ್ಲಿ ಈ ದಿನ ಉತ್ತಮವಾಗಿರಲಿದೆ. ವಿದ್ಯಾರ್ಥಿಗಳಿಗೆ ಈ ದಿನ ಶುಭವಿದೆ. ಪ್ರಯಾಣಗಳಲ್ಲಿ ಉತ್ತಮ ಫಲಿತಾಂಶ ಪಡೆಯಲಿದ್ದೀರಿ. ಮಹಿಳೆಯರು ವಾಹನ ಚಲಾಯಿಸುವಾಗ ಎಚ್ಚರವಹಿಸಿ.
ಮೀನ ರಾಶಿ
ಮೀನ ರಾಶಿಯ ಜನರಿಗೆ ಈ ದಿನ ಉತ್ತಮವಾಗಿರಲಿದೆ. ಯಾರಿಂದಾದರು ಹಣ ಪಡೆಯುವುದು ಅಥವಾ ನೀವು ನೀಡುವುದು ಬಾಕಿ ಉಳಿದಿದ್ದರೆ ಈ ದಿನದಂದು ಪೂರ್ಣ ಮಾಡುವುದು ಉತ್ತಮ. ಮನೆಯಲ್ಲಿ ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ.



Click it and Unblock the Notifications