Latest Updates
-
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು!
ಅಕ್ಟೋಬರ್ 10ರಿಂದ ತುಲಾದಲ್ಲಿ ಬುಧನ ಸಂಚಾರ: ಈ 5 ರಾಶಿಗಳಿಗೆ ಆರ್ಥಿಕ ಸಮಸ್ಯೆ ಇರಲ್ಲ
ಜ್ಯೋತಿಷ್ಯವು ಬುಧನು ನಮ್ಮ ತಾರ್ಕಿಕ ಸಾಮರ್ಥ್ಯ, ಸಂವಹನದ ಮೇಲೆ ಪ್ರಭಾವ ಬೀರುವ ಗ್ರಹವೆಂದು ಹೇಳುತ್ತದೆ. ಬುಧನ ಸ್ಥಾನ ಅನುಕೂಲಕರವಾಗಿದ್ದರೆ ನಮ್ಮ ಮಾತು ಇತರರ ಮೇಲೆ ಪ್ರಭಾವ ಬೀರುವುದು, ನಮ್ಮ ನಿರ್ಧಾರಗಳಿಂದ ಉತ್ತಮ ಫಲ ಪಡೆಯಬಹುದು, ವೃತ್ತಿ ಬದುಕಿನಲ್ಲಿ ಯಶಸ್ಸು ದೊರೆಯಲಿದೆ. ಸಂವಹನ ಕೌಶಲ್ಯದಿಂದ ವ್ಯಾಪಾರಸ್ಥರು ಲಾಭ ಗಳಿಸುತ್ತಾರೆ.
ಅದೇ ಬುಧನ ಸ್ಥಾನ ಅನುಕೂಲಕರವಾಗಿರದಿದ್ದರೆ ನಮ್ಮ ಮಾತೇ ನಮಗೆ ಶತ್ರುವಾಗಬಹುದು. ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ, ಆದ್ದರಿಂದ ಜ್ಯೋತಿಷ್ಯವು ನಮ್ಮ ರಾಶಿಯಲ್ಲಿ ಬುಧನ ಸ್ಥಾನ ತುಂಬಾನೇ ಪ್ರಮುಖವಾಗಿದೆ ಎಂದು ಹೇಳುತ್ತದೆ.
ಈ ಅಕ್ಟೋಬರ್ 10ಕ್ಕೆ ಬುಧನು ಕನ್ಯಾ ರಾಶಿಯನ್ನು ಬಿಟ್ಟು ತುಲಾ ರಾಶಿಯನ್ನು ಪ್ರವೇಶಿಸುತ್ತದೆ. ತುಲಾ ರಾಶಿಯಲ್ಲಿ ಬುಧವಿರುವ ಅವಧಿ ಈ ರಾಶಿಗಳಿಗೆ ಹೆಚ್ಚು ಅನುಕೂಲಕರವಾಗಿದೆ:

ಮಿಥುನ ರಾಶಿ
ಬುಧ ತುಲಾ ರಾಶಿಗೆ ಸಂಚರಿಸಿದಾಗ ನಿಮ್ಮ ರಾಶಿಯಲ್ಲಿ 5ನೇ ಮನೆಯಲ್ಲಿ ಇರಲಿದೆ, ಈ ಮನೆ ನಿಮಗೆ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿ ಯಶಸ್ಸು ದೊರೆಯಲಿದೆ. ನೀವು ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲಪಡೆಯುವುದರಿಂದ ಖುಷಿಯಾಗಿರುತ್ತೀರಿ.
ವ್ಯಾಪಾರಿಗಳು ಈ ಸಮಯದಲ್ಲಿ ಉತ್ತಮ ಲಾಭ ಗಳಿಸುತ್ತೀರ, ಹಣ ಉಳಿತಾಯ ಮಾಡಲು ಸಾಧ್ಯವಾಗುವುದು. ಸಾಲ ಮಾಡಿದ್ದರೆ ಅದನ್ನು ಹಿಂತಿರುಗಿಸಲು ಸಾಧ್ಯವಾಗುವುದು. ಇನ್ನು ಹೂಡಿಕೆ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಈ ಅವಧಿ ನಿಮಗೆ ಅನುಕೂಲಕರವಾಗಿದೆ.
ಕುಟಂಬ ಜೀವನ ಕೂಡ ಚೆನ್ನಾಗಿರಲಿದೆ. ನಿಮ್ಮ ಮಾತುಗಳಿಂದ ಆಪ್ತರ ಮನಸ್ಸು ಗೆಲ್ಲಲು ಸಾಧ್ಯವಾಗುವುದು. ಬುಧನ ಈ ಸಂಚಾರ ನಿಮಗೆ ತುಂಬಾ ಧನಾತ್ಮಕವಾಗಿರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯಲ್ಲಿ ಬುಧ 2ನೇ ಮನೆಯಲ್ಲಿ ಇರಲಿದೆ, ಇದನ್ನು ಅದೃಷ್ಟದ ಮನೆಯೆಂದು ಪರಿಗಣಿಸಲಾಗಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ನಿಮಗೆ ತುಂಬನೇ ಅನುಕೂಲಕರವಾಗಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗಲಿದೆ. ನೀವು ಬೇರೆ ಕಡೆ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಉತ್ತಮ ಅವಕಾಶ ಸಿಗಲಿದೆ. ಆರ್ಥಿಕ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ.
ನಿಮ್ಮ ವೈಯಕ್ತಿಕ ಜೀವನ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನೀವು ತೆಗೆದುಕೋಳ್ಳುವ ನಿರ್ಧಾರಗಳು ಉತ್ತಮ ಫಲ ನೀಡಲಿದೆ.
ತುಲಾ ರಾಶಿ
ಬುಧನು ತುಲಾ ರಾಶಿಯಲ್ಲಿ ಲಗ್ನ ಮನೆಯಲ್ಲಿ ಇರಲಿದೆ. ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ಸಿಗಲಿದೆ. ನೀವು ಮಾಡುವ ಆರ್ಥಿಕ ಪ್ರಯತ್ನಗಳಿಗೆ ಉತ್ತಮ ಫಲಸಿಗಲಿದೆ. ಆರ್ಥಿಕವಾಗಿ ಉತ್ತಮವಾಗಿರವುದರಿಂದ ನೀವು ಬಯಸಿದ ವಸ್ತು ಖರೀದಿಸಲು ಸಾಧ್ಯಾಗುವುದು. ಉಳಿತಾಯ ಮಾಡಲು ಸಾಧ್ಯವಾಗುವುದು, ಕುಟುಂಬ ಜೀವನ ಚೆನ್ನಾಗಿರಲಿದೆ.
ಮಕರ ರಾಶಿ
ಮಕರ ರಾಶಿಯಲ್ಲಿ ಬುಧನು 10ನೇ ಮನೆಯಲ್ಲಿ ಇರಲಿದೆ. ನೀವು ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಉತ್ತಮ ಫಲ ಸಿಗಲಿದೆ. ಈ ಅವಧಿಯಲ್ಲಿ ಕೆಲಸದ ಸಮಯದಲ್ಲಿ ಮಾಡುವ ಪ್ರಯಾಣದಿಂದ ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು. ವ್ಯಾಪಾರಸ್ಥರಿಗೆ ಈ ಅವಧಿಯಲ್ಲಿ ಧನು ಲಾಭವಾಗಲಿದೆ.
ಕುಂಭ ರಾಶಿ
ಕುಂಭ ರಾಶಿಯಲ್ಲಿ ಬುಧನು 8ನೇ ಮನೆಯಲ್ಲಿ ಇರಲಿದೆ. ಕೆಲಸದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ಆರ್ಥಿಕವಾಗಿ ಈ ದಿನ ನಿಮಗೆ ಉತ್ತಮವಾಗಿದೆ. ಹಣದ ಉಳಿತಾಯ ಮಾಡಲು ಸಾಧ್ಯವಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ, ಈ ಅವಧಿಯಲ್ಲಿ ಗೌರವ ಹೆಚ್ಚಾಗಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











