Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಮಂಗಳ ಸಂಚಾರ: ಜನವರಿ 21ರಿಂದ ಈ 5 ರಾಶಿಗಳಿಗೆ ಆರ್ಥಿಕ ಸಮಸ್ಯೆ ಇರಲ್ಲ!
ನವಗ್ರಹಗಳಲ್ಲಿ ಪ್ರತಿಯೊಂದು ಗ್ರಹವು ನಿರ್ದಿಷ್ಟ ಸಮಯಕ್ಕೆ ರಾಶಿ ಬದಲಾವಣೆ ಮಾಡುತ್ತದೆ, ಸೂರ್ಯ ಪ್ರತಿ ಮಾಸ ರಾಶಿ ಬದಲಾವಣೆ ಮಾಡಿದರೆ ಮಂಗಳನು ಪ್ರತಿ 45 ದಿನಕ್ಕೊಮ್ಮೆ ರಾಶಿ ಬದಲಾವಣೆ ಮಾಡುತ್ತದೆ. ಈ ಜನವರಿ 21ಕ್ಕೆ ರಾಶಿ ಬದಲಾವಣೆ ಮಾಡುತ್ತಿದೆ. ಮಂಗಳನು ಬೆಳಗ್ಗೆ 8 ಗಂಟೆಗೆ ರಾಶಿ ಬದಲಾವಣೆ ಮಾಡುತ್ತಿದೆ. ಈ ಸಂಚಾರೆ 12 ರಾಶಿಗಳ ಮೇಲೆ ಪ್ರಭಾವ ಬೀರುತ್ತದೆ, ಈ ಸಂಚಾರ ಯಾವ ರಾಶಿಗೆ ಹೇಗೆ ಪ್ರಭಾವ ಹೇಗಿರಲಿದೆ ನೋಡೋಣ:

ಮೇಷ ರಾಶಿ
ಈ ಮಂಗಳ ಸಂಚಾರ ಅನುಕೂಲಕವಾಗಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಸಾಮಾಜಿಕವಾಗಿಯೂ ಖ್ಯಾತಿ ಹೆಚ್ಚಾಗಲಿದೆ. ಈ ಮಂಗಳ ಸಂಚಾರ ಕುಟುಂಬದ ಮೇಲೆ ಕೂಡ ಉತ್ತಮ ಪ್ರಯೋಜನ ಬೀರಲಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಇನ್ನು ಯಾವುದಾದರು ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡುತ್ತಿದ್ದರೆ ಅದರಲ್ಲಿ ಯಶಸ್ಸು ದೊರೆಯಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಆರ್ಥಿಕ ಲಾಭ ದೊರೆಯಲಿದೆ. ವೃತ್ತಿ ಜೀವನದಲ್ಲಿ ಬದಲಾವಣೆ ಬಯಸಿದರೆ ಈ ಅವಧಿ ಅನುಕೂಲರವಾಗಿದೆ. ಕೆಲಸ ಕಾರ್ಯಗಳು ನೀವು ಅಂದುಕೊಂಡಂತೆ ನಡೆಯಲಿದೆ, ಕೆಲಸದಲ್ಲಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ. ಬಡ್ತಿ ನಿರೀಕ್ಷೆಯಲ್ಲಿರುವರು ಉತ್ತಮ ಲಾಭ ಗಳಿಸುತ್ತೀರಿ. ಉದ್ಯಮಿಗಳು ಹೊಸ ಉದ್ಯಮ ಪ್ರಾರಂಭಿಸಲು ಬಯಸಿದರೆ ಅಥವಾ ಹೊಸ ಹೂಡಿಕೆ ಮಾಡಲು ಬಯಸಿದ್ದರೆ ಈ ಅವಧಿ ಅನುಕೂಲಕರವಾಗಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ಮಂಗಳ ಸಂಚಾರದಿಂದ ಕನ್ಯಾ ರಾಶಿಯವರು ಅತ್ಯುತ್ತಮವಾದ ಪ್ರಯೋಜನ ಪಡೆಯುತ್ತೀರಿ, ಮಂಗಳನು ಹತ್ತನೇ ಮನೆಯಲ್ಲಿದೆ, ಇದು ಕರ್ಮದ ಮನೆಯಾಗಿದೆ, ಈ ಮನೆ ನಿಮಗೆ ಅದೃಷ್ಟವನ್ನು ತರಲಿದೆ. ಹಾಗಾಗಿ ಈ ಅವಧಿ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ, ಈ ಸಮಯದಲ್ಲಿ ನೀವು ಮಾಡುವ ಆರ್ಥಿಕ ಪ್ರಯತ್ನಕ್ಕೆ ಉತ್ತಮ ಪ್ರತಿಫಲ ಸಿಗಲಿದೆ. ವ್ಯಾಪಾರಿಗಳು ಉತ್ತಮ ಪ್ರಯೋಜನ ಪಡೆಯುತ್ತೀರಿ. ನೀವು ಹಣಕಾಸಿನ ಪರಿಸ್ಥಿತಿಯಲ್ಲಿ ಉತ್ತಮ ಬೆಳವಣಿಗೆ ಕಾಣುತ್ತೀರಿ, ಉಳಿತಾಯ ಮಾಡಲು ಸಾಧ್ಯವಾಗಲಿದೆ. ಈ ಮಂಗಳ ಸಂಚಾರೆ ಕುಟುಂಬ ಜೀವನದ ದೃಷ್ಟಿಯಿಂದಲೂ ಉತ್ತಮವಾಗಿರಲಿದೆ.
ಮೀನ ರಾಶಿ
ಜನವರಿ 21ರಿಂದ ಮೀನ ರಾಶಿಯವರಲ್ಲಿ ಮಂಗಳನು 5ನೇ ಮನೆಯಲ್ಲಿ ಇರಲಿದೆ. ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ. ಉದ್ಯೋಗಿಗಳು ಈ ಸಂಚಾರದ ಸಮಯದಲ್ಲಿ ಉತ್ತಮ ಫಲ ಪಡೆಯುತ್ತೀರಿ. ವ್ಯಾಪಾರಸ್ಥರು ಉತ್ತಮ ಲಾಭ ಪಡೆಯುತ್ತೀರಿ. ನಿಮ್ಮ ಪ್ರೇಮ ಬಾಂಧವ್ಯ ಗಟ್ಟಿಯಾಗಲಿದೆ, ನಿಮ್ಮ ಮದುವೆಯ ಮಾತುಕತೆಗೆ ಈ ಅವಧಿ ಅನುಕೂಲಕರವಾಗಿದೆ. ವಿವಾಹಿತರ ವೈವಾಹಿಕ ಜೀವನ ಕೂಡಚೆನ್ನಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
