Latest Updates
-
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ? -
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್!
ಮಂಗಳ ಶನಿಯಿಂದಾಗಿ ಉಂಟಾಗಿದೆ ಷಡಾಷ್ಟಕ ಯೋಗ: ಈ ನಾಲ್ಕು ರಾಶಿಗಳು ಏನು ಮಾಡಿದರು ಯಶಸ್ಸು ಕಟ್ಟಿಟ್ಟ ಬುತ್ತಿ
ಮಂಗಳ ಮತ್ತು ಶನಿಯು ಸೇರಿ ಷಡಾಷ್ಟಕ ಯೋಗ ಉಂಟು ಮಾಡಿದೆ. ಈ ಷಡಾಷ್ಟಕ ಯೋಗ ಎಂದರೇನು? ಇದು ಯಾವೆಲ್ಲಾ ರಾಶಿಗಳಿಗೆ ಪ್ರಯೋಜನಕಾರಿ ಎಂದು ನೋಡೋಣ ಬನ್ನಿ:
ಷಡಾಷ್ಟಕ ಯೋಗ ಎಂದರೇನು?
ಮಂಗಳ ಮತ್ತು ಶನಿಯು 6 ಮತ್ತು 8ನೇ ಮನೆಯಲ್ಲಿದ್ದಾಗ ಷಡಾಷ್ಟಕ ಯೋಗ ಉಂಟಾಗುವುದ, ಈ ಯೋಗ ತುಂಬಾ ಪ್ರಯೋಜನಕಾರಿಯಾಗಿದೆ, ಈ ಯೋಗದಿಂದಾಗಿ ಶನಿ ಮತ್ತು ಮಂಗಳ ಎರಡೂ ಗ್ರಹಗಳ ಶುಭ ಫಲ ದೊರೆಯಲಿದೆ, ಷಡಾಷ್ಟಕ ಯೋಗ ಈ ರಾಶಿಯವರಿಗೆ ಪ್ರಯೋಜನಕಾರಿಯಾಗಿದೆ.
ಷಡಾಷ್ಟಕ ಯೋಗದಿಂದ ಯಾವೆಲ್ಲಾ ರಾಶಿಗಳು ಪ್ರಯೋಜನ ಪಡೆಯಲಿದ್ದಾರೆ

ಮೇಷ ರಾಶಿ
ಈ ಯೋಗದ ಬಲದಿಂದಾಗಿ ನೀವು ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ನಿಮ್ಮ ವೃತ್ತಿ ಬದುಕು ಹಾಗೂ ಆರ್ಥಿಕ ಬದುಕಿನಲ್ಲಿ ಪ್ರಯೋಜನ ಕಂಡು ಬರಲಿದೆ. ಅಲ್ಲದೆ ಮಂಗಳ ಮೇಷ ರಾಶಿಯ ಆಡಳಿತ ಗ್ರಹವೂ ಹೌದು, ನಿಮಗೆ ಉದ್ಯೋಗಾವಕಾಶಗಳು ದೊರೆಯಲಿದೆ. ಬೇರೆ ಕಡೆ ಕೆಲಸಕ್ಕೆ ಪ್ರಯತ್ನಿಸುತ್ತಿರುವ ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ.
ಸಿಂಹ ರಾಶಿ
ಷಡಾಷ್ಟಕ ಯೋಗ ಸಿಂಹ ರಾಶಿಯವರಿಗೂ ತುಂಬಾ ಪ್ರಯೋಜನಕಾರಿಯಾಗಿದೆ. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಅತ್ಯುತ್ತಮ ಪ್ರಯೋಜನ ಪಡೆಯುತ್ತೀರಿ. ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ಪಡೆಯುತ್ತೀರಿ. ನೀವು ಮಾಡುತ್ತಿರುವ ಪ್ರಮುಖ ಪ್ರಾಜೆಕ್ಟ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ಆರ್ಥಿಕವಾಗಿ ಕೂಡ ಬೆಳವಣಿಗೆ ಕಾಣುವಿರಿ.
ವೃಶ್ಚಿಕ ರಾಶಿ
ಷಡಾಷ್ಟಕ ಯೋಗದಿಂದಾಗಿ ವೃಶ್ಚಿಕ ರಾಶಿಯವರು ತಮ್ಮ ವೃತ್ತಿ ಬದುಕಿನಲ್ಲಿ ಅನೇಕ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಆರ್ಥಿಕವಾಗಿ ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ, ಇದರ ಜೊತೆ ವೈಯಕ್ತಿಕ ಜೀವನದ ದೃಷ್ಟಿಯಿಂದಲೂ ಈ ಯೋಗ ನಿಮಗೆ ತುಂಬಾನೇ ಅನುಕೂಲಕರವಾಗಿರಲಿದೆ, ಈ ಯೋಗ ನಿಮ್ಮ ಬಾಂಧವ್ಯ ಮತ್ತಷ್ಟು ಬಲಪಡಿಸಲು ಸಹಕಾರಿಯಾಗಿದೆ.
ಮಕರ ರಾಶಿ
ಷಡಾಷ್ಟಕ ಯೋಗದಿಂದಾಗಿ ಮಕರ ರಾಶಿಯವರು ಕೂಡ ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ, ಶನಿಯ ಪ್ರಭಾವದಿಂದ ನಿಮ್ಮ ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ಮಂಗಳನು ನಿಮ್ಮ ಆರ್ಥಿಕ ಸ್ಥಿತಿ ಬಲಪಡಿಸಲಿದೆ. ಇನ್ನು ಕೆಲಸ ಬದಲಾಯಿಸಬೇಕು ಅಥವಾ ವ್ಯಾಪಾರಸ್ಥರು ವ್ಯಾಪಾರ ವಿಸ್ತರಣೆ ಮಾಡಬೇಕೆಂದು ಬಯಸುವುದಾದರೆ ಈ ಅವಧಿ ನಿಮಗೆ ಅತ್ಯಂತ ಪ್ರಯೋಜನಕಾರಿಯಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications