Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಮಾರ್ಚ್ 19 ದಿನ ಭವಿಷ್ಯ: ಮಿಥುನ ರಾಶಿಯವರೇ ಜಾಗ್ರತೆ, ಈ ದಿನ ಯಾವ ರಾಶಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರ ಪ್ರಕಾರ ಮಾರ್ಚ್ 19ರ ರಾಶಿಫಲ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಈ ದಿನ ನಿಮಗೆ ಎಲ್ಲಾ ರೀತಿಯಿಂದಲೂ ಒಳ್ಳೆಯದಿದೆ.
ಈ ದಿನ ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಈ ದಿನ ಖರ್ಚು ಕಡಿಮೆ ಇರಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಈ ದಿನ ನೀವು ಮಾಡಿರುವ ಹೂಡಿಕೆಯಿಂದ ಉತ್ತಮ ಲಾಭ ಪಡೆಯಲು ಸಾಧ್ಯವಾಗಲಿದೆ.
ವೃತ್ತಿ ಜೀವನ: ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದ ನಡೆಯಲಿದೆ.
ಮಕ್ಕಳ ಕಡೆಯಿಂದ ಖುಷಿಯ ಸುದ್ದಿ ಸಿಗಲಿದೆ. ಮನೆ ನಿರ್ಮಿಸುವ ನಿಮ್ಮ ಕನಸು ನನಸಾಗಲಿದೆ.

ವೃಷಭ ರಾಶಿ
ಈ ದಿನ ನಿಮಗೆ ಶುಭ ದಿನ, ಈ ದಿನ ನೀವು ತೆಗೆದುಕೊಳ್ಳುವ ನಿರ್ಧಾರದಿಂದ ನಿಮಗೆ ಉತ್ತಮ ಫಲ ಸಿಗಲಿದೆ.
ವೃತ್ತಿ ಜೀವನ: ವೃತ್ತಿ ಬದುಕಿನಲ್ಲಿ ಕೆಲಸ ಕಾರ್ಯಗಳು ತುಂಬಾ ಉತ್ತಮವಾಗಿ ನಡೆಯಲಿದೆ. ಹೆಚ್ಚಿನ ಕೆಲಸದ ಒತ್ತಡವಿರಲ್ಲ, ಅಪೂರ್ಣವಾಗಿರುವ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿದೆ.
ಆರ್ಥಿಕ ಜೀವನ: ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಲಕರವಾಗಿದೆ, ವ್ಯಾಪಾರಸ್ಥರು ಕೂಡ ಒಳ್ಳೆಯ ಲಾಭ ಗಳಿಸಲು ಸಾಧಯವಾಗಲಿದೆ.
ಆರೋಗ್ಯ ಜೀವನ ಚೆನ್ನಾಗಿರಲಿದೆ.
ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ.
ಮಿಥುನ ರಾಶಿ
ಮಿಥುನ ರಾಶಿಯವರೇ ಈ ದಿನ ಸ್ವಲ್ಪ ಜಾಗ್ರತೆವಹಿಸಿ, ಖರ್ಚು-ವೆಚ್ಚದ ಕಡೆಗೆ ಗಮನಹರಿಸುವುದು ಒಳ್ಳೆಯದು, ಅಗ್ಯತಕ್ಕೆ ಮೀರಿದ ಖರ್ಚು ತುಂಬಾನೇ ಸಮಸ್ಯೆಯನ್ನುಂಟು ಮಾಡಬಹುದು, ಈ ದಿನ ನಿಮ್ಮ ಕೈಯಲ್ಲಿ ಸಾಧ್ಯವಾದಷ್ಟು ದಾನವನ್ನು ನಿರ್ಗತಿಕರಿಗೆ ನೀಡಿದರೆ ಒಳ್ಳೆಯದು.
ಕೆಲಸದಲ್ಲಿ ಈ ದಿನ ಸರಾಸರಿಯಾಗಿರಲಿದೆ, ವ್ಯಾಪಾರಸ್ಥರಿಗೆ ಈ ದಿನ ಸ್ವಲ್ಪ ಮಂಕಾಗಿರಬಹುದು ಅಥವಾ ವ್ಯವಹಾರದಲ್ಲಿ ಮೋಸ ಹೋಗುವ ಸಾಧ್ಯತೆ ಇದೆ ಆದ್ದರಿಂದ ಜಾಗ್ರತೆ ಮಾಡಿ.
ಕುಟುಂಬದಲ್ಲಿ ನೀವು ಅನಗ್ಯತ ವಾದ ಮಾಡಲು ಹೋಗಬೇಡಿ ಎಂದು ಸಲಹೆ ನೀಡಲಾಗುವುದು.
