Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಭರಣಿ ನಕ್ಷತ್ರಕ್ಕೆ ಮಂಳನ ಸಂಚಾರ: ಈ 4 ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯುತ್ತೀರಿ
ಗ್ರಹಗಳ ರಾಶಿ ಬದಲಾವಣೆಯಂತೆಯೇ ನಕ್ಷತ್ರ ಬದಲಾವಣೆ ಕೂಡ ತುಂಬಾನೇ ಪ್ರಮುಖವಾದ ಅಂಶವಾಗಿದೆ. ಇದೀಗ ಮಂಗಳ ಗ್ರಹವು ಭರಣಿ ನಕ್ಷತ್ರಕ್ಕೆ ಸಂಚಾರ ಮಾಡಿದೆ. ಮಂಗಳವನ್ನು ಶೌರ್ಯದ ಗ್ರಹ, ಕೋಪ ಗ್ರಹವೆಂದು ಪರಿಗಣಿಸಲಾಗುವುದ, ಇದು ಉತ್ತಮ ಸ್ಥಾನದಲ್ಲಿದ್ದರೆ ತುಂಬಾನೇ ಒಳ್ಳೆಯ ಸ್ಥಾನ ಪಡೆಯುತ್ತಾರೆ.
ಮಂಗಳ ಭರಣಿ ನಕ್ಷತ್ರದಲ್ಲಿ ಸಂಚರಿಸಿದಾಗ ಮಂಗಳನ ಜೊತೆಗೆ ಶುಕ್ರನಿಂದಲೂ ಉತ್ತಮ ಪ್ರಯೋಜನ ಪಡೆಯಬಹುದು ಎಂದು ಹೇಳಲಾಗುವುದು. ಹಾಗಾಗಿ ಮಂಗಳ ಭರಣಿ ನಕ್ಷತ್ರದಲ್ಲಿರುವಾಗ ಕೆಲವೊಂದು ರಾಶಿಯವರು ಅತ್ಯುತ್ತಮವಾದ ಪ್ರಯೋಜನ ಪಡೆಯುತ್ತಾರೆ ಎಂದು ಹೇಳಲಾಗುವುದು, ಮಂಗಳ ಗ್ರಹವು ಭರಣಿ ನಕ್ಷತ್ರದಲ್ಲಿ ಇರುವುದರಿಂದ ಈ ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ.

ಮೇಷ ರಾಶಿ
ಮಂಗಳನು ಭರಣಿಯಲ್ಲಿ ಇರುವ ಈ ಅವಧಿಯಲ್ಲಿ ಮೇಷ ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯುತ್ತೀರಿ, ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ವ್ಯಾಪಾರಿಗಳಿಗೂ ಈ ಅವಧಿ ಅನುಕೂಲಕರವಾಗಿದೆ, ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭ ಪಡೆಯುತ್ತೀರಿ, ಆರ್ಥಿಕವಾಗಿ ಈ ಸಮಯ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಇನ್ನು ವಿದೇಶದಲ್ಲಿ ಹೋಗಿ ಓದಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳು ಈ ಅವಧಿಯಲ್ಲಿ ಅತ್ಯುತ್ತಮವಾದ ಪ್ರಯೋಜನ ಪಡೆಯುತ್ತೀರಿ, ಇಮ್ಮ ಪ್ರಯತ್ನದಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುವುದು. ಇನ್ನು ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ಈ ಅವಧಿಯಲ್ಲಿ ಪ್ರಗತಿ ಕಂಡು ಬರಲಿದೆ. ಕೌಟುಂಬಿಕ ಜೀವನದಲ್ಲಿ ಸಮಸ್ಯೆಗಳು ದೂರಾಗುವುದು, ನಿಮ್ಮ ನಡುವೆ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ.
ವೃಷಭ ರಾಶಿ
ಮಂಗಳನು ಭರಣಿ ನಕ್ಷತ್ರಕ್ಕೆ ಪ್ರವೇಶ ಮಾಡಿರುವುದರಿಂದ ವೃಷಭ ರಾಶಿಯವರಿಗೆ ತುಂಬಾ ಅನುಕೂಲಕರವಾಗಿದೆ, ಆದಾಯ ಹೆಚ್ಚಾಗಲಿದೆ, ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ನೀವು ಸಾಲ ಪಡೆದಿದ್ದರೆ ಅದನ್ನು ಮರಳಿಸಲು ಸಾಧ್ಯವಾಗುವುದು. ವೃತ್ತಿ ಬದುಕಿನಲ್ಲಿ ಪ್ರಗತಿ ಕಾಣಬಹುದು, ಇನ್ನು ನೀವು ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನೀವಿಬ್ಬರು ತುಂಬಾನೇ ಹೊಂದಾಣಿಕೆಯಿಂದ ಜೀವನ ನಡೆಸುತ್ತೀರಿ.
ತುಲಾ ರಾಶಿ
ಮಂಗಳನ ನಕ್ಷತ್ರ ಬದಲಾವಣೆ ತುಲಾ ರಾಶಿಯವರಿಗೆ ತುಂಬಾ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಆರ್ಥಿಕವಾಗಿ ಚೆನ್ನಾಗಿರಲಿದೆ, ಸೌಕರ್ಯ ಹೆಚ್ಚಿಸಲು ನೀವು ಪ್ರಯತ್ನ ಮಾಡಬಹುದು. ಇನ್ನು ಆಸ್ತಿ ಖರೀದಿಗೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿಯಲ್ಲಿ ಅನುಕೂಲಕರವಾಗಿದೆ. ಸಮಾಜದಲ್ಲಿ ನಿಮ್ಮ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗುವುದು. ಈ ಅವಧಿಯಲ್ಲಿ ನೀವು ನಿಮ್ಮ ಕೆಲಸದಿಂದ ಗುರುತಿಸಿಕೊಳ್ಳುತ್ತೀರಿ.
ವೃಶ್ಚಿಕ ರಾಶಿ
ಭರಣಿ ನಕ್ಷತ್ರಕ್ಕೆ ಮಂಗಳನ ಸಂಚಾರ ವೃಶ್ಚಿಕ ರಾಶಿಯವರಿಗೂ ತುಂಬಾನೇ ಪ್ರಯೋಜನಕಾರಿಯಾಗಿದೆ. ವ್ಯಾಪಾರಿಗಳು ಉತ್ತನ ಪ್ರಯೋಜನ ಪಡೆಯುತ್ತೀರಿ. ಆರ್ಥಿಕವಾಗಿ ಉತ್ತಮ ಪ್ರಯೋಜನ ಪಡೆಯುತ್ತೀರಿ, ಇನ್ನು ನೀವು ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯದಲ್ಲಿ ನಿಮಗೆ ಒಳ್ಳೆಯ ಅವಕಾಶಗಳು ದೊರೆಯಲಿದೆ. ಆರ್ಥಿಕವಾಗಿ ಚೆನ್ನಾಗಿರುವುದರಿಂದ ನಿಮ್ಮ ಜವಾಬ್ದಾರಿ ನಿಭಾಯಿಸಲು ಕಷ್ಟವಾಗಲ್ಲ, ಕುಟುಂಬ ಜೀವನದಲ್ಲಿ ಪರಿಸ್ಥಿತಿ ತುಂಬಾನೇ ಸುಧಾರಿಸಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ತುಂಬಿರಲಿದೆ. ಇನ್ನು ಮನೆಯಲ್ಲಿ ಅವಾಹಿತರಿದ್ದರೆ ಶೀಘ್ರವೇ ಮಂಗಳಕರ ಪ್ರಯೋಜನ ಪಡೆಯುತ್ತೀರಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications



