Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
March 16 Horoscope: ಹಣಕಾಸು ವಿಚಾರವಾಗಿ ಎಚ್ಚರದಿಂದ ವ್ಯವಹರಿಸಿ!
ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 16 (March 16 Horoscope)ರ ನಿಮ್ಮ ರಾಶಿಫಲ ನೋಡೋಣ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ಸೋಮವಾರವು ಬಹಳ ಅನುಕೂಲಕರ. ನಿಮ್ಮ ಹಣಕಾಸು ಪರಿಸ್ಥಿತಿ ಸುಧಾರಿಸಲಿದೆ. ಇದು ನಿಮಗೆ ನೆಮ್ಮದಿಯ ದಿನಕ್ಕೆ ಕಾರಣವಾಗಲಿದೆ. ಆಪ್ತರೊಬ್ಬರಿಂದ ನಿಮಗೆ ಹಣಕಾಸಿನ ಸಹಾಯ ಸಿಗಬಹುದು.
ವೃಷಭ ರಾಶಿ
ವೃಷಭ ರಾಶಿಯ ಜನರಲ್ಲಿ ಈ ದಿನ ಪ್ರಯಾಣಗಳ ಮಾಡಬೇಕಾಗುತ್ತದೆ. ಆಪ್ತರ ಸಲಹೆಯಂತೆ ನಿಮ್ಮ ಖರ್ಚುಗಳ ಮೇಲೆ ನಿಗಾ ಇಡಿ. ಮನೆಯ ಸದಸ್ಯರೊಬ್ಬರ ಅನಾರೋಗ್ಯ ವಿಚಾರವಾಗಿ ಆಸ್ಪತ್ರೆಗೆ ಪ್ರಯಾಣ ಮಾಡಬೇಕಾಗಿ ಬರಬಹುದು.

ಮಿಥುನ ರಾಶಿ
ಮಿಥುನ ರಾಶಿಯ ಜನರಿಗೆ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಹಣಕಾಸು ಸ್ಥಿತಿ ಸುಧಾರಿಸುವುದು ನಿಮ್ಮಲ್ಲಿ ಹೊಸ ಕೆಲಸಗಳಿಗೆ ಸ್ಪೂರ್ತಿ ನೀಡಲಿದೆ. ಯಾರ ಬಳಿಯಾದರು ನಿಮ್ಮ ಹಣ ಸಿಲುಕಿದ್ದರೆ ನಿಮ್ಮ ಶ್ರಮದಿಂದ ಕೈ ಸೇರಬಹುದು.
ಕರ್ಕ ರಾಶಿ
ನಿಮ್ಮ ಅನಾರೋಗ್ಯ ಸಂಬಂಧವಾಗಿ ನಿರ್ಲಕ್ಷ್ಯ ಮಾಡಬೇಡಿ. ನಿಮ್ಮಿಂದಾಗಿ ಆಪ್ತರೊಬ್ಬರಿಗೆ ಹಣಕಾಸಿನ ಸಹಾಯವಾಗುವುದು. ಪ್ರೇಮಿಗಳಿಗೆ ಈ ದಿನ ಬಹಳ ಶುಭವಿದೆ. ಉದ್ಯೋಗದ ಸ್ಥಳದಲ್ಲಿ ಒತ್ತಡಗಳಿವೆ. ನಿಮ್ಮ ಹಣಕಾಸು ವಿಚಾರದಲ್ಲಿ ಎಚ್ಚರಿಕೆಯಿಂದಿರಿ.
ಸಿಂಹ ರಾಶಿ
ಸಿಂಹ ರಾಶಿಯ ಜನರಿಗೆ ಈ ದಿನವು ಅನುಕೂಲಕರ, ನೀವು ಮಾಡುವ ಪ್ರತಿಯೊಂದು ಕೆಲಸದಲ್ಲಿ ನಿಮಗೆ ಅನುಕೂಲವಿದೆ. ಕೆಲಸದ ಸ್ಥಳದಲ್ಲಿ ನಿಮಗೆ ಸವಾಲುಗಳಿವೆ. ಧಾರ್ಮಿಕ ಕಾರ್ಯಕ್ರಮ ಸಂಬಂಧಿತ ವಿಚಾರದಲ್ಲಿ ಶುಭವಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯ ಜನರಿಗೆ ಈ ದಿನ ಅನುಕೂಲಕರ. ನೀವು ಮಾಡಬೇಕಿದ್ದ ಕೆಲಸಗಳು ಸರಾಗವಾಗಿ ನಡೆಯಲಿದೆ. ದೈನಂದಿನ ಕೆಲಸದಲ್ಲಿ ನಿಮಗೆ ಶುಭವಿದೆ. ಆಪ್ತರೊಬ್ಬರಿಂದ ನಿಮಗೆ ಪ್ರಯೋನಕಾರಿ ಸಲಹೆಗಳು ಸಿಗಲಿವೆ.
