Latest Updates
-
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ -
ಈ ದಿನ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ! ನಿಮ್ಮ ಕ್ರಶ್ ಭೇಟಿಯಾಗುವ ಯೋಗ -
March 07 Horoscope: ಪ್ರಯಾಣ ಮಾಡುವಾಗ ಎಚ್ಚರವಿಡಿ! -
ಅಬ್ಬಬ್ಬಾ ಎಂಥಾ ರುಚಿ ಈ ಈರುಳ್ಳಿ ಮಂಚೂರಿಯನ್: ನೀವೂ ಕೂಡ ಟ್ರೈ ಮಾಡಿ -
ಮಾರ್ಚ್ನಲ್ಲಿ ಕಾಳಸರ್ಪ ಯೋಗ: ಈ ರಾಶಿಯವರಿಗೆ ಯೋಗದಿಂದ ಇದೆ ದೊಡ್ಡ ಲಾಭ!
ಮಾರ್ಚ್ 18 ದಿನ ಭವಿಷ್ಯ: ಮೇಷ, ವೃಷಭ ರಾಶಿಗೆ ಶುಭವಾಗಿದೆ, ಉಳಿದ ರಾಶಿಗಳ ರಾಶಿಫಲ ಹೇಗಿದೆ?
ಜ್ಯೋತಿಷ್ಯಶಾಸ್ತ್ರ ಪ್ರಕಾರ ಈ ದಿನ ಯಾವ ರಾಶಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ. ನಿಮ್ಮ ವೃತ್ತಿ ಜೀವನ ತುಂಬಾ ಚೆನ್ನಾಗಿರಲಿದೆ, ಕೆಲಸಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ. ಆದಾಯ ಚೆನ್ನಾಗಿರಲಿದೆ. ಖರ್ಚು -ವೆಚ್ಚಗಳ ನಡುವೆ ಸಮತೋಲನ ಕಾಪಾಡಲು ಪ್ರಯತ್ನಿಸಿ.
ಈ ದಿನ ವ್ಯಾಪಾರಸ್ಥರಿಗೆ ಧನ ಲಾಭವಾಗಲಿದೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ಉತ್ತಮ ಲಾಭ ಪಡೆಯಬಹುದು, ಆದರೆ ದೊಡ್ಡ ಹೂಡಿಕೆ ಮಾಡುವ ಮುನ್ನ ಜಾಗ್ರತೆವಹಿಸಿ.
ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಸಂಬಂಧ ಕೂಡ ತುಂಬಾ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ. ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ. ಕೆಲಸ ಕಾರ್ಯದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ. ಇನ್ನು ಬಡ್ತಿಯ ನಿರೀಕ್ಷೆಯಲ್ಲಿ ಇರುವವರೆಗೆ ಈ ದಿನ ಉತ್ತಮವಾಗಿರಲಿದೆ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರ್ಥಿಕ ದೃಷ್ಟಿಯಿಂದಲೂ ಈ ದಿನ ನಮಗೆ ಅನುಕೂಲಕರವಾಗಿದೆ.
ಮಿಥುನ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಿ, ಆದರೆ ಯಾವುದೇ ವಿಷಯದ ಬಗ್ಗೆ ಅನಗ್ಯತ ಗೊಂದಲ ಬೇಡ. ಅಲ್ಲದೆ ಈ ದಿನ ಖರ್ಚು ಹೆಚ್ಚಿರಲಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ. ಈ ದಿನ ಕೆಲಸದ ದೃಷ್ಟಿಯಿಂದ ಉತ್ತಮವಾಗಿದೆ. ಈ ದಿನ ಮನೆಯ ಕಡೆಗೆ ತುಂಬಾ ಗಮನಹರಿಸಿ. ಸರ್ಕಾರಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ದಿನ ಅನುಕೂಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯ ಉಂಟಾಗಬಹುದು, ಈ ಬಗ್ಗೆ ಜಾಗ್ರತೆವಹಿಸಿ.
ಕರ್ಕ ರಾಶಿ
ವ್ಯಾಪಾರಸ್ಥರಿಗೆ ಈ ದಿನ ತುಂಬಾ ಉತ್ತಮವಾಗಿರಲಿದೆ. ನಿಮ್ಮ ಪ್ರಮುಖ ಸಮಸ್ಯೆಗೆ ಪರಿಹಾರ ಸಿಗುವುದರಿಂದ ನಿರಾಳವಾಗುತ್ತೀರಿ. ಈ ದಿನ ಅಪೂರ್ಣವಾಗಿರುವ ಕೆಲಸ ಕಾರ್ಯವು ಪೂರ್ಣಗೊಳ್ಳಲಿದೆ. ಆದರೆ ಈ ದಿನ ಹೆಚ್ಚಿನ ಓಡಾಟ ಅಥವಾ ಕೆಲಸದ ಒತ್ತಡವಿರುವುದರಿಂದ ಆಯಾಸ ಅನಿಸಬಹುದು. ಇನ್ನು ಮಕ್ಕಳ ಬಗ್ಗೆ ಕಾಡುತ್ತಿದ್ದ ಚಿಂತೆ ದೂರಾಗಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ಈ ದಿನ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ, ಈ ದಿನ ರಾಜಕಾರಣಿಗೆ ತುಂಬಾ ಶುಭವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಆರ್ಥಿಕ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ. ಮಕ್ಕಳ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ವ್ಯಾಪಾರಸ್ಥರು ಉತ್ತಮ ಆರ್ಥಿಕ ಲಾಭ ಪಡೆಯುತ್ತೀರಿ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಅನುಕೂಲಕರವಾಗಿದೆ.
ಕನ್ಯಾ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆ ಮಾಡಿ, ಬಾಕಿ ಇರುವ ಕೆಲಸ ಕಾರ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಇನ್ನು ಹಣದ ವಿಷಯದಲ್ಲಿ ಜಾಗ್ರತೆ ಮಾಡಬೇಕು. ಸಾಲ ಕೇಳಿದ್ದರೆ ಸಾಲ ಸಿಗಲಿದೆ, ಆದರೆ ಅಗ್ಯತಕ್ಕಿಂತ ಹೆಚ್ಚು ಸಾಲ ಮಾಡಲು ಹೋಗಬೇಡಿ. ಆರೋಗ್ಯ ಸಂಬಂಧಿತ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಮಕ್ಕಳ ಆರೋಗ್ಯದ ಕಡೆಗೆ ಗಮನಹರಿಸಬೇಕು.
ತುಲಾ ರಾಶಿ
ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ, ಆದರೆ ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ, ಈ ದಿನ ವ್ಯಾಪಾರಸ್ಥರು ಲಾಭ ಗಳಿಸಲು ಸಾಧ್ಯವಾಗುವುದು. ಈ ದಿನ ಖರ್ಚು ವೆಚ್ಚಗಳ ನಿಯಂತ್ರಣ ಮಾಡಿದರೆ ಒಳ್ಳೆಯದು. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಮಾನಸಿಕ ಒತ್ತಡ ಕಡಿಮೆ ಮಾಡಲು ಧ್ಯಾನದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ಈ ದಿನ ನೀವು ಕೋಪವನ್ನು ನಿಯಂತ್ರಿಸಿದರೆ ಒಳ್ಳೆಯದು, ನೀವಾಡುವ ಮಾತಿನ ಕಡೆಗೆ ಗಮನಹರಿಸಿ, ಕೋಪದಿಂದ ಬರವ ಮಾತುಗಳು ಇತರರನ್ನು ನೋಯಿಸಬಹುದು. ಈ ದಿನ ಪ್ರಯಾಣದ ಸಾಧ್ಯತೆ ಇದೆ. ನೀವು ನಿಮ್ಮ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಕೆಲವರು ನಿಮ್ಮ ಹೆಸರು ಹಾಳು ಮಾಡಲು ಪ್ರಯತ್ನಿಸಬಹು, ಈ ಬಗ್ಗೆ ಜಾಗ್ರತೆವಹಿಸಿ. ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಆರ್ಥಿಕ ದೃಷ್ಟಿಯಿಂದ ಈ ದಿನವು ಅನುಕೂಲಕರವಾಗಿದೆ. ಪೂರ್ವಜರ ಆಸ್ತಿ ಸಂಬಂಧಿಸಿದ ವ್ಯವಹಾರ ಲಾಭ ತರಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ಕೆಲಸ ಕಾರ್ಯಗಳುನೀವು ಅಂದುಕೊಂಡಂತೆಯೇ ಪೂರ್ಣಗೊಳಿಸಲು ಸಾಧ್ಯವಾಗಲಿದೆ. ಹೊಸ ವ್ಯವಹಾರ ಪ್ರಾರಂಭಿಸಲು ಯೋಚನೆ ಮಾಡುತ್ತಿದ್ದರೆ ಅದಕ್ಕೆ ಸಂಬಂಧಿಸಿದ ಪ್ರಯತ್ನಕ್ಕೆ ಅನುಕೂಲಕರವಾಗಿದೆ.
ಮಕರ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆ ಮಾಡಡಿ, ಅನಗ್ಯತ ರಿಸ್ಕ್ ತೆಗೆದುಕೊಳ್ಳಲು ಹೋಗಬೇಡಿ. ಹಣಕಾಸಿನ ವ್ಯವಹಾರದ ಬಗ್ಗೆ ತುಂಬಾನೇ ಜಾಗ್ರತೆ ಮಾಡಬೇಕು. ಖರ್ಚು ಹೆಚ್ಚಿರಬಹುದು, ಖರ್ಚಿಗೆ ಕಡಿವಾಣ ಹಾಕಿದರೆ ಒಳ್ಳೆಯದು.ಈ ದಿನ ಶಾಪಿಂಗ್ ಅಂತ ಹಣ ಖರ್ಚಾಗುವ ಸಾಧ್ಯತೆ ಇದೆ. ಕುಟುಂಬ ಜೀವನ ಚೆನ್ನಾಗಿರಲಿದೆ.
ಕುಂಭ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ, ಈ ದಿನ ನೀವು ನಿಮ್ಮ ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ, ಬೇರೆಯವರನ್ನು ನಂಬಿ ಕೂರಬೇಡಿ. ಪ್ರತಿಕೂಲ ಸಂದರ್ಭದಲ್ಲಿ ಸಂಗಾತಿಯ ಬೆಂಬಲ ದೊರೆಯಲಿದೆ. ಕೆಲವರು ನಿಮ್ಮ ವಿರುದ್ಧ ಪಿತೂರಿ ಮಾಡಬಹುದು, ಅವರ ಬಗ್ಗೆ ಜಾಗ್ರತೆ ಮಾಡಿ.
ಮೀನ ರಾಶಿ
ಈ ದಿನ ನೀವು ಜಾಗ್ರತೆ ಮಾಡಬೇಕು, ಕೆಲಸದಲ್ಲಿ ಹೆಚ್ಚು ಒತ್ತಡವಿರಲ್ಲ, ಆದರೆ ಪ್ರಮುಖ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ಅವಾಹಿತರಿಗೆ ಮದುವೆ ಸಂಬಂಧ ಬರಬಹುದು. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











