Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಬುಧ ಸಂಚಾರ: ತ್ರಿಗ್ರಹಗಳಿರುವ ವೃಷಭ ರಾಶಿಗೆ ಬುಧ ಸಂಚಾರ, 12 ರಾಶಗಳಲ್ಲಿ ಯಾರಿಗೆ ಹೇಗಿರಲಿದೆ?
ಬುಧ ಮೇ 31ಕ್ಕೆ ವೃಷಭ ರಾಶಿಗೆ ಸಂಚರಿಸಲಿದೆ, ಈಗಾಗಲೇ ಗುರು, ಸುರ್ಯ, ಶುಕ್ರ ಇದೇ ರಾಶಿಯಲ್ಲಿ ಇದೆ, ಈಗ ಬುಧ ವೃಷಭ ರಾಶಿಗೆ ಸಂಚರಿಸಿದಾಗ 12 ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ:
ಮೇಷ ರಾಶಿ
ಮೇಷ ರಾಶಿಯಲ್ಲಿ ಬುಧ 2ನೇ ಮನೆಯಲ್ಲಿ ಇರುವಾಗ ವೃತ್ತಿ ಮತ್ತು ಆರ್ಥಿಕ ಜೀವನದಲ್ಲಿ ಸವಾಲುಗಳನ್ನು ಎದುರಿಸಬೇಕಾಗಬಹುದು. ವ್ಯಾಪಾರಿಗಳೂ ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗಬಹುದು, ಇದರಿಂದಾಗಿ ನಿಮಗೆ ನಷ್ಟದ ಸಾಧ್ಯತೆಯಿದೆ. ಈ ಬುಧ ಸಂಚಾರ ಕುಟುಂಬದ ದೃಷ್ಟಿಯಿಂದಲೂ ಒಳ್ಳೆಯದಲ್ಲ, ಕೆಲ ಭಿನ್ನಾಭಿಪ್ರಾಯವಿರಬಹುದು. ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು.

ವೃಷಭ ರಾಶಿ
ಬುಧನು ನಿಮ್ಮ ರಾಶಿಯ ಲಗ್ನ ಮನೆಗೆ ಬಂದಾಗ ನಿಮ್ಮ ಜೀವನದಲ್ಲಿ ವೃತ್ತಿ ಜೀವನದಲ್ಲಿ ಕೆಲ ಅಡೆತಡೆಗಳು ಇರಬಹುದು. ಆದರೆ ನಿಮ್ಮ ಕೌಶಲ್ಯದಿಂದಾಗಿ ಯಶಸ್ಸು ಗಳಿಸುತ್ತೀರಿ. ವ್ಯಾಪಾರಿಗಳಿಗೆ ಈ ಸಾಗಣೆ ಲಾಭ ತರಲಿದೆ. ಆರ್ಥಿಕವಾಗಿ ಈ ಅವಧಿ ನಿಮಗೆ ಉತ್ತಮವಿದೆ, ಆರೋಗ್ಯದ ಬಗ್ಗೆ ಹೇಳುವುದಾದರೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.
ಮಿಥುನ ರಾಶಿ
ಮಿಥುನ ರಾಶಿಯವರಿಗೆ 12 ನೇ ಮನೆಯಲ್ಲಿ ಬುಧನ ಸ್ಥಾನ ಅನುಕೂಲಕರವಲ್ಲ, ವ್ಯಾಪಾರಿಗಳಿಗೆ ತುಂಬಾ ಸವಾಲು ತಂದೊಡ್ಡಲಿದೆ. ಹಣಕಾಸಿನ ವಿಷಯದಲ್ಲಿ ವಿಶೇಷ ಜಾಗ್ರತೆವಹಿಸಬೇಕು. ಆರೋಗ್ಯದ ಕಡೆಗೆ ಗಮನಹರಿಸಿ, ಸಾಲವನ್ನು ಸಾಧ್ಯವಾದಷ್ಟು ಪಡೆಯದಿರಿ.
ಕರ್ಕ ರಾಶಿ
ಕರ್ಕ ರಾಶಿಯಲ್ಲಿ ಬುಧ 11ನೇ ಮನೆಯಲ್ಲಿ ಇರಲಿದೆ, ಈ ಸ್ಥಾನ ನಿಮಗೆ ಅನುಕೂಲಕರವಾಗಿದೆ ಆದರೆ ಸವಾಲು ಕೂಡ ನೀಡಲಿದೆ. ಕೆಲಸದಲ್ಲಿ ಅಭದ್ರತೆ ಕಾಡುವುದು,
ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನ ಕಾಪಾಡುವುದು ಕಷ್ಟವಾಗಬಹುದು. ಸಂಬಂಧ ಬಲಪಡಿಸಲು ನೀವು ಪ್ರಯತ್ನಿಸಬೇಕು. ಆರೋಗ್ಯದ ಬಗ್ಗೆ ಹೇಳುವುದಾದರೆ ಸಣ್ಣ ಪುಟ್ಟ ಸಮಸ್ಯೆಗಳಿರಬಹುದು, ಚಿಂತಿಸಬೇಕಾಗಿಲ್ಲ.
ಸಿಂಹ ರಾಶಿ
ಸಿಂಹ ರಾಶಿಯಲ್ಲಿ ಬುಧ 10ನೇ ಮನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಕೆಲ ಸವಾಲುಗಳು ಇರಬಹುದು. ವ್ಯಾಪಾರಿಗಳಿಗೆ ಸವಾಲಿನ ಅವಧಿ, ವ್ಯಾಪರ ತಂತ್ರ ಬದಲಾಯಿಸುವುದು ಒಳ್ಳೆಯದು. ಈ ಸಮಯದಲ್ಲಿ ಯಾವುದೇ ಹೂಡಿಕೆ ಮಾಡಲು ಹೋಗದಿರುವುದು ಒಳ್ಳೆಯದು. ಈ ಸಂಚಾರದ ಸಮಯದಲ್ಲಿ, ನಿಮ್ಮ ಜೀವನದಲ್ಲಿ ಸಂಘರ್ಷದ ಸಾಧ್ಯತೆಯಿದೆ. ಗಂಟಲಿಗೆ ಸಂಬಂಧಿಸಿದ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡದಿರಿ.
ಕನ್ಯಾ ರಾಶಿ
ಕನ್ಯಾ ರಾಶಿಯಲ್ಲಿ ಬುಧ 9ನೇ ಮನೆಯಲ್ಲಿ ಇರುವಾಗ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ಕನ್ಯಾ ರಾಶಿಯವರಿಗೆ ಈ ಸಂಕ್ರಮವು ತುಂಬಾ ಮಂಗಳಕರವಾಗಿರುತ್ತದೆ. ವೃತ್ತಿ ಬದುಕಿನಲ್ಲಿ ಯಶಸ್ಸು ದೊರೆಯಲಿದೆ. ನೀವು ಹೊಸ ಉದ್ಯೋಗಾವಕಾಶವನ್ನು ಸಹ ಪಡೆಯಬಹುದು, ವ್ಯಾಪಾರಿಗಳಿಗೆ ಲಾಭದಾಯಕವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ತುಲಾ ರಾಶಿ
ಬುಧನು ತುಲಾ ರಾಶಿಯವಲ್ಲಿ 8ನೇ ಮನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಅನಿರೀಕ್ಷಿತ ಸಂದರ್ಭಗಳನ್ನು ಎದುರಿಸಬಹುದು. ಉದ್ಯೋಗದಲ್ಲಿ ಬದಲಾವಣೆ ಅಥವಾ ಯಾವುದೇ ವರ್ಗಾವಣೆಯಂತಹ ಅನಿರೀಕ್ಷಿತ ಬದಲಾವಣೆಗಳನ್ನು ಎದುರಿಸಬೇಕಾಗಬಹುದು. ಉದ್ಯಮಿಗಳಿಗೂ ಲಾಭಕರವಲ್ಲ, ಆರ್ಥಿಕವಾಗಿ ಅಧಿಕ ಸಮಸ್ಯೆಗಳಿಬಹುದು. ಅತಿಯಾದ ಮಾನಸಿಕ ಒತ್ತಡ ಆರೋಗ್ಯದ ಮೇಲೂ ಪರಿಣಾಮ ಬೀರುವುದು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯಲ್ಲಿ 7ನೇ ಮನೆಯಲ್ಲಿ ಇರಲಿದೆ. ಬುಧನ ಈ ಸ್ಥಾನ ನಿಮಗೆ ಮಿಶ್ರಫಲಿತಾಂಶ ನೀಡಲಿದೆ. ವೃತ್ತಿ ಜೀವನ ಚೆನ್ನಾಗಿರಲಿದೆ, ಕುಟುಂಬ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು, ಭಿನ್ನಾಭಿಪ್ರಾಯ, ಅಸಮಧಾನವಿರಬಹುದು. ನೀವು ಸಾಲ ತೆಗೆದುಕೊಳ್ಳಲು ಪ್ರಯತ್ನಿಸಿದರೆ ಸಾಲ ಸಿಗುವುದಿಲ್ಲ.
ಧನು ರಾಶಿ
ಧನು ರಾಶಿಯವರಲ್ಲಿ 6ನೇ ಮನೆಯಲ್ಲಿ ಇರಲಿದೆ. ಈ ಸಮಯದಲ್ಲಿ ಆರ್ಥಿಕವಾಗಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು. ಖರ್ಚು ಹೆಚ್ಚಿರಲಿದೆ, ವೃತ್ತಿ ಜೀವನದಲ್ಲಿ ಒತ್ತಡ ಅಧಿಕವಿರಲಿದೆ. ಹೂಡಿಕೆ ಮತ್ತಿತರ ಪ್ರಮುಖ ನಿರ್ಧಾರ ಮಾಡುವಾಗ ಜಾಗ್ರತೆವಹಿಸಿ. ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಆರೋಗ್ಯ ಸಮಸ್ಯೆಗಳಿರಬಹುದು.
ಮಕರ ರಾಶಿ
ಮಕರ ರಾಶಿಯವರಲ್ಲಿ 5ನೇ ಮನೆಯಲ್ಲಿ ಇರಲಿದೆ. ಈ ಸ್ಥಾನ ನಿಮಗೆ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿ ಬೆಳವಣಿಗೆ ಕಾಣಲಿದೆ. ವ್ಯಾಪಾರಿಗಳು ತಮ್ಮ ವ್ಯಾಪಾರವನ್ನು ವಿಸ್ತರಿಸಬಹುದು. ಹಣದ ಹೂಡಿಕೆಯಿಂದ ಲಾಭ ಗಳಿಸುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ವಿವಾಹಿತರ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ಕುಂಭ ರಾಶಿ
ಕುಂಭದಲ್ಲಿ 4ನೇ ಮನೆಯಲ್ಲಿ ಬುಧ ಸಂಚಾರ ನಿಮಗೆ ಮಿಶ್ರಫಲ ನೀಡಲಿದೆ. ವೃತ್ತಿ ಜೀವನ ಸರಾಸರಿಯಾಗಿರಲಿದೆ, ಆದರೆ ಕೆಲಸದ ಒತ್ತಡ ಅಧಿಕ ಇರಲಿದೆ. ನೀವು ಕಠಿಣ ಸ್ಪರ್ಧೆ, ಸವಾಲುಗಳು ಇತ್ಯಾದಿಗಳನ್ನು ಎದುರಿಸಬೇಕಾಗುತ್ತದೆ. ಆಸ್ತಿ ಹೂಡಿಕೆಗೆ ಈ ಅವಧಿ ಅನುಕೂಲಕರ. ಹೆಚ್ಚಿನ ಖರ್ಚು ಕೂಡ ಇರಲಿದೆ, ಆದರೆ ಹಣವನ್ನು ನೋಡಿಕೊಂಡು ಖರ್ಚು ಮಾಡಿ. ಸಂಬಂಧದಲ್ಲಿ ಮಿಶ್ರಫಲಿತಾಂಶ, ಕೆಲವೊಂದು ಆರೋಗ್ಯ ಸಮಸ್ಯೆಗಳಿರಬಹುದು. ಆರೋಗ್ಯ ಚೆನ್ನಾಗಿರಲಿದೆ.
ಮೀನ ರಾಶಿ
ಬುಧನು ಮೀನ ರಾಶಿಯಲ್ಲಿ 3ನೇ ಮನೆಯಲ್ಲಿ ಇರಲಿದೆ. ವೃತ್ತಿ ಜೀವನದಲ್ಲಿ ಬೆಳವಣಿಗೆ ಕಂಡು ಬರಲಿದೆ. ವ್ಯಾಪಾರಿಗಳಿಗೆ ಮಧ್ಯಮ ಲಾಭವನ್ನು ನೀಡುತ್ತದೆ. ಆರ್ಥಿಕವಾಗಿ ಹೇಳುವುದಾದರೆ ಲಾಭ ಗಳಿಸುತ್ತೀರಿ, ಖರ್ಚು ಕೂಡ ಹೆಚ್ಚಿರಲಿದೆ. ವೈವಾಹಿಕ ಜೀವನದಲ್ಲಿ ಕೆಲ ತಪ್ಪು ಕಲ್ಪನೆ ಇರಬಹುದು. ಆರೋಗ್ಯ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಬೇಡ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











