Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಕರ್ಕ ರಾಶಿಗೆ ಬುಧ ಸಂಚಾರ: ಪ್ರತಿಯೊಂದು ರಾಶಿಯಲ್ಲಿ ಇದರ ಪ್ರಭಾವ
ಬುಧನು ಜೂನ್ 29ಕ್ಕೆ ಕರ್ಕ ರಾಶಿಗೆ ಸಂಚರಿಸಲಿದೆ, ಬುಧ ಕರ್ಕದಲ್ಲಿ ಇರುವಾಗ ಇದರ ಪ್ರಭಾವ 12 ರಾಶಿಗಳ ಮೇಲೆ ಹೇಗಿರಲಿದೆ?
ಮೇಷ ರಾಶಿ
ಜೂನ್ 29ಕ್ಕೆ ಬುಧನು ನಿಮ್ಮ ಕರ್ಕ ರಾಶಿಗೆ ಸಂಚರಿಸಿದಾಗ ಮೇಷ ರಾಶಿಯವರು ಉತ್ತಮ ಪ್ರಯೋಜನ ಪಡೆಯಲು ಸಾಧ್ಯವಾಗುವುದು. ಈ ಅವಧಿ ಆರ್ಥಿಕವಾಗಿ ನಿಮಗೆ ಉತ್ತಮವಿದೆ, ವೈವಾಹಿಕ ಜೀವನದಲ್ಲಿ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದಲೂ ಈ ಅವಧಿ ನಿಮಗೆ ಉತ್ತಮವಾಗಿದೆ.

ವೃಷಭ ರಾಶಿಯವರಿಗೆ ಬುಧನ ಈ ಸಂಚಾರ ಅಷ್ಟೊಂದು ಅನುಕೂಲಕರವಲ್ಲ, ವ್ಯಾಪಾರಿಗಳು ಹಣದ ಬಗ್ಗೆ ಜಾಗ್ರತೆ ಇಲ್ಲದಿದ್ದರೆ ನಷ್ಟ ಹೊಂದಬಹುದು. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯದ ಕೊರತೆ ಕಂಡು ಬರುವುದು. ಕೆಲ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬಹುದು.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ವೃತ್ತಿ ಜೀವನದ ದೃಷ್ಟಿಯಿಂದ ನೋಡುವುದಾದರೆ ಈ ಬುಧ ಸಂಚಾರ ಅನುಕೂಲಕರವಾಗಿದೆ. ವ್ಯಾಪಾರಿಗಳಿಗೆ ಲಾಭ ಗಳಿಸಲು ಸಾಧ್ಯವಾಗುವುದು. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯ ಚೆನ್ನಾಗಿರಲಿದೆ, ಈ ಅವಧಿ ನಿಮಗೆ ಧನಾತ್ಮಕವಾಗಿರಲಿದೆ.
ಕರ್ಕ ರಾಶಿ
ಬುಧನು ನಿಮ್ಮದೇ ರಾಶಿಗೆ ಸಂಚರಿಸಲಿದೆ, ಅದರೆ ಈ ಸಂಚಾರ ನಿಮಗೆ ವಿಶೇಷ ಫಲ ನೀಡಲ್ಲ. ಆರ್ಥಿಕ ಜೀವನದ ಕಡೆಗೆ ಗಮನಹರಿಸಿ. ಈ ಅವಧಿಯಲ್ಲಿ ಹಣ ನಷ್ಟವಾಗುವ ಸಾಧ್ಯತೆ ಇದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳಿರಬಹುದು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಬುಧನ ಈ ಸಂಚಾರ ಮಿಶ್ರಫಲ. ವೃತ್ತಿ ಬದುಕಿನಲ್ಲಿ ಕೆಲಸದ ಒತ್ತಡ ಇರಲಿದೆ. ವ್ಯಾಪಾರಿಗಳು ಲಾಭ ಅಥವಾ ನಷ್ಟದ ಪರಿಸ್ಥಿತಿಯನ್ನು ಎದುರಿಸಬಹುದು. ಈ ಅವಧಿಯಲ್ಲಿ ಹಣದ ಖರ್ಚು ಹೆಚ್ಚಿರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳು ಕಾಡಬಹುದು.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಕರ್ಕ ರಾಶಿಯಲ್ಲಿ ಬುಧನ ಸಂಚಾರ ಅನುಕೂಲಕರವಾಗಿದೆ. ಈ ಸಮಯದಲ್ಲಿ ನಿಮ್ಮೆಲ್ಲಾ ಆಸೆ ಈಡೇರಲಿದೆ. ಈ ಅವಧಿಯಲ್ಲಿ ನೀವು ಅತ್ಯುತ್ತಮವಾದ ಪ್ರಯೋಜನ ಪಡೆಯುತ್ತೀರಿ. ವೃತ್ತಿ ಬದುಕಿನಲ್ಲಿ ಪ್ರಗತಿ ಕಂಡು ಬರಲಿದೆ, ವ್ಯಾಪಾರಿಗಳು ಲಾಭ ಗಳಿಸುತ್ತಾರೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ಕುಟುಂಬ ಈವನ, ಆರೋಗ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೂ ಈ ಬುಧ ಸಂಕ್ರಮಣ ಅನುಕೂಲಕರವಾಗಿದೆ. ಮತ್ತು ನೀವು ಹೊಸ ಉದ್ಯೋಗಾವಕಾಶಗಳನ್ನು ಪಡೆಯುತ್ತೀರಿ. ಸ್ವಂತ ವ್ಯವಹಾರವನ್ನು ಮಾಡುತ್ತಿದ್ದರೆ ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ಈ ಅವಧಿಯಲ್ಲಿ ನೀವು ಹಣವನ್ನು ಗಳಿಸುವುದರ ಜೊತೆಗೆ ಹಣವನ್ನು ಉಳಿಸಲು ಸಾಧ್ಯವಾಗುತ್ತದೆ.
ಚಿಕ್ಕ ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.
ವೃಶ್ಚಿಕ ರಾಶಿ
ವರಶ್ಚಿಕ ರಾಶಿಯವರಿಗೆ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ. ವೃತ್ತಿಯಲ್ಲಿ ಅಭದ್ರತೆ ಕಾಡಬಹುದು, ವ್ಯಾಪಾರಿಗಳಿಗೂ ಈ ಅವಧಿ ಕಷ್ಟಕರವಾಗಿರುತ್ತದೆ, ಈ ಸಮಯದಲ್ಲಿ ನೀವು ಊಹಿಸಿರುವುದಕ್ಕಿಂತಲೂ ಹೆಚ್ಚು ಖರ್ಚಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ.
ಧನು ರಾಶಿ
ಧನು ರಾಶಿಯವರು ಈ ಅವಧಿಯಲ್ಲಿ ಹೆಚ್ಚಿನ ಪ್ರಯೋಜನ ಪಡೆಯಲು ಸಾಧ್ಯವಾಗುವುದಿಲ್ಲ. ವ್ಯಾಪಾರಿಗಳು ಊಹಿಸಿದಂತೆ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಅಲ್ಲದೆ ಈ ಅವಧಿಯಲ್ಲಿ ಆರೋಗ್ಯ ಸಮಸ್ಯೆಗಳು ಕೂಡ ಕಾಡುವುದು.
ಮಕರ ರಾಶಿ
ಮಕರ ರಾಶಿಯವರಲ್ಲಿ ಬುಧ ಏಳನೇ ಮನೆಗೆ ಸಂಚರಿಲಿದೆ. ಈ ಅವಧಿಯಲ್ಲಿ ವೃತ್ತಿ ಬದುಕು ಚೆನ್ನಾಗಿರಲಿದೆ. ವ್ಯಾಪಾರಿಗಳು ಉತ್ತಮ ಲಾಭವನ್ನು ಪಡೆಯಲು ಸಾಧ್ಯವಾಗುವುದು.ಆರ್ಥಿಕ ಜೀವನದಲ್ಲಿ ನಿಮಗೆ ಅನುಕೂಲಕರವಾಗಿರುತ್ತದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡಬೇಡಿ.
ಕುಂಭ ರಾಶಿ
ಈ ಅವಧಿಯಲ್ಲಿ ನೀವು ನಿಮ್ಮ ಕೆಲಸವನ್ನು ಬದಲಾಯಿಸಲು ಯೋಚಿಸಬಹುದು, ತಮ್ಮ ಸ್ವಂತ ವ್ಯವಹಾರವನ್ನು ಹೊಂದಿರುವವರು ಕೆಲ ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಆರ್ಥಿಕ ಜೀವನದಲ್ಲಿ ಖರ್ಚು ಹೆಚ್ಚಿರಲಿದೆ. ಈ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರಲಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಬುಧನ ಈ ಸಂಚಾರ ಅನುಕೂಲಕರವಾಗಿದೆ. ನೀವು ವ್ಯವಹಾರದಲ್ಲಿ ಪ್ರಗತಿ ಕಾಣುತ್ತೀರಿ. ವೃತ್ತಿ ಕ್ಷೇತ್ರದಲ್ಲಿ, ಮೀನ ರಾಶಿಯವರು ಹೊಸ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ. ಈ ಅವಧಿಯಲ್ಲಿಆರ್ಥಿಕ ಜೀವನದಲ್ಲಿ, ಉತ್ತಮ ಹಣವನ್ನು ಗಳಿಸುವುದರ ಜೊತೆಗೆ, ನೀವು ಹಣವನ್ನು ಉಳಿಸಲು ಸಾಧ್ಯವಾಗುತ್ತದೆ. ಆರೋಗ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