ತುಲಾ ರಾಶಿ
ತುಲಾ ರಾಶಿಯ ಜನರು ಈ ದಿನ ದೊಡ್ಡ ಕೆಲಸಗಳನ್ನು ಮಾಡಬೇಕಾಗುತ್ತದೆ. ಆಪ್ತರ ಜೊತೆ ಪ್ರಯಾಣ ಮಾಡುವಿರಿ. ಪ್ರವಾಸಗಳಲ್ಲಿ ಸಂತಸ ಅನುಭವಿಸುವಿರಿ. ಯಾರಿಗಾದರು ಹಣ ನೀಡಬೇಕಾಗಿ ಬರಬಹುದು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿ ಜನರಿಗೆ ಈ ದಿನ ಬಹಳ ಅನುಕೂಲ. ವ್ಯಾಪಾರ ಸಂಬಂಧಿತ ವಿಚಾರವಾಗಿ ನಿಮ್ಮಲ್ಲಿ ಶುಭವಿದೆ. ಪಂಚೇಂದ್ರಿಯ ಸಂಬಂಧಿತ ಸಮಸ್ಯೆಗಳ ಎದುರಿಸಿದ್ದರೆ ಈ ದಿನ ಅದರಿಂದ ಮುಕ್ತಿ ಪಡೆಯಬಹುದು. ಸವಾಲುಗಳನ್ನು ಎದುರಿಸುವುದು ಉತ್ತಮ.
ಧನು ರಾಶಿ
ಧನು ರಾಶಿ ಜನರಲ್ಲಿ ಈ ದಿನ ಸಾಮಾನ್ಯವಾಗಿರಲಿದೆ. ನೀವು ಯಾರಿಂದಾದರು ಹಣ ಪಡೆಯುವುದು ಬಾಕಿ ಉಳಿಸಿಕೊಂಡಿದ್ದರೆ ಈ ದಿನ ಮರಳಿ ಪಡೆಯಬಹುದು. ಅವಿವಾಹಿತರಲ್ಲಿ ಖರ್ಚುಗಳು ಹೆಚ್ಚಾಗುವ ದಿನವಿದು. ನಿಮ್ಮ ಹಲವು ಕಷ್ಟಗಳನ್ನು ಆಪ್ತರಲ್ಲಿ ಹೇಳಿಕೊಳ್ಳುವುದು ಮನಸ್ಸು ನಿರಾಳವಾಗಲು ಕಾರಣವಾಗಲಿದೆ.
ಮಕರ ರಾಶಿ
ಮಕರ ರಾಶಿಯ ಜನರಿಗೆ ಈ ದಿನವು ಅನುಕೂಲ ತರಲಿದೆ. ನಿಮ್ಮ ಬಹು ದಿನದಿಂದ ಮುಗಿಸುವ ಪ್ರಯತ್ನದಲ್ಲಿದ್ದ ಕೆಲಸವನ್ನು ಈ ದಿನ ಮುಗಿಸುವಿರಿ. ಯಾರಿಗೂ ಸಾಲ ನೀಡಬೇಡಿ, ಹಾಗೆ ಅಮೂಲ್ಯವಾದ ವಸ್ತುಗಳನ್ನು ಇಂದು ನೀಡದೆ ಇದ್ದರೆ ಉತ್ತಮ.
ಕುಂಭ ರಾಶಿ
ಕುಂಭ ರಾಶಿ ಜನರಿಗೆ ಈ ದಿನದಂದು ಬಹಳ ಅನುಕೂಲವಿದೆ. ನೀವು ಮಾಡಬೇಕಿದ್ದ ಹಲವು ಕೆಲಸಗಳನ್ನು ಪೂರ್ಣ ಮಾಡಲು ಸೂಕ್ತ ಸಮಯವಿದು. ನಿಮ್ಮ ಹಣಕಾಸು ವಿಚಾರದಲ್ಲಿ ಶುಭವಿದೆ. ಬಹು ಸಮಯದ ಹಣ ನಿಮ್ಮ ಕೈ ಸೇರಲಿದೆ. ಉಳಿತಾಯ ಕೂಡ ಹೆಚ್ಚಾಗಬಹುದು.
ಮೀನ ರಾಶಿ
ಮೀನ ರಾಶಿಯ ಜನರಲ್ಲಿ ಈ ದಿನವು ಅನುಕೂಲವಾಗಿದೆ. ಕೆಲಸದ ಒತ್ತಡದ ನಡುವೆ ನೀವು ಕುಟುಂಬದೊಂದಿಗೆ ಸುಂದರ ಸಮಯ ಕಳೆಯುವಿರಿ. ದಿನದ ಅಂತ್ಯದಲ್ಲಿ ಶುಭ ಸುದ್ದಿ ಕೇಳುವಿರಿ. ಆರೋಗ್ಯದಲ್ಲಿ ಚೇತರಿಕೆ ಕಾಣುವಿರಿ.



Click it and Unblock the Notifications
