Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ದಿನ ಭವಿಷ್ಯ ಪ್ರಕಾರ ಮಾರ್ಚ್ 3 ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯ ಶಾಸ್ತ್ರ ಪ್ರಕಾರ ದ್ವಾದಶ ರಾಶಿಗಳ ರಾಶಿಫಲ ನೋಡೋಣ:
ಮೇಷ ರಾಶಿ
ದಿನ ಪರಿಸ್ಥಿತಿಗಳು ಧನಾತ್ಮಕವಾಗಿರಲಿದೆ, ಹೆಚ್ಚೇನು ತಲೆಕೆಡಿಸಿಕೊಳ್ಳದೆ ಪರಿಸ್ಥಿತಿಗೆ ಹೊಂದಿಕೊಂಡು ಹೋಗುವುದರಿಂದ ದೊಡ್ಡ ಸಮಸ್ಯೆ ಅಂತ ಅನಿಸಲ್ಲ, ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ, ಈಗಾಗಲೇ ಆರೋಗ್ಯ ಸಮಸ್ಯೆ ಇರುವವರು ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.

ವೃಷಭ ರಾಶಿ
ಈ ದಿನ ನಿಮ್ಮ ಆತ್ಮವಿಶ್ವಾಸ ಸ್ವಲ್ಪ ಕಡಿಮೆ ಇರಲಿದೆ, ಹಾಗಾಗಿ ವೃತ್ತಿ ಬದುಕಿನಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂದೇಟು ಹಾಕುತ್ತೀರಿ, ವೈವಾಹಿಕ ಬದುಕಿನಲ್ಲಿ ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ಆರ್ಥಿಕ ದೃಷ್ಟಿಯಿಂದಲೂ ಈ ದಿನ ಅನುಕೂಲಕರವಾಗಿದೆ.
ಮಿಥುನ ರಾಶಿ
ಈ ದಿನ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗುವುದು. ಇನ್ನು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಪೋಷಕರ ಅಥವಾ ಅನುಭವಿಗಳ ಸಲಹೆ ಪಡೆಯಿರಿ. ವೈವಾಹಿಕ ಬದುಕಿನಲ್ಲಿ ಪರಿಸ್ಥಿತಿ ಅಷ್ಟೊಂದು ಅನುಕೂಲಕರವಲ್ಲ. ನಿಮ್ಮ ನಡುವೆ ಭಿನ್ನಾಭಿಪ್ರಾಯ ಉಂಟಾದರೆ ಮಾತುಕತೆ ಮೂಲಕ ಬಗೆಹರಿಸಲು ಪ್ರಯತ್ನಿಸಿ.
ಕರ್ಕ ರಾಶಿ
ಈ ದಿನ ಏರಳಿತಗಳಿಂದ ಕೂಡಿರಲಿದೆ, ಈ ದಿನ ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ ಮನಸ್ಸಿನ ಭಾವನೆಗಳಿಗಿಂತ ಬುದ್ಧಿಗೆ ಪ್ರಾಮುಖ್ಯತೆ ನೀಡುವುದು ಒಳ್ಳೆಯದು. ಆರ್ಥಿಕವಾಗಿ ಈ ದಿನ ಅನುಕೂಲಕರವಾಗಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಸಿಂಹ ರಾಶಿ
ಈ ದಿನ ಒತ್ತಡದಿಂದ ಕೂಡಿರಲಿದೆ, ಕೆಲಸದಲ್ಲಿ ನಿಮಗೆ ವಹಿಸಿರುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ, ಇನ್ನು ಬೇಡದ ವಿಚಾರಗಳಿಂದ ದೂರವಿರಿ, ಬೇರೆಯವರ ವಿಷಯದಲ್ಲು ಮೂಗು ತೂರಿಸಲು ಹೋಗಬೇಡಿ.
ಕನ್ಯಾ ರಾಶಿ
ಈ ದಿನ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ನಿಮ್ಮ ಮಾತುಗಳಿಂದ ಯಾರನ್ನೂ ನೋಯಿಸಬೇಡಿ, ಆರ್ಥಿಕವಾಗಿ ಈ ದಿನ ನಿಮಗೆ ಅನುಕೂಕರವಾಗಿದೆ.
ತುಲಾ ರಾಶಿ
ಕೆಲಸದಲ್ಲಿ ಚಿಕ್ಕ ತಪ್ಪು ದೊಡ್ಡ ನಷ್ಟ ಉಂಟು ಮಾಡಬಹುದು, ಆದ್ದರಿಂದ ನಿರ್ಲಕ್ಷ್ಯ ಬೇಡ, ಸಂಬಂಧದ ವಿಷಯದಲ್ಲಿ ನೋಡುವುದಾದರೆ ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ಆರ್ಥಿಕ ದೃಷ್ಟಿಯಿಂದಲೂ ಈ ದಿನ ಅನುಕೂಲಕರವಲ್ಲ. ಈ ದಿನ ತಾಳ್ಮೆಯಿಂದ ವರ್ತಿಸಿ.
ವೃಶ್ಚಿಕ ರಾಶಿ
ಈ ದಿನ ಅನುಕೂಲಕರವಾಗಿದೆ, ವಿದ್ಯಾರ್ಥಿಗಳು ಈ ದಿನ ಶುಭ ಸುದ್ದಿ ಪಡೆಯುವಿರಿ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಅನುಕೂಲಕರವಾಗಿದೆ.
ಧನು ರಾಶಿ
ಈ ದಿನ ನೀವು ನಿಮ್ಮ ಮನಸ್ಸಿನ ಖುಷಿ ಕಡೆಗೆ ಗಮನಹರಿಸಿದರೆ ಒಳ್ಳೆಯದು, ಪ್ರೀತಿ ಜೀವನ ತುಂಬಾ ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ದಿನ ಅನುಕೂಲಕರವಾಗಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ.
ಮಕರ ರಾಶಿ
ಈ ದಿನ ಕೆಲಸದಲ್ಲಿ ನಿಮ್ಮ ಜವಾಬ್ದಾರಿ ಹೆಚ್ಚಾಗಬಹುದು, ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ, ವೃತ್ತಿ ಬದುಕಿನಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ, ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯಬೇಡ.
ಕುಂಭ ರಾಶಿ
ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು, ಮಾನಸಿಕ ಒತ್ತಡ ಕಡಿಮೆ ಮಾಡಲು ಧ್ಯಾನದ ಕಡೆಗೆ ಗಮನಹರಿಸಿದರೆ ಒಳ್ಳೆಯದು. ನಿಮ್ಮ ಸಂಗಾತಿಯ ಭಾವನೆಗಳನ್ನೂ ಗೌರವಿಸಿ, ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆಯಿರಿ.
ಮೀನ ರಾಶಿ
ಮೀನ ರಾಶಯವರಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ, ಹೊಸ ಜವಾಬ್ದಾರಿ ತೆಗೆದುಕೊಳ್ಳಲು ಹಿಂದೇಟು ಹಾಕಬೇಡಿ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
