Latest Updates
-
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ -
ಈ ದಿನ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ! ನಿಮ್ಮ ಕ್ರಶ್ ಭೇಟಿಯಾಗುವ ಯೋಗ -
March 07 Horoscope: ಪ್ರಯಾಣ ಮಾಡುವಾಗ ಎಚ್ಚರವಿಡಿ! -
ಅಬ್ಬಬ್ಬಾ ಎಂಥಾ ರುಚಿ ಈ ಈರುಳ್ಳಿ ಮಂಚೂರಿಯನ್: ನೀವೂ ಕೂಡ ಟ್ರೈ ಮಾಡಿ -
ಮಾರ್ಚ್ನಲ್ಲಿ ಕಾಳಸರ್ಪ ಯೋಗ: ಈ ರಾಶಿಯವರಿಗೆ ಯೋಗದಿಂದ ಇದೆ ದೊಡ್ಡ ಲಾಭ!
ಮಾಸ ಭವಿಷ್ಯ: ಮಾರ್ಚ್ ಮಾಸ ದ್ವಾದಶ ರಾಶಿಗಳಲ್ಲಿ ಯಾವ ರಾಶಿಗೆ ಹೇಗಿರಲಿದೆ?
ಮಾರ್ಚ್ ತಿಂಗಳ ಮಾಸಿಕ ರಾಶಿಫಲ................
ಮೇಷ ರಾಶಿ
ಮಾರ್ಚ್ ಮಾಸ ಅನುಕೂಲಕರವಾಗಿದೆ, ಕೆಲವೊಂದು ಪ್ರತಿಕೂಲ ಸಂದರ್ಭದಲ್ಲಿ ನೀವು ತಾಳ್ಮೆಯಿಂದ ವರ್ತಿಸಬೇಕು, ಅಂಥ ಸಂದರ್ಭದಲ್ಲಿ ಆತ್ಮವಿಶ್ವಾಸದಿಂದ ನಡೆದುಕೊಳ್ಳಬೇಕು. ಮಾರ್ಚ್ ಮಧ್ಯಭಾಗದಲ್ಲಿ ಕೆಲ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ, ವೃತ್ತಿ ಬದುಕಿನಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರಿಗಳು ಸವಾಲುಗಳನ್ನು ಎದುರಿಸಬೇಕಾಗುತ್ತದೆ, ಕುಟುಂಬ ಜೀವನ ಚೆನ್ನಾಗಿರಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಮಾರ್ಚ್ ತಿಂಗಳು ಉತ್ತಮವಾಗಿರಲಿದೆ. ಈ ಮಾಸ ಅಪೂರ್ಣವಾಗಿದ್ದ ಕೆಲಸ ಕಾರ್ಯಗಳು ಪೂರ್ವಾಗಲಿದೆ, ಇನ್ನು ವೃತ್ತಿ ಜೀವನದಲ್ಲಿ ನೀವು ಅಂದುಕೊಂಡಂತೆ ಕೆಲಸ ಕಾರ್ಯಗಳು ನಡೆಯುವುದರಿಂದ ಕೆಲಸದಲ್ಲಿ ತೃಪ್ತಿ ಇರಲಿದೆ. ಇನ್ನು ಬರಬೇಕಾಗಿರುವ ಹಣ ಕೂಡ ಕೈ ಸೇರಲಿದೆ. ವ್ಯಾಪಾರಸ್ಥರಿಗೆ ಈ ಅವಧಿ ಲಾಭದಾಯಕವಾಗಿರಲಿದೆ. ಸಂಬಂಧದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ವೈವಾಹಿಕ ಜೀವನದಲ್ಲಿ ನೆಮ್ಮದಿ ಇರಲಿದೆ.
ಮಿಥುನ ರಾಶಿ
ಮಾರ್ಚ್ ಮಾಸ ಮಿಶ್ರ ಫಲ, ಈ ಮಾಸದಲ್ಲಿ ಪ್ರಮುಖ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು. ವೃತ್ತಿ ಜೀವನದಲ್ಲಿ ಅಭದ್ರತೆ ಕಾಡಲಿದೆ. ಈ ಮಾಸ ಖರ್ಚು ಹೆಚ್ಚಿರಲಿದೆ, ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ. ವ್ಯಾಪಾರಿಗಳಿಗೆ ತಿಂಗಳ ಪ್ರಾರಂಭದಲ್ಲಿ ಹೆಚ್ಚು ಸವಾಲುಗಳಿರಬಹುದು, ನಂತರದ ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಲಿದೆ. ಇನ್ನು ಸಂಬಂಧದ ಕಡೆಗೆ ಗಮನಹರಿಸಬೇಕು. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಹೆಚ್ಚಾಗದಂತೆ ಜಾಗ್ರತೆ ಮಾಡಿ.
ಕರ್ಕ ರಾಶಿ
ಕರ್ಕ ರಾಶಿಯವರು ಈ ಮಾಸ ಜಾಗ್ರತೆವಹಿಸಬೇಕು. ಹಣದ ಅವಶ್ಯಕತೆ ಹೆಚ್ಚು ಬರಬಹುದು, ಖರ್ಚು-ವೆಚ್ಚಗಳ ನಡುವೆ ಸಮತೋಲನ ಕಾಪಾಡಲು ಪ್ರಯತ್ನಿಸಬೇಕು, ಅನಗ್ಯತ ಖರ್ಚು ನಿಯಂತ್ರಿಸುವುದು ಒಳ್ಳೆಯದು. ಇನ್ನು ವೃತ್ತಿ ಬದುಕಿನಲ್ಲಿಯೂ ಹೆಚ್ಚು ಒತ್ತಡಗಳಿರಬಹುದು. ಪ್ರೇಮಿಗಳಿಗೆ ಈ ಮಾಸ ಸವಾಲಿನಿಂದ ಕೂಡಿರಲಿದೆ. ವಿವಾಹಿತರು ಗಂಡ-ಹೆಂಡಿ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಗದಂತೆ ನೋಡಿಕೊಳ್ಳಬೇಕು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಮಾರ್ಚ್ ತಿಂಗಳು ಮಿಶ್ರಫಲಿತಾಂಶ, ಕೆಲಸದಲ್ಲಿ ನೀವು ನಿರೀಕ್ಷೆ ಮಾಡಿದಂತೆ ಫಲಿತಾಂಶ ಸಿಗುವುದು ಕಷ್ಟವಾಗುವುದು, ವೃತ್ತಿಗೆ ಸಂಬಂಧಿಸಿದ ನಿರ್ಧಾರ ಆತುರದಿಂದ ತೆಗೆದುಕೊಳ್ಳಬೇಡಿ, ತಾಳ್ಮೆಯಿಂದ ನಿಭಾಯಿಸಲು ಪ್ರಯತ್ನಿಸಿ. ವೈಯಕ್ತಿಕ ಬದುಕಿಲ್ಲಿ ಮಕ್ಕಳ ಕುರಿತ ಚಿಂತೆ ಕೂಡ ಕಾಡಬಹುದು. ವ್ಯಾಪಾರಸ್ಥರಿಗೆ ಈ ಮಾಸ ಸವಾಲಿನಿಂದ ಕೂಡಿರಲಿದೆ. ಕುಟುಂಬ ಬದುಕಿನ ಕಡೆಗೆ ಗಮನಹರಿಸಿ
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ಮಾಸ ಮಿಶ್ರಫಲಿತಾಂಶ, ನೀವು ವೃತ್ತಿ ಬದುಕಿನ ಕಡೆಗೆ ತುಂಬಾನೇ ಗಮನಹರಿಸಬೇಕು, ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಇನ್ನು ಪ್ರಮುಖ ನಿರ್ಧಾರಗಳನ್ನು ಸರಿಯಾಗಿ ಆಲೋಚನೆ ಮಾಡದೆ ತೆಗೆದುಕೊಳ್ಳಬಾರದು. ಇನ್ನು ಆರೋಗ್ಯ ಸಂಬಂಧಿತ ಸಮಸ್ಯೆ ಕೂಡ ಕಾಡಬಹುದು.
ತುಲಾ ರಾಶಿ'
ತುಲಾ ರಾಶಿಯವರು ಈ ಮಾಸ ಜಾಗ್ತೆವಹಿಸಬೇಕು, ವೃತ್ತಿ ಬದುಕಿನಲ್ಲಿ ಪ್ರತಿಕೂಲ ಪರಿಸ್ಥಿತಿ ಉಂಟಾಗಬಹುದು, ಇನ್ನು ಹಣದ ಬಗ್ಗೆ ಹೇಳುವುದಾದರೆ ಈ ಮಾಸ ಖರ್ಚು ಹೆಚ್ಚಿರಲಿದೆ, ಸಾಲ ಕೂಡ ಮಾಡಬೇಕಾಗಿ ಬರಬಹುದು. ವ್ಯಾಪಾರಿಗಳಿಗೆ ಈ ದಿನ ತುಂಬಾ ಉತ್ತಮವಾಗಿರಲಿದೆ, ಆರೋಗ್ಯ ಸಂಬಂಧಿತ ವಿಷಯಗಳನ್ನು ನಿರ್ಲಕ್ಷ್ಯ ಮಾಡಬೇಡಿ.
ವೃಶ್ಚಿಕ ರಾಶಿ
ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ಆದರೆ ನೀವು ತಾಳ್ಮೆಯಿಂದ ಕಯಬೇಕಷ್ಟೇ. ಆರ್ಥಿಕವಾಗಿಯೂ ಈ ಮಾಸ ಸವಾಲಿನಿಂದ ಕೂಡಿದೆ. ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಹೆಚ್ಚನ ಗಮನಹರಿಸಬೇಕು, ಹೊಸ ಹೂಡಿಕೆ ಮಾಡಲು ಬಯಸಿದರೆ ಸ್ವಲ್ಪ ಮುಂದೂಡುವುದು ಒಳ್ಳೆಯದು.
ಧನು ರಾಶಿ
ಮಾರ್ಚ್ ಮಾಸ ಧನು ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ, ವೃತ್ತಿ ಬದುಕಿನಲ್ಲಿ ನೀವು ನಿರೀಕ್ಷೆ ಮಾಡಿದಂತೆಯೇ ಬದಲಾವಣೆ ಕಾಣಬಹುದು. ಐಷಾರಾಮಿ ವಸ್ತುಗಳಿಗೆ ಹೆಚ್ಚಿನ ಹಣ ಖರ್ಚು ಮಾಡಬಹುದು, ವ್ಯಾಪಾರಿಗಳಿಗೆ ಲಾಭದಾಯಕವಾಗಿರಲಿದೆ. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ತಪ್ಪಿಸಿ.
ಮಕರ ರಾಶಿ
ಈ ಮಾಸ ಮಕರ ರಾಶಿಯವರಿಗೆ ಸರಾಸರಿಯಾಗಿರಲಿದೆ, ನಿಮ್ಮ ಕೆಲಸದ ಕಡೆಗೆ ಹೆಚ್ಚು ಗಮನಹರಿಸುವುದು ಒಳ್ಳೆಯದು, ಇನ್ನು ಉದ್ಯೋಗಿಗಳಿಗೆ ವರ್ಗಾವಣೆಯ ಸಾಧ್ಯತೆ ಇದೆ. ವ್ಯಾಪಾರಸ್ಥರಿಗೆ ವ್ಯಾಪಾರವಹಿವಟು ಈ ಮಾಸ ನಿಧಾನವಾಗಲಿದೆ. ಕುಟುಂಬದಲ್ಲಿ ಏರಳಿತ ಉಂಟಾಗುವುದು. ಇನ್ನು ಆರೋಗ್ಯ ವಿಷಯದಲ್ಲಿ ಕೂಡ ನಿರ್ಲಕ್ಷ್ಯ ಮಾಡಬೇಡಿ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಮಾರ್ಚ್ ಮಾಸ ಅನುಕೂಲಕರವಾಗಿರಲಿದೆ. ಕೆಲಸದಲ್ಲಿ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ, ವ್ಯಾಪಾರಿಗಳಿಗೆ ಈ ಮಾಸ ಅನುಕೂಲಕರವಾಗಿದೆ. ವಿದ್ಯಾರ್ಥಿಗಳಿಗೆ ಈ ಮಾಸ ಅನುಕೂಲಕರವಾಗಿದೆ. ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಮಾರ್ಚ್ ತಿಂಗಳು ಮಿಶ್ರಫಲಿತಾಂಶ, ಕೆಲಸದಲ್ಲಿ ಒತ್ತಡಗಳಿರಬಹುದು, ಕೆಲಸದಲ್ಲಿ ಹೆಚ್ಚಿ ಶ್ರಮ ಹಾಕಿದರೆ ಹೆಚ್ಚಿನ ಫಲಿತಾಂಶ ಪಡೆಯಬಹುದು. ವ್ಯಾಪಾರಸ್ಥರಿಗೆ ಈ ಮಾಸ ಏರಳಿತವಿರಬಹುದು, ಆದರೆ ಲಾಭ ಕೂಡ ಸಿಗಲಿದೆ, ಕುಟುಂಬ ಜೀವನದ ಕಡೆಗೆ ಹೆಚ್ಚಿನ ಗಮನಹಿಸಬೇಕಾಗುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











