Latest Updates
-
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ!
ಮಂಗಳ-ಚಂದ್ರ ಸಂಯೋಗದಿಂದ ಮಹಾಭಾಗ್ಯ ರಾಜಯೋಗ: ಯಾವ ರಾಶಿಯವರಿಗೆ ಜಾಕ್‌ಪಾಟ್..!?
2025ರಲ್ಲಿ ಗ್ರಹಗತಿಯಲ್ಲಿ ಬದಲಾವಣೆಯು ನಿಮ್ಮ ರಾಶಿಯಲ್ಲಿ ಹಲವು ಯೋಗಗಳಿಗೆ ಕಾರಣವಾಗುತ್ತಿದೆ. ಅಂತಹ ಹಲವು ಯೋಗಗಳಲ್ಲಿ ನಾವಿಂದು ಮಂಗಳ ಹಾಗೂ ಚಂದ್ರನ ಸಂಕ್ರಮಣದಿಂದಾಗಿ ಹಲವು ರಾಶಿಯವರಿಗೆ ಲಾಭದಾಯಕ ದಿನಗಳು ಬರಲಿದೆ ಹಾಗೆ ಮಹಾಭಾಗ್ಯ ರಾಜಯೋಗ ಉಂಟಾಗುತ್ತಿದೆ. ಈ ಯೋಗದಿಂದ ಯಾರಿಗೆಲ್ಲಾ ಲಾಭವಾಗಲಿದೆ ಎನ್ನುವುದನ್ನು ನಾವಿಂದು ತಿಳಿದುಕೊಳ್ಳೋಣ.
ಚಂದ್ರ ಒಂದು ರಾಶಿಯಲ್ಲಿ ಕೇವಲ ಎರಡೂವರೆ ದಿನಗಳ ಕಾಲ ಮಾತ್ರವೇ ಇರಲಿದೆ. ಹೀಗಾಗಿ ಚಂದ್ರನಿಂದ ಉಂಟಾಗುವಂತಹ ಯೋಗವು ಕಡಿಮೆ ಸಮಯದ ವರೆಗೆ ಇರಲಿದೆ. ಆ ರೀತಿಯಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಮಂಗಳ ಮತ್ತು ಚಂದ್ರರ ಸಂಯೋಗದಿಂದ ಅತ್ಯಂತ ಮಂಗಳಕರವಾದ ಮಹಾ ಭಾಗ್ಯ ರಾಜಯೋಗ ಉಂಟಾಗುತ್ತದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಡಿಸೆಂಬರ್ 17 ರಂದು ಚಂದ್ರನು ಕರ್ಕ ರಾಶಿಯನ್ನು ಪ್ರವೇಶಿಸುತ್ತಾನೆ. ಮಂಗಳ ಗ್ರಹವು ಈಗಾಗಲೇ ಈ ಕರ್ಕ ರಾಶಿಯಲ್ಲಿ ಸಂಚರಿಸುತ್ತಿರುವುದು ಹೊಸ ಯೋಗಕ್ಕೆ ಕಾರಣವಾಗುತ್ತಿದೆ. ಮಂಗಳ ಮತ್ತು ಚಂದ್ರರ ಸಂಯೋಗದಿಂದ ಮಹಾ ಭಾಗ್ಯ ರಾಜಯೋಗ ಉಂಟಾಗುತ್ತಿರುವುದು ಹಲವು ರಾಶಿಗಳಿಗೆ ಶುಭವಾಗುತ್ತಿದೆ.
ಈ ಮಹಾ ಭಾಗ್ಯ ರಾಜಯೋಗವು ಡಿಸೆಂಬರ್ 20ರ ವರೆಗೂ ಇರಲಿದೆ. ಹಾಗಾದ್ರೆ ಈ ರಾಜಯೋಗದ ಪರಿಣಾಮ ಯಾವ ರಾಶಿಯ ಮೇಲೆ ಯಾವ ರೀತಿ ಪ್ರಭಾವ ಬೀರುತ್ತಿದೆ ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.
ಮೇಷ ರಾಶಿ
ಮೇಷ ರಾಶಿಯ 4ನೇ ಮನೆಯಲ್ಲಿ ಮಹಾಭಾಗ್ಯ ರಾಜಯೋಗವು ರೂಪುಗೊಳ್ಳುತ್ತದೆ. ಈ ರಾಶಿ ಜನರಲ್ಲಿ ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಅವಕಾಶ ಸಿಗುತ್ತದೆ. ಕೌಟುಂಬಿಕ ಸಮಸ್ಯೆಗಳು ಕೊನೆಗೊಳ್ಳುತ್ತವೆ. ನಿಮ್ಮ ಅನುಕೂಲಕ್ಕೆ ತಕ್ಕಂತಹ ವಾತಾವರಣವು ಸೃಷ್ಟಿಯಾಗಲಿದೆ. ನಿಮ್ಮ ಕನಸುಗಳಿಗೆ ನೀವು ಹತ್ತಿರವಾಗುವಂತಹ ದಿನಗಳಿರಬಹುದು. ಹೊಸ ಆದಾಯದ ಮೂಲಗಳು ಹುಟ್ಟಿಕೊಳ್ಳಿದೆ. ವ್ಯಾಪಾರಸ್ಥರಿಗೆ ಒಳ್ಳೆಯ ಕಾಲವಾಗುವ ಲಕ್ಷಣವಿದೆ.
ಸಿಂಹ ರಾಶಿ
ಸಿಂಹ ರಾಶಿಯ 9ನೇ ಮನೆಯಲ್ಲಿ ಮಹಾ ಭಾಗ್ಯ ರಾಜಯೋಗವು ರೂಪುಗೊಳ್ಳುತ್ತದೆ. ಹೀಗಾಗಿ ಸಿಂಹ ರಾಶಿಯವರು ಹೊಸ ಉದ್ಯೋಗವಕಾಶ ಸಿಗಬಹುದು. ವ್ಯಾಪಾರಿಗಳಿಗೆ ಲಾಭದಾಯಕ ದಿನವಾಗಲಿದೆ. ನೀವು ಉತ್ತಮ ಹಣ ಗಳಿಸುವ ಸಾಧ್ಯತೆ ಇದೆ. ವಿದ್ಯಾರ್ಥಿಗಳಿಗೆ ಈ ಸಮಯ ಉತ್ತಮವಾಗಿರಲಿದೆ. ಉದ್ಯೋಗಿಗಳಲ್ಲಿ ಕಚೇರಿ ಕಡೆಯಿಂದ ಉತ್ತಮ ಪ್ರಶಂಸೆ ಸಿಗಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯ 11ನೇ ಮನೆಯಲ್ಲಿ ಮಹಾ ಭಾಗ್ಯ ರಾಜಯೋಗವು ರೂಪುಗೊಳ್ಳಲಿದೆ. ಹೀಗಾಗಿ ಈ ರಾಶಿಯವರಲ್ಲಿ ಬಾಕಿ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಸಂಗಾತಿಯೊಂದಿಗೆ ನಿಮ್ಮ ಭಾಂದವ್ಯ ವೃದ್ಧಿಯಾಗಲಿದೆ. ವರ್ಷಗಳ ಹಿಂದಿನ ನಿಮ್ಮ ಅನಾರೋಗ್ಯ ಸಮಸ್ಯೆ ಸುಧಾರಣೆಯಾಗಲಿದೆ.
ಮೀನ ರಾಶಿ
ಮೀನ ರಾಶಿಯವರಲ್ಲಿ ಈ ಮಹಾ ಭಾಗ್ಯ ರಾಜಯೋಗದಿಂದ ಮಿಶ್ರ ಫಲ ನೋಡಬಹುದು. ನೀವು ಊಹಿಸಿದಂತೆ ನಿಮ್ಮ ಆದಾಯದಲ್ಲಿ ಏರಿಕೆ ಕಂಡರೂ ಕೂಡ ಖರ್ಚು ಕೂಡ ಹೆಚ್ಚಾಗಲಿದೆ. ಹಾಗೆ ನಿಮ್ಮ ಆರೋಗ್ಯದಲ್ಲಿ ಸುಧಾರಣೆ ಕಾಣಲಿದ್ದೀರಿ. ದೂರ ಪ್ರಯಾಣದಂತಹ ಕೆಲಸಕ್ಕೆ ನೀವು ಮುಂದಾಗಬೇಕಾಗಬಹುದು. ಮಾನಸಿಕ ನೆಮ್ಮದಿ ಹಾಗೂ ಶಾಂತಿ ನೆಲಸಲಿದೆ.
(ಹಕ್ಕುತ್ಯಾಗ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಊಹೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ ಮತ್ತು ವಿಶ್ವಾಸಾರ್ಹತೆಯನ್ನು ಖಾತರಿಪಡಿಸಲಾಗಿಲ್ಲ. ಈ ಲೇಖನಕ್ಕೆ ಸಂಬಂಧಿಸಿದ ಮಾಹಿತಿಯನ್ನು ದೃಢೀಕರಿಸುವುದಿಲ್ಲ. ಮತ್ತು ಮಾಹಿತಿಯನ್ನು ಒದಗಿಸುವುದು ನಮ್ಮ ಏಕೈಕ ಉದ್ದೇಶವಾಗಿದೆ)
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications