Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಆಗಸ್ಟ್ 22ರವರೆಗೆ ಸಿಂಹ ರಾಶಿಯಲ್ಲಿ ಬುಧನ ನೇರ ಚಲನೆ: ಈ 4 ರಾಶಿಯವರಿಗೆ ಅದೃಷ್ಟದ ಬೆಂಬಲವಿದೆ
ಬುಧನು ನಮ್ಮ ಯೋಚನಾ ಸಾಮರ್ಥ್ಯದ ಮೇಲೆ, ನಮ್ಮ ನಿರ್ಧಾರ, ನಮ್ಮ ಸಂವಹನದ ಮೇಲೆ ಪ್ರಭಾವ ಬೀರುವ ಗ್ರಹವೆಂದು ಜ್ಯೋತಿಷ್ಯದಲ್ಲಿ ಹೇಳಲಾಗಿದೆ.
ಈ ಬುಧನು ಪ್ರತಿಬಾರಿ ರಾಶಿ ಬದಲಾವಣೆ ಮಾಡಿದಾಗ ನಮ್ಮ ರಾಶಿಯಲ್ಲಿ ಅದರ ಸ್ಥಾನ ಬದಲಾಗುವುದು, ಅನುಕೂಲಕರ ಸ್ಥಾನದಲ್ಲಿದ್ದರೆ ಉತ್ತಮ ಪ್ರಯೋಜನ ಬಿರುತ್ತಾನೆ, ಇಲ್ಲದಿದ್ದರೆ ನಮ್ಮ ಮೇಲೆ ಅದರ ಪರಿಣಾಮ ಋಣಾತ್ಮಕವಾಗಿರುತ್ತದೆ, ಋಣಾತ್ಮಕವಾಗಿದ್ದಾಗ ಅನೇಕ ಸವಾಲುಗಳನ್ನು ಎದುರಿಸಬೇಕಾಗುವುದು.

ಈ ಜುಲೈ 19ಕ್ಕೆ ಬುಧನು ಸಿಂಹ ರಾಶಿಗೆ ಸಂಚರಿಸಿದೆ, ಆಗಸ್ಟ್ 22ರವರೆಗೆ ಇದೇ ರಾಶಿಯಲ್ಲಿ ಇರಲಿದೆ. ನಂತರ ಆಗಸ್ಟ್ 22ರಿಂದ ಕರ್ಕ ರಾಶಿಯಲ್ಲಿಯೇ ಹಿಮ್ಮುಖ ಚಲನೆ ಮಾಡಲಾರಂಭಿಸುತ್ತದೆ. ಇದೀಗ ಬುಧನು ಸಿಂಹ ರಾಶಿಯಲ್ಲಿ ಇರುವುದರಿಂದ ಈ ರಾಶಿಯವರಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ:
ವೃಷಭ ರಾಶಿ
ಬುಧನು ವೃಷಭ ರಾಶಿಯವರಿಗೆ ಈ ಸಮಯದಲ್ಲಿ ಲಕ್ಷುರಿ ನಿಡಲಿದೆ, ಈ ಅವಧಿಯಲ್ಲಿ ನಿಮ್ಮೆಲ್ಲಾ ಕೆಲಸ ಕಾರ್ಯಗಳಲ್ಲಿ ಯಶಸ್ಸು ಪಡೆಯುತ್ತೀರಿ, ಇದರಿಂದ ಧನ ಲಾಭವಾಗಲಿದೆ. ಕೆಲಸದಲ್ಲಿ ತೃಪ್ತಿ ಇರಲಿದೆ. ಇನ್ನು ಇನ್ನೂ ಒಳ್ಳೆಯ ಸಮಬಳ, ಹುದ್ದೆಗೆ ಕೆಲಸ ಬದಲಾಯಿಸಬೇಕೆಂದು ಯೋಚಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ.
ಇನ್ನು ಸ್ವಂತ ವ್ಯವಹಾರ ಮಾಡುತ್ತಿದ್ದರೆ ಈ ಸಮಯ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿದೆ, ಆರ್ಥಿಕ ಲಾಭ ಪಡೆಯಲು ಸಾಧ್ಯವಾಗುವುದು, ಈ ಅವಧಿಯಲ್ಲಿ ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ.
ಮಿಥುನ ರಾಶಿ
ಬುಧನು ಸಿಂಹ ರಾಶಿಯಲ್ಲಿ ಇರುವ ಸಮಯವು ಮಿಥುನ ರಾಶಿಯವರಿಗೂ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿ ಯಶಸ್ಸು ದೊರೆಯಲಿದೆ, ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದಾರೆ ಈ ಸಮಯದಲ್ಲಿ ಒಳ್ಳೆಯ ಅವಕಾಶಗಳು ಇರಲಿದೆ. ವ್ಯಾಪಾರಿಗಳಿಗೂ ಈ ಅವಧಿ ಅನುಕೂಲಕರವಾಗಿದೆ. ಅಲ್ಲದೆ ಇರುವ ಕೆಲಸದ ಜೊತೆಗೆ ಹೊಸ ವ್ಯವಹಾರ ಶುರು ಮಾಡಬೇಕೆಂದು ಯೋಚಿಸುತ್ತಿದ್ದರೆ ಈ ಸಮಯ ಅನುಕೂಲಕರವಾಗಿದೆ.
ಆರ್ಥಿಕವಾಗಿ ಈ ಸಮಯದಲ್ಲಿ ಯಾವುದೇ ಸಮಸ್ಯೆ ಇರಲ್ಲ. ವೈಯಕ್ತಿಕ ಬದುಕು ಕೂಡ ತುಂಬಾನೇ ಚೆನ್ನಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯವರು ಕೂಡ ಈ ಬುಧ ಸಂಚಾರದಿಂದ ಹೆಚ್ಚಿನ ಪ್ರಯೋಜನ ಪಡೆಯುತ್ತಾರೆ. ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ಪಡೆಯುತ್ತೀರಿ, ಈ ಸಮಯದಲ್ಲಿ ದೀರ್ಘ ಪ್ರಯಾಣದ ಸಾಧ್ಯತೆ ಇದೆ, ಆ ಪ್ರಯಾಣ ನಿಮಗೆ ಪ್ರಯೋಜನಕಾರಿಯಾಗಿದೆ.
ಹೊಸ ಕೆಲಸದ ಹುಡುಕಾಟ ಮಾಡುತ್ತಿದ್ದರೆ ಈ ಸಮಯದಲ್ಲಿ ನೀವು ಬಯಸಿದ ಕೆಲಸ ಸಿಗುವ ಸಾಧ್ಯತೆ ಇದೆ. ವಿದೇಶದಲ್ಲಿ ಕೆಲಸದ ಅವಕಾಶಕ್ಕೆ ಪ್ರಯತ್ನ ಮಾಡುತ್ತಿರುವವರು ಒಳ್ಳೆಯ ಸುದ್ದಿ ಪಡೆಯುತ್ತೀರಿ. ಈ ಅವಧಿಯಲ್ಲಿ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಹೊಸ ಉದ್ಯಮ ಪ್ರಾರಂಭಿಸಲು ಈ ಸಮಯ ನಿಮಗೆ ಅನುಕೂಲಕರವಾಗಿದೆ.
ಧನು ರಾಶಿ
ಈ ಬುಧ ಸಂಚಾರದಿಂದ ಧನು ರಾಶಿಯವರು ಕೂಡ ಉತ್ತಮ ಪ್ರಯಜನ ಪಡೆಯುತ್ತೀರಿ. ಈ ಸಮಯದಲ್ಲಿ ನಿಮ್ಮ ಕಠಿಣ ಪ್ರಯೋಜನಕ್ಕೆ ಉತ್ತಮ ಪ್ರತಿಫಲ ಸಿಗುವುದರಿಂದ ನೀವು ಖುಷಿಯಾಗಿರುತ್ತೀರಿ. ವೃತ್ತಿ ಬದುಕಿನಲ್ಲಿ ಹೊಸ -ಹೊಸ ಅವಕಾಶಗಳು ಸಿಗುವುದು. ವ್ಯಾಪಾರಿಗಳಿಗೆ ಈ ಸಮಯ ಪ್ರಯೋಜನಕಾರಿಯಾಗಿದೆ, ನಿಮ್ಮ ವ್ಯಾಪಾರ ಯೋಜನೆಗಳು ನಿಮಗೆ ಉತ್ತಮ ಲಾಭ ನೀಡುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
