Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಮಾರ್ಚ್ 4ರ ದಿನ ಭವಿಷ್ಯ : ಈ ದಿನ ಬಹುತೇಕ ರಾಶಿಗಳಿಗೆ ಅದೃಷ್ಟದ ದಿನ, ನಿಮ್ಮ ರಾಶಿಗೆ ಇದೆಯೇ?
ಜ್ಯೋತಿಷ್ಯಶಾಸ್ತ್ರ ಪ್ರಕಾರ ಮಾರ್ಚ್ 4ರ ರಾಶಿಫಲ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಯಾವುದೋ ಕೆಲಸ ತುಂಬಾ ದಿನದಿಂದ ಬಾಕಿಯುಳಿದಿದ್ದರೆ ಅದು ಪೂರ್ಣವಾಗಲಿದೆ. ಹಣದ ವಿಷಯದಲ್ಲಿ ನೋಡುವುದಾದರೆ ಆರ್ಥಿಕ ಖರ್ಚು ಹೆಚ್ಚಿರಬಹುದು, ಮನೆಯ ವಾತಾವರಣ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಹಣದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ, ಹಣಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಪ್ರಯೋಜನ ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ಕೆಲಸ ಕಾರ್ಯದ ದೃಷ್ಟಿಯಿಂದಲೂ ಈ ದಿನ ನಿಮಗೆ ಅನುಕೂಲಕರವಾಗಿದೆ.
ಮಿಥುನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಕೆಲಸಕ್ಕೆ ಸಂಬಂಧಿಸಿದ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ. ಆರ್ಥಿಕ ದೃಷ್ಟಿಯಿಂದಲೂ ಈ ದಿನ ಅನುಕೂಲಕರವಾಗಿದೆ.
ಕರ್ಕ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಈ ದಿನ ನೀವು ಬಯಸಿದ ವಸ್ತು ಖರೀದಿಸಲು ಸಾಧ್ಯವಾಗಲಿದೆ, ಕೆಲಸದಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಿ, ಅಲ್ಲದೆ ಯಾವುದೇ ನಿರ್ಧಾರವಾದರೂ ಆತುರದಿಂದ ತೆಗೆಯಲು ಹೋಗಬೇಡಿ.
ಸಿಂಹ ರಾಶಿ
ಈ ದಿನ ಆರ್ಥಿಕವಾಗಿ ಉತ್ತಮವಾಗಿದೆ, ಆದರೆ ಆರೋಗ್ಯದಲ್ಲಿ ಏರಳಿತವಿರಬಹುದು. ವ್ಯಾಪಾರಸ್ಥರು ಈ ದಿನ ಜಾಗ್ರತೆವಹಿಸಬೇಕು, ಕೆಲಸದ ಜಾಗದಲ್ಲಿ ಕೂಡ ನೀವು ಅನಗ್ಯತ ವಿಷಯಗಳ ಕಡೆಗೆ ಗಮನಹರಿಸದೆ ನಿಮ್ಮ ಕೆಲಸದ ಕಡೆಗೆ ಗಮನಹರಿಸಿದರೆ ಒಳ್ಳೆಯದು.
ಕನ್ಯಾ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆಯೇ ನಡೆಯಲಿದೆ, ಬೇರೆಯವರ ಮಾತು ನಂಬಲು ಹೋಗಬೇಡಿ ಎಂದು ಸಲಹೆ ನೀಡಲಾಗುವುದು, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗದಂತೆ ಜಾಗ್ರತೆವಹಿಸಿ.
ತುಲಾ ರಾಶಿ
ಈ ದಿನ ವ್ಯಾಪಾರಸ್ಥರಿಗೆ ಅನುಕೂಲಕರವಾಗಿದೆ. ಆದರೆ ಸಂಬಂಧದಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು, ಖರ್ಚುಗಳಲ್ಲಿ ಕಡಿವಾಣ ಹಾಕಿದರೆ ಒಳ್ಳೆಯದು, ಕೋಪ ನಿಯಂತ್ರಿಸಿದರೆ ಒಳ್ಳೆಯದು.
ವೃಶ್ಚಿಕ ರಾಶಿ
ಈ ದಿನ ನೀವು ಸ್ವಲ್ಪ ಜಾಗ್ರತೆವಹಿಸಬೇಕು, ಸಂಗಾತಿಯ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳಬೇಡಿ, ಪ್ರೇಮಿಗಳಿಗೆ ಈ ದಿನ ಅನುಕೂಲಕರವಾಗಿದೆ, ಕೆಲಸದ ಜಾಗದಲ್ಲಿ ಒಳ ರಾಜಕೀಯದ ಬಗ್ಗೆ ಜಾಗ್ರತೆವಹಿಸಿ.
ಧನು ರಾಶಿ
ಈ ದಿನ ನಿಮಗೆ ಶುಭವಾಗಿದೆ, ಅಪೂರ್ಣವಾಗಿದ್ದ ಕೆಲಸ ಕಾರ್ಯವು ಪೂರ್ಣವಾಗಲಿದೆ, ಸಂಗಾತಿಯೊಂದಿಗೆ ಬಾಂಧವ್ಯ ಚೆನ್ನಾಗಿರಲಿದೆ, ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಹಿರಿಯರ ಸಲಹೆ ಪಡೆಯುವುದರಿಂದ ಹೆಚ್ಚಿನ ಪ್ರಯೋಜನ ಪಡೆಯುತ್ತೀರಿ.
ಮಕರ ರಾಶಿ
ಆರ್ಥಿಕ ವಿಷಯದಲ್ಲಿ ಈ ದಿನ ಅನುಕೂಲಕರವಾಗಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಸಲು ಸಾಧ್ಯವಾಗಲಿದೆ, ಯಾವುದೇ ಕೆಲಸ ಅಪೂರ್ಣ ಮಾಡಬೇಡಿ ಎಂದು ಸಲಹೆ ನೀಡಲಾಗುವುದು.
ಕುಂಭ ರಾಶಿ
ಹಣದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ಇನ್ನು ಆರೋಗ್ಯದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿರಲಿದೆ.
ಮೀನ ರಾಶಿ
ಕೆಲಸದ ಜಾಗದಲ್ಲಿ ನೀವು ಕೋಪವನ್ನು ನಿಯಂತ್ರಿಸಬೇಕು, ಪಾಲುದಾರಿಕೆಯ ವ್ಯವಹಾರ ಮಾಡುತ್ತದ್ದರೆ ಈ ದಿನ ಅನುಕೂಲಕರವಾಗಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಪೂಜೆ ಅಥವಾ ಇತರ ಶುಭ ಕಾರ್ಯಕ್ರಮ ನಡೆಸುವುದರ ಬಗ್ಗೆ ಮಾತುಕತೆ ನಡೆಯಬಹುದು.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
