Latest Updates
-
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ
ಮಿಥುನ ರಾಶಿಯಲ್ಲಿ ಮಂಗಳ ಸಂಚಾರ: ದ್ವಾದಶ ರಾಶಿಗಳ ಮೇಲೆ ಇದರ ಪ್ರಭಾವ ಹೀಗಿರಲಿದೆ?
ಮೇ 1ಕ್ಕೆ ವೃಷಭ ರಾಶಿಯನ್ನು ಪ್ರವೇಶಿಸಿದ್ದ ಮಂಗಳನು ಆಗಸ್ಟ್ 26ಕ್ಕೆ ಮಿಥುನ ರಾಶಿಗೆ ಸಂಚರಿಸಿದೆ. ಮಂಗಳನನ್ನು ಕ್ಷುದ್ರಗ್ರಹವೆಂದು ಪರಿಗಣಿಸಲಾಗಿದೆ. ಮಂಗಳನು ಅನುಕೂಲಕರ ಸ್ಥಾನದಲ್ಲಿದ್ದರೆ ತುಂಬಾನೇ ಒಳ್ಳೆಯ ಪ್ರಭಾವ ಬೀರುತ್ತದೆ. ಮಂಗಳನು ಮಿಥುನ ರಾಶಿಗೆ ಸಂಚರಿಸಿದಾಗ ದ್ವಾದಶ ರಾಶಿಗಳ ಮೇಲೆ ಇದರ ಪ್ರಬಾವ ಹೇಗಿರಲಿದೆ?

ಮೇಷ ರಾಶಿ
ಮಿಥುನ ರಾಶಿಯಲ್ಲಿ ಮಂಗಳನ ಸಂಚಾರವು ನಿಮಗೆ ಅನಿರೀಕ್ಷಿತ ಆರ್ಥಿಕ ಲಾಭವನ್ನು ತರುತ್ತದೆ , ಈ ಅವಧಿಯಲ್ಲಿ ಆರೋಗ್ಯ ಸಮಸ್ಯೆ ಇದ್ದರೆ ಸುಧಾರಣೆ ಕಂಡು ಬರುವುದು. ವೃತ್ತಿ ಬದುಕಿನಲ್ಲಿ ಸಮಸ್ಯೆ ಎದುರಿಸುತ್ತಿದ್ದರೆ ಈ ಅವಧಿಯಲ್ಲಿ ಸಮಸ್ಯೆ ಬಗೆಹರಿಯಲಿದೆ. ಪಾಲುದಾರಿಕೆಯ ವ್ಯಾಪಾರ ಮಾಡುತ್ತಿದ್ದರೆ ಈ ಅವಧಿಯಲ್ಲಿ ಲಾಭ ಕಡಿಮೆಯಾಗುವುದು. ಆರ್ಥಿಕವಾಗಿ ನೋಡುವುದಾದರೆ ಖರ್ಚು ಹೆಚ್ಚಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಭುಜ ನೋವು, ಕೈ ಕಾಲುಗಳಲ್ಲಿ ನೋವು ಉಂಟಾಗಬಹುದು.
ವೃಷಭ ರಾಶಿ
ವೃಷಭ ರಾಶಿಯವರಿಗೆ ಮಂಗಳನ ಈ ಸಂಚಾರ ಅನುಕೂಲಕರವಲ್ಲ. ವೃತ್ತಿ ಬದುಕಿನಲ್ಲಿ ಕೆಲ ಅಡೆತಡೆಗಳು ಎದುರಿಸಬಹುದು. ಆರ್ಥಿಕವಾಗಿ ನೋಡುವುದಾದರೆ ಈ ಅವಧಿ ಉತ್ತಮವಾಗಿದೆ, ವ್ಯಾಪಾರಿಗಳು ಅರ್ಥಿಕ ಲಾಭ ಪಡೆಯುತ್ತೀರಿ. ಆರೋಗ್ಯದ ಕಡೆಗೆ ಗಮನಹರಿಸಬೇಕು, ಇಲ್ಲದಿದ್ದರೆ ಆರೋಗ್ಯಕ್ಕಾಗಿ ಹೆಚ್ಚಿನ ಹಣ ಖರ್ಚಾಗುವುದು.
ಮಿಥುನ ರಾಶಿ
ಮಿಥುನ ರಾಶಿಯಲ್ಲಿ ಮಂಗಳದ ಸಂಚಾರವು ಸಂಬಂಧದ ವಿಷಯದಲ್ಲಿ ಅನುಕೂಲಕರವಲ್ಲ. ಕೆಲಸದಲ್ಲಿ ತೃಪ್ತಿ ಇರಲ್ಲ,
ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ವ್ಯಾಪಾರ ಪಾಲುದಾರರೊಂದಿಗೆ ನೀವು ಭಿನ್ನಾಭಿಪ್ರಾಯಗಳನ್ನು ಹೊಂದುವ ಸಾಧ್ಯತೆಯಿದೆ. ಆರ್ಥಿಕವಾಗಿ ಕೂಡ ಕೆಲ ನಷ್ಟ ಅನುಭವಿಸಬಹುದು, ಇನ್ನು ಗಂಡ-ಹೆಂಡತಿ ನಡುವೆ ಭಿನ್ನಾಭಿಪ್ರಾಯವಿರಲಿದೆ.
ಕರ್ಕ ರಾಶಿ
ಮಂಗಳ 12ನೇ ಮನೆಯಲ್ಲಿ ಇರುವ ಈ ಅವಧಿಯಲ್ಲಿ ಆರ್ಥಿಕ ಕೊರತೆ ಉಂಟಾಗುವುದು, ಸಂಗಾತಿಯ ಜೊತೆಗೆ ಹೊಂದಾಣಿಕೆಯಲ್ಲಿ ಕೊರತೆ ಕಂಡು ಬರುವುದು. ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ಅನುಕೂಲಕರವಲ್ಲ, ಕೆಲಸದಲ್ಲಿನ ವರ್ಗಾವಣೆ, ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗದಿರುವುದು ಇವೆಲ್ಲಾ ಕೆಲಸದಲ್ಲಿ ಅತೃಪ್ತಿ ಹೆಚ್ಚಾಗಲಿದೆ. ಆಹಾರಕ್ರಮದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಮಿಥುನ ರಾಶಿಯಲ್ಲಿ ಮಂಗಳದ ಸಂಚಾರವು ನಿಮಗೆ ಆರ್ಥಿಕ ಲಾಭ ಉಂಟಾಗಲಿದೆ, ನಿಮ್ಮಾಸೆ ಈಡೇರಲಿದೆ, ಕೆಲಸದಲ್ಲಿ ಉತ್ತಮ ಪ್ರತಿಫಲ ಪಡೆಯುತ್ತೀರಿ. ವ್ಯಾಪಾರದಲ್ಲಿ ಉತ್ತಮ ಲಾಭ ಗಳಿಸುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನಿಮ್ಮ ಅರೋಗ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರು ಮಂಗಳನ ಪ್ರಭಾವದಿಂದ ವೃತ್ತಿ ಬದುಕಿನಲ್ಲಿ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ, ವ್ಯಾಪಾರಿಗಳು ಈ ಅವಧಿಯಲ್ಲಿ ಲಾಭ ಪಡೆಯುತ್ತೀರಿ. ಆದಾಯ ತುಂಬಾ ಚೆನ್ನಾಗಿರಲಿದೆ, ಹಾಗಾಗಿ ಹಣ ಉಳಿಸಲು ಸಾಧ್ಯವಾಗುವುದು. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಮಂಗಳವು ಎರಡು ಮತ್ತು ಏಳನೇ ಮನೆಯ ಅಧಿಪತಿಯಾಗಿದ್ದು ಒಂಬತ್ತನೇ ಮನೆಯಲ್ಲಿ ಸಾಗಲಿದ್ದಾನೆ. ಮಂಗಳನ ಬದಲಾವಣೆಯಿಂದಾಗಿ, ನಿಮ್ಮ ಅದೃಷ್ಟ, ಆಧ್ಯಾತ್ಮಿಕ ವಿಷಯಗಳಲ್ಲಿ ಆಸಕ್ತಿ ಮತ್ತು ಜೀವನದಲ್ಲಿ ಸಂತೋಷವನ್ನು ಕಾಣುವಲ್ಲಿ ನೀವು ಕೆಲವು ಅಡೆತಡೆಗಳನ್ನು ಎದುರಿಸಬಹುದು.
ವೃಶ್ಚಿಕ ರಾಶಿ
ಈ ಮಂಗಳ ಸಂಚಾರ ವೃಶ್ಚಿಕ ರಾಶಿಯವರಿಗೆ ಅನುಕೂಲಕರವಲ್ಲ, ನಿಮ್ಮ ವೈಯಕ್ತಿಕ ಜೀವನದಲ್ಲಿ ನೀವು ಕೆಲವು ಸಮಸ್ಯೆಗಳು ಎದುರಾಗುವುದು. ವೃತ್ತಿ ಸಮಸ್ಯೆಗಳಲ್ಲಿ, ನೀವು ಕೆಲಸದ ಒತ್ತಡ, ತೃಪ್ತಿಯ ಕೊರತೆ ಮತ್ತು ಕೆಲಸದಲ್ಲಿ ಬದಲಾವಣೆ ಈ ಬಗೆಯ ಸಮಸ್ಯೆಗಳು ಎದುರಾಗಬಹುದು. ವ್ಯಾಪಾರಿಗಳು ಲಾಭ ಗಳಿಸಲು ಹೆಚ್ಚಿನ ಶ್ರಮ ಹಾಕಬೇಕಾಗುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಧನು ರಾಶಿ
ಮಂಗಳ ಮಿಥುನ ರಾಶಿಯಲ್ಲಿರುವಾಗ ನೀವು ಹಣಕಾಸಿನ ಸಮಸ್ಯೆಗಳು, ವೈಯಕ್ತಿಕ ಜೀವನದಲ್ಲಿ ಸಮಸ್ಯೆಗಳು ಮತ್ತು ಕೆಲಸದಲ್ಲಿ ಸಮಸ್ಯೆಗಳನ್ನು ಎದುರಿಸಬಹುದು. ವ್ಯಾಪಾರಿಗಳು ಈ ಅವಧಿಯಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುವುದು. ಸಂಗಾತಿ ಜೊತೆಗೆ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯ ಸಮಸ್ಯೆಗಳಿರಬಹುದು.
ಮಕರ ರಾಶಿ
ಮಂಗಳನ ಈ ಸಂಚಾರ ಮಕರ ರಾಶಿಯವರಿಗೆ ಅನುಕೂಲಕರವಲ್ಲ, ಈ ಅವಧಿಯಲ್ಲಿ ಕೆಲಸದ ಒತ್ತಡವಿರಲಿದೆ. ವೈಯಕ್ತಿಕ ಜೀವನದಲ್ಲಿ ಹಲವು ಸಮಸ್ಯೆಗಳು ಎದುರಾಗುವುದು. ಇನ್ನು ಈ ಸಮಯದಲ್ಲಿ ಖರ್ಚು ಹೆಚ್ಚಿರಲಿದೆ. ಗಂಡ-ಹೆಂಡತಿ ನಡುವೆ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯದ ಬಗ್ಗೆ ನೋಡುವುದಾದರೆ ತಲೆನೋವು, ಸೋಂಕಿನ ಸಮಸ್ಯೆ ಕಾಡಬಹುದು.
ಕುಂಭ ರಾಶಿ
ಮಂಗಳನು ಮಿಥುನ ರಾಶಿಗೆ ಸಂಚರಿಸಿದ ಅವಧಿ ಕೂಂಭ ರಾಶಿಯವರಿಗೆ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಮಂಗಳಕರ ಘಟನೆ ನಡೆಯಲಿದೆ. ವ್ಯಾಪಾರಿಗಳು ಈ ಸಮಯದಲ್ಲಿ ಉತ್ತಮ ಲಾಭ ಪಡೆಯುತ್ತೀರಿ. ವೈಯಕ್ತಿಕ ಜೀವನ ತುಂಬಾ ಚೆನ್ನಾಗಿರಲಿದೆ. ಗಂಡ-ಹೆಂಡತಿ ನಡುವೆ ಭಿನ್ನಾಭಿಪ್ರಾಯಗಳಿದ್ದರೆ ದುರಾಗುವುದು. ಆಮದು-ರಫ್ತು ವ್ಯವಹಾರ ಮಾಡುತ್ತಿದ್ದರೆ ಈ ಅವಧಿಯಲ್ಲಿ ಲಾಭ ಪಡೆಯುತ್ತೀರಿ. ಆರೋಗ್ಯ ಚೆನ್ನಾಗಿರಲಿದೆ.
ಮೀನ ರಾಶಿ
ಮಿಥುನ ರಾಶಿಯಲ್ಲಿ ಮಂಗಳ ಸಂಚಾರ ಖರ್ಚು ಹಚ್ಚಿಸಲಿದೆ. ವ್ಯಾಪಾರಗಳು ಲಾಭ ಮತ್ತು ನಷ್ಟವನ್ನು ಎದುರಿಸಬೇಕಾಗುತ್ತದೆ.ಈ ಅವಧಿಯಲ್ಲಿ ಖರ್ಚು ಅಧಿಕವಿರಲಿದೆ. ಸಂಗಾತಿಯೊಂದಿಗೆ ಸಾಮರಸ್ಯದ ಕೊರತೆ ಇರಲಿದೆ. ಸಂಬಂಧದಲ್ಲಿ ತಹೊಂದಾಣಿಕೆಯ ಕೊರತೆ ಇರಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ರೋಗ ನಿರೋಧಕ ಶಕ್ತಿ ಕಡಿಮೆ ಇರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











