ಅಕ್ಟೋಬರ್ 10ಕ್ಕೆ ತುಲಾ ರಾಶಿಗೆ ಬುಧ ಸಂಚಾರ: ದ್ವಾದಶ ರಾಶಿಗಳಲ್ಲಿ ಯಾವೆಲ್ಲಾ ರಾಶಿಗಳಿಗೆ ಎಲ್ಲಾ ರೀತಿಯಿಂದಲೂ ಶುಭವಾಗಿದೆ?

ಅಕ್ಟೋಬರ್ 10ಕ್ಕೆ ಬುಧನು ತುಲಾ ರಾಶಿಗೆ ಸಂಚರಿಸಲಿದೆ, ಈ ಸಂಚಾರ ದ್ವಾದಶ ರಾಶಿಗಳ ಮೇಲೆ ಬೀರುವ ಪರಿಣಾಮವೇನು ಎಂದು ನೋಡೋಣ:

ಮೇಷ ರಾಶಿ

ಮೇಷ ರಾಶಿಯವರಿಗೆ ಈ ಅವಧಿ ಅನುಕೂಲಕರವಲ್ಲ, ಈ ಅವಧಿಯಲ್ಲಿ ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಅನುಕೂಲಕರವಾಗಿದೆ. ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಲ್ಲ. ವ್ಯಾಪಾರಿಗಳಿಗೆ ಲಾಭದಾಯಕವಾಗಿರಲಿದೆ. ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ.

Mercury Transit In Libra

ವೃಷಭ ರಾಶಿ

ವೃಷಭ ರಾಶಿಯವರಿಗೆ ಈ ಬುಧ ಸಂಚಾರ ಅನುಕೂಲಕರವಾಗಿದೆ. ನಿಮ್ಮ ಪ್ರಮುಖ ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ಆದರೆ ಹೂಡಿಕೆಗೆ ಅಥವಾ ವ್ಯಾಪಾರವನ್ನು ವಿಸ್ತರಿಸಲು ಈ ಸಮಯ ನಿಮಗೆ ಅನುಕೂಲಕರವಲ್ಲ. ಆರೋಗ್ಯದ ಬಗ್ಗೆ ನೋಡುವುದಾದರೆ ಆರೋಗ್ಯದಲ್ಲಿ ಏರಳಿತವಿರಬಹುದು.

ಮಿಥುನ ರಾಶಿ

ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ವಯಯ್ಕತಿಕ ಬದುಕು ತುಂಬಾ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಈ ಸಂಚಾರ ಆರೋಗ್ಯದ ದೃಷ್ಟಿಯಿಂದ ಕೂಡ ಉತ್ತಮವಾಗಿರಲಿದೆ.

ಕರ್ಕ ರಾಶಿ

ಬುಧ ತುಲಾ ರಾಶಿಗೆ ಸಂಚರಿಸಿದಾಗ ವೃತ್ತಿ ಬದುಕಿನಲ್ಲಿ ಒತ್ತಡಗಳು ಅಧಿಕವಿರಲಿದೆ. ವ್ಯಾಪಾರಿಗಳಿಗೆ ಬುಧನ ಈ ಸಂಚಾರ ಸರಾಸರಿ ಫಲ ನೀಡಲಿದೆ, ಆರ್ಥಿಕವಾಗಿದೆ ದೊಡ್ಡ ಲಾಭ ಅಂತ ಇರಲ್ಲ, ಆದರೆ ಸಮಸ್ಯೆಯಿರಲ್ಲ. ಇನ್ನು ವೈಯಕ್ತಿಕ ಬದುಕಿನ ದೃಷ್ಟಿಯಿಂದ ನೋಡುವುದಾದರೆ ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.

ಸಿಂಹ ರಾಶಿ

ಸಿಂಹ ರಾಶಿಯವರಿಗೆ ಬುಧನ ಸಂಚಾರ ತುಂಬಾ ಒಳ್ಳೆಯ ಫಲಿತಾಂಶ ನೀಡಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ಅಲ್ಲದೆ ಈ ಅವಧಿ ಆರೋಗ್ಯ ದೃಷ್ಟಿಯಿಂದ ಉತ್ತಮವಾಗಿರಲಿದೆ.

ಕನ್ಯಾ ರಾಶಿ

ಬುಧನು ತುಲಾ ರಾಶಿಗೆ ಸಂಚರಿಸಿದಾಗ ಕನ್ಯಾ ರಾಶಿಯವರಿಗೆ ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಈ ಅವಧಿಯಲ್ಲಿ ಜಾಗ್ರತೆವಹಿಸಬೇಕು. ವ್ಯಾಪಾರಿಗಳಿಗೆ ಈ ಅವಧಿ ಅನುಕೂಲಕರವಾಗಿದೆ, ಧನ ಲಾಭವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿರಲಿದೆ.


ತುಲಾ ರಾಶಿ

ತುಲಾ ರಾಶಿಯವರಿಗೆ ಆರ್ಥಿಕವಾಗಿ ಉತ್ತಮವಾಗಿರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ಇನ್ನು ಕುಟುಂಬ ಜೀವನದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ.

ವೃಶ್ಚಿಕ ರಾಶಿ

ಈ ಅವಧಿಯಲ್ಲಿ ಆರ್ಥಿಕವಾಗಿ ಈ ಜಾಗ್ರತೆವಹಿಸಬೇಕು. ಈ ಅವಧಿಯಲ್ಲಿ ಆದಾಯ-ವೆಚ್ಚಗಳ ನಡುವೆ ಸಮತೋಲನ ಕಾಪಾಡಿಕೊಳ್ಳಬೇಕು. ವ್ಯಾಪಾರಿಗಳು ಈ ಅವಧಿಯಲ್ಲಿ ಜಾಗ್ರತೆವಹಿಸಬೇಕು, ಆರ್ಥಿಕವಾಗಿ ಹೂಡಿಕೆ ಮಾಡಬೇಡಿ. ವೈಯಕ್ತಿಕವಾಗಿ ನೊಡುವುದಾದರೆ ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಸಲು ಪ್ರಯತ್ನಿಸಿ.

ಧನು ರಾಶಿ

ಧನು ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿ ನಿಮಗೆ ಉತ್ತಮ ಅವಕಾಶ ಸಿಗಲಿದೆ. ಆರ್ಥಿಕ ದೃಷ್ಟಿಯಿಂದ ಈ ಅವಧಿ ಅನುಕೂಲಜಕರವಾಗಿದೆ. ವೈಯಕ್ತಿಕ ಬದುಕಿನ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ.

ಮಕರ ರಾಶಿ

ಮಕರ ರಾಶಿಯಲ್ಲಿ ಬುಧ 10ನೇ ಮನೆಯಲ್ಲಿ ಇರಲಿದೆ. ವೃತ್ತಿ ಕ್ಷೇತ್ರದ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ಅನುಕೂಲಕರವಾಗಿದೆ. ವ್ಯಾಪಾರಿಗಳಿಗೆ ಈ ಅವಧಿ ಧನಾತ್ಮಕವಾಗಿರಲಿದೆ. ಕುಟುಂಬ ಜೀವನದಲ್ಲಿ ಖುಷಿ ಇರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.

ಕುಂಭ ರಾಶಿ

ಕುಂಭ ರಾಶಿಯವರಿಗೆ ಈ ಅವಧಿ ಫಲಪ್ರದವಾಗಿದೆ. ವ್ಯಾಪಾರಿಗಳಿಗೆ ಈ ಸಮಯ ಅನುಕೂಲಕರವಾಗಿದೆ. ಆದರೆ ಖರ್ಚುಗಳು ಹೆಚ್ಚಿರಬಹುದು, ಹಾಗಾಗಿ ಹಣ ಉಳಿಸಲು ಈ ಅವಧಿಯಲ್ಲಿ ಕಷ್ಟವಾಗುವುದು. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.


ಮೀನ ರಾಶಿ

ಮೀನ ರಾಶಿಯಲ್ಲಿ ಬುಧನು 8ನೇ ಮನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಉರಿಯೂತದ ಸಮಸ್ಯೆ ಉಂಟಾಗುವುದು. ವ್ಯಾಪಾರಿಗಳಿಗೆ ಕಠಿಣ ಸ್ಪರ್ಧೆ ಎದುರಾಗುವುದು. ಈ ಅವಧಿಯಲ್ಲಿ ಆರ್ಥಿಕವಾಗಿ ಜಾಗ್ರತೆವಹಿಸಿ. ಇನ್ನು ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯವಿರಬಹುದು. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಲ್ಲ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Mercury Transit In Libra: Effects On 12 Zodiac Signs In Kannada

Mercury Transit In Libra 2024: How this Sanchar effects on 12 zodiac signs, read on...
Story first published: Tuesday, October 8, 2024, 18:16 [IST]
X
Desktop Bottom Promotion