Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ಮಾರ್ಚ್ 13ರ ಈ ದಿನ ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಜ್ಯೋತಿಷ್ದದ ಪ್ರಕಾರ ಮಾರ್ಚ್ 13 ಈ ದಿನ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಿನ ಅನುಕೂಲಕರವಾಗಿದೆ, ಕೆಲಸ ಕಾರ್ಯದಲ್ಲಿ ತುಂಬಾ ನಿರತವಾಗಿರಲಿದೆ, ಈ ದಿನ ನೀವು ಕುಟುಂಬದ ವಿಷಯದ ಕಡೆಗೆ ಗಮನಹರಿಸಬೇಕು, ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗವಿರಲಿದೆ. ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ.
ವೃಷಭ ರಾಶಿ
ಈ ದಿನ ನಿಮಗೆ ತುಂಬಾನೇ ಅನುಕೂಲಕರವಾಗಿದೆ, ರಾಜಕಾರಣಿಗಳಿಗೆ ತುಂಬಾನೇ ಶುಭವಾಗಿದೆ. ಕಾನೂನು ಸಂಬಂಧಿತ ವಿಷಯದಲ್ಲಿ ಗೆಲುವು ಸಿಗಲಿದೆ,ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ವ್ಯಾಪಾರಿಗಳು ಈ ದಿನ ಆರ್ಥಿಕ ಲಾಭ ಪಡೆಯಬಹುದು, ಆರ್ಥಿಕವಾಗಿ ತುಂಬಾ ಪ್ರಯೋಜನಕಾರಿಯಾಗಿದೆ. ಯಾವುದೇ ವಿವಾದಾತ್ಮಕ ವಿಷಯದಲ್ಲಿ ತೊಡಗಿಕೊಳ್ಳದಂತೆ ಜಾಗ್ರತೆವಹಿಸಿ.

ಮಿಥುನ ರಾಶಿ
ಈ ದಿನ ನಿಮಗೆ ತುಂಬಾನೇ ಉತ್ತಮವಾಗಿರಲಿದೆ, ನೀವು ನಿರೀಕ್ಷೆ ಮಾಡಿರುವುದಕ್ಕಿಂತಲೂ ಅಧಿಕ ಲಾಭ ಪಡೆಯಲು ಸಾಧ್ಯವಾಗಲಿದೆ, ಹಾಗಾಗಿ ಈ ದಿನ ವ್ಯಾಪಾರಸ್ಥರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಉತ್ತಮ ಫಲ ಸಿಗಲಿದೆ. ನಿಮ್ಮನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಗೆ ಈ ದಿನ ಪರಿಹಾರ ಸಿಗಲಿದೆ, ಮನೆಯೊಳಗಿನ ಸಮಸ್ಯೆ ಶಾಂತವಾಗಲಿದೆ, ಒಟ್ಟಿನಲ್ಲಿ ಎಲ್ಲಾ ರೀತಿಯಿಂದಲೂ ಈ ದಿನ ನಿಮಗೆ ಅನುಕೂಲಕರವಾಗಿದೆ.
ಕರ್ಕ ರಾಶಿ
ಈ ದಿನ ನಮಗೆ ಮಿಶ್ರಫಲಿತಾಂಶ, ನೀವು ಹಣಕಾಸಿನ ವಿಷಯದ ಬಗ್ಗೆ ಜಾಗ್ರತೆ ಮಾಡಬೇಕು, ಅನಗ್ಯತ ಖರ್ಚುಗಳು ಬರಬಹುದು. ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಹೆಚ್ಚು ಗಮನ ನೀಡದೆ ಹೋದರೆ ನಷ್ಟವನ್ನು ಅನುಭವಿಸಬಹುದು, ಅಪೂರ್ಣವಾಗಿರುವ ಕೆಲಸ ಕಾರ್ಯಗಳು ಪೂರ್ಣವಾಗದೆ ಅದರ ಒತ್ತಡ ಕೂಡ ಇರಲಿದೆ. ಮಕ್ಕಳ ಕಡೆಯಿಂದ ಖುಷಿಯ ಸುದ್ದಿ ಪಡೆಯುತ್ತೀರಿ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಸಿಂಹ ರಾಶಿ
ಈ ದಿನ ನಿಮ್ಮ ಕೆಲಸ ಕಾರ್ಯವನ್ನು ಆಲೋಚಿಸಿ ಮಾಡಬೇಕು, ಕೆಲ ಶತ್ರುಗಳು ನಿಮ್ಮ ವಿರುದ್ಧ ಪಿತೂರಿ ಮಾಡಬಹುದು. ಕೆಲಸದಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು, ವ್ಯಾಪಾರಸ್ಥರು ಈ ದಿನ ಜಾಗ್ರತೆವಹಿಸಬೇಕು, ಅದರಲ್ಲಿಯೂ ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುವವರು ನಿಮ್ಮ ವ್ಯವಹಾರದ ಕಡೆಗೆ ಗಮನಹರಿಸಿ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ, ನಿಮ್ಮ ಕಠಿಣ ಶ್ರಮಕ್ಕೆ ಉತ್ತಮ ಫಲ ಸಿಗಲಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ನ್ಯಾಯಾಲಯಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ಈ ದಿನ ಅನುಕೂಲಕರವಾಗಿದೆ. ಆರೋಗ್ಯದ ಸದಸ್ಯರ ಆರೋಗ್ಯ ಸಮಸ್ಯೆ ನಿಮ್ಮ ಚಿಂತೆಗೆ ಕಾರಣವಾಗಿರಬಹುದು. ನಿಮ್ಮ ಮನಸ್ಸಿನ ಒತ್ತಡ ಕಡಿಮೆ ಮಾಡಲು ನೀವು ಧ್ಯಾನದ ಕಡೆಗೆ ಗಮನಹರಿಸಿ. ನಿಮ್ಮ ಹಾಗೂ ಸಂಗಾತಿ ಜೊತೆಗೆ ಭಿನ್ನಾಭಿಪ್ರಾಯ ಉಂಟಾದರೆ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ.
ತುಲಾ ರಾಶಿ
ಈ ದಿನ ನಿಮಗೆ ಅನುಕೂಲಕರ, ಜೀವನದಲ್ಲಿ ಕೆಲ ಸಮಸಯೆಗಳಿದ್ದರೆ ಅದು ಬಗೆಹರಿಯಲಿದೆ, ಆದರೆ ನೀವು ಕೋಪದಿಂದ ವರ್ತಿಸಬೇಡಿ ಎಂದು ಸಲಹೆ ನೀಡಲಾಗುವುದು. ಆರ್ಥಿಕವಾಗಿ ಈ ದಿನ ಅನುಕೂಲಕರವಾಗಿದೆ, ಹಿರಿಯರ ಬೆಂಬಲ ನಿಮಗೆ ಸಿಗಲಿದೆ. ವೈವಾಹಿಕ ಬದುಕಿನಲ್ಲಿ ಪ್ರೀತಿ, ಸಾಮರಸ್ಯ ಇರಲಿದೆ. ಪ್ರೇಮಿಗಳಿಗೂ ಈ ದಿನ ವಿಶೇಷವಾಗಿರಲಿದೆ. ಅಪೂರ್ಣವಾಗಿರುವ ಕೆಲಸವು ಸಮಯಕ್ಕೆ ಪೂರ್ಣವಾಗಲಿದೆ.
ವೃಶ್ಚಿಕ ರಾಶಿ
ಈ ದಿನ ಹಣದ ವಿಷಯದಲ್ಲಿ ಅಷ್ಟೊಂದು ಅನುಕೂಲಕರವಲ್ಲ, ಖರ್ಚು ಹೆಚ್ಚಿರಬಹದು, ವ್ಯಾಪಾರಿಗಳಿಗೂ ಈ ದಿನ ಸವಾಲಿನ ದಿನ, ವಿದ್ಯಾರ್ಥಿಗಳು ಈ ದಿನ ನಿಮ್ಮ ಕೆಲಸ ಕಾರ್ಯದ ಕಡೆಗೆ ತುಂಬಾನೇ ಗಮನಹರಿಸಬೇಕಾಗುತ್ತದೆ. ಹಣಕಾಸಿನ ವಿಷಯಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಉತ್ತಮ ಪ್ರತಿಫಲ ಸಿಗಲಿದೆ. ಹಣದ ಹೂಡಿಕೆಗೆ ಮಾಡುವುದಾದರೆ ಜಾಗ್ರತೆಯಿಂದ ಮಾಡಿ, ಅನಗ್ಯತ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು.
ಧನು ರಾಶಿ
ಈ ದಿನ ನಿಮ್ಮ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ, ಸಾಲ ಮಾಡಿದ್ದರೆ ಅದನ್ನು ಮರುಪಾವತಿಸುವ ಒತ್ತಡ ನಿಮ್ಮ ಮೇಲಿರಬಹುದು. ಬೇಡದ ವಿಷಯದಲ್ಲಿ ಮೂಗು ತೂರಿಸಲು ಹೋಗಬೇಡಿ. ಅನುಭವಿಗಳು ಕೆಲಸದಲ್ಲಿ ನೀಡಿದ ಸಲಹೆಯನ್ನು ಪಾಲಿಸುವುದು ಒಳ್ಳೆಯದು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುವವರೆಗೆ ಈ ದಿನ ಅನುಕೂಲಕರವಾಗಿದೆ.
ಮಕರ ರಾಶಿ
ಈ ದಿನ ಅನಾವಶ್ಯಕ ವಿಷಯಗ ಕಡೆಗೆ ಗಮನಹರಿಸಬೇಡಿ, ನಿಮ್ಮ ಕೋಪಕ್ಕೆ ಕಡಿವಾಣ ಹಾಕಿದರೆ ಒಳ್ಳೆಯದು. ಈ ದಿನ ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಆರ್ಥಿಕ ಸಮಸ್ಯೆಗೆ ಪರಿಹಾರ ಸಿಗಲಿದೆ. ಈ ದಿನ ಆತುರದಿಂದ , ಮಾನಸಿಕ ಒತ್ತಡದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗುವುದು.
ಕುಂಭ ರಾಶಿ
ಈ ದಿನ ನಿಮಗೆ ತುಂಬಾ ಉತ್ತಮವಾಗಿರಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಸಾಮರಸ್ಯ ಚೆನ್ನಾಗಿರಲಿದೆ. ರಾಜಕಾರಣಿಗಳಿಗೆ ಈ ದಿನ ಉತ್ತಮವಾಗಿರಲಿದೆ, ನಿಮ್ಮ ಕೆಲಸ ಕಾರ್ಯದಲ್ಲಿ ಉತ್ತಮ ಬಡ್ತಿ ಸಿಗಲಿದೆ, ಆರೋಗ್ಯ ಚೆನ್ನಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಆರ್ಥಿಕವಾಗಿ ಪ್ರಯೋಜನಕಾರಿಯಾಗಿದೆ, ವ್ಯವಹಾರಸ್ಥರು ಉತ್ತಮ ಲಾಭ ಪಡೆಯುತ್ತೀರಿ, ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications