Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಮಾರ್ಚ್ 7ರ ದಿನ ಭವಿಷ್ಯ: ಕುಂಭ ರಾಶಿಗೆ ಹಣ ಲಾಭ, 12 ರಾಶಿಗಳ ಸಂಪೂರ್ಣ ರಾಶಿಫಲ
ಶುಭೋದಯ, ಮಾರ್ಚ್ 7ರ ರಾಶಿಫಲ ನೋಡೋಣ:
ಮೇಷ ರಾಶಿ
ಈ ದಿನ ವೃತ್ತಿ ಜೀವನದ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿದೆ. ವ್ಯಾಪಾರಸ್ಥರಿಗೆ ಈ ದಿನ ಲಾಭ ಗಳಿಸಲು ಸಾಧ್ಯವಾಗಲಿದೆ, ಹೊಸ ವ್ಯವಹಾರಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಫಲ ಕಾಣುವಿರಿ. ಉದ್ಯೋಗಿಗಳಿಗೂ ಈ ದಿನ ಉತ್ತಮವಾಗಿದೆ, ಕೆಲಸ ಕಾರ್ಯಗಳು ಯೋಜನೆಯಂತೆಯೇ ಪೂರ್ಣವಾಗಲಿದೆ.
ಪ್ರೀತಿ ಜೀವನ: ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಉತ್ತಮವಾಗಿರಲಿದೆ, ನಿಮ್ಮ ಪ್ರೀತಿ ಪಾತ್ರರ ಜೊತೆಗೆ ಸಮಯ ಕಳೆಯಲು ಸಾಧ್ಯವಾಗಲಿದೆ.
ಈ ದಿನ ಆರೋಗ್ಯದ ದೃಷ್ಟಿಯಿಂದಲೂ ನಿಮಗೆ ಅನುಕೂಲಕರವಾಗಿದೆ. ಹಣಕಾಸಿನ ದೃಷ್ಟಿಯಿಂದಲೂ ಈ ದಿನ ನಿಮಗೆ ಅನುಕೂಲಕರವಾಗಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಆರ್ಥಿಕವಾಗಿ ಈ ದಿನ ತುಂಬಾ ಉತ್ತಮವಾಗಿದೆ, ವ್ಯಾಪಾರಸ್ಥರು ಉತ್ತಮ ಲಾಭ ಗಳಿಸಲು ಸಾಧ್ಯವಾಗಲಿದೆ.
ವೃತ್ತಿ ಜೀವನದ ಬಗ್ಗೆ ನೋಡುವುದಾದರೆ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣವಾಗಲಿದೆ, ವೃತ್ತಿ ಸಂಬಂಧಿತ ಕೆಲಸದಲ್ಲಿ ಯಶಸ್ಸು ದೊರೆಯಲಿದೆ, ನಿಮ್ಮ ಸ್ಮಾರ್ಟ್ ಆಲೋಚನೆಗಳು ನಿಮಗೆ ಲಾಭ ತರಲಿದೆ.
ಕುಟುಂಬ ಜೀವನ ಇಂದು ಉತ್ತಮವಾಗಿರಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ.
ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಮಿಥುನ ರಾಶಿ
ಈ ದಿನ ವ್ಯವಹಾರಸ್ಥರು ಜಾಗ್ರತೆವಹಿಸಬೇಕು, ಯಾವುದೇ ದೊಡ್ಡ ಹೂಡಿಕೆ ಮಾಡುವ ಮುನ್ನ ಸರಿಯಾಗಿ ಆಲೋಚನೆ ಮಾಡಿದ ಬಳಿಕವಷ್ಟೇ ಮಾಡಿ, ಉದ್ಯೋಗಿಗಳಿಗೆ ಈ ದಿನ ಹಣದ ವಿಷಯದಲ್ಲಿ ಸರಾಸರಿಯಾಗಿರಲಿದೆ.
ವೃತ್ತಿ ಜೀವನದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ, ನಿಮ್ಮ ಜವಾಬ್ದಾರಿಗಳು ಹೆಚ್ಚಾಗಲಿದೆ. ಕೆಲಸದ ಜಾಗದಲ್ಲಿ ಸಹೋದ್ಯೋಗಿಗಳ ಜೊತೆ ವಿವಾದದ ವಿಷಯ ಮಾತನಾಡಬೇಡಿ.
ಸಂಬಂಧದ ಬಗ್ಗೆ ಹೇಳುವುದಾದರೆ ಹಳೆಯ ವಿಷಯ ಕೆದುಕುವುದು ಅಥವಾ ಚಿಕ್ಕ ವಿಷಯವನ್ನು ದೊಡ್ಡದು ಮಾಡಲು ಹೋಗಬೇಡಿ ಎಂದು ಸಲಹೆ ನೀಡಲಾಗುವುದು.
ಆರೋಗ್ಯ ಸಂಬಂಧಿತ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಕರ್ಕ ರಾಶಿ
ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಈ ದಿನ ಲಾಭ ಗಳಿಸಲು ಸಾಧ್ಯವಾಗಲಿದೆ.
ವೃತ್ತಿ ಜೀವನದಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ, ಈ ದಿನ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ, ನಿಮ್ಮ ಪ್ರಮುಖ ಅಡೆತಡೆಗಳು ದೂರಾಗಲಿದೆ.
ಕುಟುಂಬ ಜೀವನ ಕೂಡ ಚೆನ್ನಾಗಿರಲಿದೆ, ನಿಮ್ಮ ಪ್ರೀತಿ ಪಾತ್ರರು ಈ ದಿನ ಖುಷಿಯಾಗಿ ಇರುತ್ತಾರೆ, ಕುಟುಂಬದ ವಾತಾವರಣ ತುಂಬಾ ಚೆನ್ನಾಗಿರಲಿದೆ.
ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಸಿಂಹ ರಾಶಿ
ನೀವು ಖರ್ಚು-ವೆಚ್ಚಗಳ ನಡುವೆ ಸಮತೋಲನ ಕಾಪಾಡುವಲಲ್ಇ ಯಶಸ್ವಿಯಾಗುತ್ತೀರಿ, ಹೊಸ ಆದಾಯಕ್ಕೆ ಮಾಡಿದ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿದೆ.
ಕೆಲಸದ ಜಾಗದಲ್ಲಿ ಮೇಲಾಧಿಕಾರಿಯ ಜೊತೆಗೆ ಭಿನ್ನಾಭಿಪ್ರಾಯ ಬಂದರೆ ಹೆಚ್ಚು ವಾದ ಮಾಡಲು ಹೋಗಬೇಡಿ, ಕೆಲಸದ ಕಡೆಗೆ ಹೆಚ್ಚು ಗಮನಹರಿಸಿ.
ನಿಮ್ಮ ಪ್ರೀತಿಪಾತ್ರರನ್ನು ನಿಮ್ಮ ಮಾತುಗಳಿಂದ ನೋಯಿಸಬೇಡಿ, ಅವರ ಭಾವನೆಗಳಿಗೂ ಗೌರವ ನೀಡಿ, ನಿಮ್ಮ ಕೋಪವನ್ನು ನಿಯಂತ್ರಿಸಿ.
ಆರೋಗ್ಯ ಸಂಬಂಧಿತ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ ಎಂದು ಸಲಹೆ ನೀಡಲಾಗುವುದು.
ಕನ್ಯಾ ರಾಶಿ
ಹಣದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ವ್ಯಾಪಾರಸ್ಥರು ಈ ದಿನ ಉತ್ತಮ ಲಾಭ ಗಳಿಸಲು ಸಾಧ್ಯವಾಗಲಿದೆ.
ಕೆಲಸ ಕಾರ್ಯದಲ್ಲಿ ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ, ನಿಮ್ಮ ಕ್ರಿಯಾಶೀಲತೆಗೆ ಮೆಚ್ಚುಗೆ ದೊರೆಯಲಿದೆ. ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ನಡೆಯಲಿದೆ, ಏಕೆಂದರೆ ಅದೃಷ್ಟದ ಬೆಂಬಲ ನಿಮಗಿರಲಿದೆ.
ಕುಟುಂಬ ಜೀವನದಲ್ಲಿ ಪ್ರತಿಕೂಲ ಸಂದರ್ಭದಲ್ಲಿ ತಾಳ್ಮೆಯಿಂದ ವರ್ತಿಸಿ, ಅವಾಹಿತರಿಗೆ ಈ ದಿನ ಅನುಕೂಲಕರವಾಗಿದೆ, ವಿಶೇಷ ವ್ಯಕ್ತಿಯನ್ನು ಭೇಟಿ ಮಾಡಬಹುದು.
ಆರೋಗ್ಯ ಸಮಸ್ಯೆವಿದ್ದರೆ ಸುಧಾರಣೆ ಕಂಡು ಬರಲಿದೆ.
ತುಲಾ ರಾಶಿ
ಈ ದಿನ ಆರ್ಥಿಕವಾಗಿ ನಿಮಗೆ ಅನುಕೂಲಕರವಾಗಿದೆ, ಹಾಗಂತ ಯಾವುದೇ ದೊಡ್ಡ ಹೂಡಿಕೆಯ ನಿರ್ಧಾರಗಳನ್ನು ಆತುರದಿಂದ ತೆಗೆದುಕೊಳ್ಳಿ, ಯಾವುದೇ ನಿರ್ಧಾರವಾದರೂ ಆಲೋಚಿಸಿ ತೆಗೆದುಕೊಳ್ಳಿ.
ಈ ದಿನ ವೃತ್ತಿ ಬದುಕಿನ ದೃಷ್ಟಿಯಿಂದ ತುಂಬಾ ಉತ್ತಮವಾಗಿದೆ, ನಿಮ್ಮ ವೃತ್ತಿ ಬದುಕಿನ ಕಡೆಗೆ ಹೆಚ್ಚಿನ ಗಮನಹರಿಸಲು ಸಾಧ್ಯವಾಗಲಿದೆ. ನಿಮ್ಮ ಕೆಲಸ ಕಾರ್ಯದ ಕಡೆಗೆ ಹೆಚ್ಚಿನ ಗಮನಹರಿಸಲು ಸಾಧ್ಯವಾಗಲಿದೆ.
ಸಂಬಂಧದಲ್ಲಿ ಈ ದಿನ ಮಿಶ್ರಫಲ, ನೀವು ಮುಕ್ತವಾಗಿ ಮಾತನಾಡುವ ಮೂಲಕ ಸಮಸ್ಯೆ ಬಗೆಹರಿಸುವುದು ಒಳ್ಳೆಯದು.
ಆರೋಗ್ಯದ ದೃಷ್ಟಿಯಿಂದ ನೋಡುವುದಾದರೆ ಈ ದಿನ ಅನುಕೂಲಕರವಾಗಿದೆ.
ವೃಶ್ಚಿಕ ರಾಶಿ
ಹಣಕಾಸಿನ ವಿಷಯದಲ್ಲಿ ಈ ದಿನ ಜಾಗ್ರತೆ ಮಾಡಬೇಕು,ನೀವು ನಿಮ್ಮ ಗುರಿಯತ್ತ ಗಮನಹರಿಸಲು ಈ ಅವಧಿ ನಿಮಗೆ ಅನುಕೂಲಕರವಾಗಿದೆ, ಆದರೆ ಸರಿಯಾಗಿ ಆಲೋಚಿಸಿದ ಬಳಿಕವಷ್ಟೇ ನೀವು ಹೂಡಿಕೆ ಮಾಡಬೇಕು.
ಕೆಲಸದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ, ನೀವು ಊಹಿಸಿರುವುದಕ್ಕಿಂತಲೂ ಉತ್ತಮ ಫಲ ಪಡೆಯುತ್ತೀರಿ, ವೃತ್ತಿ ಜೀವನದಲ್ಲಿ ನಿಮಗೆ ಉತ್ತಮ ಅವಕಾಶಗಳು ದೊರೆಯಲಿದೆ.
ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ.
ಆರೋಗ್ಯ ಸಮಸ್ಯೆವಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ.
ಧನು ರಾಶಿ
ಆರ್ಥಿಕ ವಿಷಯಗಳ ಕಡೆಗೆ ಗಮನಹರಿಸಿ, ಖರ್ಚು ವೆಚ್ಚಗಳ ನಡುವೆ ನಿಯಂತ್ರಣ ಒಳ್ಳೆಯದು, ವ್ಯಾಪಾರಸ್ಥರಿಗೆ, ಉದ್ಯಮಿಗಳಿಗೆ ಈ ದಿನ ಉತ್ತಮವಾಗಿರಲಿದೆ.
ನಿಮಗೆ ನೀಡಿದ ಕೆಲಸ ಕಾರ್ಯಗಳನ್ನು ಯಾವುದೇ ಅಡೆತಡೆಯಿಲ್ಲದೆ ಮಾಡಿ ಮುಗಿಸಲು ಸಾಧ್ಯವಾಗಲಿದೆ, ಇನ್ನು ವೃತ್ತಿ ಸಂಬಂಧಿತ ಪ್ರಯತ್ನಗಳಿಗೆ ಉತ್ತಮ ಫಲ ಸಿಗಲಿದೆ.
ಸಂಬಂಧದ ಬಗ್ಗೆ ನೋಡುವುದಾದರೆ ನೀವು ಕೆಲವೊಂದು ವಿಚಾರಗಳನ್ನು ಆಲೋಚಿಸಿ ಮಾತನಾಡುವುದು ಒಳ್ಳೆಯದು. ನೀವು ನಿಮ್ಮ ಕುಟುಂಬದ ಜೊತೆಗೆ ಹೆಚ್ಚಿನ ಸಮಯ ಕಳೆದರೆ ಒಳ್ಳೆಯದು.
ಆರೋಗ್ಯದ ಬಗ್ಗೆ ನೋಡುವುದಾದರೆ ಈ ದಿನ ನಿಮಗೆ ಸರಾಸರಿಯಾಗಿರಲಿದೆ.
ಮಕರ ರಾಶಿ
ಹಣಕಾಸಿನ ವಿಚಾರದಲ್ಲಿ ಈ ದಿನ ಅನುಕೂಲಕರವಾಗಿದೆ, ನಿಮ್ಮ ಕೆಲಸ ಕಾರ್ಯಗಳ ಕಡೆಗೆ ಎಚ್ಚಿನ ಗಮನಹರಿಸಲು ಸಾಧದಯವಾಗಲಿದೆ, ವ್ಯಾಪಾರಸ್ಥರು ಹಣದ ಲಾಭ ಗಳಿಸುತ್ತೀರಿ.
ಕೆಲಸದಲ್ಲಿಯೂ ಈ ದಿನ ಉತ್ತಮವಾಗಿದೆ, ನಿಮಗೆ ನೀಡಿರುವ ಕೆಲಸವನ್ನು ಉತ್ತಮವಾಗಿ ನಿರ್ವಹಿಸಲು ಸಾಧ್ಯವಾಗಲಿದೆ.
ಪ್ರೀತಿ ಜೀವನ ತುಂಬಾ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಮಾತನಾಡಿ ಬಗೆಹರಿಸಲು ಈ ಅವಧಿ ಉತ್ತಮವಾಗಿದೆ.
ಆರೋಗ್ಯ ಚೆನ್ನಾಗಿರಲಿದೆ.
ಕುಂಭ ರಾಶಿ
ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಈ ದಿನ ಲಾಭದಾಯಕವಾಗಿರಲಿದೆ, ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಿದೆ. ಹೊಸ ವ್ಯವಹಾರದ ಮಾತುಕತೆ ಮಾಡಿದರೆ ಅದು ನಿಮಗೆ ಲಾಭ ತರಲಿದೆ.
ಕೆಲಸದ ಜಾಗದಲ್ಲಿ ನಿಮಗೆ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಲು ಹೆಚ್ಚಿನ ಶ್ರಮ ಹಾಕಬೇಕು, ನೀವು ಕೆಲಸ ಮಾಡುವ ಜಾಗದಲ್ಲಿನ ನಿಯಮಗಳನ್ನು ಮುರಿಯಲು ಹೋಗಬೇಡಿ.
ಪ್ರೀತಿ ಜೀವನ ತುಂಬಾ ಚೆನ್ನಾಗಿರಲಿದೆ, ತಪ್ಪು ಕಲ್ಪನೆಯಿಂದ ತುಂಬಾನೇ ಮಾನಸಿಕ ಒತ್ತಡಕ್ಕೆ ಒಳಗಾಗುವದನ್ನು ತಪ್ಪಿಸಿ, ಅನಗ್ಯತ ಭಯ, ಬೇಡದ ಆಲೋಚನೆ ಇವುಗಳಿಂದ ದೂರವಿರಿ.
ಆರೋಗ್ಯ ಸಂಬಂಧಿತ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.
ಮೀನ ರಾಶಿ
ಈ ದಿನ ಕೆಲಸ ಕಾರ್ಯದ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿದೆ, ಆರ್ಥಿಕವಾಗಿ ಪ್ರಯೋಜನ ಪಡೆಯಲು ಸಾಧ್ಯವಾಗಲಿದೆ, ಈ ದಿನ ನಿಮಗೆ ಲಾಭದಾಯಕವಾಗಿದೆ.
ವೃತ್ತಿ ಜೀವನದ ದೃಷ್ಟಿಯಿಂದಲೂ ಈ ದಿನ ಉತ್ತಮವಾಗಿದೆ. ಅಪೂರ್ಣವಾಗಿರುವ ಕೆಲಸವನ್ನು ಪೂರ್ಣಗೊಳಿಸುವತ್ತ ಗಮನಹರಿಸಿ.
ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸುವುದು ಒಳ್ಳೆಯದು ಎಂದು ಸಲಹೆ ನೀಡಲಾಗುವುದು. ಆರೋಗ್ಯಕರ ಆಹಾರಕ್ರಮದತ್ತ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications












