Latest Updates
-
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ?
ನವರಾತ್ರಿ ವಾರದ(ಅಕ್ಟೋಬರ್ 7-13) ಭವಿಷ್ಯ: ಈ ವಾರ 12 ರಾಶಿಗಳಿಗೆ ಹೇಗಿರಲಿದೆ?
ನವರಾತ್ರಿ ಈ ವಾರ 12 ರಾಶಿಗಳಿಗೆ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ, ಯಾರು ಜಾಗ್ರತೆವಹಿಸಬೇಕು?
ಮೇಷ ರಾಶಿ
ಮೇಷ ರಾಶಿಯವರಿಗೆ ಈ ದಸರಾವರೆಗೆ ಅದ್ಭುತವಾಗಿರಲಿದೆ. ಈ ಅವಧಿ ಆರ್ಥಿಕವಾಗಿ ಉತ್ತಮವಾಗಿದೆ. ಹಣಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಈ ವಾರದ ಕೊನೆ ಇನ್ನೂ ಉತ್ತಮವಾಗಿರಲಿದೆ. ಒಟ್ಟಿನಲ್ಲಿ ನವರಾತ್ರಿಯ ಈ ವಾರ ನಿಮಗೆ ವೃತ್ತಿ ಬದುಕಿನ ದೃಷ್ಟಿಯಿಂದ ಹಾಗೂ ವೈಯಕ್ತಿಕ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಉತ್ತಮವಾಗಿದೆ.

ವೃಷಭ ರಾಶಿ
ನಿಮ್ಮ ಮನಸ್ಸಿನಲ್ಲಿ ಏನೇ ಗೊಂದಲವಿದ್ದರೆ ಅದನ್ನು ಬಗೆಹರಿಸಿಕೊಳ್ಳುವುದು ಒಳ್ಳೆಯದು. ಕೆಲಸದಲ್ಲಿ ಹೆಚ್ಚಿನ ಒತ್ತಡವಿರಲಿದೆ, ಆರ್ಥಿಕವಾಗಿ ಈ ಅವಧಿ ನಿಮಗೆ ಅನುಕೂಲಕವಾಗಿರಲಿದೆ, ಆದರೆ ಹಬ್ಬದ ವಾರ ಅಂತ ಹೆಚ್ಚು ಖರ್ಚು ಮಾಡಲು ಹೋಗಲೇಬೇಡಿ. ಪ್ರತಿಕೂಲ ಸಂದರ್ಭದಲ್ಲಿ ನೀವು ಆತ್ಮವಿಶ್ವಾಸದಿಂದ ಮುಂದುವರೆಯಬೇಕು.
ಮಿಥುನ ರಾಶಿ
ನವರಾತ್ರಿ ಈ ವಾರ ನಿಮಗೆ ತುಂಬಾನೇ ಮುಖ್ಯವಾಗಿದೆ, ನೀವು ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತೀರಿ. ಕೆಲಸದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಅಲ್ಲದೆ ನಿಮ್ಮ ಕೆಲಸ-ಕಾರ್ಯವನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಬೇಕು. ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಅನುಕೂಲಕರವಾಗಿದೆ.
ಕರ್ಕ ರಾಶಿ
ಈ ವಾರ ಕೆಲ ಪ್ರತಿಕೂಲ ಪರಿಸ್ಥಿತಿಗಳು ಬರಬಹುದು, ಆರ್ಥಿಕವಾಗಿ ತುಂಬಾ ಜಾಗ್ರತೆವಹಿಸಬೇಕು. ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಸಲು ಪ್ರಯತ್ನಿಸಿ, ಕೋಪ ನಿಯಂತ್ರಿಸಿ.
ಸಿಂಹ ರಾಶಿ
ನವರಾತ್ರಿಯ ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಈ ಅವಧಿಯಲ್ಲಿ ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ನಿಮಗೆ ಅನುಕೂಲಕರವಾಗಿದೆ, ಆರೋಗ್ಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಕನ್ಯಾ ರಾಶಿ
ಈ ವಾರ ನೀವು ಆತುರದ ನಿರ್ಧಾರ ತೆಗೆದುಕೊಳ್ಳದಂತೆ ಸಲಹೆ ನೀಡಲಾಗುವುದು. ಈ ಅವಧಿಯಲ್ಲಿ ಕೆಲ ಆರ್ಥಿಕ ಸಮಸ್ಯೆ ಎದುರಾಗಬಹುದು. ಕೆಲಸದ ಜಾಗದಲ್ಲಿ ನೀವು ಜಾಗ್ರತೆವಹಿಸಬೇಕು. ಇನ್ನು ಅಗ್ಯತಕ್ಕಿಂತ ಹೆಚ್ಚು ಖರ್ಚು ಮಾಡಲು ಹೋಗಬೇಡಿ.
ತುಲಾ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ. ವಾರದ ಆರಂಭದಲ್ಲಿ ಉದ್ಯಮಿಗಳು, ವ್ಯಾಪಾರಿಗಳು ಬಯಸಿದ ಲಾಭವನ್ನು ಪಡೆಯುತ್ತಾರೆ. ಆದರೆ ಹಣವನ್ನು ಬಜೆಟ್ ಮೀರಿ ಖರ್ಚು ಮಾಡಬೇಡಿ.ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ವೃಶ್ಚಿಕ ರಾಶಿ
ನವರಾತ್ರಿಯ ಈ ವಾರ ಅನುಕೂಲಕರವಾಗಿರಲಿದೆ. ಉದ್ಯೋಗವಿರಲಿ, ವ್ಯಾಪಾರವಿರಲಿ ನಿಮ್ಮ ಎಲ್ಲಾ ಕೆಲಸಗಳು ಸುಸೂತ್ರವಾಗಿ ಪೂರ್ಣಗೊಳ್ಳುತ್ತವೆ. ಆರೋಗ್ಯವು ಉತ್ತಮವಾಗಿರುತ್ತದೆ . ಹಬ್ಬದ ವಾರವನ್ನು ಸಂಭ್ರಮದಿಂದ ಕಳೆಯುತ್ತೀರಿ.
ಧನು ರಾಶಿ
ಧನು ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ. ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ಆಸ್ತಿ ಅಥವಾ ವಾಹನ ಖರೀದಿಸಲು ಈ ಸಮಯ ಅನುಕೂಲಕರವಾಗಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಮಕರ ರಾಶಿ
ನಿಮ್ಮ ಕೆಲಸವು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ. ಆರ್ಥಿಕ ಸಮಸ್ಯೆ ಬಗೆಹರಿಯಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ. ವ್ಯಾಪಾರಿಗಳು ಈ ಅವಧಿಯಲ್ಲಿ ಯಾವುದೇ ದೊಡ್ಡ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು.
ಕುಂಭ ರಾಶಿ
ಕೆಲಸದ ಸ್ಥಳದಲ್ಲಿ ಕೆಲವು ಅಡೆತಡೆಗಳಿರಬಹುದು, ಯಾವುದೇ ಕೆಲಸ ಅಪೂರ್ಣವಾಗಿ ಬಿಡಬೇಡಿ. ವ್ಯಾಪಾರಸ್ಥರಿಗೆ ಈ ವಾರ ಮಿಶ್ರಫಲಿತಾಂಶ.ಮನೆಯ ವಾತಾವರಣವು ಸಕಾರಾತ್ಮಕವಾಗಿರುತ್ತದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ಮೀನ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಪಡೆಯುತ್ತೀರಿ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ನಿಮ್ಮ ಹಣಕಾಸಿನ ನಿರ್ಧಾರಗಳನ್ನು ನೀವು ಬಹಳ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುವುದರಿಂದ ಉತ್ತಮ ಪಲಿತಾಂಶ ಪಡೆಯುತ್ತೀರಿ. ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications