Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಫೆ.5ಕ್ಕೆ ಮಕರ ರಾಶಿಯಲ್ಲಮಂಗಳನ ಸಂಚಾರ: ದ್ವಾದಶ ರಾಶಿಗಳ ಮೇಲೆ ಒಂದೂವರೆ ತಿಂಗಳು ಇರಲಿದೆ ಇದರ ಪ್ರಭಾವ
ಫೆಬ್ರವರಿ 5ಕ್ಕೆ ಮಂಗಳನು ಮಕರ ರಾಶಿ. ಸೋಮವಾರ, ಫೆಬ್ರವರಿ 05, 2024 ರಂದು, ಮಂಗಳವು ಮಕರ ರಾಶಿಯನ್ನು ಪ್ರವೇಶಿಸುತ್ತಿದೆ. ಮಂಗಳನು ಮೇಷ ಮತ್ತು ವೃಶ್ಚಿಕ ರಾಶಿಯ ಅಧಿಪತಿ. ಮಂಗಳ ಮಕರ ರಾಶಿಯಲ್ಲಿಮಾರ್ಚ್ 15 ರವರೆಗೆ ಇರುತ್ತದೆ. ಮಂಗಳನ ರಾಶಿಯ ಬದಲಾವಣೆಯು ಎಲ್ಲಾ 12 ರಾಶಿಗಳ ಜನರ ಮೇಲೆ ಪರಿಣಾಮ ಬೀರುತ್ತದೆ. ಮಂಗಳನ ಈ ಸಂಚಾರ 12 ರಾಶಿಗಳ ಮೇಲೆ ಹೇಗಿರಲಿದೆ ಎಂದು ನೋಡೋಣ ಬನ್ನಿ:

ಮೇಷ ರಾಶಿ-
ಮಂಗಳನ ರಾಶಿಯ ಬದಲಾವಣೆಯು ಮೇಷ ರಾಶಿಯವರಿಗೆ ತುಂಬಾ ಮಂಗಳಕರವಾಗಿರುತ್ತದೆ. ಈ ಅವಧಿ ಉದ್ಯೋಗಿಗಳಿಗೆ ಅನುಕೂಲಕರವಾಗಿದೆ, ವ್ಯಾಪಾರಿಗಳು ಲಾಭಗಳಿಸುತ್ತೀರಿ, ಉದ್ಯೋಗ ಹುಡುಕುತ್ತಿದ್ದರೆ ಆ ನೀವು ಬಯಸಿದ ಕೆಲಸ ಸಿಗುವ ಸಾಧ್ಯತೆ ಇದೆ
ವೃಷಭ ರಾಶಿ
ಮಂಗಳ ಮಕರ ರಾಶಿಗೆ ಸಂಚರಿಸಿದಾಗ ವೃಷಭ ರಾಶಿಯವರಿಗೆ ಮಿಶ್ರಫಲ ನೀಡಲಿದೆ, ಕೆಲಸದ ಸ್ಥಳದಲ್ಲಿ ನೀವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಹಣವನ್ನು ಎಚ್ಚರಿಕೆಯಿಂದ ಖರ್ಚು ಮಾಡಿ ಇಲ್ಲದಿದ್ದರೆ ಹಣದ ನಷ್ಟ ಉಂಟಾಗಬಹುದು.
ಮಿಥುನ ರಾಶಿ
ಮಂಗಳನ ಈ ಸಂಚಾರ ನಿಮಗೆ ಮಂಗಳಕರವಾಗಿದೆ. ಮಂಗಳನ ದೆಸೆಯಿಂದ ನೀವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು ಅದು ನಿಮ್ಮ ಮನಸ್ಸಿಗೆ ಸಂತೋಷ ನೀಡಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರು ಮಕರ ರಾಶಿಯಲ್ಲಿ ಮಂಗಳ ಸಂಚಾರದಿಂದ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಉದ್ಯೋಗಸ್ಥರು ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು. ವ್ಯಾಪಾರಸ್ಥರು ಈ ಅವಧಿಯಲ್ಲಿ ಹೊಸತಾದ ಹೂಡಿಕೆ ಮಾಡಲು ಈ ಸಮಯ ಒಳ್ಳೆಯದಲ್ಲ.
ಸಿಂಹ ರಾಶಿ
ನೀವು ಮಾರ್ಚ್ ವರೆಗೆ ನೀವು ಯಾವುದೇ ರೀತಿಯ ರಿಸ್ಕ್ ತೆಗೆದುಕೊಳ್ಳುವುದನ್ನು ತಪ್ಪಿಸಬೇಕಾಗುತ್ತದೆ. ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗಬಹುದು. ಉದ್ಯೋಗದಲ್ಲಿ ಕೆಲ ಅಡೆತಡೆಗಳು ಇರಬಹುದು.
ಕನ್ಯಾ ರಾಶಿ
ಮಕರ ರಾಶಿಯಲ್ಲಿ ಮಂಗಳನ ಸಂಚಾರವು ನಿಮಗೆ ಮಂಗಳಕರವಾಗಿದೆ. ಆರ್ಥಿಕ ಲಾಭಕ್ಕಾಗಿ ಉತ್ತಮ ಅವಕಾಶಗಳು ಇರಬಹುದು. ನೀವು ಹೊಸ ಯೋಜನೆಯಲ್ಲಿ ಕೆಲಸ ಮಾಡಬಹುದು.
ತುಲಾ ರಾಶಿ
ಕೆಲಸದಲ್ಲಿ ಉತ್ತಮ ಯಶಸ್ಸನ್ನು ಪಡೆಯುವ ಸಾಧ್ಯತೆಗಳಿವೆ. ಕೆಲವು ಪ್ರಮುಖ ಕೆಲಸಗಳಲ್ಲಿ ನೀವು ಆಪ್ತ ಸ್ನೇಹಿತರಿಂದ ಬೆಂಬಲವನ್ನು ಪಡೆಯಬಹುದು. ಆದರೆ ಶತ್ರುಗಳು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಬಹುದು.
ವೃಶ್ಚಿಕ ರಾಶಿ
ಮಕರ ರಾಶಿಯಲ್ಲಿ ಮಂಗಳ ಸಂಚಾರವು ವೃಶ್ಚಿಕ ರಾಶಿಯವರಿಗೆ ಮಿಶ್ರ ಫಲಿತಾಂಶ. ನಿಮ್ಮಲ್ಲಿ ಧೈರ್ಯ ಮತ್ತು ಆತ್ಮವಿಶ್ವಾಸದಲ್ಲಿ ಹೆಚ್ಚಳವನ್ನು ನೀವು ಕಾಣಬಹುದು.
ಧನು ರಾಶಿ
ಮಂಗಳನ ಸಂಚಾರದ ಸಮಯದಲ್ಲಿ ಆದಾಯದಲ್ಲಿ ಹೆಚ್ಚಳ ಕಾಣಬಹುದು. ಹೊಸ ಯೋಜನೆಗಳಲ್ಲಿ ನೀವು ಕೆಲವು ಹೆಜ್ಜೆಗಳನ್ನು ಮುಂದಕ್ಕೆ ತೆಗೆದುಕೊಳ್ಳಬಹುದು. ಉದ್ಯೋಗಸ್ಥರು ಉದ್ಯೋಗದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಬಹುದು.
ಮಕರ ರಾಶಿ
ಮಂಗಳವು ನಿಮ್ಮ ರಾಶಿಯಲ್ಲಿ ಮೊದಲ ಮನೆಯಲ್ಲಿ ಇರಲಿದೆ, ಅಂತಹ ಪರಿಸ್ಥಿತಿಯಲ್ಲಿ ನೀವು ವ್ಯವಹಾರದ ವಿಷಯಗಳಲ್ಲಿ ಸ್ವಲ್ಪ ಜಾಗರೂಕರಾಗಿರಬೇಕು. ನಿಮ್ಮ ಆರೋಗ್ಯದ ಬಗ್ಗೆ ನೀವು ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ.
ಕುಂಭ ರಾಶಿ
ಮಂಗಳನ ಈ ಸಂಚಾರದ ಕೆಲಸದ ಸ್ಥಳದಲ್ಲಿ ಕಠಿಣ ಪರಿಶ್ರಮದ ನಂತರವೇ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನಿಮ್ಮ ಸಂಗಾತಿಯಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ.
ಮೀನ ರಾಶಿ
ಈ ಅವಧಿಯಲ್ಲಿ ಬಾಕಿಯುಳಿದಿರುವ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ಆರ್ಥಿಕ ಲಾಭಕ್ಕಾಗಿ ನೀವು ಉತ್ತಮ ಅವಕಾಶಗಳನ್ನು ಪಡೆಯಬಹುದು. ಹೊಸ ಉದ್ಯೋಗಕ್ಕಾಗಿ ನಿಮ್ಮ ಹುಡುಕಾಟ ಈ ತಿಂಗಳಿನಲ್ಲಿ ಫಲ ನೀಡಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