ಕರ್ಕ ರಾಶಿ'
ಕರ್ಕ ರಾಶಿಯವರಿಗೆ ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ತುಂಬಾ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಸಮಯಕ್ಕೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ನಿಮ್ಮ ಪೋಷಕರ ಮಾತನ್ನು ದಿಕ್ಕರಿಸಲು ಹೋಗಬೇಡಿ, ಅವರ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳದಿರಿ. ಕೆಲಸದ ಕಡೆಗೆ ಕೂಡ ಗಮನಹರಿಸಬೇಕು. ಕೆಲಸಕ್ಕೆ ಸಂಬಂಧಿಸಿದಂತೆ ಚಿಕ್ಕ ನಿರ್ಲಕ್ಷ್ಯ ಸಮಸ್ಯೆ ಹೆಚ್ಚಿಸಬಹುದು.
ಪೋಷಕರ ಆರೋಗ್ಯದ ಕಡೆಗೆ ಗಮನಹರಿಸಿ.
ಮನೆಯ ವಾತಾವರಣ ಶಾಂತವಾಗಿರಲು ನೀವು ಕೋಪವನ್ನು ನಿಯಂತ್ರಿಸಿ.
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ. ಆರ್ಥಿಕ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಆರ್ಥಿಕ ಪ್ರಯತ್ನಕ್ಕೆ ಉತ್ತಮ ಪ್ರತಿಫಲ ದೊರೆಯಲಿದೆ.
ಈ ದಿನ ನೀವು ಕೋಪದಿಂದ ಯಾವುದೇ ಮಾತನಾಡಬೇಡಿ. ನಿಮ್ಮ ಕೋಪಕ್ಕೆ ಕಡಿವಾಣ ಹಾಕಿದರೆ ಒಳ್ಳೆಯದು. ಇನ್ನು ನಿಮ್ಮ ಹೊಸ ಪ್ರಯತ್ನದ ಕಡೆಗೆ ಮತ್ತಷ್ಟು ಗಮನಹರಿಸಿದರೆ ನಿಮಗೆ ಉತ್ತಮ ಫಲಿತಾಂಶ ದೊರೆಯಬಹುದು.
ವಿವಾಹಿತರಿಗೆ ಈ ದಿನ ರೊಮ್ಯಾಂಟಿಕ್ ಆಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ.
ಕನ್ಯಾ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸದಲ್ಲಿ ನೀವು ಬಯಸಿದ ಪ್ರತಿಫಲ ದೊರೆಯಬಹುದು. ಆದರೆ ಕೆಲಸದ ಜಾಗದಲ್ಲಿ ಅನಗ್ಯತ ವಾದ ತಪ್ಪಿಸಿ. ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚಿನ ಪ್ರಯತ್ನ ಹಾಕಿ. ಈ ದಿನ ಖರ್ಚಿಗೆ ಕಡಿವಾಣ ಹಾಕಿದರೆ ಒಳ್ಳೆಯದು. ಖರ್ಚು-ವೆಚ್ಚಗಳ ಕಡೆಗೆ ಹೆಚ್ಚಿನ ಗಮನಹರಿಸಿ, ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ಸಂಬಂಧದ ಬಗ್ಗೆ ನೋಡುವುದಾದರೆ ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ.
ಈ ಜೀನಿ ದೋಸೆ ಮಾಡಿದರೆ ಮಕ್ಕಳು ಇಷ್ಟಪಟ್ಟು ತಿಂತಾರೆ, ಒಂದು ದೋಸೆ ಸಾಕು ಹೊಟ್ಟೆ ತುಂಬಲು
ತುಲಾ ರಾಶಿ
ಈ ದಿನ ಕೆಲಸ ಕಾರ್ಯವು ತುಂಬಾ ಚೆನ್ನಾಗಿ ನಡೆಯಲಿದೆ. ಈ ದಿನ ಬಾಕಿ ಇರುವ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿದೆ. ಇನ್ನು ಹಣದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಹೂಡಿಕೆ ದೃಷ್ಟಿಯಿಂದ ಈ ದಿನ ನಿಮಗೆ ತುಂಬಾ ಚೆನ್ನಾಗಿರಲಿದೆ. ಕುಟುಂಬದ ವಾತಾವರಣ ತುಂಬಾ ಚೆನ್ನಾಗಿರಲಿದೆ, ಈ ದಿನ ನೀವು ತೆಗೆದುಕೊಳ್ಳುವ ಪ್ರಮುಖ ನಿರ್ಧಾರ ಉತ್ತಮ ಫಲ ನೀಡಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ.
ವೃಶ್ಚಿಕ ರಾಶಿ
ಈ ದಿನ ನೀವು ಬೇಡದ ವಿಷಯಗಳನ್ನು ಮನಸ್ಸಿಗೆ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗುವುದು. ನೀವು ಈ ದಿನ ಭಾವನಾತ್ಮಕವಾಗಿ ಸ್ವಲ್ಪ ದುರ್ಬಲರಾಗಿರಬಹುದು, ಈ ಮನಸ್ಥಿತಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗುವುದು, ಪರಿಸ್ಥಿತಿ ಬದಲಾಗಲಿದೆ. ಅವಾಹಿತರಿಗೆ ಈ ದಿನ ಮದುವೆ ಪ್ರಸ್ತಾಪ ಬರಬಹುದು. ವಿವಾಹಿತರಿಗೆ ಈ ದಿನ ಸ್ವಲ್ಪ ಪ್ರತಿಕೂಲವಾಗಿರಬಹುದು, ನಿಮ್ಮ ಸಂಗಾತಿ ಜೊತೆ ಮನಸ್ತಾಪ ತಪ್ಪಿಸಿ, ನಿಮ್ಮ ಅಥವಾ ಮನೆಯವರ ಆರೋಗ್ಯ ಸಂಬಂಧಿತ ವಿಷಯಗಳ ಬಗ್ಗೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಈ ದಿನ ನೀವು ಯಾವುದೇ ಕೆಲಸ ಕಾರ್ಯ ಮಾಡುವಾಗ ನೀವು ಸ್ವಲ್ಪ ಜಾಗ್ರತೆ ಮಾಡಬೇಕು ಗಡಿಬಿಡಿಯಿಂದ ಯಾವುದೇ ಕೆಲಸ ಮಾಡಬೇಡಿ. ಈ ದಿನ ಮಾನಸಿಕ ಒತ್ತಡ ತೆಗೆದುಕೊಳ್ಳಬೇಡಿ, ನೀವು ಆರೋಗ್ಯದ ಕಡೆಗೆ ಗಮಹರಿಸಬೇಕು. ಅಲ್ಲದೆ ನೀವು ಆಹಾರಕ್ರಮದ ಕಡೆಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ. ಎಣ್ಣೆಯಲ್ಲಿ ಕರಿದ ಪದಾರ್ಥಗಳಿಂದ ದೂರವಿರಿ.
ವಿದ್ಯಾರ್ಥಿಗಳಿಗೆ ಈ ದಿನ ಅನುಕೂಲಕರವಾಗಿದೆ. ಕುಟುಂಬದವರ ಬೆಂಬಲ ನಿಮಗೆ ಸಿಗಲಿದೆ. ವಿವಾಹಿತರ ವೈವಾಹಿಕ ಬದುಕು ಚೆನ್ನಾಗಿರಲಿದೆ.
ಮಕರ ರಾಶಿ
ಮಕರ ರಾಶಿಯವರಿಗೆ ಈ ದಿನ ತುಂಬಾ ಶುಭವಾಗಿದೆ. ಈ ದಿನ ವೃತ್ತಿ ಜೀವನದಲ್ಲಿ ಅನುಕೂಲಕರವಾಗಿದೆ, ಅಪೂರ್ಣವಾಗಿರುವ ಕೆಲಸ ಕಾರ್ಯವು ಪೂರ್ಣಗೊಳ್ಳಲಿದೆ. ಆದರೆ ವ್ಯಾಪಾರಸ್ಥರು ಈ ದಿನ ಜಾಗ್ರತೆ ಮಾಡಬೇಕು. ಪಾಲುದಾರಿಕೆಯ ವ್ಯವಹಾರದಲ್ಲಿ ಮೋಸ ಆಗಬಹುದು, ಈ ಬಗ್ಗೆ ಗಮನಹರಿಸಿ. ಕುಟುಂಬದಲ್ಲಿಯೂ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ನೀವು ಪರಿಸ್ಥಿತಿಯನ್ನು ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಬೇಕು. ಇನ್ನು ಹಣದ ವ್ಯವಹಾರ ಮಾಡುವಾಗಲೂ ಜಾಗ್ರತೆ ಮಾಡಿ, ಈ ದಿನ ಯಾವುದೇ ದೊಡ್ಡ ಹೂಡಿಕೆ ಮಾಡದಿದ್ದರೆ ಒಳ್ಳೆಯದು.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ನಿಮ್ಮ ಕೆಲಸ ಕಾರ್ಯವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗಲಿದೆ, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಮನೆಯ ವಾತಾವರಣ ಚೆನ್ನಾಗಿರಲಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಶುಭವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ನಿಮ್ಮಿಬ್ಬರ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ.
ಮೀನ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ರಾಜಕಾರಣಿಗಳಿಗೆ ಈ ದಿನ ಶುಭವಾಗಿದೆ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಆರ್ಥಿಕ ದೃಷ್ಟಿಯಿಂದ ಪ್ರಯೋಜನಕಾರಿಯಾಗಿದೆ, ಈ ದಿನ ನಿಮ್ಮ ಪ್ರಮುಖ ಸಮಸ್ಯೆಗೆ ಪರಿಹಾರ ಸಿಗವುದರಿಂದ ನೀವು ನಿರಾಳವಾಗುತ್ತೀರಿ. ವೈವಾಹಿಕ ಬದುಕು ಚೆನ್ನಾಗಿರಲಿದೆ. ನಿಮ್ಮ ಸಂಗಾತಿ ವೃತ್ತಿ ಜೀವನದಲ್ಲಿ ಮತ್ತಷ್ಟು ಯಶಸ್ಸು ಕಾಣುತ್ತಾರೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications










