Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಈ 3 ರಾಶಿಯವರಿಗೆ ಕೂಡಿ ಬಂದಿದೆ ಮಹಾಲಕ್ಷ್ಮಿ ರಾಜಯೋಗ, ಹಣದ ಚಿಂತೆಯೇ ಇರಲ್ಲ
ಮಹಾಲಕ್ಷ್ಮಿ ರಾಜಯೋಗದ ಸಮಯದಲ್ಲಿ ಸಂಪತ್ತಿಗೆ ಕೊರತೆಯೇ ಇರಲ್ಲ. ಮಹಾಲಕ್ಷ್ಮಿ ಕೃಪೆ ಇರುವುದರಿಂದ ಮುಟ್ಟಿದ್ದೆಲ್ಲಾ ಚಿನ್ನ ಎಂಬಂತೆ ಅದೃಷ್ಟದ ಮಹಾಭಾಗ್ಯವೇ ದೊರೆಯಲಿದೆ.
ಚಂದ್ರ ಹಾಗೂ ಮಂಗಳ ಸಂಯೋಗದಿಂದ ಮಹಾಲಕ್ಷ್ಮಿ ರಾಜಯೋಗ ಉಂಟಾಗಿದೆ:
ಸುಮಾರು 18 ಮಾಸದ ಬಳಿಕ ಮಹಾಲಕ್ಷ್ಮಿ ರಾಜಯೋಗದಂಥ ಮಂಗಳಕರ ರಾಜ ಯೋಗವನ್ನು ಸೃಷ್ಟಿಸಿದೆ, ಈ ರಾಜಯೋಗ ಕೆಲವು ರಾಶಿಗಳಿಗೆ ಅತ್ಯಂತ ಶುಭವಾಗಿದೆ.

ಈ ಅವಧಿ ಆರ್ಥಿಕ ಲಾಭ ಕಂಡು ಬರುವುದು, ಈ ಮಹಾಲಕ್ಷ್ಮಿ ರಾಜಯೋಗ ಈ ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ:
ಮೇಷ ರಾಶಿ
ಮಂಗಳ ಮತ್ತು ಚಂದ್ರನ ಸಂಯೋಗದಿಂದಾಗಿ ಉಂಟಾದ ಮಹಾಲಕ್ಷ್ಮಿ ರಾಜಯೋಗವು ಮೇಷ ರಾಶಿಯವರಿಗೆ ತುಂಬಾ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಆರ್ಥಿಕವಾಗಿ ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ಉದ್ಯೋಗ ಮತ್ತು ವ್ಯವಹಾರ ಕ್ಷೇತ್ರದಲ್ಲಿ ಗಣನೀಯ ಯಶಸ್ಸು ಸಿಗಲಿದೆ. ವೈವಾಹಿಕ ಜೀವನದಲ್ಲಿ ಸಂತೋಷ, ನೆಮ್ಮದಿ ಇರಲಿದೆ. ಸಮಾಜದಲ್ಲಿ ಸ್ಥಾನ ಮಾನ ಇರಲಿದೆ.
ಇನ್ನು ಈ ಅವಧಿಯಲ್ಲಿ ನೀವು ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ಇದರಲ್ಲಿ ಯಶಸ್ಸು ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಬಲಗೊಳ್ಳುತ್ತದೆ. ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ ಸಿಗಲಿದೆ.
ಕರ್ಕ ರಾಶಿ
ಮಂಗಳ ಮತ್ತು ಚಂದ್ರರ ಸಂಯೋಗದಿಂದ ರೂಪುಗೊಂಡ ಮಹಾಲಕ್ಷ್ಮಿ ರಾಜಯೋಗವು ಕರ್ಕ ರಾಶಿಯವರಿಗೆ ತುಂಬಾ ಶುಭವಾಗಿದೆ. ಈ ರಾಜಯೋಗವು ನಿಮ್ಮ ಹತ್ತನೇ ಮನೆಯಲ್ಲಿ ಅಂದರೆ ಕರ್ಮದ ಮನೆಯಲ್ಲಿ ರೂಪುಗೊಳ್ಳಲಿದೆ. ನೀವು ವಾಹನ ಅಥವಾ ಆಸ್ತಿಯನ್ನು ಖರೀದಿಸಲು ತುಂಬಾ ಸಮಯದಿಂದ ಯೋಚಿಸುತ್ತಿದ್ದರೆ ಈ ಅವಧಿ ಉತ್ತಮವಾಗಿದೆ.
ಉದ್ಯೋಗದಲ್ಲಿ ಉತ್ತಮ ಬಡ್ತಿ ಸಿಗಲಿದೆ, ವಿದೇಶಕ್ಕೆ ಹೋಗಲು ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಯಶಸ್ಸು ಸಿಗಲಿದೆ. ಇನ್ನು ಹಣಕ್ಕಾಗಿ ಪ್ರಯತ್ನ ಮಾಡುತ್ತಿದ್ದರೆ ಹಣವು ಕೈ ಸೇರಲಿದೆ. ಸಾಲ ಮಾಡಿದ್ದರೆ ಈ ಸಮಯದಲ್ಲಿ ಸಾಲ ಮುಗಿಸಲು ಸಾಧ್ಯವಾಗುವುದು.
ತುಲಾ ರಾಶಿ
ಮಹಾಲಕ್ಷ್ಮಿ ರಾಜಯೋಗ ತುಲಾ ರಾಶಿಯವರಿಗೆ ತುಂಬಾ ಅನುಕೂಲಕರವಾಗಿದೆ. ಈ ರಾಜಯೋಗವು ಏಳನೇ ಮನೆಯಲ್ಲಿ ರಚನೆಯಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ಈ ಅವಧಿಯಲ್ಲಿ ನಿಮ್ಮ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ. ಕುಟುಂಬ ಬದುಕಿನಲ್ಲಿ ಸಂತೋಷ ಇರಲಿದೆ, ಈ ಅವಧಿಯಲ್ಲಿ ಹಣದ ಕಾರಣದಿಂದ ಬಾಕಿಯುಳಿದಿರುವ ಕೆಲಸಗಳು ಪೂರ್ಣವಾಗಲಿದೆ. ವ್ಯಾಪಾರಿಗಳಿಗೆ ಉತ್ತಮವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications