Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಬುಧ ಗೋಚಾರ ಫಲ: ಮೇ 31ಕ್ಕೆ ವೃಷಭ ರಾಶಿಗೆ ಬುಧ ಸಂಚರಿಸಿದಾಗ 12 ರಾಶಿಗಳ ಮೇಲೆ ಇದರ ಪ್ರಭಾವ ಹೀಗಿರಲಿದೆ
ಮೇ 31ಕ್ಕೆ ಬುಧ ವೃಷಭ ರಾಶಿಗೆ ಸಂಚರಿಸಲಿದೆ, ಬುಧನು ವೃಷಭ ರಾಶಿಗೆ ಸಂಚರಿಸಿದಾಗ ಬಹುತೇಕ ರಾಶಿಗಳು ಈ ಅವಧಿಯಲ್ಲಿ ಜಾಗ್ರತೆವಹಿಸಬೇಕು, ಬನ್ನಿ ಈ ಬುಧ ಸಂಚಾರ ದ್ವಾದಶ ರಾಶಿಗಳ ಮೇಲೆ ಹೇಗೆ ಪ್ರಭಾವ ಬೀರಲಿದೆ ಎಂದು ನೋಡೋಣ ಬನ್ನಿ:

ಮೇಷ ರಾಶಿ
ಬುಧನು ವೃಷಭ ರಾಶಿಗೆ ಸಂಚರಿಸಿದಾಗ ವೃತ್ತಿ ಮತ್ತು ಆರ್ಥಿಕ ಜೀವನದಲ್ಲಿ ಸವಾಲುಗಳನ್ನು ಎದುರಿಸಬೇಕಾಗಬಹುದು. ವ್ಯಾಪಾರಿಗಳು ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗಬಹುದು, ಇದರಿಂದಾಗಿ ನಿಮಗೆ ನಷ್ಟದ ಸಾಧ್ಯತೆಯಿದೆ. ಆರ್ಥಿಕ ಸಮಸ್ಯೆ ಮಾನಸಿಕ ಒತ್ತಡ ಹೆಚ್ಚಿಸಲಿದೆ. ವೈಚಾಹಿಕ ಜೀವನ ಕಡೆಗೆ ಗಮನಹರಿಸಬೇಕು. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಲು ಹೋಗಬೇಡಿ.
ವೃಷಭ ರಾಶಿ
ವೃಷಭ ರಾಶಿಯವರು ಈ ಅವಧಿಯಲ್ಲಿ ಕೆಲವು ಅಡೆತಡೆಗಳನ್ನು ತರಬಹುದು. ಉದ್ಯೋಗಿಗಳು ಪ್ರಗತಿಗೆ ಇನ್ನೂ ಸ್ವಲ್ಪ ಕಾಯಬೇಕಾಗುತ್ತದೆ. ವ್ಯಾಪಾರಿಗಳಿಗೆ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ಅವಧಿ ಯಾವುದೇ ತೊಂದರೆಯಿಲ್ಲ, ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಕೂಡ ಚೆನ್ನಾಗಿರಲಿದೆ. ಆದರೆ ಕಣ್ಣಿಗೆ ಸಂಬಂಧಿಸಿದ ಕೆಲ ಸಮಸ್ಯೆಗಳಿರಬಹುದು.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ. ಹಣಕಾಸಿನ ನಷ್ಟ ಮತ್ತು ವ್ಯಾಪಾರ ಪ್ರಯತ್ನಗಳಲ್ಲಿ ಕೆಲವು ಅಡೆತಡೆಗಳು ಇರಬಹುದು, ಆರ್ಥಿಕವಾಗಿ ನೀವು ತುಂಬಾನೇ ಜಾಗ್ರತೆವಹಿಸಿ. ವೈಯಕ್ತಿಕ ಜೀವನದಲ್ಲಿಯೂ ಕೆಲ ಸಮಸ್ಯೆಗಳಿರಬಹುದು. ಆರೋಗ್ಯ ಸಮಸ್ಯೆಗಳು ಕೂಡ ಕಾಡುವುದು. ಆರೋಗ್ಯ ಸಮಸ್ಯೆ ಕಂಡು ಬಂದ ತಕ್ಷಣ ವೈದ್ಯರಿಗೆ ತೋರಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ.
ಕರ್ಕ ರಾಶಿ
ಈ ಸಂಚಾರ ಕರ್ಕ ರಾಶಿಯವರಿಗೆ ಅನುಕೂಲಕರವಾಗಿದೆ. ಕೆಲಸದಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ಆರ್ಥಿಕವಾಗಿ ಈ ಅವಧಿ ನಿಮಗೆ ಮಧ್ಯಮ ಲಾಭ ನೀಡಲಿದೆ. ಖರ್ಚು ನಿಭಾಯಿಸಲು ಕಷ್ಟವಾಗುವುದು. ಅನಗ್ಯತ ಖರ್ಚು ನಿಯಂತ್ರಿಸಿ. ನಿಮ್ಮ ಸಂಗಾತಿ ಜೊತೆಗೆ ಭಿನ್ನಾಭಿಪ್ರಾಯ ತಪ್ಪಿಸಲು ನೀವು ಅವರ ಭಾವನೆಗಳನ್ನು ಗೌರವಿಸಬೇಕು, ಅವರನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಆರೋಗ್ಯದ ದೃಷ್ಟಿಯಿಂದಲೂ ಈ ಅವಧಿ ಉತ್ತಮವಾಗಿದೆ.
ಸಿಂಹ ರಾಶಿ
ಸಿಂಹ ರಾಶಿಯವರಲ್ಲಿ ಬುಧ 10ನೇ ಮನೆಯಲ್ಲಿ ಇರುವಾಗ ಕೆಲವು ಸವಾಲುಗಳನ್ನು ನೀಡಲಿದೆ. ವೃತ್ತಿ ಜೀವನದಲ್ಲಿ ಕೆಲ ಅಡೆತಡೆಗಳು ಎದುರಾಗುವುದು. ವೃತ್ತಿಜೀವನದಲ್ಲಿ ಅತ್ಯಧಿಕ ಒತ್ತಡ ಇರಲಿದೆ. ವ್ಯಾಪಾರಿಗಳು ನಿರೀಕ್ಷೆಗೆ ತಕ್ಕ ಲಾಭ ಪಡೆಯಲು ಕಷ್ಟವಾಗುವುದು, ಆ ಖರ್ಚು ಅಧಿಕವಿರಲಿದೆ. ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ. ಈ ಅವಧಿಯಲ್ಲಿ ಗಂಟಲು ಮತ್ತು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ. ಬುಧನ ಸ್ಥಾನವು ನಿಮಗೆ ಗಮನಾರ್ಹ ಯಶಸ್ಸನ್ನು ಸಾಧಿಸಲು ಸಹಾಯ ಮಾಡುತ್ತದೆ. ವೃತ್ತಿ ಜೀವನದಲ್ಲಿ ಪ್ರಗತಿ ದೊರೆಯಲಿದೆ. ನೀವು ಹೊಸ ಉದ್ಯೋಗಾವಕಾಶವನ್ನು ಪಡೆಯಬಹುದು. ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯಲಿದೆ. ಈ ಸಮಯದಲ್ಲಿ ಉಳಿತಾಯ ಹೆಚ್ಚಾಗಲಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ಅವಧಿ ಮಿಶ್ರಫಲ. ಕೆಲಸದಲ್ಲಿ ಈ ಅವಧಿಯಲ್ಲಿ ನೀವು ಬಯಸಿದಂತೆ ಪ್ರತಿಫಲ ಸಿಗುವುದು ಕಷ್ಟವಾಗುವುದು. ವೃತ್ತಿ ಜೀವನದಲ್ಲಿ ಉದ್ಯೋಗದಲ್ಲಿ ಬದಲಾವಣೆ ಅಥವಾ ಯಾವುದೇ ವರ್ಗಾವಣೆಯಂತಹ ಅನಿರೀಕ್ಷಿತ ಬದಲಾವಣೆಗಳನ್ನು ಎದುರಿಸಬೇಕಾಗಬಹುದು. ವ್ಯಾಪಾರಿಗಳಿಗೂ ಈ ಅವಧಿ ಸವಾಲಿನಿಂದ ಕೂಡಿದೆ.
ಯಾವುದೇ ರೀತಿಯ ನಷ್ಟವನ್ನು ತಪ್ಪಿಸಲು ಸಲಹೆ ನೀಡಲಾಗುವುದು. ಖರ್ಚು ನಿಯಂತ್ರಿಸಿದರೆ ಒಳ್ಳೆಯದು. ಕುಟುಣಬ ಜೀವನದ ಕಡೆಗೆ ಗಮನಹರಿಸಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯಲ್ಲಿ ಪಾಲುದಾರಿಕೆಯ ಏಳನೇ ಮನೆಗೆ ಸಾಗಿದಾಗ ಮಿಶ್ರಫಲ ದೊರೆಯಲಿದೆ. ಹಣಕಾಸಿನ ಯೋಜನೆಗಳಲ್ಲಿ ಮಿಶ್ರ ಫಲಿತಾಂಶ ಪಡೆಯುತ್ತೀರಿ. ಈ ಅವಧಿಯಲ್ಲಿ ನೀವು ಕೆಲವು ಪ್ರಯೋಜನಗಳನ್ನು ಪಡೆಯುವ ಸಾಧ್ಯತೆಯಿದೆ. ವೃತ್ತಿಜೀವನದಲ್ಲಿ ಕೆಲಸದ ಒತ್ತಡ ಇರಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲಿತಾಂಶ ಸಿಗುವುದು ಕಷ್ಟವಾಗುವುದು. ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಬೇಕು. ಹೊಸ ಹೂಡಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.
ಧನು ರಾಶಿ
ಬುಧ ವೃಷಭ ರಾಶಿಯಲ್ಲಿ ಇರುವಾಗ ಹಣಕಾಸಿನ ವಿಷಯಗಳಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು. ವೃತ್ತಿ ಬದುಕಿನಲ್ಲಿ ಹಲವು ಸವಾಲುಗಳು ಎದುರಾಗುವುದು. ವ್ಯಾಪಾರಿಗಳು ಕೂಡ ಈ ಅವಧಿಯಲ್ಲಿ ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗುತ್ತದೆ, ವೈವಾಹಿಕ ಜೀವನದಲ್ಲಿ ಕೆಲವು ವಿವಾದಗಳನ್ನು ಎದುರಿಸಬೇಕಾಗಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈ ಕೈ ನೋವಿನ ಸಮಸ್ಯೆ ಉಂಟಾಗುವುದು.
ಮಕರ ರಾಶಿ
ಮಕರ ರಾಶಿಯವವರಿಗೆ ಈ ಸಂಚಾರ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿ ಉತ್ತಮ ಬೆಳವಣಿಗೆ ಕಂಡು ಬರಲಿದೆ, ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳ ದೊರೆಯಲಿದೆ. ವ್ಯಾಪಾರಿಗಳು ಈ ಸಮಯದಲ್ಲಿ ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ, ಆರ್ಥಿಕವಾಗಿ ಈ ಸಮಯ ನಿಮಗೆ ತುಂಬಾ ಚೆನ್ನಾಗಿದೆ. ಸಣ್ಣ ಪುಟ್ಟ ಆರೋಗ್ಯ ಸಂಬಂಧಿತ ಸಮಸ್ಯೆವಿರಬಹುದು, ಹೆಚ್ಚಿ ಚಿಂತೆ ಬೇಡ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಬುಧ ಮಿಶ್ರಫಲ ನೀಡುವುದು. ವೃತ್ತಿ ಜೀವನದಲ್ಲಿ ಹಲವು ಸವಾಲುಗಳು ಎದುರಾಗುವುದು. ವ್ಯಾಪಾರಿಗಳು ಯಾವುದೇ ಹೊಸ ಯೋಜನೆಯಲ್ಲಿ ಕೆಲಸ ಮಾಡದಂತೆ ಸಲಹೆ ನೀಡಲಾಗುವುದು. ಆರ್ಥಿಕವಾಗಿ ಚೆನ್ನಾಗಿರಲಿದೆ, ಆದರೆ ಹಣವನ್ನು ನೋಡಿಕೊಂಡು ಖರ್ಚು ಮಾಡದಿದ್ದರೆ ಕಷ್ಟ. ನೀವು ಉಳಿತಾಯದ ಕಡೆಗೆ ಗಮನಹರಿಸಿ. ನೀವು ಕುಟುಂಬ ಜೀವನದ ಕಡೆಗೆ ತುಂಬಾನೇ ಗಮನಹರಿಸಬೇಕು. ನಿಮ್ಮವರ ಭಾವನೆಗಳನ್ನು ಗೌರವಿಸಿ, ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿದೆ.
ಮೀನ ರಾಶಿ
ಈ ಬುಧ ಸಂಚಾರ ಮೀನ ರಾಶಿಯವರಿಗೂ ಮಿಶ್ರಫಲಿತಾಂಶ ನೀಡುವುದು. ಕೆಲಸದಲ್ಲಿ ಬದಲಾವಣೆಯಾಗಬಹುದು, ವಿದೇಶದಲ್ಲಿ ಕೆಲಸ ಮಾಡುವವರಿಗೆ ಈ ಅವಧಿ ಉತ್ತಮವಾಗಿದೆ. ವ್ಯಾಪಾರಿಗಳು ಈ ಅವಧಿಯಲ್ಲಿ ಮಧ್ಯಮ ಲಾಭ ಗಳಿಸುತ್ತೀರಿ. ಆದಾಯಕ್ಕಿಂತ ಅಧಿಕ ಖರ್ಚು ಇರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ ಎಂದು ಸಲಹೆ ನೀಡಲಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











