Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಸಿಂಹ ರಾಶಿಯಲ್ಲಿ ಬುಧ ಸಂಚಾರ 2024: ದ್ವಾದಶ ರಾಶಿಗಳ ಮೇಲೆ ಇದರ ಪ್ರಭಾವ ಹೀಗಿರಲಿದೆ
ಸಿಂಹ ರಾಶಿಗೆ ಬುಧನು ಸೆಪ್ಟೆಂಬರ್ 4ಕ್ಕೆ ಸಂಚರಿಸಿದೆ, ಬುಧನು ಸಿಂಹ ರಾಶಿಯಲ್ಲಿ ಇರುವಾಗ ದ್ವಾದಶ ರಾಶಿಗಳ ಮೇಲೆ ಹೀಗೆ ಪ್ರಭಾವ ಬೀರಲಿದೆ:
ಮೇಷ ರಾಶಿ
ಬುಧನು ನಿಮ್ಮ 5ನೇ ಮನೆಯಲ್ಲಿ ಇರಲಿದೆ. ಈ ಅವಧಿ ನಿಮಗೆ ಅಷ್ಟೊಂದು ಅನುಕೂಲಕರವಲ್ಲ. ಬುಧನ ಈ ಸಂಚಾರ ಅಷ್ಟೊಂದು ಅನುಕೂಲಕರವಲ್ಲ, ವೃತ್ತಿ ಬದುಕಿನಲ್ಲಿ ಕೆಲಸದ ಒತ್ತಡವಿರಲಿದೆ, ಕೆಲಸ ಕಾರ್ಯಗಳು ನಿಮ್ಮ ಯೋಜನೆಯಂತೆ ನಡೆಯಲ್ಲ ಎಂದು ನಿಮಗೆ ನಿರಾಸೆ ಉಂಟಾಗಬಹುದು. ವ್ಯಾಪಾರಿಗಳಿಗೂ ಈ ಅವಧಿಯಲ್ಲಿ ಸವಾಲುಗಳು ಎದುರಾಗಬಹುದು. ಈ ಅವಧಿಯಲ್ಲಿ ಖರ್ಚು ಇರಲಿದೆ. ನೀವು ಅನಗ್ಯತ ಖರ್ಚುಗಳನ್ನು ನಿಯಂತ್ರಿಸಬಹುದು. ಆರೊಗ್ಯದ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿದೆ. ಅಲ್ಲದೆ ಮಕ್ಕಳ ಕುರಿತ ಚಿಂತೆ ಕಾಡಬಹುದು.

ವೃಷಭ ರಾಶಿ
ವೃಷಭ ರಾಶಿಯಲ್ಲಿ 4ನೇ ಮನೆಯಲ್ಲಿದೆ. ಈ ಅವಧಿ ನಿಮಗೆ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನಿಮ್ಮ ಪ್ರಯತ್ನಗಳು ಯಶಸ್ವಿಯಾಗುತ್ತವೆ. ತಮ್ಮ ಸ್ವಂತ ವ್ಯವಹಾರವನ್ನು ಮಾಡುವವರು ಯಶಸ್ಸನ್ನು ಸಾಧಿಸಲು ಸಾಧ್ಯವಾಗುವುದು. ಈ ಅವಧಿಯಲ್ಲಿ ಉತ್ತಮ ಲಾಭ ಗಳಿಸಬಹುದು. ಆರ್ಥಿಕವಾಗಿ ಬೆಳವಣಿಗೆಯಾಗಬಹುದು, ಈ ಅವಧಿಯಲ್ಲಿ ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.
ಮಿಥುನ ರಾಶಿ
ಸಿಂಹ ರಾಶಿಯಲ್ಲಿ ಬುಧ 3ನೇ ಮನೆಯಲ್ಲಿ ಇರಲಿದೆ. ಕೆಲಸ-ಕಾರ್ಯಗಳು ಉತ್ತಮವಾಗಿರಲಿದೆ. ವೃತ್ತಿ ಜೀವನದ ದೃಷ್ಟಿಯಿಂದ ನೊಡುವುದಾದರೆ ಈ ಅವಧಿ ಅನುಕೂಲಕರವಾಗಿದೆ. ಹೊಸ ಉದ್ಯೋಗಾವಕಾಶಗಳು ಸಿಗುತ್ತವೆ. ವ್ಯಾಪಾರಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿ ಉತ್ತಮ ಪ್ರಯೋಜನ ಪಡೆಯುತ್ತಾರೆ.
ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.
ಕರ್ಕ ರಾಶಿ
ಕರ್ಕ ರಾಶಿಯಲ್ಲಿ 2ನೇ ಮನೆಯಲ್ಲಿ ಇರಲಿದೆ. ಕೆಲಸದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಕೆಲಸದಲ್ಲಿ ಹೆಚ್ಚು ಒತ್ತಡ ಇರಲಿದೆ.
ವ್ಯಾಪಾರಿಗಳು ಈ ಅವಧಿಯಲ್ಲಿ ನೀವು ಸವಾಲುಗಳನ್ನು ಕಾಣಬಹುದು. ಆರ್ಥಿಕವಾಗಿ ನೀವು ಏರಿಳಿತಗಳನ್ನು ಎದುರಿಸಬೇಕಾಗಬಹುದು. ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯದ ದೃಷ್ಟಿಯಿಂದ ನೀವು ಜಾಗ್ರತೆವಹಿಸಬೇಕು.
ಸಿಂಹ ರಾಶಿ
ಬುಧನು ನಿಮ್ಮ ಲಗ್ನ ಮನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಕೆಲಸ ಕಾರ್ಯಗಳಲ್ಲಿ ಉತ್ತಮ ಯಶಸ್ಸು ಇರಲಿದೆ. ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಕೆಲಸ ಕಾರ್ಯಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ವೈವಾಹಿಕ ಜೀವನದಲ್ಲಿ ನೀವು ಹೊಂದಾಣಿಕೆಯಿಂದ ಇರಲು ಪ್ರಯತ್ನಿಸಬೇಕು. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯಲ್ಲಿ 12ನೇ ಮನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಅಡೆತಡೆಗಳು ಎದುರಾಗಬಹುದು. ಉದ್ಯೋಗವನ್ನು ಬದಲಾಯಿಸಲು ಈ ಅವಧಿ ಅನುಕೂಲಕರವಾಗಿದೆ. ಕೆಲಸದಲ್ಲಿ ನೀವು ಅಭದ್ರತೆಯನ್ನು ಕಾಣಬಹುದು. ಸ್ವಂತ ವ್ಯವಹಾರ ಮಾಡುವವರು ಸವಾಲುಗಳನ್ನು ಎದುರಿಸಬಹುದು. ಈ ಅವಧಿಯಲ್ಲಿ ನಷ್ಟವನ್ನು ಎಎದುರಿಸಬೇಕಾಗುವುದು. ಈ ಅವಧಿಯಲ್ಲಿ ಖರ್ಚುಗಳು ಇರಬಹುದು. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರ.
ತುಲಾ ರಾಶಿ
ತುಲಾ ರಾಶಿಯಲ್ಲಿ ಈ ಅವಧಿಯಲ್ಲಿ 11ನೇ ಮನೆಯಲ್ಲಿ ಇರಲಿದೆ. ವೃತ್ತಿ ಬದುಕಿನ ದೃಷ್ಟಿಯಿಮದ ನೋಡುವುದಾದರೆ ನೀವು ಉತ್ತಮ ಫಲಿತಾಂಶ ಪಡೆಯುತ್ತೀರಿ.ಸ್ವಂತ ವ್ಯಾಪಾರ ಮಾಡುವವರಿಗೆ ಈ ಅವಧಿ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಆರ್ಥಿಕ ಪ್ರಯೋಜನ ಪಡೆಯುವಿರಿ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯಲ್ಲಿ 10ನೇ ಮನೆಯಲ್ಲಿ ಇರಲಿದೆ. ಕೆಲಸದ ಕಡೆಗೆ ಗಮನಹರಿಸುವುದರಿಂದ ಕೆಲಸದಲ್ಲಿ ಉತ್ತಮ ಪ್ರಗತಿ ಕಂಡು ಬರಲಿದೆ. ನೀವು ಹೊಸ ಉದ್ಯೋಗಕ್ಕಾಗಿ ಉತ್ತಮ ಅವಕಾಶಗಳನ್ನು ಪಡೆಯುತ್ತೀರಿ, ಪ್ರೇಮಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಹಣ ಗಳಿಸುವಲ್ಲಿ ಪ್ರಗತಿ ಮಾಡುತ್ತೀರಿ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.
ಧನು ರಾಶಿ
ಧನು ರಾಶಿಯವರಲ್ಲಿ 9ನೇ ಮನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಆತ್ಮವಿಶ್ವಾಸದ ಕೊರತೆ ಕಂಡು ಬರಬಹುದು. ವೃತ್ತಿ ಕ್ಷೇತ್ರದಲ್ಲಿ ಈ ಅವಧಿಯಲ್ಲಿ ಅತೃಪ್ತಿ ಕಂಡು ಬರಲಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಲ್ಲ, ಲಾಭ ಕೊರತೆ ಕಂಡು ಬರುವುದು ಅಲ್ಲದೆ ಉಳಿತಾಯ ಮಾಡುವುದು ಕಷ್ಟವಾಗುವುದು. ಆರೋಗ್ಯಕ್ಕಾಗಿ ಹೆಚ್ಚು ಖರ್ಚು ಮಾಡಬೇಕಾಗುತ್ತದೆ.
ಮಕರ ರಾಶಿ
ಮಕರ ರಾಶಿಯಲ್ಲಿ 8ನೇ ಮನೆಯಲ್ಲಿ ಬುಧ ಇರಲಿದ್ದಾನೆ. ಈ ಅವಧಿಯಲ್ಲಿ ಕೆಲಸದಲ್ಲಿ ಅಡೆತಡೆಗಳು ಕಂಡು ಬರುವುದು, ಪೂರ್ವಜರ ಆಸ್ತಿಯಿಂದ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ವ್ಯವಹಾರದ ಕಡೆಗೆ ಗಮನಹರಿಸಲು ಸಾಧ್ಯವಾಗುವುದು. ಈ ಅವಧಿಯಲ್ಲಿ ಕುಟುಂಬದಲ್ಲಿ ಕೆಎಲ ಸಮಸ್ಯೆಗಳಿರಬಹುದು. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯಗಳಿರಬಹುದು. ಆರ್ಥಿಕವಾಗಿ ಈ ಅವಧಿ ಮಿಶ್ರಫಲ. ಆರೋಗ್ಯದ ದೃಷ್ಟಿಯಿಂದ ಈ ಅವಧಿಯಲ್ಲಿ ಮಿಶ್ರಫಲ.
ಕುಂಭ ರಾಶಿ
ಕುಂಭ ರಾಶಿಯಲ್ಲಿ ಬುಧನು 7ನೇ ಮನೆಯಲ್ಲಿ ಇರಲಿದೆ. ವೃತ್ತಿ ಬದುಕಿನಲ್ಲಿ ಕೆಲಸಕ್ಕೆ ಸಂಬಂಧಿಸಿದಂತೆ ದೀರ್ಘ ಪ್ರಯಾಣ ಮಾಡಬೇಕಾಗುತ್ತದೆ, ಕೆಲಸ ಕಾರ್ಯದಲ್ಲಿ ಒಳ್ಳೆಯ ಫಲಿತಾಂಶ ದೊರೆಯಲಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ, ಈ ಅವಧಿಯಲ್ಲಿ ಉಳಿತಾಯ ಮಾಡಲು ಸಾಧ್ಯವಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಮೀನ ರಾಶಿ
ಮೀನ ರಾಶಿಯಲ್ಲಿ ಬುಧ 6ನೇ ಮನೆಯಲ್ಲಿ ಇರಲಿದೆ. ವ್ಯಾಪಾರಿಗಳಿಗೆ ಮಿಶ್ರಫಲ. ಉದ್ಯೋಗವನ್ನು ಬದಲಾಯಿಸಬೇಕಾಗಬಹುದು. ವ್ಯವಹಾರದ ಬಗ್ಗೆ ಮಾತನಾಡುವಾಗ, ನೀವು ದೊಡ್ಡ ನಷ್ಟವನ್ನು ಅನುಭವಿಸುವ ಸಾಧ್ಯತೆಯಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











