Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಮಂಗಳ ಸಂಚಾರದಿಂದ ಈ ರಾಶಿಗಳಿಗೆ 42 ದಿನ ಇದೆ ರಾಜಯೋಗದ ಬೆಂಬಲ
ಮಂಗಳ ಗ್ರಹವು ಮೇಷ ರಾಶಿಗೆ ಸಂಚರಿಸಿದೆ, ಇನ್ನು 42 ದಿನಗಳವರೆಗೆ ಇದೇ ರಾಶಿಯಲ್ಲಿ ಇರಲಿದೆ. ಈ ಮಂಗಳ ಸಂಚಾರ ರಾಜಯೋಗವನ್ನು ಸೃಷ್ಟಿಸಿದೆ. ಈ ರಾಜಯೋಗ ಹಲವು ರಾಶಿಗಳಿಗೆ ತುಂಬಾನೇ ಅನುಕೂಲಕರವಾಗಿದೆ.

ಮಂಗಳ ಸಂಚಾರ ರಾಜಯೋಗ
ಮೇಷ ರಾಶಿಯಲ್ಲಿ ಮಂಗಳ 42 ದಿನಗಳು ಇರುವಷ್ಟು ಸಮಯ ನಾಲ್ಕು ರಾಶಿಯವರಿಗೆ ಆರ್ಥಿಕವಾಗಿ ತುಂಬಾನೇ ಪ್ರಯೋಜನಕಾರಿಯಾಗಿದೆ. ಮೇಷ ಮತ್ತು ವೃಶ್ಚಿಕದಲ್ಲಿ ಮಂಗಳವು ಕೇಂದ್ರ ಸ್ಥಾನದಲ್ಲಿದ್ದಾಗ ಈ ರಾಜಯೋಗವು ರೂಪುಗೊಳ್ಳುತ್ತದೆ. ಈ ಅದ್ಭುತ ಯೋಗದಿಂದಾಗಿ ಈ ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ.
ಮೇಷ ರಾಶಿ: ಈ ಮಂಗಳ ಸಂಚಾರದಿಂದ ರೂಪುಗೊಂಡ ರಾಜಯೋಗ ಮೇಷ ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ. ಮಂಗಳ ಗ್ರಹದ ಸಂಚಾರವು ನಿಮ್ಮ ವೃತ್ತಿಜೀವನದಲ್ಲಿ ಪ್ರಗತಿಯನ್ನು ತರುತ್ತದೆ, ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ಸಹಾಯ ಮಾಡುತ್ತದೆ, ವ್ಯವಹಾರದಲ್ಲಿ ಉತ್ತಮ ಪ್ರಗತಿ ಕಾಣತ್ತೀರಿ.
ಕರ್ಕ ರಾಶಿ: ಕರ್ಕ ರಾಶಿಯವರಿಗೆ ಈ ಮಂಗಳ ಸಂಚಾರದಿಂದಾಗಿ ಉಂಟಾದ ರಾಜಯೋಗದಿಂದಾಗಿ ಶುಭ ಫಲಿತಾಂಶ ಸಿಗಲಿದೆ.ಈ ಸಮಯದಲ್ಲಿ ನೀವು ಬಯಸಿದ ಕೆಲಸ ಸಿಗಲಿದೆ, ನಿಮ್ಮ ಎಲ್ಲಾ ಇಷ್ಟಾರ್ಥಗಳೆಲ್ಲ ಈಡೇರುತ್ತವೆ, ಆದಾಯ ಹೆಚ್ಚಾಗಲಿದೆ, ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ.
ಸಿಂಹ ರಾಶಿ: ಸಿಂಹ ರಾಶಿಯವರು ಈ ರಾಜಯೋಗದಿಂದಾಗಿ ಉತ್ತಮ ಪ್ರಯೋಜನ ಪಡೆಯುತ್ತೀರಿ, ನಿಮ್ಮ ಎಲ್ಲಾ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ, ಕೆಲಸದ ಸ್ಥಳದಲ್ಲಿ ನೀವು ಮೆಚ್ಚುಗೆ ಪಡೆಯುತ್ತೀರಿ, ವ್ಯಾಪಾರಿಗಳು ಹಣವನ್ನು ಪಡೆಯುವ ಸಾಧ್ಯತೆಗಳಿವೆ, ಉದ್ಯೋಗಿಗಳು ಆರ್ಥಿಕ ಲಾಭವನ್ನು ಪಡೆಯುತ್ತಾರೆ.
ಧನು ರಾಶಿ : ಮಂಗಳನ ಸಂಕ್ರಮಣದಿಂದ ರೂಪುಗೊಂಡ ರಾಜಯೋಗವು ನಿಮಗೆ ಶುಭಫಲಿತಾಂಶ ನೀಡಲಿದೆ. ವಿದೇಶಕ್ಕೆ ಹೋಗಲು ಪ್ರಯತ್ನಿಸುತ್ತಿರುವವರೆಗೆ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ವೃತ್ತಿಜೀವನದಲ್ಲಿ ಪ್ರಗತಿ ಕಂಡು ಬರಲಿದೆ. ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಬುಧನು ಮೇಷ ರಾಶಿಯಲ್ಲಿ ಮಂಗಳವು ಆರಾಮದಾಯಕ ಮತ್ತು ಬಲವಾದ ಸ್ಥಾನದಲ್ಲಿದೆ.
ಬುಧನು ಮಂಗಳನ ಸ್ಥಾನದಲ್ಲಿ ಇರುವಾಗ ಈ ಪ್ರಯೋಜನಗಳಿವೆ
ಈ ಸಮಯ ವೈದ್ಯಕೀಯ, ಕಾನೂನು, ಸಿವಿಲ್ ಎಂಜಿನಿಯರಿಂಗ್, ದೈಹಿಕ ತರಬೇತಿ ಮುಂತಾದ ಕ್ಷೇತ್ರಗಳು ಈ ಅವಧಿಯಲ್ಲಿ ಪ್ರಮುಖವಾಗಿರುತ್ತವೆ.
ವೈದ್ಯಕೀಯ, ಕೃಷಿ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಂಡು ಬರಲಿದೆ
ಆರೋಗ್ಯದ ಕಡಗೆ ಹೆಚ್ಚಿನ ಗಮನಹರಿಸುತ್ತೀರಿ
ಮೇಷ ರಾಶಿ
ಮಂಗಳ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ, ವೃತ್ತಿ ಜೀವನದಲ್ಲಿ ಉತ್ತಮ ಅ ಯಶಸ್ಸು ಸಿಗಲಿದೆ, ನೀವು ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ಪಡೆಯುತ್ತೀರಿ. ವ್ಯಾಪಾರಿಗಳಿಗೆ ಧನಾತ್ಮಕವಾಗಿರಲಿದೆ.
ಕರ್ಕ ರಾಶಿ
ಮಂಗಳ ಮೇಷ ರಾಶಿಯಲ್ಲಿರುವ ಈ ಅವಧ ಅನುಕೂಲಕರವಾಗಿದೆ, ಈ ಸಂಚಾರದ ಸಮಯದಲ್ಲಿ ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಸಿಗಲಿದೆ. ಸರ್ಕಾರಿ ಕೆಲಸಕ್ಕೆ ಮಾಡುವ ಪ್ರಯತ್ನಗಳಲ್ಲಿ ಉತ್ತಮ ಫಲ ಸಿಗಲಿದೆ, ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆ ಬಗೆಹರಿಯಲಿದೆ, ನಿಮ್ಮ ಬಹುದೊಡ್ಡ ಆಸೆ ಈಡೇರಲಿದೆ.
ವೃಶ್ಚಿಕ ರಾಶಿ
ಈ ಮಂಗಳ ಸಂಚಾರ ನಿಮಗೆ ತುಂಬಾನೇ ಚೆನ್ನಾಗಿರಲಿದೆ, ಕುಟುಂಬದಲ್ಲಿ ಸಂತೋಷ ಇರಲಿದೆ, ಶುಭ ಕಾರ್ಯಗಳು ನಡೆಯಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ, ಈ ಸಮಯದಲ್ಲಿ ಯಾರಿಗೂ ಸಾಲ ನೀಡಬೇಡಿ.
ಧನು ರಾಶಿ
ಧನು ರಾಶಿಯವರು ಮಂಗಳನ ಪ್ರಭಾವದಿಂದ ನೀವು ಉತ್ತಮ ಪ್ರಯೋಜ ಪಡೆಯುತ್ತೀರಿ. ವಿದೇಶಕ್ಕೆ ಹೋಗಲು ಬಯಸುವವರಿಗೆ ಈ ಅವಧಿ ಉತ್ತಮವಾಗಿದೆ. ವೈವಾಹಿಕ ಜೀವನದಲ್ಲಿ ನೆಮ್ಮದಿ, ಖುಷಿ ಇರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
